Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ತೀತನಿಗೆ 2:11 - ಕನ್ನಡ ಸಮಕಾಲಿಕ ಅನುವಾದ

11 ಏಕೆಂದರೆ ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನು ತರುವ ದೇವರ ಕೃಪೆಯೂ ಪ್ರತ್ಯಕ್ಷವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಏಕೆಂದರೆ ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನುಂಟುಮಾಡುವ ದೇವರ ಕೃಪೆಯು ಪ್ರತ್ಯಕ್ಷವಾಯಿತು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಎಲ್ಲಾ ಮಾನವರ ಜೀವೋದ್ಧಾರಕ್ಕಾಗಿಯೇ ದೇವರ ಅನುಗ್ರಹವು ಪ್ರಕಟವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಯಾಕಂದರೆ ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನುಂಟುಮಾಡುವ ದೇವರ ಕೃಪೆಯು ಪ್ರತ್ಯಕ್ಷವಾಯಿತು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಎಲ್ಲರಿಗೂ ರಕ್ಷಣೆಯನ್ನು ಕೊಡುವ ದೇವರ ಕೃಪೆಯು ಪ್ರತ್ಯಕ್ಷವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಕಶ್ಯಾಕ್ ಮಟ್ಲ್ಯಾರ್ ದೆವಾಚಿ ಕುರ್ಪಾ ಸಗ್ಳ್ಯಾ ಲೊಕಾಕ್ನಿ ಸುಟ್ಕಾ ಹಾನುಸಾಟ್ನಿ ಪ್ರಕಟ್ ಹೊಲ್ಲಿ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ತೀತನಿಗೆ 2:11
50 ತಿಳಿವುಗಳ ಹೋಲಿಕೆ  

ಎಲ್ಲಾ ಮನುಷ್ಯರೂ ರಕ್ಷಣೆಯನ್ನು ಹೊಂದಿ ಸತ್ಯದ ಜ್ಞಾನಕ್ಕೆ ಬರಬೇಕೆಂಬುದು ದೇವರ ಚಿತ್ತವಾಗಿದೆ.


ನಂಬಿಕೆಯ ಮೂಲಕ ಕೃಪೆಯಿಂದಲೇ ನೀವು ರಕ್ಷಣೆ ಹೊಂದಿದ್ದೀರಿ. ಈ ರಕ್ಷಣೆಯು ನಿಮ್ಮಿಂದ ಉಂಟಾದದ್ದಲ್ಲ, ಇದು ದೇವರ ದಾನವೇ.


“ಎಲ್ಲಾ ದಿಗಂತಗಳವರೇ, ನನ್ನ ಕಡೆಗೆ ನೋಡಿರಿ, ರಕ್ಷಣೆಯನ್ನು ಪಡೆಯಿರಿ. ಏಕೆಂದರೆ ನಾನೇ ದೇವರು, ನನ್ನ ಹೊರತು ಯಾರೂ ಇಲ್ಲ.


ಆದರೂ ದೇವದೂತರಿಗಿಂತ ಸ್ವಲ್ಪಕಾಲ ಕಡಿಮೆಯಾಗಿ ಮಾಡಲಾದ ಆ ಒಬ್ಬಾತನು ಯೇಸುವೇ. ಈ ಯೇಸು ಬಾಧೆಪಟ್ಟು ಮೃತಪಟ್ಟಿದ್ದರಿಂದಲೇ ಮಹಿಮೆಯನ್ನೂ ಮಾನವನ್ನೂ ಕಿರೀಟವಾಗಿ ಹೊಂದಿದರೆಂದು ಎಂದು ನಾವು ಕಾಣುತ್ತೇವೆ. ದೇವರ ಕೃಪೆಯಿಂದಲೇ ಎಲ್ಲರಿಗೋಸ್ಕರ ಮರಣವನ್ನು ಈ ಯೇಸು ಅನುಭವಿಸಬೇಕಾಗಿತ್ತು.


ಹೇಗೆದಂರೆ, ಅಪರಾಧಗಳಲ್ಲಿ ಸತ್ತವರಾಗಿದ್ದರೂ ನಮ್ಮನ್ನು ಕ್ರಿಸ್ತನೊಂದಿಗೆ ಬದುಕಿಸಿದರು. ಹೀಗೆ ನೀವು ದೇವರ ಕೃಪೆಯಿಂದಲೇ ರಕ್ಷಣೆ ಹೊಂದಿದ್ದೀರಿ.


ನಮಗೆ ಕರ್ತ ಆಗಿರುವ ಯೇಸು ಕ್ರಿಸ್ತರು ಹಾಗೂ ನಮ್ಮ ತಂದೆ ದೇವರು ನಮ್ಮನ್ನು ಪ್ರೀತಿಸಿ ಕೃಪೆಯಿಂದ ಕೊಟ್ಟಿರುವ ನಮಗೆ ನಿತ್ಯ ಆದರಣೆಯನ್ನೂ ಒಳ್ಳೆಯ ನಿರೀಕ್ಷೆಯನ್ನೂ ನೀಡಿ,


ಆದರೆ ಆ ಅಪರಾಧಕ್ಕೂ ದೇವರ ವರಕ್ಕೂ ಬಹಳ ವ್ಯತ್ಯಾಸವಿದೆ. ಹೇಗೆಂದರೆ, ಆದಾಮನ ಅಪರಾಧದಿಂದ ಎಲ್ಲ ಮನುಷ್ಯರೂ ಸತ್ತರು. ಕ್ರಿಸ್ತ ಯೇಸುವೆಂಬ ಈ ಒಬ್ಬ ಮನುಷ್ಯನ ಕೃಪೆಯಿಂದ ಸಿಕ್ಕುವ ದೇವರ ಕೃಪೆಯ ವರವು ಅನೇಕರಿಗೆ ಇನ್ನೂ ಹೆಚ್ಚಾಗಿ ಸಿಕ್ಕುವುದು ನಿಶ್ಚಯವಲ್ಲವೇ?


ವಾಕ್ಯವೆಂಬುವವರು ದೇಹಧಾರಿಯಾಗಿ ನಮ್ಮ ಮಧ್ಯದಲ್ಲಿ ವಾಸಿಸಿದರು. ನಾವು ಅವರ ಮಹಿಮೆಯನ್ನು ಕಂಡೆವು. ಆ ಮಹಿಮೆಯು ತಂದೆಯಿಂದ ಬಂದ ಏಕೈಕ ಪುತ್ರ ಆಗಿರುವವರಿಗೆ ಇರತಕ್ಕ ಮಹಿಮೆ. ಆ ವಾಕ್ಯವೆಂಬುವವರು ಕೃಪೆಯಿಂದಲೂ ಸತ್ಯದಿಂದಲೂ ತುಂಬಿದವರಾಗಿದ್ದರು.


ಯೆಹೋವ ದೇವರು ತಮ್ಮ ಪವಿತ್ರ ಬಾಹುವನ್ನು ಸಕಲ ಜನಾಂಗಗಳ ಕಣ್ಣೆದುರಿನಲ್ಲಿ ತೋರಿಸಿಕೊಂಡಿದ್ದಾನೆ ಮತ್ತು ಭೂಮಿಯ ಅಂತ್ಯದವರೆಗೂ ನಮ್ಮ ದೇವರ ರಕ್ಷಣೆಯನ್ನು ಕಾಣುವರು.


ಯೆಹೋವ ದೇವರು ಸೂರ್ಯನಂತೆ ಪ್ರಕಾಶಿಸುವವವರೂ ಗುರಾಣಿಯೂ ಆಗಿದ್ದಾರೆ. ಯೆಹೋವ ದೇವರು ಕೃಪೆಯನ್ನೂ ಮಹಿಮೆಯನ್ನೂ ಕೊಡುತ್ತಾರೆ. ನಿಷ್ಕಳಂಕವಾಗಿ ನಡೆದುಕೊಳ್ಳುವವರಿಗೆ ಅವರು ಒಳ್ಳೆಯದನ್ನು ಮಾಡಲು ಹಿಂದೆಗೆಯುವುದಿಲ್ಲ.


ಅವನು ಅಲ್ಲಿಗೆ ಬಂದು ದೇವರ ಕೃಪೆಯನ್ನು ಕಂಡು ಹರ್ಷಭರಿತನಾಗಿ, ಅವರೆಲ್ಲರೂ ಕರ್ತನಿಗೆ ಹೃದಯಪೂರ್ವಕವಾಗಿ ಭಯಭಕ್ತಿ ಉಳ್ಳವರಾಗಿರಬೇಕೆಂದು ಅವರನ್ನು ಪ್ರೋತ್ಸಾಹಿಸಿದನು.


ಆದರೂ ನನ್ನ ಪ್ರಾಣ ನನಗೆ ಅಮೂಲ್ಯವೆಂದು ನಾನು ಎಣಿಸುವುದಿಲ್ಲ. ಕರ್ತ ಯೇಸು ನನಗೆ ಕೊಟ್ಟ, ದೇವರ ಕೃಪೆಯ ಸುವಾರ್ತೆಗೆ ಸಾಕ್ಷಿ ಕೊಡುವ ಸೇವೆಯ ಓಟವನ್ನು ಓಡಿ ಮುಗಿಸುವುದೇ ನನ್ನ ಬಾಳಿನ ಒಂದೇ ಗುರಿಯಾಗಿದೆ.


ಮಾನವರೆಲ್ಲರೂ ದೇವರ ರಕ್ಷಣೆಯನ್ನು ಕಾಣುವರು.’ ”


ಆದರೆ ನಮಗೆ ಕರ್ತ ಆಗಿರುವ ಕ್ರಿಸ್ತ ಯೇಸುವಿನ ಕೃಪೆಯು ನನಗೆ ಧಾರಾಳವಾಗಿ ಸುರಿಯಲಾಯಿತು. ಮಾತ್ರವಲ್ಲದೆ ವಿಶ್ವಾಸ ಪ್ರೀತಿಯೊಂದಿಗೆ ಅತ್ಯಧಿಕವಾಯಿತು.


ಯೇಸುವಿನ ಮೂಲಕವೇ ನಾವು ಈಗ ಈ ಕೃಪೆಯಲ್ಲಿ ವಿಶ್ವಾಸದಿಂದ ಪ್ರವೇಶಮಾಡಿದ್ದೇವೆ. ಈ ಕೃಪೆಯಲ್ಲಿಯೇ ಈಗ ನಿಂತಿದ್ದೇವೆ. ನಾವು ದೇವರ ಮಹಿಮೆಯಲ್ಲಿ ಪಾಲುಗೊಳ್ಳುತ್ತೆವೆಂಬ ನಿರೀಕ್ಷೆಯಲ್ಲಿ ಆನಂದಪಡುತ್ತೇವೆ.


“ದಾವೀದನ ಮನೆತನದವರ ಮೇಲೆಯೂ ಯೆರೂಸಲೇಮಿನ ನಿವಾಸಿಗಳ ಮೇಲೆಯೂ ಕೃಪೆಯ ಆತ್ಮವನ್ನು ಮತ್ತು ಮೊರೆಯಿಡುವ ಮನೋಭಾವವನ್ನು ಸುರಿಸುವೆನು. ತಾವು ಇರಿದವನನ್ನು ಅವರು ದೃಷ್ಟಿಸಿನೋಡುವರು. ಒಬ್ಬನೇ ಮಗನ ನಿಮಿತ್ತ ಗೋಳಾಡುವವನ ಹಾಗೆ, ಆತನ ನಿಮಿತ್ತ ಗೋಳಾಡುವರು. ಚೊಚ್ಚಲ ಮಗನ ನಿಮಿತ್ತ ವ್ಯಥೆಪಡುವವನ ಹಾಗೆ ಆತನ ನಿಮಿತ್ತ ವ್ಯಥೆ ಪಡುವರು.


“ಯೆಹೋವ ದೇವರು ಆಳಿಕೆ ಮಾಡುತ್ತಾರೆ; ಆದ್ದರಿಂದ ಲೋಕವು ಸ್ಥಿರವಾಗಿರುವುದು, ಕದಲುವುದಿಲ್ಲ; ಅವರು ಜನರಿಗೆ ನೀತಿಯಲ್ಲಿ ನ್ಯಾಯತೀರಿಸುತ್ತಾರೆ,” ಎಂದು ಎಲ್ಲಾ ಜನಾಂಗಗಳಲ್ಲಿ ಹೇಳಿರಿ.


ಆ ಸುವಾರ್ತೆಯು ಲೋಕದಲ್ಲೆಲ್ಲಾ ಹರಡಿದಂತೆ, ನಿಮಗೂ ತಲುಪಲು ನೀವು ಸಹ ಅದನ್ನು ಕೇಳಿ ದೇವರ ಕೃಪೆಯನ್ನು ನಿಜವಾಗಿಯೂ ತಿಳಿದುಕೊಂಡ ದಿವಸದಿಂದ ನಿಮ್ಮಲ್ಲಿಯೂ ಫಲಕೊಟ್ಟು ವೃದ್ಧಿಯಾಗುತ್ತಿದೆ.


ನಾನು ದೇವರ ಕೃಪೆಯನ್ನು ತಿರಸ್ಕರಿಸುವುದಿಲ್ಲ. ಏಕೆಂದರೆ ನಿಯಮದ ಮೂಲಕ ನೀತಿಯು ಬರುವುದಾದರೆ, ಕ್ರಿಸ್ತ ಯೇಸು ಕಾರಣವಿಲ್ಲದೆ ಸತ್ತಂತಾಯಿತು!”


ನೀವು ಹೊಂದಿರುವ ದೇವರ ಕೃಪೆಯನ್ನು ವ್ಯರ್ಥಮಾಡಿಕೊಳ್ಳಬೇಡಿರೆಂದು ದೇವರ ಜೊತೆಕೆಲಸದವರಾದ ನಾವು ನಿಮ್ಮಲ್ಲಿ ಬೇಡಿಕೊಳ್ಳುತ್ತೇವೆ,


ಕರ್ತದೇವರು ನಮಗೆ ಆಜ್ಞಾಪಿಸಿದ್ದು ಇಂತಿದೆ: “ ‘ಭೂಲೋಕದ ಕಟ್ಟಕಡೆಯವರೆಗೆ ನೀನು ರಕ್ಷಣೆಯನ್ನು ತರುವಂತೆ ನಾನು ಯೆಹೂದ್ಯರಲ್ಲದವರಿಗೆ ನಿನ್ನನ್ನು ಬೆಳಕನ್ನಾಗಿ ನೇಮಿಸಿರುವೆನು.’ ”


ಸಭೆಯು ಮುಗಿದ ತರುವಾಯ ಅನೇಕ ಯೆಹೂದ್ಯರೂ ದೇವಭಕ್ತಿವುಳ್ಳ ಯೆಹೂದಿ ಮಾರ್ಗದ ವಿಶ್ವಾಸಿಗಳು ಪೌಲ ಬಾರ್ನಬರನ್ನು ಹಿಂಬಾಲಿಸಿದರು. ಪೌಲ ಬಾರ್ನಬರು ತಮ್ಮೊಂದಿಗೆ ಬಂದವರ ಜೊತೆ ಮಾತನಾಡಿ ದೇವರ ಕೃಪೆಯಲ್ಲಿ ಮುಂದುವರಿಯಲು ಅವರನ್ನು ಒಡಂಬಡಿಸಿದರು.


ನಿಜ ಬೆಳಕು ಲೋಕಕ್ಕೆ ಬರುವುದಾಗಿತ್ತು. ಆ ಬೆಳಕೇ ಪ್ರತಿ ಮಾನವನಿಗೂ ಬೆಳಕನ್ನು ನೀಡುವುದಾಗಿತ್ತು.


ಯೆರೂಸಲೇಮು ಮೊದಲುಗೊಂಡು ಎಲ್ಲಾ ಜನಾಂಗದವರೊಳಗೆ ಆತನ ಹೆಸರಿನಲ್ಲಿ ಪಶ್ಚಾತ್ತಾಪಪಟ್ಟು ಮತ್ತು ಪಾಪಗಳ ಕ್ಷಮಾಪಣೆ ಸಾರಬೇಕೆಂತಲೂ ಬರೆಯಲಾಗಿದೆ.


ಯೇಸು ಅವರಿಗೆ, “ನೀವು ಜಗತ್ತಿನ ಎಲ್ಲಾ ಕಡೆಗಳಿಗೆ ಹೋಗಿ ಸರ್ವಸೃಷ್ಟಿಗೂ ಸುವಾರ್ತೆಯನ್ನು ಸಾರಿರಿ.


ಆದ್ದರಿಂದ ನೀವು ಹೋಗಿ ಎಲ್ಲಾ ದೇಶಗಳ ಜನರನ್ನು ಶಿಷ್ಯರನ್ನಾಗಿ ಮಾಡಿರಿ. ಅವರಿಗೆ ತಂದೆಯ, ಮಗನ ಮತ್ತು ಪವಿತ್ರಾತ್ಮನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿ,


“ಪರಾಕ್ರಮದ ಬೆಟ್ಟವೇ, ನೀನ್ಯಾರು? ಜೆರುಬ್ಬಾಬೆಲನ ಮುಂದೆ ಬಯಲಾಗುವೆ. ಅವನು ಕಲಶದ ಕಲ್ಲನ್ನು ಸ್ಥಾಪಿಸಿ, ‘ದೇವರು ಇದನ್ನು ಆಶೀರ್ವದಿಸಲಿ! ದೇವರು ಇದನ್ನು ಆಶೀರ್ವದಿಸಲಿ!’ ಎಂದು ಘೋಷಿಸುವನು.”


ಆತನೇ ಈಗ ಹೀಗೆನ್ನುತ್ತಾನೆ, “ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬಿನ ಕುಲಗಳನ್ನು ಉನ್ನತಪಡಿಸುವುದೂ, ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರುಗಿ ಬರಮಾಡುವುದೂ ಅಲ್ಪ ಕಾರ್ಯವಲ್ಲವೇ, ನನ್ನ ರಕ್ಷಣೆಯು ಭೂಲೋಕದ ಕಟ್ಟಕಡೆಯವರೆಗೆ ವ್ಯಾಪಿಸುವಂತೆ ನಿನ್ನನ್ನು ಸರ್ವಜನಾಂಗಗಳಿಗೂ ಬೆಳಕನ್ನಾಗಿ ಮಾಡುವೆನು.”


ನಿಮ್ಮಲ್ಲಿ ಯಾರೂ ದೇವರ ಕೃಪೆಗೆ ತಪ್ಪಿಹೋಗದಂತೆಯೂ ಯಾವ ವಿಷವುಳ್ಳ ಬೇರೂ ನಿಮ್ಮಲ್ಲಿ ಚಿಗುರಿ ಅಸಮಾಧಾನವನ್ನು ಹುಟ್ಟಿಸಿ ಅದರಿಂದ ಅನೇಕರು ಮಲಿನರಾಗದಂತೆಯೂ


ಆದರೆ ಕರ್ತ ಯೇಸು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ, ನನ್ನ ಮೂಲಕ ಸುವಾರ್ತೆಯು ಸಂಪೂರ್ಣವಾಗಿ ಸಾರುವಂತೆ ಮಾಡಿದರು. ಯೆಹೂದ್ಯರಲ್ಲದವರೆಲ್ಲರೂ ಸಹ ಅದನ್ನು ಕೇಳುವಂತೆಯೂ ಮಾಡಿದರು. ಇದಲ್ಲದೆ ಕರ್ತ ಯೇಸು ನನ್ನನ್ನು ಸಿಂಹದ ಬಾಯೊಳಗಿಂದ ಸಂರಕ್ಷಿಸಿದರು.


ನೀವು ನಿಮ್ಮ ನಂಬಿಕೆಯಲ್ಲಿ ಸ್ಥಿರವಾಗಿ ಮುಂದುವರೆದು ನೆಲೆಗೊಂಡು, ಸುವಾರ್ತೆಯ ನಿರೀಕ್ಷೆಯಿಂದ ತೊಲಗಿ ಹೋಗದಿರಿ. ನೀವು ಕೇಳಿದಂಥ ಮತ್ತು ಆಕಾಶದ ಕೆಳಗಿರುವ ಸರ್ವಸೃಷ್ಟಿಗೆ ಸಾರಲಾದ ಈ ಸುವಾರ್ತೆಗೆ ಪೌಲನೆಂಬ ನಾನು ಸೇವಕನಾದೆನು.


ಆದರೆ ಇಸ್ರಾಯೇಲರು ಎಂದೂ ಸುವಾರ್ತೆಯನ್ನು ಕೇಳಲಿಲ್ಲವೋ ಎಂದು ನಾನು ಪ್ರಶ್ನಿಸುತ್ತೇನೆ? ಅವರು ನಿಶ್ಚಯವಾಗಿ ಕೇಳಿದ್ದಾರೆ. ಪವಿತ್ರ ವೇದದಲ್ಲಿ ಹೇಳಿರುವಂತೆ: “ಅವರ ಸ್ವರವು ಭೂಮಿಯ ಎಲ್ಲಾ ಕಡೆಗಳಲ್ಲಿ ಹೋಗಿರುತ್ತದೆ, ಅವರ ನುಡಿಗಳು ಲೋಕದ ಕಟ್ಟಕಡೆಯವರೆಗೂ ವ್ಯಾಪಿಸಿವೆ.”


ಆಗ ದೇವರೇ, ನಿಮ್ಮ ಮಾರ್ಗಗಳು ಭೂಮಿಯಲ್ಲಿ ಗೊತ್ತಾಗುವುದು. ನಿಮ್ಮ ರಕ್ಷಣೆಯು ಎಲ್ಲಾ ಜನಾಂಗಗಳಲ್ಲಿ ಪ್ರಸಿದ್ಧವಾಗುವುದು.


ಇಂಥಾ ಅಜ್ಞಾನ ಕಾಲವನ್ನು ಹಿಂದಿನ ಕಾಲದಲ್ಲಿ ದೇವರು ತಮ್ಮ ಗಮನಕ್ಕೆ ತಂದುಕೊಳ್ಳಲಿಲ್ಲ. ಆದರೆ ಈಗ ಎಲ್ಲಾ ಕಡೆಗಳಲ್ಲಿರುವ ಸರ್ವಮಾನವರೂ ಪಶ್ಚಾತ್ತಾಪ ಪಡಬೇಕೆಂದು ದೇವರು ಆಜ್ಞಾಪಿಸುತ್ತಾರೆ.


ಆದರೆ ಈಗ ನಮಗೆ ರಕ್ಷಕ ಆಗಿರುವ ಕ್ರಿಸ್ತ ಯೇಸುವಿನ ಪ್ರತ್ಯಕ್ಷತೆಯ ಮೂಲಕ ಕೃಪೆ ಪ್ರಕಟವಾಯಿತು. ಕ್ರಿಸ್ತ ಯೇಸು ಮರಣವನ್ನು ನಾಶಮಾಡಿ, ಸುವಾರ್ತೆಯ ಮೂಲಕ ಜೀವವನ್ನೂ ನಿರ್ಲಯತ್ವವನ್ನೂ ಪ್ರಕಾಶಗೊಳಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು