ತೀತನಿಗೆ 1:6 - ಕನ್ನಡ ಸಮಕಾಲಿಕ ಅನುವಾದ6 ಸಭೆಯ ಹಿರಿಯನು, ನಿಂದಾರಹಿತನೂ ಪತ್ನಿಗೆ ನಂಬಿಗಸ್ತನೂ ಆಗಿರಬೇಕು. ಅವನ ಮಕ್ಕಳು ವಿಶ್ವಾಸಿಗಳಾಗಿರಬೇಕು. ಅವರು ದುರ್ಮಾಗಿಗಳು ಇಲ್ಲವೆ ತಿರುಗಿ ಬೀಳುವವರೂ ಎಂಬ ಆರೋಪವನ್ನು ಹೊಂದಿರಬಾರದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಸಭೆಯ ಹಿರಿಯನು ದೋಷರಹಿತನೂ, ಏಕಪತ್ನಿಯುಳ್ಳವನೂ ಆಗಿರಬೇಕು; ಆತನ ಮಕ್ಕಳು ಕರ್ತನನ್ನು ನಂಬಿದವರಾಗಿರಬೇಕು; ಅವರ ಮಕ್ಕಳು ದುರ್ಮಾರ್ಗಿಗಳೂ ಮತ್ತು ಅವಿಧೇಯತೆಯ ಆರೋಪವಿಲ್ಲದವರು ಆಗಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ನಾನು ಕೊಟ್ಟ ಸಲಹೆಗಳನ್ನು ಜ್ಞಾಪಿಸಿಕೋ; ಸಭಾಹಿರಿಯನು ನಿಂದಾರಹಿತನೂ ಏಕಪತ್ನಿ ವ್ರತಸ್ಥನೂ ಆಗಿರಬೇಕು. ಆತನ ಮಕ್ಕಳು ವಿಶ್ವಾಸಿಗಳಾಗಿರಬೇಕು. ಅವರು ಸ್ವೇಚ್ಛಾಚಾರಿಗಳಾಗಿರಬಾರದು, ಅವಿಧೇಯರಾಗಿರಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಸಭೆಯ ಹಿರಿಯನು ನಿಂದಾರಹಿತನೂ ಏಕಪತ್ನಿಯುಳ್ಳವನೂ ಆಗಿರಬೇಕು. ಅವನ ಮಕ್ಕಳು ಕರ್ತನನ್ನು ನಂಬಿದವರಾಗಿರಬೇಕು; ಅವರು ದುರ್ಮಾರ್ಗಸ್ಥರೆನಿಸಿಕೊಂಡವರಾಗಲಿ ಅಧಿಕಾರಕ್ಕೆ ಒಳಗಾಗದವರಾಗಲಿ ಆಗಿರಬಾರದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಸಭೆಯ ಹಿರಿಯನಾಗುವವನು ಅಪರಾಧಿಯೆಂಬ ನಿಂದನೆಗೆ ಗುರಿಯಾಗಿರಬಾರದು. ಅವನಿಗೆ ಒಬ್ಬಳೇ ಪತ್ನಿಯಿರಬೇಕು. ಅವನ ಮಕ್ಕಳು ವಿಶ್ವಾಸಿಗಳಾಗಿರಬೇಕು; ಅವರು ದುಷ್ಟರೆಂದಾಗಲಿ ಅವಿಧೇಯರೆಂದಾಗಲಿ ಹೇಳಿಸಿಕೊಂಡಿರಬಾರದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್6 “ಎಕ್ ವಡಿಲ್ ಚುಕೆತ್ ನಸಲ್ಲೊ ರ್‍ಹಾವ್ಚೊ; ತೆಕಾ ಎಕ್ಲಿಚ್ ಬಾಯ್ಕೊ ರ್‍ಹಾವ್ಚಿ,” ತೆಚಿ ಪೊರಾ ದೆವಾಕ್ ವಿಶ್ವಾಸಾನ್ ರ್‍ಹಾವ್ಚಿ, ಅನಿ ಗೊಸ್ಟ್ ಮಾನಿನಸಲ್ಲಿ ಪೊರಾ ಮನ್ವುನ್ ಘೆವ್ನ್ ಕಟೊರ್ ಸ್ವಬಾವಾಚೆ ಹೊವ್ನ್ ರ್‍ಹಾವ್ಚೆ ನ್ಹಯ್. ಅಧ್ಯಾಯವನ್ನು ನೋಡಿ |