7 ಅಶ್ಪೆನಜನು ಆ ಯೆಹೂದ್ಯ ತರುಣರಿಗೆ ಬಾಬಿಲೋನಿನ ಹೆಸರುಗಳನ್ನಿಟ್ಟನು. ದಾನಿಯೇಲನ ಹೊಸ ಹೆಸರು ಬೇಲ್ತೆಶಚ್ಚರ್, ಹನನ್ಯನ ಹೊಸ ಹೆಸರು ಶದ್ರಕ್, ಮೀಶಾಯೇಲನ ಹೊಸ ಹೆಸರು ಮೇಶಕ್ ಮತ್ತು ಅಜರ್ಯನ ಹೊಸ ಹೆಸರು ಅಬೇದ್ನೆಗೋ.
ಏಕೆಂದರೆ ಬೇಲ್ತೆಶಚ್ಚರನೆಂಬ ಹೆಸರನ್ನು ಅರಸನಿಂದ ಪಡೆದ ಆ ದಾನಿಯೇಲನಲ್ಲಿ ಕನಸುಗಳ ಅರ್ಥವನ್ನು ಹೇಳುವುದಕ್ಕೂ, ಕಠಿಣವಾದ ಸಂಗತಿಗಳನ್ನು ತಿಳಿಸುವುದಕ್ಕೂ, ಒಗಟುಗಳನ್ನು ವಿವರಿಸುವುದಕ್ಕೂ ಕಷ್ಟಕರವಾದ ಸಮಸ್ಯೆಗಳನ್ನು ಪರಿಹರಿಸುವುದಕ್ಕೂ ಉತ್ತಮ ಆತ್ಮವೂ, ಜ್ಞಾನವೂ, ವಿವೇಕವೂ ಸಿಕ್ಕಿದವು. ಈಗ ಆ ದಾನಿಯೇಲನನ್ನು ಕರೆಯಿಸಿದರೆ, ಅವನು ಈ ಬರಹದ ಅರ್ಥವನ್ನು ವಿವರಿಸುವನು,” ಎಂದಳು.
ಕೊನೆಗೆ ದಾನಿಯೇಲನು ನನ್ನ ಬಳಿಗೆ ಬಂದನು. ಅವನು ನನ್ನ ದೇವರ ಹೆಸರು ಸೇರಿರುವ ಬೇಲ್ತೆಶಚ್ಚರ್ ಎಂಬ ಅಡ್ಡಹೆಸರನ್ನು ಹೊಂದಿದ್ದನು. ಪರಿಶುದ್ಧ ದೇವರುಗಳ ಆತ್ಮವು ಅವನಲ್ಲಿತ್ತು. ಅವನಿಗೆ ನನ್ನ ಕನಸನ್ನು ಹೀಗೆ ತಿಳಿಸಿದೆ.
ಫರೋಹ ನೆಕೋವನು ಯೋಷೀಯನಿಗೆ ಬದಲಾಗಿ ಅವನ ಮಗನಾದ ಎಲ್ಯಾಕೀಮನನ್ನು ಅರಸನನ್ನಾಗಿ ಮಾಡಿ, ಅವನಿಗೆ ಯೆಹೋಯಾಕೀಮನೆಂಬ ಹೆಸರನ್ನಿಟ್ಟನು. ಯೆಹೋವಾಹಾಜನನ್ನು ತೆಗೆದುಕೊಂಡು ಈಜಿಪ್ಟಿಗೆ ಒಯ್ದನು. ಯೆಹೋವಾಹಾಜನು ಅಲ್ಲೇ ಮರಣಹೊಂದಿದನು.
ಫರೋಹನು ಯೋಸೇಫನಿಗೆ ಸಾಫ್ನತ್ಪನ್ನೇಹ ಎಂದು ಹೆಸರಿಟ್ಟನು. ತರುವಾಯ ಓನಿನ ಯಾಜಕನಾದ ಪೋಟೀಫೆರನ ಮಗಳಾದ ಆಸನತ್ ಎಂಬಾಕೆಯನ್ನು ಅವನಿಗೆ ಹೆಂಡತಿಯಾಗಿ ಕೊಟ್ಟನು. ತರುವಾಯ ಯೋಸೇಫನು ಈಜಿಪ್ಟ್ ದೇಶದಲ್ಲೆಲ್ಲಾ ಸಂಚರಿಸಿದನು.
ಪಾರಸಿಯ ಅರಸ ಕೋರೆಷನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಬೇಲ್ತೆಶಚ್ಚರನೆಂಬ ದಾನಿಯೇಲನಿಗೆ ಒಂದು ಪ್ರಕಟಣೆಯಾಯಿತು. ಅದರ ಸಂದೇಶವು ಸತ್ಯವಾದದ್ದು. ಅದು ಮಹಾ ಯುದ್ಧ ವಿಷಯವಾಗಿದೆ. ಸಂದೇಶದ ಅರ್ಥವು ಅವನಿಗೆ ಒಂದು ದರ್ಶನದಲ್ಲಿ ಬಂದಿತು.