ದಾನಿಯೇಲ 1:2 - ಕನ್ನಡ ಸಮಕಾಲಿಕ ಅನುವಾದ2 ಆಗ ಕರ್ತನು ಯೆಹೂದದ ಅರಸನಾದ ಯೆಹೋಯಾಕೀಮನನ್ನು ದೇವಾಲಯದ ಕೆಲವು ವಸ್ತುಗಳನ್ನು ಕೂಡ ಅವನಿಗೆ ಒಪ್ಪಿಸಿದನು. ಅವನು ಅವುಗಳನ್ನು ಶಿನಾರ್ ದೇಶಕ್ಕೂ, ತನ್ನ ದೇವರ ಆಲಯಕ್ಕೂ ತಂದು, ಅವುಗಳನ್ನು ತನ್ನ ದೇವರ ಬೊಕ್ಕಸದ ಮನೆಯಲ್ಲಿ ಇರಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಆಗ ಕರ್ತನು ಯೆಹೂದದ ಅರಸನಾದ ಯೆಹೋಯಾಕೀಮನನ್ನೂ, ದೇವಾಲಯದ ಅನೇಕ ಪಾತ್ರೆಗಳನ್ನೂ ಅವನ ವಶಕ್ಕೆ ಕೊಡಲು ಅವನು ಅವುಗಳನ್ನು ಶಿನಾರ್ ದೇಶಕ್ಕೆ ಸಾಗಿಸಿ ತನ್ನ ದೇವರ ಮಂದಿರಕ್ಕೆ ತಂದು ಆ ದೇವರ ಭಂಡಾರದಲ್ಲಿ ಸೇರಿಸಿಬಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಸರ್ವೇಶ್ವರಸ್ವಾಮಿ ಜುದೇಯದ ಅರಸ ಯೆಹೋಯಾಕೀಮನನ್ನು ಅವನ ಕೈವಶ ವಾಗುವಂತೆ ಮಾಡಿದರು . ಅಂತೆಯೇ ದೇವಾಲಯದ ಅನೇಕ ಪೂಜಾಪಾತ್ರೆಗಳು ಅವನ ಕೈವಶವಾದವು. ನೆಬೂಕದ್ನೆಚ್ಚರನು ಅವುಗಳನ್ನು ಶಿನಾರ್ ದೇಶಕ್ಕೆ ಸಾಗಿಸಿ, ತನ್ನ ದೇವರ ಮಂದಿರಕ್ಕೆ ತಂದು, ಆ ದೇವರ ಭಂಡಾರಕ್ಕೆ ಸೇರಿಸಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಆಗ ಕರ್ತನು ಯೆಹೂದದ ಅರಸನಾದ ಯೆಹೋಯಾಕೀಮನನ್ನೂ ದೇವಾಲಯದ ಅನೇಕ ಪಾತ್ರೆಗಳನ್ನೂ ಅವನ ವಶಕ್ಕೆ ಕೊಡಲು ಅವನು ಅವುಗಳನ್ನು ಶಿನಾರ್ ದೇಶಕ್ಕೆ ಸಾಗಿಸಿ ತನ್ನ ದೇವರ ಮಂದಿರಕ್ಕೆ ತಂದು ಆ ದೇವರ ಭಂಡಾರದಲ್ಲಿ ಸೇರಿಸಿಬಿಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ನೆಬೂಕದ್ನೆಚ್ಚರನು ಯೆಹೂದದ ಅರಸನಾದ ಯೆಹೋಯಾಕೀಮನನ್ನು ಸೋಲಿಸುವಂತೆ ಯೆಹೋವನು ಮಾಡಿದನು. ಅವನು ಆಲಯದ ಸಾಮಾಗ್ರಿಗಳನ್ನು ಬಾಬಿಲೋನಿಗೆ ತೆಗೆದುಕೊಂಡು ಹೋದನು. ಆ ಸಾಮಾಗ್ರಿಗಳನ್ನು ಅವನು ತನ್ನ ವಿಗ್ರಹಾಲಯದಲ್ಲಿಟ್ಟನು. ಅಧ್ಯಾಯವನ್ನು ನೋಡಿ |