Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ತೀತನಿಗೆ 3:7 - ಕನ್ನಡ ಸಮಕಾಲಿಕ ಅನುವಾದ

7 ನಾವು ಅವರ ಕೃಪೆಯಿಂದ ನೀತಿವಂತರೆಂದು ನಿರ್ಣಯ ಹೊಂದಿ, ನಿತ್ಯಜೀವದ ನಿರೀಕ್ಷೆಗೆ ಅನುಸಾರವಾಗಿ ಬಾಧ್ಯರಾಗುವಂತೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಹೀಗೆ ದೈವಾನುಗ್ರಹದಿಂದ ನಾವು ದೇವರೊಡನೆ ಸತ್ಸಂಬಂಧವನ್ನು ಹೊಂದಿದೆವು. ನಿತ್ಯಜೀವದ ಭರವಸೆಯನ್ನು ಪಡೆದು ಆ ಜೀವಕ್ಕೆ ಬಾಧ್ಯಸ್ಥರಾದೆವು. ಇದು ಸತ್ಯವಾದ ಮಾತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ದೇವರು ತನ್ನ ಕೃಪೆಯಿಂದ ನಮ್ಮನ್ನು ನೀತಿವಂತರನ್ನಾಗಿ ಮಾಡಿದನು. ನಾವು ನಿತ್ಯಜೀವವನ್ನು ಪಡೆಯುವಂತೆ ಆತನು ನಮಗೆ ಪವಿತ್ರಾತ್ಮನನ್ನು ಕೊಟ್ಟನು. ಅದೇ ನಮ್ಮ ನಿರೀಕ್ಷೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಅಶೆ, ಅಮಿ ತೆಚ್ಯಾ ಕುರ್ಪೆ ವೈನಾ ರಾಕುನ್ ಹೊತ್ತೆ, ಕನ್ನಾಚ್ ಮರಾನ್ ನಸಲ್ಲೆ ಜಿವನ್ ಗಾವ್ತಲಿ ಮರ್‍ಯಾದ್ ಅಮ್ಕಾ ಗಾವಿ ಸರ್ಕೆ ದೆವಾಚ್ಯಾ ಇದ್ರಾಕ್ ನಿತಿವಂತ್ ಕರುನ್ ಥವ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ತೀತನಿಗೆ 3:7
25 ತಿಳಿವುಗಳ ಹೋಲಿಕೆ  

ನಾವು ಈಗ ಮಕ್ಕಳಾಗಿರುವುದಾದರೆ, ಬಾಧ್ಯರಾಗಿರುತ್ತೇವೆ; ದೇವರಿಗೆ ಬಾಧ್ಯರು ಮತ್ತು ಕ್ರಿಸ್ತ ಯೇಸುವಿನೊಂದಿಗೆ ಸಹಬಾಧ್ಯರಾಗಿದ್ದೇವೆ. ನಾವು ಕ್ರಿಸ್ತ ಯೇಸುವಿನ ಶ್ರಮೆಗಳಲ್ಲಿ ನಿಜವಾಗಿಯೂ ಪಾಲುಗಾರರಾಗಿದ್ದರೆ, ಅವರ ಮಹಿಮೆಯಲ್ಲಿಯೂ ಪಾಲುಗಾರರಾಗುವೆವು.


ಆದರೆ ಕ್ರಿಸ್ತ ಯೇಸುವಿನಲ್ಲಿ ಬಂದ ವಿಮೋಚನೆಯ ಮೂಲಕ ಅವರು ದೇವರ ಕೃಪೆಯಿಂದ ಉಚಿತವಾಗಿ ನೀತಿವಂತರೆಂದು ನಿರ್ಣಯ ಹೊಂದುತ್ತಾರೆ.


ಏಕೆಂದರೆ ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನು ತರುವ ದೇವರ ಕೃಪೆಯೂ ಪ್ರತ್ಯಕ್ಷವಾಯಿತು.


ನಿಮ್ಮಲ್ಲಿ ಕೆಲವರು ಅಂಥವರಾಗಿದ್ದೀರಿ. ಆದರೂ ಕರ್ತ ಆಗಿರುವ ಯೇಸುಕ್ರಿಸ್ತರ ಹೆಸರಿನಲ್ಲಿಯೂ ನಮ್ಮ ದೇವರ ಆತ್ಮದಿಂದಲೂ ನೀವು ತೊಳೆದು, ಶುದ್ಧೀಕರಣ ಹೊಂದಿ, ನೀತಿವಂತರೆಂಬ ನಿರ್ಣಯವನ್ನು ಹೊಂದಿದ್ದೀರಿ.


ಸುಳ್ಳಾಡದ ದೇವರು, ಕಾಲಾರಂಭಕ್ಕೆ ಮುಂಚೆಯೇ ನಿತ್ಯಜೀವದ ನಿರೀಕ್ಷೆಯನ್ನು ವಾಗ್ದಾನಮಾಡಿದ್ದಾರೆ.


ನನ್ನ ಪ್ರಿಯರೇ, ಕೇಳಿರಿ, ದೇವರು ಈ ಲೋಕದ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರನ್ನಾಗಿಯೂ ತಮ್ಮನ್ನು ಪ್ರೀತಿಸುವವರಿಗೆ ತಾವು ವಾಗ್ದಾನಮಾಡಿದ ರಾಜ್ಯಕ್ಕೆ ಬಾಧ್ಯರನ್ನಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?


ಒಬ್ಬ ವ್ಯಕ್ತಿ ಮೋಶೆಯ ನಿಯಮದ ಕ್ರಿಯೆಗಳಿಂದ ನೀತಿವಂತನಾಗುವುದಿಲ್ಲ. ಆದರೆ ಕ್ರಿಸ್ತ ಯೇಸುವನ್ನು ನಂಬುವುದರಿಂದಲೇ ನೀತಿವಂತನಾಗುತ್ತಾನೆ ಎಂದು ನಮಗೆ ತಿಳಿದಿದೆ. ನಾವು ಸಹ ಮೋಶೆಯ ನಿಯಮದ ಕ್ರಿಯೆಗಳಿಂದಲ್ಲ, ಕ್ರಿಸ್ತ ಯೇಸುವಿನ ನಂಬಿಕೆಯ ಮೂಲಕ ನೀತಿವಂತರಾವುದಕ್ಕಾಗಿ ಕ್ರಿಸ್ತ ಯೇಸುವಿನಲ್ಲಿ ನಂಬಿಕೆ ಇಟ್ಟೆವು. ಏಕೆಂದರೆ, ಮೋಶೆಯ ನಿಯಮದ ಕ್ರಿಯೆಗಳಿಂದ ಯಾರೂ ನೀತಿವಂತರಾಗುವುದಿಲ್ಲ.


ಆ ಆಯ್ಕೆಯು ಕ್ರಿಯೆಗಳ ಆಧಾರದಿಂದಲ್ಲ, ಕೃಪೆಯಿಂದಲೇ ಆಗಿರುತ್ತದೆ. ಕ್ರಿಯೆಗಳಿಂದ ಅದು ಆಗಿದ್ದರೆ ಇನ್ನೆಂದಿಗೂ ಕೃಪೆಯಾಗಲಾರದು.


ಆದರೆ ನೀವು ಕ್ರಿಸ್ತನವರಾಗಿದ್ದರೆ, ಅಬ್ರಹಾಮನ ಸಂತತಿಯವರಾಗಿದ್ದೀರಿ ಮಾತ್ರವಲ್ಲದೆ ವಾಗ್ದಾನಕ್ಕನುಸಾರವಾಗಿ ವಾರಸುದಾರರೂ ಆಗಿದ್ದೀರಿ.


ಆದ್ದರಿಂದ ಆ ಬಾಧ್ಯತೆಯು ಕೃಪೆಯಿಂದಲೇ, ನಂಬಿಕೆಯ ಮೂಲಕ ದೊರಕುತ್ತದೆ. ಈ ವಾಗ್ದಾನವು ನಿಯಮದ ಸಂತತಿಯವರಿಗೆ ಮಾತ್ರವಲ್ಲ ಅಬ್ರಹಾಮನಲ್ಲಿ ಇದ್ದ ನಂಬಿಕೆ ಇರುವವರ ಸಂತತಿಯವರೆಲ್ಲರಿಗೂ ಶಾಶ್ವತವಾಗಿ ದೊರಕುವುದು. ಏಕೆಂದರೆ ಅವನು ನಮ್ಮೆಲ್ಲರಿಗೂ ತಂದೆಯಾಗಿದ್ದಾನೆ.


ಏಕೆಂದರೆ ನಿಯಮವನ್ನು ಕೈಕೊಳ್ಳುವುದರಿಂದಲೇ. ನಂಬಿಕೆಯಿಂದಲೇ ಒಬ್ಬ ಮನುಷ್ಯನು ನೀತಿವಂತನೆಂದು ನಿರ್ಣಯ ಹೊಂದುತ್ತಾನೆಂದು ಎಣಿಸುತ್ತೇವೆ.


ಅದೇ ರೀತಿಯಾಗಿ ಪುರುಷರೇ, ಸ್ತ್ರೀಯು ಬಲಹೀನಳೆಂಬುದನ್ನು ತಿಳಿದು ನಿಮ್ಮ ಪತ್ನಿಯರ ಸಂಗಡ ವಿವೇಕದಿಂದ ಇರಿ. ಅವರು ಜೀವ ಕೃಪೆಯಲ್ಲಿ ನಿಮ್ಮೊಂದಿಗೆ ಬಾಧ್ಯರಾಗಿದ್ದಾರೆಂದು ತಿಳಿದು ಅವರಿಗೆ ಮಾನವನ್ನು ಸಲ್ಲಿಸಿರಿ. ಹೀಗೆ ನಡೆದರೆ ನಿಮ್ಮ ಪ್ರಾರ್ಥನೆಗಳಿಗೆ ಅಡ್ಡಿಯಿರುವುದಿಲ್ಲ.


ನಂಬಿಕೆಯಿಂದಲೇ ಅವನು ವಾಗ್ದಾನದ ದೇಶಕ್ಕೆ ಬಂದಾಗಲೂ ಅನ್ಯದೇಶದಲ್ಲಿ ಇದ್ದವನಂತೆ ಗುಡಾರಗಳಲ್ಲಿ ಇದ್ದುಕೊಂಡು ಪ್ರವಾಸಿಯಾಗಿದ್ದನು. ಅದೇ ವಾಗ್ದಾನಕ್ಕೆ ಬಾಧ್ಯರಾಗಿದ್ದ ಇಸಾಕ ಯಾಕೋಬರು ಸಹ ಗುಡಾರಗಳಲ್ಲಿ ವಾಸಿಸಿದರು.


ನಂಬಿಕೆಯಿಂದಲೇ ನೋಹನು ಇನ್ನೂ ಕಾಣದಿದ್ದವುಗಳ ವಿಷಯವಾಗಿ ದೇವರಿಂದ ಎಚ್ಚರಿಕೆ ಪಡೆದು ಭಕ್ತಿಯಲ್ಲಿ ತನ್ನ ಮನೆಯವರ ರಕ್ಷಣೆಗಾಗಿ ನಾವೆಯನ್ನು ಸಿದ್ಧಮಾಡಿದನು. ಅವನು ಲೋಕದವರನ್ನು ಖಂಡಿಸಿ ತರುವಾಯ ನಂಬಿಕೆಗೆ ಅನುಸಾರವಾಗಿ ನಂಬಿಕೆಯಿಂದ ಬರುವ ನೀತಿಗೆ ಬಾಧ್ಯನಾದನು.


ದೇವರು ತಮ್ಮ ಮಾರ್ಪಡದ ಉದ್ದೇಶವನ್ನು ವಾಗ್ದಾನದ ಬಾಧ್ಯಸ್ಥರಿಗೆ ಇನ್ನೂ ಹೆಚ್ಚಾಗಿಯೇ ತೋರಿಸಬೇಕೆಂದು ಆಣೆಯಿಟ್ಟು ಸ್ಥಿರಪಡಿಸಿದರು.


ಹೀಗಿರುವಲ್ಲಿ ಇನ್ನು ನೀನು ದಾಸನಲ್ಲ ಪುತ್ರನಾಗಿದ್ದೀ. ನೀನು ದೇವರ ಮಗು ಎಂದ ಮೇಲೆ ದೇವರ ಮೂಲಕ ವಾರಸುದಾರನೂ ಆಗಿದ್ದೀ.


ಕೆಲಸ ಮಾಡಿದವನಿಗೆ ದೊರೆಯುವ ಕೂಲಿಯು, ಉಚಿತ ದಾನವಲ್ಲ ಅದು ಅವನ ದುಡಿದ ಸಂಪಾದನೆ.


ನಮಗೆ ರಕ್ಷಕರೂ ಮಹಾ ದೇವರೂ ಆಗಿರುವ ಕ್ರಿಸ್ತ ಯೇಸುವಿನ ಭಾಗ್ಯಕರವಾದ ಮಹಿಮೆಯ ಪ್ರತ್ಯಕ್ಷತೆಯ ನಿರೀಕ್ಷೆಯನ್ನೂ ಎದುರು ನೋಡುತ್ತಿರಬೇಕೆಂದು ಕೃಪೆಯು ನಮಗೆ ಬೋಧಿಸುತ್ತದೆ.


“ಆಗ ನಾನು ನನ್ನ ಬಲಗಡೆಯಲ್ಲಿರುವವರಿಗೆ, ‘ನನ್ನ ತಂದೆಯಿಂದ ಆಶೀರ್ವಾದ ಹೊಂದಿದವರೇ, ಬನ್ನಿರಿ, ಭೂಲೋಕಕ್ಕೆ ಅಸ್ತಿವಾರ ಹಾಕಿದ ದಿನದಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಆಸ್ತಿಯನ್ನಾಗಿ ಹೊಂದಿರಿ.


ಯೇಸು ಅಲ್ಲಿಂದ ಹೋಗುತ್ತಿದ್ದಾಗ ಒಬ್ಬನು ಓಡುತ್ತಾ ಬಂದು ಅವರ ಮುಂದೆ ಮೊಣಕಾಲೂರಿ, “ಒಳ್ಳೆಯ ಬೋಧಕರೇ, ನಾನು ನಿತ್ಯಜೀವವನ್ನು ಪ್ರಾಪ್ತಿಮಾಡಿಕೊಳ್ಳುವುದಕ್ಕೆ ಏನು ಮಾಡಬೇಕು?” ಎಂದು ಯೇಸುವನ್ನು ಕೇಳಿದನು.


ನಮಗೆ ಕರ್ತ ಆಗಿರುವ ಯೇಸು ಕ್ರಿಸ್ತರು ಹಾಗೂ ನಮ್ಮ ತಂದೆ ದೇವರು ನಮ್ಮನ್ನು ಪ್ರೀತಿಸಿ ಕೃಪೆಯಿಂದ ಕೊಟ್ಟಿರುವ ನಮಗೆ ನಿತ್ಯ ಆದರಣೆಯನ್ನೂ ಒಳ್ಳೆಯ ನಿರೀಕ್ಷೆಯನ್ನೂ ನೀಡಿ,


ಈ ದೇವದೂತರೆಲ್ಲರೂ ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿಸಲಾದ ಸೇವೆಯ ಆತ್ಮಗಳು ಅಲ್ಲವೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು