ದಾನಿಯೇಲ 1:9 - ಕನ್ನಡ ಸಮಕಾಲಿಕ ಅನುವಾದ9 ಆಗ ದೇವರು ದಾನಿಯೇಲನ ಮೇಲೆ ಕಂಚುಕಿಯರ ಯಜಮಾನನ ದಯೆ, ಕನಿಕರ ತೋರುವಂತೆ ಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ದೇವರು ಕಂಚುಕಿಯರ ಅಧ್ಯಕ್ಷನ ಮನಸ್ಸಿನಲ್ಲಿ ದಾನಿಯೇಲನ ಮೇಲೆ ಕನಿಕರವನ್ನೂ, ದಯೆಯನ್ನೂ ಹುಟ್ಟಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಕಂಚುಕಿಯರ ನಾಯಕನು ದಾನಿಯೇಲನ ಮೇಲೆ ಕನಿಕರ ಮತ್ತು ದಯೆತೋರುವಂತೆ ದೇವರು ಅನುಗ್ರಹಿಸಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ದೇವರು ಕಂಚುಕಿಯರ ಅಧ್ಯಕ್ಷನ ಮನಸ್ಸಿನಲ್ಲಿ ದಾನಿಯೇಲನ ಮೇಲೆ ಕನಿಕರವನ್ನೂ ದಯೆಯನ್ನೂ ಹುಟ್ಟಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ದೇವರು ಅಶ್ಪೆನಜನ ಮನಸ್ಸಿನಲ್ಲಿ ದಾನಿಯೇಲನ ಮೇಲೆ ಕನಿಕರವನ್ನೂ ದಯೆಯನ್ನೂ ಹುಟ್ಟಿಸಿದನು. ಅಧ್ಯಾಯವನ್ನು ನೋಡಿ |
ಎಸ್ತೇರಳು ಹೇಗೈಯ ಮೆಚ್ಚುಗೆಯನ್ನು ಗಳಿಸಿದ್ದರಿಂದ ಅವನ ಸಮ್ಮುಖದಲ್ಲಿ ಅವಳಿಗೆ ದಯೆ ದೊರಕಿತು. ಆದಕಾರಣ ಅವನು ತ್ವರೆಯಾಗಿ ಸೌಂದರ್ಯವರ್ಧಕ ಸಾಧನಗಳನ್ನೂ ಅರಸನ ಅರಮನೆಯಿಂದ ಏಳುಮಂದಿ ದಾಸಿಯರನ್ನೂ ಅವಳಿಗೆ ಕೊಟ್ಟನು. ಇದಲ್ಲದೆ ಸ್ತ್ರೀಯರಿದ್ದ ಕೋಣೆಯಲ್ಲಿ ಉತ್ತಮವಾದ ಭೋಜನಾಂಶಗಳನ್ನು ಅವಳಿಗೂ ಅವಳ ದಾಸಿಯರಿಗೂ ಕೊಟ್ಟನು. ಆಕೆಯನ್ನೂ ಮತ್ತು ಆಕೆಯ ಸೇವಕಿಯರನ್ನೂ ಅಂತಃಪುರದ ಉತ್ತಮ ಭಾಗದಲ್ಲಿರಿಸಿದನು.