ದಾನಿಯೇಲ 10:12 - ಕನ್ನಡ ಸಮಕಾಲಿಕ ಅನುವಾದ12 ಆಗ ಅವನು ನನಗೆ, “ದಾನಿಯೇಲನೇ, ನೀನು ಭಯಪಡಬೇಡ. ಏಕೆಂದರೆ ನೀನು ತಿಳಿದುಕೊಳ್ಳುವುದಕ್ಕೂ, ನಿನ್ನ ದೇವರ ಮುಂದೆ ನಿನ್ನನ್ನು ತಗ್ಗಿಸಿಕೊಳ್ಳುವುದಕ್ಕೂ ಮನಸ್ಸಿಟ್ಟ ಮೊದಲನೆಯ ದಿನದಲ್ಲಿಯೇ ನಿನ್ನ ಪ್ರಾರ್ಥನೆಯು ದೇವರಿಗೆ ಮುಟ್ಟಿತು. ಆ ನಿನ್ನ ಮಾತುಗಳ ನಿಮಿತ್ತವಾಗಿಯೇ ನಾನು ಬಂದಿದ್ದೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಆ ಮೇಲೆ ಅವನು ನನಗೆ, “ದಾನಿಯೇಲನೇ, ಭಯಪಡಬೇಡ, ನೀನು ದೈವಸಂಕಲ್ಪವನ್ನು ವಿಮರ್ಶಿಸುವುದಕ್ಕೂ, ನಿನ್ನನ್ನು ನಿನ್ನ ದೇವರ ಮುಂದೆ ತಗ್ಗಿಸಿಕೊಳ್ಳುವುದಕ್ಕೂ ಮನಸ್ಸಿಟ್ಟ ಮೊದಲನೆಯ ದಿನದಲ್ಲಿಯೇ ನಿನ್ನ ವಿಜ್ಞಾಪನೆಯು ದೇವರಿಗೆ ಮುಟ್ಟಿತು; ಆ ವಿಜ್ಞಾಪನೆಯ ನಿಮಿತ್ತವೇ ನಾನು ಬಂದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಆಮೇಲೆ ಅವನು ನನಗೆ, “ದಾನಿಯೇಲನೇ, ಭಯಪಡಬೇಡ! ಏಕೆಂದರೆ ನೀನು ನಿನ್ನ ದೇವರ ಮುಂದೆ ವಿನಮ್ರಪೂರ್ವಕವಾಗಿ (ದೈವಸಂಕಲ್ಪವನ್ನು) ಅರ್ಥಮಾಡಿಕೊಳ್ಳಲು ಪ್ರಯತ್ನಿಸಿದ ಮೊದಲನೆಯ ದಿನದಲ್ಲೇ ನಿನ್ನ ಪ್ರಾರ್ಥನೆ ದೇವರಿಗೆ ಮುಟ್ಟಿತು. ಆ ಪ್ರಾರ್ಥನೆಯ ನಿಮಿತ್ತವೇ ನಾನು ಬಂದಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಆಮೇಲೆ ಅವನು ನನಗೆ - ದಾನಿಯೇಲನೇ, ಭಯಪಡಬೇಡ, ನೀನು [ದೈವಸಂಕಲ್ಪವನ್ನು] ವಿಮರ್ಶಿಸುವದಕ್ಕೂ ನಿನ್ನನ್ನು ನಿನ್ನ ದೇವರ ಮುಂದೆ ತಗ್ಗಿಸಿಕೊಳ್ಳುವದಕ್ಕೂ ಮನಸ್ಸಿಟ್ಟ ಮೊದಲನೆಯ ದಿನದಲ್ಲಿಯೇ ನಿನ್ನ ವಿಜ್ಞಾಪನೆಯು ದೇವರಿಗೆ ಮುಟ್ಟಿತು; ಆ ವಿಜ್ಞಾಪನೆಯ ನಿವಿುತ್ತವೇ ನಾನು ಬಂದೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಆಮೇಲೆ ದರ್ಶನದಲ್ಲಿನ ಆ ಮನುಷ್ಯನು ಪುನಃ ಮಾತನಾಡಲು ಪ್ರಾರಂಭಿಸಿದನು. ಅವನು, “ದಾನಿಯೇಲನೇ, ಭಯಪಡಬೇಡ. ನೀನು ಜ್ಞಾನಸಂಪಾದನೆ ಮಾಡಬೇಕೆಂದೂ ದೇವರೆದುರಿಗೆ ಭಕ್ತಿವಿನಯಗಳಿಂದ ವರ್ತಿಸಬೇಕೆಂದೂ ತೀರ್ಮಾನಿಸಿದ ಮೊದಲ ದಿನದಿಂದಲೇ ಆತನು ನಿನ್ನ ಪ್ರಾರ್ಥನೆಗಳನ್ನು ಆಲಿಸುತ್ತಿದ್ದಾನೆ. ನೀನು ಪ್ರಾರ್ಥನೆ ಮಾಡಿದ್ದರಿಂದಲೇ ನಾನು ಇಲ್ಲಿಗೆ ಬಂದೆನು. ಅಧ್ಯಾಯವನ್ನು ನೋಡಿ |