Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 10:11 - ಕನ್ನಡ ಸಮಕಾಲಿಕ ಅನುವಾದ

11 ಆತನು ನನಗೆ, “ದಾನಿಯೇಲನೇ, ಅತಿ ಪ್ರಿಯನಾದ ಮನುಷ್ಯನೇ, ನಾನು ನಿನಗೆ ಹೇಳುವ ಮಾತುಗಳನ್ನು ತಿಳಿದುಕೊಂಡು ಸ್ಥಿರವಾಗಿ ನಿಲ್ಲು. ಏಕೆಂದರೆ ನಾನು ಈಗ ನಿನ್ನ ಬಳಿಗೆ ಕಳುಹಿಸಲಾಗಿದ್ದೇನೆ,” ಎಂದು ಹೇಳಿದನು. ಅವನು ಈ ಮಾತನ್ನು ಹೇಳಿದ ಮೇಲೆ, ನಾನು ನಡುಗುತ್ತಲೇ ನಿಂತೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆಗ ಅವರು ನನಗೆ, “ದಾನಿಯೇಲನೇ, ಅತಿಪ್ರಿಯನೇ, ನಾನು ನುಡಿಯುವ ಮಾತುಗಳನ್ನು ಗ್ರಹಿಸು; ನಿಂತುಕೋ, ಈಗ ನಿನ್ನ ಬಳಿಗೇ ಕಳುಹಿಸಲ್ಪಟ್ಟಿದ್ದೇನೆ” ಎಂದು ಹೇಳಿದನು. ಹೇಳಿದ ಕೂಡಲೆ ನಾನು ನಡುಗುತ್ತಾ ನಿಂತುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಆಗ ಅವನು ನನಗೆ, “ಅತಿಪ್ರಿಯ ದಾನಿಯೇಲನೇ, ನಾನು ನುಡಿಯುವ ಮಾತುಗಳನ್ನು ಗ್ರಹಿಸು. ಎದ್ದು ನಿಂತುಕೋ. ನಾನು ನಿನ್ನ ಬಳಿಗೆ ಕಳುಹಿಸಲ್ಪಟ್ಟವನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆಗ ಅವನು ನನಗೆ - ದಾನಿಯೇಲನೇ, ಅತಿಪ್ರಿಯನೇ, ನಾನು ನುಡಿಯುವ ಮಾತುಗಳನ್ನು ಗ್ರಹಿಸು; ನಿಂತುಕೋ, ಈಗ ನಿನ್ನ ಬಳಿಗೇ ಕಳುಹಿಸಲ್ಪಟ್ಟಿದ್ದೇನೆ ಎಂದು ಹೇಳಿದನು; ಹೇಳಿದ ಕೂಡಲೆ ನಾನು ನಡುಗುತ್ತಾ ನಿಂತುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ದರ್ಶನದಲ್ಲಿ ಕಾಣಿಸಿಕೊಂಡ ಮನುಷ್ಯನು ನನಗೆ, “ದಾನಿಯೇಲನೇ, ದೇವರು ನಿನ್ನನ್ನು ತುಂಬ ಪ್ರೀತಿಸುತ್ತಾನೆ. ನಾನು ನಿನಗೆ ಈ ಮುಂದೆ ಹೇಳುವ ಮಾತುಗಳ ಬಗ್ಗೆ ಚೆನ್ನಾಗಿ ವಿಚಾರಮಾಡು. ಎದ್ದುನಿಲ್ಲು, ನನ್ನನ್ನು ನಿನ್ನ ಬಳಿಗೆ ಕಳುಹಿಸಲಾಗಿದೆ” ಎಂದು ಹೇಳಿದನು. ಆಗ ನಾನು ಎದ್ದುನಿಂತೆ. ನಾನು ಭಯದಿಂದ ಇನ್ನೂ ನಡುಗುತ್ತಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 10:11
15 ತಿಳಿವುಗಳ ಹೋಲಿಕೆ  

ನೀನು ಎದ್ದು ನಿಂತುಕೋ, ನೀನು ಕಂಡಿದ್ದವುಗಳಿಗಾಗಿಯೂ ನಾನು ನಿನಗೆ ತೋರಿಸುವಂಥವುಗಳಿಗಾಗಿಯೂ ನಿನ್ನನ್ನು ಸೇವಕನನ್ನಾಗಿಯೂ ಸಾಕ್ಷಿಯನ್ನಾಗಿಯೂ ನೇಮಿಸಲು ನಾನು ನಿನಗೆ ಕಾಣಿಸಿಕೊಂಡಿದ್ದೇನೆ.


ಅವರು ವಿಸ್ಮಯಗೊಂಡು ಭಯದಿಂದ ನಡುಗುತ್ತಾ ಸಮಾಧಿಯ ಬಳಿಯಿಂದ ಓಡಿಹೋದರು. ಅವರು ಹೆದರಿದ್ದರಿಂದ ಯಾರಿಗೂ ಏನೂ ಹೇಳಲಿಲ್ಲ.


ಯೆಹೋವ ದೇವರು ನನಗೆ, “ಮನುಷ್ಯಪುತ್ರನೇ, ಎದ್ದು ನಿಲ್ಲು, ನಿನ್ನ ಸಂಗಡ ಮಾತನಾಡಬೇಕು.”


ಎದ್ದೇಳು ಪಟ್ಟಣದೊಳಗೆ ಹೋಗು, ನೀನು ಏನು ಮಾಡಬೇಕು ಎಂಬುದನ್ನು ಅಲ್ಲಿ ನಿನಗೆ ತಿಳಿಸಲಾಗುವುದು,” ಎಂದು ಕರ್ತ ಯೇಸು ಹೇಳಿದರು.


ಪೇತ್ರನು ತಿರುಗಿ ಕಂಡಾಗ ಯೇಸುವನ್ನು ಪ್ರೀತಿಸಿದಂಥ ಶಿಷ್ಯನು ಅವರ ಹಿಂದೆ ಬರುವುದನ್ನು ಕಂಡನು. ಯೇಸುವಿನ ಎದೆಗೆ ಒರಗಿಕೊಂಡು, “ಕರ್ತನೇ, ನಿನ್ನನ್ನು ಹಿಡಿದುಕೊಡುವವನು ಯಾರು?” ಎಂದು ಕೇಳಿದಂಥವನು ಇವನೇ.


ಶಿಷ್ಯರಲ್ಲಿ ಯೇಸು ಪ್ರೀತಿಸಿದ ಒಬ್ಬನು ಅವರ ಎದೆಗೆ ಒರಗಿಕೊಂಡಿದ್ದನು.


“ಅತಿ ಪ್ರಿಯನೇ, ಭಯಪಡಬೇಡ, ನಿನಗೆ ಸಮಾಧಾನವಾಗಲಿ, ಬಲವಾಗಿರು, ಈಗ ಬಲಶಾಲಿಯಾಗಿರು,” ಎಂದನು. ಅವನು ನನ್ನ ಸಂಗಡ ಮಾತನಾಡಿದಾಗ ನಾನು ಬಲವನ್ನು ಹೊಂದಿ, “ನನ್ನ ಒಡೆಯನೇ ಮಾತನಾಡು, ನೀನು ನನ್ನನ್ನು ಬಲಪಡಿಸಿದ್ದೀ,” ಎಂದು ಹೇಳಿದೆನು.


ಆ ಮೂರು ವಾರಗಳು ಕಳೆಯುವವರೆಗೂ, ನಾನು ರುಚಿಕರವಾದ ರೊಟ್ಟಿಯನ್ನು ತಿನ್ನಲಿಲ್ಲ. ಮಾಂಸವನ್ನಾದರೂ, ದ್ರಾಕ್ಷಾರಸವನ್ನಾದರೂ ನನ್ನ ಬಾಯಿಗೆ ಮುಟ್ಟಿಸಲಿಲ್ಲ. ನಾನು ಎಣ್ಣೆಯನ್ನು ಹಚ್ಚಿಕೊಳ್ಳಲೇ ಇಲ್ಲ.


ನಿನ್ನ ಸೌಂದರ್ಯವನ್ನು ಮಹಾರಾಜರು ಮೆಚ್ಚಲಿ, ಅವರೇ ನಿನ್ನ ಒಡೆಯ ಅವರನ್ನು ಗೌರವಿಸು.


“ಇದನ್ನು ನೋಡಿದಾಗ ನನ್ನ ಹೃದಯವು ನಡುಗಿ, ಅದರ ಸ್ಥಳದಿಂದ ಜಿಗಿಯುವಂತಾಗುತ್ತದೆ.


ನಾನು ನನ್ನ ಪ್ರಿಯನವಳು. ಅವನ ಆಸೆಯು ನನ್ನ ಕಡೆಗಿರುವುದು.


ನೋಹನೂ ದಾನಿಯೇಲನೂ ಯೋಬನೂ ಎಂಬ ಈ ಮೂವರು ಅದರಲ್ಲಿದ್ದರೂ ತಮ್ಮ ನೀತಿಯಿಂದ ತಮ್ಮ ಪ್ರಾಣಗಳನ್ನು ಮಾತ್ರವೇ ಉಳಿಸಿಕೊಳ್ಳುತ್ತಿದ್ದರು,” ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು