Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 1:20 - ಕನ್ನಡ ಸಮಕಾಲಿಕ ಅನುವಾದ

20 ಅರಸನು ಅವರ ಹತ್ತಿರ ವಿಚಾರಿಸಿದಾಗ ಸಮಸ್ತ ಜ್ಞಾನ ವಿವೇಕಗಳ ವಿಷಯದಲ್ಲಿ ತನ್ನ ರಾಜ್ಯದಲ್ಲಿರುವ ಎಲ್ಲಾ ಮಂತ್ರಗಾರರಿಗಿಂತಲೂ, ಜೋತಿಷ್ಯರಿಗಿಂತಲೂ ಇವರೇ ಹತ್ತರಷ್ಟು ಉತ್ತಮರೆಂದು ಕಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಬಳಿಕ ರಾಜನು ಶಾಸ್ತ್ರೀಯ ವಿದ್ಯೆಯ ಸರ್ವವಿಷಯಗಳಲ್ಲಿ ಅವರನ್ನು ವಿಚಾರಮಾಡಲು ಅವನ ಪೂರ್ಣ ರಾಜ್ಯದಲ್ಲಿನ ಎಲ್ಲಾ ಜೋಯಿಸರಿಗಿಂತಲೂ, ಮಂತ್ರವಾದಿಗಳಿಗಿಂತಲೂ ಹತ್ತರಷ್ಟು ನಿಪುಣರಾಗಿ ಕಂಡುಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಬಳಿಕ ರಾಜನು ಶಾಸ್ತ್ರೀಯ ವಿದ್ಯೆಯ ಎಲ್ಲ ವಿಷಯಗಳಲ್ಲಿ ಅವರನ್ನು ವಿಚಾರಮಾಡಿದಾಗ ಸಮಸ್ತರಾಜ್ಯದಲ್ಲಿನ ಎಲ್ಲ ಜೋಯಿಸರಿಗಿಂತಲೂ ಮಂತ್ರವಾದಿಗಳಿಗಿಂತಲೂ ಹತ್ತರಷ್ಟು ನಿಪುಣರಾಗಿ ಕಂಡುಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಬಳಿಕ ರಾಜನು ಶಾಸ್ತ್ರೀಯ ವಿದ್ಯೆಯ ಸರ್ವವಿಷಯಗಳಲ್ಲಿ ಅವರನ್ನು ವಿಚಾರಮಾಡಲು ಅವನ ಪೂರ್ಣರಾಜ್ಯದಲ್ಲಿನ ಎಲ್ಲಾ ಜೋಯಿಸರಿಗಿಂತಲೂ ಮಂತ್ರವಾದಿಗಳಿಗಿಂತಲೂ ಹತ್ತರಷ್ಟು ನಿಪುಣರಾಗಿ ಕಂಡುಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಅರಸನು ಮಹತ್ವಪೂರ್ಣವಾದ ವಿಷಯಗಳ ಬಗ್ಗೆ ಅವರನ್ನು ಕೇಳಿದಾಗಲೆಲ್ಲ ಅವರು ಹೆಚ್ಚಿನ ಪ್ರಜ್ಞೆಯನ್ನು, ಬುದ್ಧಿಯನ್ನು ತೋರಿದರು. ಅವರು ಇಡೀ ದೇಶದ ಎಲ್ಲ ಜೋಯಿಸರಿಗಿಂತಲೂ ಮಂತ್ರವಾದಿಗಳಿಗಿಂತಲೂ ಹತ್ತರಷ್ಟು ನಿಪುಣರಾಗಿದ್ದಾರೆಂಬುದನ್ನು ಅರಸನು ಕಂಡುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 1:20
25 ತಿಳಿವುಗಳ ಹೋಲಿಕೆ  

ಆಗ ಮಂತ್ರಗಾರರು ಫರೋಹನಿಗೆ, “ಇದು ದೇವರ ಕೈಕೆಲಸವೇ ಸರಿ,” ಎಂದರು. ಆದರೆ ಯೆಹೋವ ದೇವರು ಹೇಳಿದಂತೆ ಫರೋಹನ ಹೃದಯ ಕಠಿಣವಾಯಿತು. ಆದ್ದರಿಂದ ಅವನು ಅವರ ಮಾತನ್ನು ಕೇಳಲಿಲ್ಲ.


ಈಜಿಪ್ಟಿನವರ ಮನಸ್ಸು ಭಯಗೊಳ್ಳುವುದು ಅವರ ಆಲೋಚನೆಯನ್ನು ಭಂಗಪಡಿಸುವೆನು. ಅಲ್ಲಿಯವರು ವಿಗ್ರಹಗಳನ್ನೂ, ಮಾಟಗಾರರನ್ನೂ, ಯಕ್ಷಣಿಗಾರರನ್ನೂ, ಮಂತ್ರವಾದಿಗಳನ್ನೂ ಆಶ್ರಯಿಸುವರು.


ಈಗ ಹತ್ತು ಸಾರಿ ನನ್ನನ್ನು ನಿಂದಿಸಿದ್ದೀರಿ; ನಾಚಿಕೆಯಿಲ್ಲದೆ ನೀವು ನನ್ನ ಮೇಲೆ ಆಕ್ರಮಣ ಮಾಡುತ್ತೀರಿ.


ಅವರ ಬಳಿಯಲ್ಲಿ ವಾಸವಾಗಿರುವ ಯೆಹೂದ್ಯರು ನಮ್ಮ ಬಳಿಗೆ ಬಂದು, “ನೀವು ತಿರುಗಿಕೊಳ್ಳುವ ಎಲ್ಲಾ ಸ್ಥಳಗಳಿಂದ ನಮ್ಮ ಮೇಲೆ ಯುದ್ಧಕ್ಕೆ ಬಂದಾರು,” ಎಂದು ನಮಗೆ ಹತ್ತು ಬಾರಿ ಹೇಳಿದರು.


ಏಕೆಂದರೆ ನನ್ನ ಮಹಿಮೆಯನ್ನೂ, ಈಜಿಪ್ಟ್ ದೇಶದಲ್ಲಿಯೂ, ಮರುಭೂಮಿಯಲ್ಲಿಯೂ ನಾನು ಮಾಡಿದ ಸೂಚಕಕಾರ್ಯಗಳನ್ನೂ ನೋಡಿದ ಈ ಸಕಲ ಜನರು, ನನ್ನನ್ನು ಈಗ ಹತ್ತು ಸಾರಿ ಪರೀಕ್ಷಿಸಿ, ನನ್ನ ಮಾತನ್ನು ಕೇಳದೆ ಹೋದದ್ದರಿಂದ,


ಆದರೆ ಮಂತ್ರಗಾರರು ತಮ್ಮ ಮಾಟಗಳಿಂದ ಹಾಗೆಯೇ ಮಾಡಿ, ಕಪ್ಪೆಗಳನ್ನು ಈಜಿಪ್ಟ್ ದೇಶದ ಮೇಲೆ ಬರಮಾಡಿದರು.


ಆದರೆ ಈಜಿಪ್ಟಿನ ಮಂತ್ರಗಾರರು ತಮ್ಮ ಮಾಟಗಳಿಂದ ಹಾಗೆಯೇ ಮಾಡಿದ್ದರಿಂದ ಫರೋಹನ ಹೃದಯವು ಕಠಿಣವಾಯಿತು. ಯೆಹೋವ ದೇವರು ಹೇಳಿದಂತೆಯೇ ಅವನು ಅವರ ಮಾತನ್ನು ಕೇಳಲಿಲ್ಲ.


ಬೆಳಿಗ್ಗೆ ಅವನ ಮನಸ್ಸು ಕಳವಳಗೊಂಡಿತು. ಆದ್ದರಿಂದ ಅವನು ಈಜಿಪ್ಟಿನ ಎಲ್ಲಾ ಮಂತ್ರವಾದಿಗಳನ್ನೂ ಎಲ್ಲಾ ಜ್ಞಾನಿಗಳನ್ನೂ ಕರೆಕಳುಹಿಸಿದನು. ಫರೋಹನು ಅವರಿಗೆ ತನ್ನ ಕನಸನ್ನು ತಿಳಿಸಿದಾಗ, ಅವುಗಳ ಅರ್ಥವನ್ನು ಹೇಳುವವರು ಯಾರೂ ಇರಲಿಲ್ಲ.


ಆದರೆ ನಿಮ್ಮ ತಂದೆಯು ನನಗೆ ವಂಚನೆಮಾಡಿ, ನನ್ನ ಸಂಬಳವನ್ನು ಹತ್ತು ಸಾರಿ ಬದಲಾಯಿಸಿದನು. ಆದಾಗ್ಯೂ ದೇವರು ಅವನಿಂದ ನನಗೆ ಕೇಡು ಮಾಡಗೊಡಿಸಲಿಲ್ಲ.


ಆಗ ದಾನಿಯೇಲನು ಅರಸನ ಮುಂದೆ, “ನಿನ್ನ ದಾನಗಳು ನಿನಗಿರಲಿ, ನಿನ್ನ ಬಹುಮಾನಗಳು ಮತ್ತೊಬ್ಬರಿಗೆ ದೊರಕಲಿ. ಆದರೂ ನಾನು ಅರಸನಿಗಾಗಿ ಬರಹವನ್ನು ಓದಿ, ಅದರ ಅರ್ಥವನ್ನು ಅರಸನಿಗೆ ತಿಳಿಸುವೆನು,” ಎಂದನು.


ಅವರು ಕಾಲವನ್ನೂ, ಸಮಯವನ್ನೂ ಬದಲಾಯಿಸುತ್ತಾ ಅವರು ಅರಸರನ್ನು ಕಡೆಗಣಿಸುತ್ತಾರೆ ಮತ್ತು ಇತರರನ್ನು ಮೇಲಕ್ಕೆತ್ತುತ್ತಾರೆ. ಜ್ಞಾನಿಗಳಿಗೆ ಜ್ಞಾನವನ್ನೂ, ಬುದ್ಧಿವಂತರಿಗೆ ತಿಳುವಳಿಕೆಯನ್ನೂ ಕೊಡುವರು.


ಹಾಗೆಯೇ ಜ್ಞಾನಿಗಳನ್ನು ಕೊಲ್ಲಬೇಕೆಂಬ ನಿರ್ಣಯವು ಹೊರಟಿತು. ದಾನಿಯೇಲನನ್ನೂ, ಅವನ ಜೊತೆಗಾರರನ್ನೂ ಕೊಲ್ಲಲು ಹುಡುಕಿದರು.


ನನ್ನ ಒಳನೋಟ ನನ್ನ ಬೋಧಕರೆಲ್ಲರಿಗಿಂತ ದೊಡ್ಡದಾಗಿದೆ. ಏಕೆಂದರೆ ನಿಮ್ಮ ಶಾಸನಗಳು ನನ್ನ ಧ್ಯಾನವಾಗಿವೆ.


ನೀನು ದಾನಿಯೇಲನಿಗಿಂತ ಜ್ಞಾನಿಯಾಗಿರುವೆಯಾ? ನಿಮ್ಮಿಂದ ಮರೆಮಾಡಲು ಯಾವುದೇ ರಹಸ್ಯವಿಲ್ಲ.


ಈ ನಾಲ್ಕು ಯೌವನಸ್ಥರಿಗೆ ದೇವರು ಎಲ್ಲಾ ವಿದ್ಯೆಯಲ್ಲಿಯೂ, ಜ್ಞಾನದಲ್ಲಿಯೂ, ತಿಳುವಳಿಕೆಯನ್ನೂ, ವಿವೇಕವನ್ನೂ ಕೊಟ್ಟರು. ದಾನಿಯೇಲನು ಸಕಲ ದರ್ಶನಗಳಲ್ಲಿಯೂ, ಕನಸುಗಳಲ್ಲಿಯೂ ತಿಳುವಳಿಕೆಯುಳ್ಳವನಾಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು