ದಾನಿಯೇಲ 1:8 - ಕನ್ನಡ ಸಮಕಾಲಿಕ ಅನುವಾದ8 ದಾನಿಯೇಲನು ಅರಸನ ಭೋಜನದ ಪಾಲಿನಿಂದಲಾದರೂ, ಅವನು ಕುಡಿಯುವ ದ್ರಾಕ್ಷಾರಸದಿಂದಾದರೂ ತನ್ನನ್ನು ಅಶುದ್ಧಪಡಿಸಿಕೊಳ್ಳುವುದಿಲ್ಲವೆಂದು ತನ್ನ ಹೃದಯದಲ್ಲಿ ನಿಶ್ಚಯಿಸಿಕೊಂಡನು. ಆದ್ದರಿಂದ ತಾನು ಅಶುದ್ಧನಾಗದ ಹಾಗೆ ಕಂಚುಕಿಯರ ಯಜಮಾನನನ್ನು ಬೇಡಿಕೊಂಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಆದರೆ ದಾನಿಯೇಲನು ರಾಜನ ಭೋಜನ ಪದಾರ್ಥಗಳನ್ನು ತಿಂದು ರಾಜನು ಕುಡಿಯುವ ದ್ರಾಕ್ಷಾರಸವನ್ನು ಕುಡಿದು ತನ್ನನ್ನು ಅಶುದ್ಧ ಮಾಡಿಕೊಳ್ಳಬಾರದೆಂದು ನಿಶ್ಚಯಿಸಿ ಕಂಚುಕಿಯರ ಅಧ್ಯಕ್ಷನಿಗೆ, “ನಾನು ಅಶುದ್ಧನಾಗಲಾರೆ, ಕ್ಷಮಿಸು” ಎಂದು ವಿಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಆದರೆ ದಾನಿಯೇಲನು ತಾನು ರಾಜನ ಭೋಜನ ಪದಾರ್ಥಗಳನ್ನು ತಿಂದು ಹಾಗೂ ರಾಜನು ಕುಡಿಯುವ ದ್ರಾಕ್ಷಾರಸವನ್ನು ಕುಡಿದು ತನ್ನನ್ನೇ ಅಶುದ್ಧ ಮಾಡಿಕೊಳ್ಳಬಾರದೆಂದು ನಿಶ್ಚಯಿಸಿಕೊಂಡನು. ಕಂಚುಕಿಯರ ನಾಯಕನಿಗೆ, “ಕ್ಷಮಿಸು, ನಾನು ಅಶುದ್ಧನಾಗಲಾರೆ,” ಎಂದು ವಿನಂತಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ದಾನಿಯೇಲನು ತಾನು ರಾಜನ ಭೋಜನಪದಾರ್ಥಗಳನ್ನು ತಿಂದು ರಾಜನು ಕುಡಿಯುವ ದ್ರಾಕ್ಷಾರಸವನ್ನು ಕುಡಿದು ತನ್ನನ್ನು ಅಶುದ್ಧಮಾಡಿಕೊಳ್ಳಬಾರದೆಂದು ನಿಶ್ಚಯಿಸಿ ಕಂಚುಕಿಯರ ಅಧ್ಯಕ್ಷನಿಗೆ - ನಾನು ಅಶುದ್ಧನಾಗಲಾರೆ, ಕ್ಷವಿುಸು ಎಂದು ವಿಜ್ಞಾಪಿಸಿದಾಗ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ದಾನಿಯೇಲನು ಅರಸನ ಪುಷ್ಟಿದಾಯಕ ಆಹಾರವನ್ನು ಮತ್ತು ಪಾನೀಯವನ್ನು ಇಷ್ಟಪಡಲಿಲ್ಲ. ಆ ಆಹಾರ ಮತ್ತು ಪಾನೀಯಗಳಿಂದ ತನ್ನನ್ನು ಅಶುದ್ಧಗೊಳಿಸಿಕೊಳ್ಳಲು ದಾನಿಯೇಲನಿಗೆ ಇಷ್ಟವಿರಲಿಲ್ಲ. ಆದ್ದರಿಂದ ಈ ರೀತಿ ತನ್ನನ್ನು ಅಶುದ್ಧಗೊಳಿಸಿಕೊಳ್ಳದೆ ಇರುವದಕ್ಕಾಗಿ ಅಶ್ಪೆನಜನ ಅಪ್ಪಣೆಯನ್ನು ಕೇಳಿದನು. ಅಧ್ಯಾಯವನ್ನು ನೋಡಿ |