Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ತೀತನಿಗೆ 1:15 - ಕನ್ನಡ ಸಮಕಾಲಿಕ ಅನುವಾದ

15 ಶುದ್ಧರಿಗೆ ಎಲ್ಲವೂ ಶುದ್ಧವೇ. ಆದರೆ ಮಲಿನವಾದವರಿಗೂ ಅವಿಶ್ವಾಸಿಗಳಿಗೂ ಯಾವುದೂ ಶುದ್ಧವಲ್ಲ. ಅವರ ಬುದ್ಧಿಯೂ ಮನಸ್ಸಾಕ್ಷಿಯೂ ಮಲಿನವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಶುದ್ಧರಿಗೆ ಎಲ್ಲವೂ ಶುದ್ಧವೇ; ಆದರೆ ಅಶುದ್ಧರಿಗೂ, ನಂಬಿಕೆಯಿಲ್ಲದವರಿಗೂ ಯಾವುದೂ ಶುದ್ಧವಲ್ಲ; ಅವರ ಬುದ್ಧಿಯೂ ಮನಸ್ಸಾಕ್ಷಿಯೂ ಎರಡೂ ಅಶುದ್ಧವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಮನಃಶುದ್ಧಿಯುಳ್ಳವರಿಗೆ ಎಲ್ಲವೂ ಶುದ್ಧವಾಗಿಯೇ ಇದೆ. ಭ್ರಷ್ಟರಿಗೆ ಮತ್ತು ಅವಿಶ್ವಾಸಿಗಳಿಗೆ ಯಾವುದೂ ಶುದ್ಧವಲ್ಲ. ಏಕೆಂದರೆ, ಅವರ ಮನಸ್ಸೂ ಮನಸ್ಸಾಕ್ಷಿಯೂ ಮಲಿನವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಶುದ್ಧರಿಗೆ ಎಲ್ಲವೂ ಶುದ್ಧವೇ; ಆದರೆ ಮಲಿನವಾದವರಿಗೂ ನಂಬಿಕೆಯಿಲ್ಲದವರಿಗೂ ಯಾವದೂ ಶುದ್ಧವಲ್ಲ; ಅವರ ಬುದ್ಧಿಯೂ ಮನಸ್ಸಾಕ್ಷಿಯೂ ಎರಡೂ ಮಲಿನವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಪರಿಶುದ್ಧರಾದ ಜನರಿಗೆ ಎಲ್ಲಾ ಸಂಗತಿಗಳು ಪರಿಶುದ್ಧವಾಗಿರುತ್ತವೆ. ಆದರೆ ಪಾಪಗಳನ್ನೇ ತುಂಬಿಕೊಂಡಿರುವ ಮತ್ತು ನಂಬಿಕೆಯಿಲ್ಲದ ಜನರಿಗೆ ಯಾವುದೂ ಪರಿಶುದ್ಧವಾಗಿರುವುದಿಲ್ಲ. ನಿಜವಾಗಿಯೂ, ಅವರ ಮನಸ್ಸುಗಳು ಮತ್ತು ಮನಸ್ಸಾಕ್ಷಿಗಳು ಮಲಿನವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಕೊನ್ ಪವಿತ್ರ್ ಹೊತ್ತ್ಯಾಕ್ನಿ ಸಗ್ಳಿ ಸಾಮಾನಾಬಿ ನಿತಳುಚ್, ಖರೆ ಕೊನ್ ಪವಿತ್ರ್ ನಾತ್ ಅನಿ ವಿಶ್ವಾಸ್ ಕರಿನಾತ್, ತೆಂಚಿ ಮನಾ ಅನಿ ಭುತ್ತುರ್‍ಲಿ ಮನಾ ಬಸ್ಟ್‌ಗಾರ್ ಹೊಲ್ಲಿ ಹಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ತೀತನಿಗೆ 1:15
21 ತಿಳಿವುಗಳ ಹೋಲಿಕೆ  

ಯಾವುದೇ ಪದಾರ್ಥವು ತನ್ನಷ್ಟಕ್ಕೆ ಅಶುದ್ಧವಲ್ಲ ಎಂದು ನಾನು ಕರ್ತ ಆಗಿರುವ ಯೇಸುವಿನಲ್ಲಿ ನಿಶ್ಚಯವಾಗಿ ಬಲ್ಲೆನು. ಆದರೆ ಯಾರಾದರೂ ಅಶುದ್ಧವೆಂದು ಪರಿಗಣಿಸಿದರೆ ಅದು ಅವರಿಗೆ ಅಶುದ್ಧವಾಗಿರುವುದು.


ಆಹಾರದ ನಿಮಿತ್ತವಾಗಿ ದೇವರ ಕೆಲಸವನ್ನು ಕೆಡಿಸಬೇಡ, ಎಲ್ಲಾ ಆಹಾರವೂ ಶುದ್ಧವಾದದ್ದೇ. ಆದರೆ ಒಬ್ಬರು ತಿಂದು ವಿಘ್ನವನ್ನು ಒಡ್ಡುವುದು ಕೆಟ್ಟದ್ದು.


ಎಲ್ಲಾ ಕಾರ್ಯಗಳನ್ನು ಮಾಡಲು ಸ್ವಾತಂತ್ರ್ಯವಿದೆ. ಆದರೆ ಎಲ್ಲಾ ಕಾರ್ಯಗಳೂ ಪ್ರಯೋಜನಕರವಾಗಿರುವುದಿಲ್ಲ. ಎಲ್ಲಾ ಕಾರ್ಯಗಳನ್ನು ಮಾಡಲು ಸ್ವಾತಂತ್ರ್ಯವಿದೆ ಆದರೆ, ಎಲ್ಲಾ ಕಾರ್ಯಗಳೂ ಭಕ್ತಿವೃದ್ಧಿಯನ್ನುಂಟುಮಾಡುವುದಿಲ್ಲ.


ಆದರೆ ಬಾಯೊಳಗಿಂದ ಹೊರಗೆ ಹೊರಡುವಂಥವು ಹೃದಯದೊಳಗಿಂದ ಬಂದು ಮನುಷ್ಯನನ್ನು ಅಶುದ್ಧ ಮಾಡುತ್ತವೆ.


ಆದರೆ ಅನುಮಾನವುಳ್ಳವರು ಊಟಮಾಡುವುದು ವಿಶ್ವಾಸದಿಂದ ಅಲ್ಲವಾದ್ದರಿಂದ ಅವರು ದೋಷಿಯಾಗುತ್ತಾರೆ. ವಿಶ್ವಾಸವಿಲ್ಲದೆ ಮಾಡುವ ಎಲ್ಲವೂ ಪಾಪವಾಗಿವೆ.


ಆದ್ದರಿಂದ ನೀವು ಊಟಮಾಡಿದರೂ ಪಾನೀಯ ಸೇವಿಸಿದರೂ ಯಾವುದನ್ನೇ ಮಾಡಿದರೂ ಎಲ್ಲವನ್ನೂ ದೇವರ ಮಹಿಮೆಗಾಗಿ ಮಾಡಿರಿ.


ವಾಣಿಯು ಎರಡನೆಯ ಬಾರಿಗೆ, “ದೇವರು ಶುದ್ಧೀಕರಿಸಿದ ಯಾವುದನ್ನೂ ಅಶುದ್ಧವೆನ್ನಬೇಡ,” ಎಂದಿತು.


ಆದರೆ ಈ ತಿಳುವಳಿಕೆಯು ಎಲ್ಲರಲ್ಲಿಯೂ ಇಲ್ಲ. ಕೆಲವರು ಇದುವರೆಗೂ ವಿಗ್ರಹಕ್ಕೆ ಅರ್ಪಿತವಾದದ್ದನ್ನು ತಿನ್ನುವ ರೂಢಿಯಲ್ಲಿದ್ದು, ಅವರು ವಿಗ್ರಹಕ್ಕೆ ನೈವೇದ್ಯ ಮಾಡಿ ತಿನ್ನುವುದಾಗಿ ಭಾವಿಸಿಕೊಳ್ಳುತ್ತಾರೆ. ಹೀಗೆ ಅವರ ಮನಸ್ಸಾಕ್ಷಿ ಬಲಹೀನವಾಗಿರುವುದರಿಂದ, ಅದು ಅಶುದ್ಧವಾಗಿರುತ್ತದೆ.


ಆದಕಾರಣ ಅಪರಾಧ ಮನಸ್ಸಾಕ್ಷಿಯೆಂದು ನಮ್ಮ ಮನಸ್ಸು ನಮಗೆ ಸಾಕ್ಷಿಹೇಳದಂತೆ ನಾವು ಹೃದಯವನ್ನು ಪ್ರೋಕ್ಷಿಸಿಕೊಂಡು ದೇಹವನ್ನು ಶುದ್ಧ ನೀರಿನಿಂದ ತೊಳೆದುಕೊಂಡು ಪರಿಪೂರ್ಣವಾದ ನಂಬಿಕೆಯುಳ್ಳವರಾಗಿಯೂ ಯಥಾರ್ಥ ಹೃದಯವುಳ್ಳವರಾಗಿಯೂ ದೇವರ ಸಮೀಪಕ್ಕೆ ಬರೋಣ.


ಮಾಂಸದ ಅಂಗಡಿಯಲ್ಲಿ ಮಾರುವುದು ಏನಿದ್ದರೂ ಮನಸ್ಸಾಕ್ಷಿಯನ್ನು ಪ್ರಶ್ನಿಸದೇ ತಿನ್ನಿರಿ.


ಹೀಗೆ ಅನಾರೋಗ್ಯಕರವಾದ ವಿವಾದಗಳನ್ನೂ ಕೆಲವು ಮಾತುಗಳ ಕುರಿತಾಗಿರುವ ತರ್ಕಗಳನ್ನೂ ಸೃಷ್ಟಿಸುವ ಪ್ರಸಿದ್ಧರಾಗಿದ್ದಾರೆ. ಅಂಥವರು ದೇವಭಕ್ತಿಯನ್ನು ಆರ್ಥಿಕ ಲಾಭವನ್ನಾಗಿ ಭಾವಿಸುವವರಾಗಿದ್ದಾರೆ.


ಹೆಮ್ಮೆಯ ದೃಷ್ಟಿ, ಗರ್ವದ ಹೃದಯ, ದುಷ್ಟರ ಉಳುವಿಕೆ ಇವೆಲ್ಲಾ ಪಾಪವೇ.


ಆಗ ಹಗ್ಗಾಯನು, “ಹೆಣದಿಂದ ಅಶುದ್ಧವಾದವನು, ಇವುಗಳಲ್ಲಿ ಯಾವುದನ್ನಾದರೂ ಮುಟ್ಟಿದರೆ, ಅಶುದ್ಧವಾಗುವುದೋ?” ಎಂದನು. ಯಾಜಕರು ಉತ್ತರವಾಗಿ, “ಹೌದು, ಅಶುದ್ಧವಾಗುವುದು,” ಎಂದರು.


ನಿತ್ಯಾತ್ಮರಿಂದ ತಮ್ಮನ್ನು ತಾವೇ ನಿರ್ದೋಷಿಯನ್ನಾಗಿ ದೇವರಿಗೆ ಸಮರ್ಪಿಸಿಕೊಂಡ ಕ್ರಿಸ್ತ ಯೇಸುವಿನ ರಕ್ತವು ಎಷ್ಟೋ ಹೆಚ್ಚಾಗಿ ನಿರ್ಜೀವ ಕ್ರಿಯೆಗಳಿಂದ ನಮ್ಮನ್ನು ಬಿಡಿಸಿ ಜೀವವುಳ್ಳ ದೇವರನ್ನು ಆರಾಧಿಸುವಂತೆ ನಮ್ಮ ಮನಸ್ಸಾಕ್ಷಿಯನ್ನು ಶುದ್ಧೀಕರಿಸುವುದಲ್ಲವೇ?


ತಮ್ಮ ದೃಷ್ಟಿಯಲ್ಲಿ ಶುದ್ಧವಾಗಿರುವವರು ಇದ್ದಾರೆ; ಆದರೆ ಅವರು ತಮ್ಮ ಕೊಳೆಯನ್ನು ತೊಳೆದುಕೊಂಡಿರುವುದಿಲ್ಲ.


ನಿಮ್ಮಲ್ಲಿ ಯಾರೂ ದೇವರ ಕೃಪೆಗೆ ತಪ್ಪಿಹೋಗದಂತೆಯೂ ಯಾವ ವಿಷವುಳ್ಳ ಬೇರೂ ನಿಮ್ಮಲ್ಲಿ ಚಿಗುರಿ ಅಸಮಾಧಾನವನ್ನು ಹುಟ್ಟಿಸಿ ಅದರಿಂದ ಅನೇಕರು ಮಲಿನರಾಗದಂತೆಯೂ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು