ತೀತನಿಗೆ 3:12 - ಕನ್ನಡ ಸಮಕಾಲಿಕ ಅನುವಾದ12 ನಾನು ಅರ್ತೆಮನನ್ನಾಗಲಿ, ತುಖಿಕನನ್ನಾಗಲಿ ನಿನ್ನ ಬಳಿಗೆ ಕಳುಹಿಸಿದಾಗ ನೀನು ನಿಕೊಪೊಲಿಯಲ್ಲಿ ನನ್ನ ಹತ್ತಿರ ಬರುವುದಕ್ಕೆ ಪ್ರಯತ್ನ ಮಾಡು. ಅಲ್ಲಿಯೇ ಚಳಿಗಾಲವನ್ನು ಕಳೆಯಬೇಕೆಂದು ನಾನು ತೀರ್ಮಾನಿಸಿದ್ದೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ನಾನು ನಿಕೊಪೊಲಿಯಲ್ಲಿ ಚಳಿಗಾಲವನ್ನು ಕಳೆಯಬೇಕೆಂದು ನಿಶ್ಚಯಿಸಿಕೊಂಡಿದ್ದರಿಂದ ಅರ್ತೆಮನನ್ನಾಗಲಿ ತುಖಿಕನನ್ನಾಗಲಿ ನಿನ್ನ ಬಳಿಗೆ ಕಳುಹಿಸಿದ ಕೂಡಲೆ ಅಲ್ಲಿಗೆ ನನ್ನ ಹತ್ತಿರ ಬರುವುದಕ್ಕೆ ಪ್ರಯತ್ನಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ನಾನು ನಿಕೊಪೊಲಿಯಲ್ಲಿ ಚಳಿಗಾಲವನ್ನು ಕಳೆಯಬೇಕೆಂದಿರುವುದರಿಂದ ಅರ್ತೆಮನನ್ನಾಗಲೀ ತುಖಿಕನನ್ನಾಗಲೀ ನಿನ್ನ ಬಳಿಗೆ ಕಳಿಸುತ್ತೇನೆ. ಅವರಲ್ಲೊಬ್ಬನು ನಿನ್ನ ಬಳಿಗೆ ಬಂದಾಗ ನೀನು ಕೂಡಲೇ ನಿಕೊಪೊಲಿಗೆ ಬಂದುಬಿಡು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ನಾನು ನಿಕೊಪೊಲಿಯಲ್ಲಿ ಚಳಿಗಾಲವನ್ನು ಕಳೆಯಬೇಕೆಂದು ನಿಶ್ಚಯಿಸಿಕೊಂಡದರಿಂದ ಅರ್ತೆಮನನ್ನಾಗಲಿ ತುಖಿಕನನ್ನಾಗಲಿ ನಿನ್ನ ಬಳಿಗೆ ಕಳುಹಿಸಿದ ಕೂಡಲೆ ಅಲ್ಲಿಗೆ ನನ್ನ ಹತ್ತಿರ ಬರುವದಕ್ಕೆ ಪ್ರಯತ್ನಮಾಡು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ನಾನು ನಿನ್ನ ಬಳಿಗೆ ಅರ್ತೆಮನನ್ನು ಮತ್ತು ತುಖಿಕನನ್ನು ಕಳುಹಿಸಿದಾಗ, ನಿಕೊಪೊಲಿಯಲ್ಲಿರುವ ನನ್ನ ಬಳಿಗೆ ಬರಲು ಆದಷ್ಟು ಪ್ರಯತ್ನಿಸು. ನಾನು ಈ ಚಳಿಗಾಲವನ್ನು ಅಲ್ಲಿಯೇ ಕಳೆಯಬೇಕೆಂದಿದ್ದೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್12 ಮಿಯಾ ಅರ್ತೆಮಾಕ್, ನಾ ತರ್ ತುಖಿಕಾಕ್ ತುಜೆಕ್ಡೆ ಧಾಡುನ್ ದಿಲ್ಲ್ಯಾ ತನ್ನಾ, ನಿಕೊಪೊಲಿತ್ ಮಾಜೆಕ್ಡೆ ಯೆವ್ಕ್ ಖಟ್ಪಟ್ ಕರುನ್ ಬಗ್ ಕಶ್ಯಾಕ್ ಮಟ್ಲ್ಯಾರ್ ಥಂಡಿಚ್ಯಾ ದಿಸಾತ್ನಿ ಮಿಯಾ ಥೈಚ್ ರ್‍ಹವ್ಚೆ ಮನುನ್ ಕರ್‍ಲಾ. ಅಧ್ಯಾಯವನ್ನು ನೋಡಿ |