Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 1:12 - ಕನ್ನಡ ಸಮಕಾಲಿಕ ಅನುವಾದ

12 “ನಿನ್ನ ಸೇವಕರನ್ನು ಹತ್ತು ದಿವಸಗಳವರೆಗೂ ಪರೀಕ್ಷಿಸಿ ನೋಡು. ಅವರು ನಮ್ಮ ಆಹಾರಕ್ಕೆ ಕೇವಲ ಕಾಯಿಪಲ್ಯಗಳನ್ನು, ಕುಡಿಯುವುದಕ್ಕೆ ಕೇವಲ ನೀರನ್ನು ಕೊಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನೇಮಿಸಿದ್ದ ವಿಚಾರಕನಿಗೆ, “ಅಯ್ಯಾ, ಹತ್ತು ದಿನಗಳ ಮಟ್ಟಿಗೆ ನಿನ್ನ ಸೇವಕರಾದ ನಮ್ಮನ್ನು ಪರೀಕ್ಷಿಸು; ಆಹಾರಕ್ಕೆ ಕಾಯಿಪಲ್ಯ ಮತ್ತು ಪಾನಕ್ಕೆ ನೀರು ನಮಗೆ ಒದಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 “ಅಯ್ಯಾ, ಹತ್ತು ದಿನಗಳ ಮಟ್ಟಿಗೆ ನಮ್ಮನ್ನು ಪರೀಕ್ಷಿಸಿನೋಡು. ಸೇವಕರಾದ ನಮಗೆ ಭೋಜನಕ್ಕೆ ಬದಲಾಗಿ ಕಾಯಿಪಲ್ಯ, ಪಾನಕ್ಕೆ ಬದಲಾಗಿ ನೀರು ಒದಗಿಸಿದರೆ ಸಾಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅಯ್ಯಾ, ಹತ್ತು ದಿನಗಳ ಮಟ್ಟಿಗೆ ನಿನ್ನ ಸೇವಕರಾದ ನಮ್ಮನ್ನು ಪರೀಕ್ಷಿಸು; ಆಹಾರಕ್ಕೆ ಕಾಯಿಪಲ್ಯ, ಪಾನಕ್ಕೆ ನೀರು ನಮಗೆ ಒದಗಲಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ದಾನಿಯೇಲನು ಕಾವಲುಗಾರನಿಗೆ, “ದಯವಿಟ್ಟು ಹತ್ತು ದಿನಗಳವರೆಗೆ ನಮ್ಮನ್ನು ಪರೀಕ್ಷಿಸಿರಿ. ತಿನ್ನುವದಕ್ಕೆ ಕಾಯಿಪಲ್ಯ, ಕುಡಿಯುವದಕ್ಕೆ ನೀರು, ಇವುಗಳ ಹೊರತು ನಮಗೆ ಇನ್ನೇನೂ ಕೊಡಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 1:12
7 ತಿಳಿವುಗಳ ಹೋಲಿಕೆ  

ಒಬ್ಬನ ವಿಶ್ವಾಸವು ಎಲ್ಲವನ್ನೂ ತಿನ್ನುವಂತೆ ಮಾಡುತ್ತದೆ. ಆದರೆ ವಿಶ್ವಾಸದಲ್ಲಿ ಬಲಹೀನನಾಗಿರುವವನು ಸಸ್ಯಾಹಾರಿಯಾಗಿಯೇ ಇರುತ್ತಾನೆ.


ಹೀಗೆ ಮೇಲ್ವಿಚಾರಕನು ಅವರ ಭೋಜನದ ಪಾಲನ್ನು ಅವರು ಕುಡಿಯುವಂಥ ದ್ರಾಕ್ಷಾರಸವನ್ನು ತೆಗೆದುಹಾಕಿ ಅವರಿಗೆ ಸಸ್ಯಾಹಾರವನ್ನು ಕೊಟ್ಟನು.


ಮನುಷ್ಯನು ಜೀವಿಸುವುದು ರೊಟ್ಟಿಯಿಂದ ಮಾತ್ರವಲ್ಲ ಯೆಹೋವ ದೇವರ ಬಾಯಿಂದ ಹೊರಡುವ ಪ್ರತಿಯೊಂದು ಮಾತಿನಿಂದಲೂ ಬದುಕುತ್ತಾನೆಂದು ನಿಮಗೆ ಬೋಧಿಸುವಂತೆ ದೇವರು ನಿಮ್ಮನ್ನು ಹಸಿವೆಯಿಂದ ಬಳಲುವಂತೆ ಮಾಡಿದರು. ನೀವು ತಿಳಿಯದಂಥ ಮತ್ತು ನಿಮ್ಮ ಪಿತೃಗಳು ತಿಳಿಯದಂಥ ಮನ್ನವನ್ನು ನಿಮಗೆ ಉಣ್ಣಲು ಕೊಟ್ಟರು.


ನಿನಗೆ ಸಂಭವಿಸುವುದಕ್ಕಿರುವ ಬಾಧೆಗಳಿಗೆ ಭಯಪಡಬೇಡ. ಇಗೋ, ನಿಮ್ಮನ್ನು ಪರೀಕ್ಷಿಸಲು, ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವುದಕ್ಕೆ ಇದ್ದಾನೆ. ಹತ್ತು ದಿವಸಗಳ ತನಕ ನಿಮಗೆ ಸಂಕಟವಿರುವುದು. ನೀನು ಸಾಯುವವರೆಗೆ ನಂಬಿಗಸ್ತನಾಗಿರು. ನಾನು ನಿನಗೆ ಜೀವದ ಕಿರೀಟವನ್ನು ಕೊಡುವೆನು.


ಆಮೇಲೆ ದಾನಿಯೇಲನು ಕಂಚುಕಿಯರ ಯಜಮಾನನು ಹನನ್ಯ, ಮೀಶಾಯೇಲ್, ಅಜರ್ಯ ಮತ್ತು ತನ್ನನ್ನು ನೋಡಿಕೊಳ್ಳುವುದಕ್ಕೆ ಇಟ್ಟಿದ್ದ ಮೇಲ್ವಿಚಾರಕನಿಗೆ,


ಆಗ ನಮ್ಮ ಮುಖಗಳು ಅರಸನ ಭೋಜನದ ಪಾಲನ್ನು ತಿನ್ನುವ ಯೌವನಸ್ಥರ ಮುಖಗಳು ನಿಮ್ಮ ಮುಂದೆ ಕಾಣಬರಲಿ. ನಿನಗೆ ಕಾಣುವ ಪ್ರಕಾರ ನಿನ್ನ ಸೇವಕರಿಗೆ ನೋಡುವ ಹಾಗೆ ಮಾಡು,” ಎಂದು ಬೇಡಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು