ತೀತನಿಗೆ 3:5 - ಕನ್ನಡ ಸಮಕಾಲಿಕ ಅನುವಾದ5 ಅವರು ನಮ್ಮನ್ನು ರಕ್ಷಿಸಿದರು. ಹೇಗೆಂದರೆ, ನಾವು ಮಾಡಿದ ಪುಣ್ಯ ಕ್ರಿಯೆಗಳಿಂದಲ್ಲ, ಅವರ ಕರುಣೆಗೆ ಅನುಸಾರವಾಗಿ ಆತ್ಮಿಕವಾಗಿ ಹುಟ್ಟುವಂತೆ ಮಾಡಿ, ನಮ್ಮನ್ನು ತೊಳೆದೂ ಪವಿತ್ರಾತ್ಮ ದೇವರು ನೂತನ ಜೀವನವನ್ನು ಕೊಡುವುದರ ಮೂಲಕವೇ ಅವರು ನಮ್ಮನ್ನು ರಕ್ಷಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ನಾವು ಮಾಡಿದ ಪುಣ್ಯಕಾರ್ಯಗಳ ನಿಮಿತ್ತದಿಂದಲ್ಲ ಪುನರ್ಜನ್ಮವನ್ನು ಸೂಚಿಸುವ ದೀಕ್ಷಾಸ್ನಾನದ ಮೂಲಕವಾಗಿಯೂ, ಪವಿತ್ರಾತ್ಮನ ನವೀಕರಣದ ಮೂಲಕವಾಗಿಯೂ ಆತನು ತನ್ನ ಕರುಣೆಯಿಂದಲೇ ನಮ್ಮನ್ನು ರಕ್ಷಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಆಗ ಅವರೇ ನಮ್ಮನ್ನು ಉದ್ಧರಿಸಿದರು. ನಮ್ಮ ಸ್ವಂತ ಪುಣ್ಯಕಾರ್ಯಗಳು ನಮಗೆ ಈ ಉದ್ಧಾರವನ್ನು ತರಲಿಲ್ಲ. ಪುನರ್ಜನ್ಮವನ್ನು ಸೂಚಿಸುವ ಸ್ನಾನ ಹಾಗೂ ನೂತನ ಜೀವವನ್ನೀಯುವ ಪವಿತ್ರಾತ್ಮ ಈ ಮೂಲಕ ಅವರೇ ನಮ್ಮನ್ನು ಕರುಣೆಯಿಂದ ಉದ್ಧಾರಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ನಾವು ಮಾಡಿದ ಪುಣ್ಯಕ್ರಿಯೆಗಳ ನಿವಿುತ್ತದಿಂದಲ್ಲ ಆತನ ಕರುಣೆಯಲ್ಲಿಯೇ ಪುನರ್ಜನ್ಮವನ್ನು ಸೂಚಿಸುವ ಸ್ನಾನದ ಮೂಲಕವಾಗಿಯೂ ಪವಿತ್ರಾತ್ಮನು ನಮ್ಮಲ್ಲಿ ನೂತನಸ್ವಭಾವವನ್ನು ಉಂಟುಮಾಡುವದರ ಮೂಲಕವಾಗಿಯೂ ಆತನು ನಮ್ಮನ್ನು ರಕ್ಷಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಆತನು ನಮ್ಮನ್ನು ರಕ್ಷಿಸಿದ್ದು ತನ್ನ ಕರುಣೆಯಿಂದಲೇ ಹೊರತು ನೀತಿವಂತರಾಗಲು ನಾವು ಮಾಡಿದ ಒಳ್ಳೆಯ ಕಾರ್ಯಗಳಿಂದಲ್ಲ. ಆತನು ನಮ್ಮನ್ನು ಸ್ನಾನದ ಮೂಲಕವಾಗಿಯೂ ಪವಿತ್ರಾತ್ಮನ ಮೂಲಕವಾಗಿಯೂ ಹೊಸಬರನ್ನಾಗಿ ಮಾಡಿ ರಕ್ಷಿಸಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್5 ತೆನಿ ಅಮ್ಕಾ ಹುರ್ವುಲ್ಯಾನ್ ಹೆ ಅಮಿ ಅಮ್ಚ್ಯಾ ಬರ್‍ಯಾಪಾನಾಚ್ಯಾ ವೈನಾ ನ್ಹಯ್, ಅಪ್ನಾಚ್ಯಾ ಸ್ವತಾಚ್ಯಾ ದಯೆನ್ ತೆನಿ ಅಮ್ಕಾ ಹುರ್ವುಲ್ಯಾನ್. ಅಮ್ಕಾ ನ್ಹವೊ ಜಲಮ್ ಅನಿ ನ್ಹವೊ ಜಿವ್ ದಿತಲ್ಯಾ ಪವಿತ್ರ್ ಆತ್ಮ್ಯಾನಿ ತೆನಿ ಧುಲ್ಯಾನ್. ಅಧ್ಯಾಯವನ್ನು ನೋಡಿ |
ಒಬ್ಬ ವ್ಯಕ್ತಿ ಮೋಶೆಯ ನಿಯಮದ ಕ್ರಿಯೆಗಳಿಂದ ನೀತಿವಂತನಾಗುವುದಿಲ್ಲ. ಆದರೆ ಕ್ರಿಸ್ತ ಯೇಸುವನ್ನು ನಂಬುವುದರಿಂದಲೇ ನೀತಿವಂತನಾಗುತ್ತಾನೆ ಎಂದು ನಮಗೆ ತಿಳಿದಿದೆ. ನಾವು ಸಹ ಮೋಶೆಯ ನಿಯಮದ ಕ್ರಿಯೆಗಳಿಂದಲ್ಲ, ಕ್ರಿಸ್ತ ಯೇಸುವಿನ ನಂಬಿಕೆಯ ಮೂಲಕ ನೀತಿವಂತರಾವುದಕ್ಕಾಗಿ ಕ್ರಿಸ್ತ ಯೇಸುವಿನಲ್ಲಿ ನಂಬಿಕೆ ಇಟ್ಟೆವು. ಏಕೆಂದರೆ, ಮೋಶೆಯ ನಿಯಮದ ಕ್ರಿಯೆಗಳಿಂದ ಯಾರೂ ನೀತಿವಂತರಾಗುವುದಿಲ್ಲ.