Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 10:14 - ಕನ್ನಡ ಸಮಕಾಲಿಕ ಅನುವಾದ

14 ನಿನ್ನ ಜನರಿಗೆ ಮುಂದಿನ ದಿನಗಳಲ್ಲಿ ಏನು ಸಂಭವಿಸುವುದು ಎಂಬುದನ್ನು ತಿಳಿಸುವುದಕ್ಕೋಸ್ಕರ ನಾನೀಗ ಬಂದಿದ್ದೇನೆ. ಏಕೆಂದರೆ ದರ್ಶನವು ಮುಂದೆ ಬರಲಿಕ್ಕಿರುವ ಸಮಯವನ್ನು ಕುರಿತಾಗಿರುತ್ತದೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಉಳಿದು ಅಂತ್ಯಕಾಲದಲ್ಲಿ ನಿನ್ನ ಜನರಿಗಾಗುವ ಗತಿಯನ್ನು ನಿನಗೆ ತಿಳಿಸುವುದಕ್ಕೋಸ್ಕರ ಬಂದೆನು; ಆ ಕಾಲದ ಸಂಗತಿಯನ್ನು ವ್ಯಕ್ತಪಡಿಸುವ ಇನ್ನೊಂದು ದರ್ಶನವುಂಟು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅಂತ್ಯಕಾಲದಲ್ಲಿ ನಿನ್ನ ಜನರಿಗೆ ಬರಲಿರುವ ಗತಿಯನ್ನು ನಿನಗೆ ತಿಳಿಸುವುದಕ್ಕೋಸ್ಕರ ಬಂದೆ. ಆ ಕಾಲದ ಸಂಗತಿಯನ್ನು ವ್ಯಕ್ತಪಡಿಸುವ ಇನ್ನೊಂದು ದರ್ಶನವಿದೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಉಳಿದುಕೊಂಡು ಅಂತ್ಯಕಾಲದಲ್ಲಿ ನಿನ್ನ ಜನರಿಗಾಗುವ ಗತಿಯನ್ನು ನಿನಗೆ ತಿಳಿಸುವದಕ್ಕೋಸ್ಕರ ಬಂದೆನು; ಆ ಕಾಲದ ಸಂಗತಿಯನ್ನು ವ್ಯಕ್ತಪಡಿಸುವ ಇನ್ನೊಂದು ದರ್ಶನವುಂಟು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ದಾನಿಯೇಲನೇ, ಭವಿಷ್ಯದಲ್ಲಿ ನಿನ್ನ ಜನರಿಗೆ ಏನಾಗುವದೆಂಬುದನ್ನು ನಿನಗೆ ವಿವರಿಸಲು ನಾನು ಈಗ ಇಲ್ಲಿಗೆ ಬಂದೆನು. ಈ ಕನಸು ಭವಿಷ್ಯದ ಒಂದು ಕಾಲದ ಕುರಿತಾಗಿದೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 10:14
20 ತಿಳಿವುಗಳ ಹೋಲಿಕೆ  

“ನಿಮಗೆ ನೀಡಲಾದ ಸಂಜೆ ಮತ್ತು ಮುಂಜಾನೆಗಳ ದರ್ಶನವು ಸತ್ಯವಾದದ್ದು. ಆದರೆ ಆ ದರ್ಶನವು ಗುಟ್ಟಾಗಿರಲಿ. ಏಕೆಂದರೆ ಅದು ಬಹು ದೂರದ ಭವಿಷ್ಯಕ್ಕೆ ಸಂಬಂಧಿಸಿದ್ದು.”


ಆದರೆ ಈ ರಹಸ್ಯಗಳನ್ನು ಪ್ರಕಟಪಡಿಸುವಂತಹ ದೇವರು ಪರಲೋಕದಲ್ಲಿ ಇದ್ದಾರೆ. ಅವರು ಮುಂಬರುವ ದಿವಸಗಳಲ್ಲಿ ಸಂಭವಿಸುವಂಥವುಗಳನ್ನು ಅರಸನಾದ ನೆಬೂಕದ್ನೆಚ್ಚರನಿಗೆ ತಿಳಿಯಪಡಿಸುತ್ತಾರೆ. ನಿನ್ನ ಕನಸಿನಲ್ಲಿ ನಿನ್ನ ಹಾಸಿಗೆಯಲ್ಲಿ ನೀನು ಮಲಗಿದಾಗ, ನಿನ್ನ ಮನಸ್ಸಿನಲ್ಲಿ ಹಾದುಹೋದ ದರ್ಶನಗಳು ಇವೇ ಆಗಿವೆ.


ಏಕೆಂದರೆ ಪ್ರಕಟನೆಯು ಇನ್ನೂ ನೇಮಕವಾದ ಕಾಲಕ್ಕಾಗಿ ಎದುರು ನೋಡುವುದು. ಅದು ಅಂತ್ಯದ ಬಗ್ಗೆ ಮಾತಾಡುವುದು. ಅದು ಸುಳ್ಳಾಗದು. ಅದು ತಡವಾದರೂ, ಅದಕ್ಕೆ ಕಾದುಕೊಂಡಿರು. ಏಕೆಂದರೆ ಅದು ತಡಮಾಡದೆ ನಿಶ್ಚಯವಾಗಿ ಬರುವುದು.


ಆಗ ಅವನು, “ದಾನಿಯೇಲನೇ, ನಿನ್ನ ದಾರಿಯಲ್ಲಿ ಹೋಗು, ಏಕೆಂದರೆ ಈ ಮಾತುಗಳು ಅಂತ್ಯಕಾಲದವರೆಗೂ ಮುಚ್ಚಿ, ಮುದ್ರಿತವಾಗಿವೆ.


ಆದರೆ ದಾನಿಯೇಲನೇ ನೀನು, ಅಂತ್ಯಕಾಲದವರೆಗೂ ಈ ಮಾತುಗಳನ್ನು ಮುಚ್ಚಿಡು; ಅವುಗಳನ್ನು ಬರೆದಿರುವ ಆ ಗ್ರಂಥಕ್ಕೆ ಮುದ್ರೆ ಹಾಕು. ಅನೇಕರು ಅತ್ತಿತ್ತ ಓಡಾಡುವರು, ಜ್ಞಾನವು ಹೆಚ್ಚಾಗುವುದು,” ಎಂದು ಹೇಳಿದನು.


ಅಂತ್ಯಕಾಲದಲ್ಲಿ, ಯೆಹೋವ ದೇವರ ಮಂದಿರದ ಪರ್ವತವು ಎಲ್ಲಾ ಗುಡ್ಡಬೆಟ್ಟಗಳಿಗಿಂತ ಉನ್ನತೋನ್ನತವಾಗಿ ಬೆಳೆದು ನೆಲೆಗೊಳ್ಳುವುದು, ಆಗ ಜನಾಂಗಗಳು ಅದರ ಬಳಿಗೆ ಪ್ರವಾಹದಂತೆ ಬರುವವು.


ಆಮೇಲೆ ಇಸ್ರಾಯೇಲರು ತಿರುಗಿಕೊಂಡು ಅವರ ದೇವರಾದ ಯೆಹೋವ ದೇವರನ್ನು ಮತ್ತು ಅವರ ಅರಸನಾದ ದಾವೀದನನ್ನು ಹುಡುಕಿಕೊಂಡು, ಅಂತ್ಯ ದಿವಸಗಳಲ್ಲಿ ಯೆಹೋವ ದೇವರನ್ನೂ, ಆತನ ಒಳ್ಳೆಯತನವನ್ನೂ ಭಯಭಕ್ತಿಯಿಂದ ಪಡೆಯುವರು.


ಆ ಅಂತ್ಯಕಾಲದಲ್ಲಿ, ಯೆಹೋವ ದೇವರ ಮಂದಿರದ ಪರ್ವತವು ಎಲ್ಲಾ ಗುಡ್ಡಬೆಟ್ಟಗಳಿಗಿಂತ ಉನ್ನತೋನ್ನತವಾಗಿ ಬೆಳೆದು ನೆಲೆಗೊಳ್ಳುವುದು. ಆಗ ಎಲ್ಲಾ ಜನಾಂಗಗಳು ಅದರ ಬಳಿಗೆ ಪ್ರವಾಹದಂತೆ ಬರುವವು.


ನೀವು ಇಕ್ಕಟ್ಟಿಗೆ ಗುರಿಯಾಗಿ ಇವೆಲ್ಲವುಗಳು ನಿಮಗೆ ಸಂಭವಿಸಿದಾಗ, ಕಡೇ ದಿವಸಗಳಲ್ಲಿ ನಿಮ್ಮ ದೇವರಾದ ಯೆಹೋವ ದೇವರ ಕಡೆಗೆ ತಿರುಗಿಕೊಂಡು ವಿಧೇಯರಾಗಿರಿ.


ಆಗ ಯಾಕೋಬನು ತನ್ನ ಪುತ್ರರನ್ನು ಕರೆಯಿಸಿ ಅವರಿಗೆ, “ನೀವೆಲ್ಲರೂ ಕೂಡಿಬನ್ನಿರಿ. ಅಂತ್ಯ ದಿನಗಳಲ್ಲಿ ನಿಮಗೆ ಸಂಭವಿಸುವುದನ್ನು ನಿಮಗೆ ತಿಳಿಸುತ್ತೇನೆ.


ಇಂತಹ ಮಹಾ ರಕ್ಷಣೆಯನ್ನು ನಾವು ಅಲಕ್ಷ್ಯ ಮಾಡಿದರೆ ತಪ್ಪಿಸಿಕೊಳ್ಳುವುದು ಹೇಗೆ? ಈ ರಕ್ಷಣೆಯನ್ನು ನಮಗೆ ಕರ್ತ ಆಗಿರುವ ಯೇಸುವೇ ಮೊದಲು ತಿಳಿಸಿದ್ದಾರೆ. ಅವರಿಂದ ಕೇಳಿಸಿಕೊಂಡವರೂ ನಮಗೆ ಆ ರಕ್ಷಣೆಯನ್ನು ದೃಢಪಡಿಸಿದ್ದಾರೆ.


ಆದರೆ ಕಡೆಯ ದಿವಸಗಳಲ್ಲಿ ಕಷ್ಟಕರವಾದ ಕಾಲಗಳು ಬರುವುವೆಂಬುದನ್ನು ಸಹ ತಿಳಿದುಕೋ.


ಪಾರಸಿಯ ಅರಸ ಕೋರೆಷನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಬೇಲ್ತೆಶಚ್ಚರನೆಂಬ ದಾನಿಯೇಲನಿಗೆ ಒಂದು ಪ್ರಕಟಣೆಯಾಯಿತು. ಅದರ ಸಂದೇಶವು ಸತ್ಯವಾದದ್ದು. ಅದು ಮಹಾ ಯುದ್ಧ ವಿಷಯವಾಗಿದೆ. ಸಂದೇಶದ ಅರ್ಥವು ಅವನಿಗೆ ಒಂದು ದರ್ಶನದಲ್ಲಿ ಬಂದಿತು.


ನನಗೆ, “ದಾನಿಯೇಲನೇ, ನಿನಗೆ ವಿವೇಕವನ್ನೂ, ಬುದ್ಧಿಯನ್ನೂ ಕೊಡುವುದಕ್ಕೆ ಈಗ ನಾನು ಬಂದಿದ್ದೇನೆ.


ಬಹಳ ಕೇಡುಗಳೂ ವಿಪತ್ತುಗಳೂ ಅವರಿಗೆ ಸಂಭವಿಸುವಾಗ, ಈ ಹಾಡು ಅವರಿಗೆ ವಿರೋಧ ಸಾಕ್ಷಿಯಾಗಿ ಉತ್ತರಕೊಡುವುದು. ಏಕೆಂದರೆ ಅದು ಅವರ ಸಂತತಿಯ ಬಾಯಿಯಲ್ಲಿಂದ ಮರೆತು ಹೋಗುವುದಿಲ್ಲ. ನಾನು ಪ್ರಮಾಣ ಮಾಡಿದ ದೇಶದಲ್ಲಿ ಅವರನ್ನು ತರುವುದಕ್ಕಿಂತ ಮುಂಚೆ ಅವರು ಈ ಹೊತ್ತು ಮಾಡುವ ದುರಾಲೋಚನೆಗಳನ್ನು ನಾನು ಬಲ್ಲೆನು.”


ಏಕೆಂದರೆ ನಾನು ಸತ್ತಮೇಲೆ ನೀವು ಪೂರ್ಣವಾಗಿ ನಿಮ್ಮನ್ನು ನೀವೇ ಕೆಡಿಸಿಕೊಂಡು, ನಾನು ನಿಮಗೆ ಆಜ್ಞಾಪಿಸಿದ ಮಾರ್ಗದಿಂದ ತೊಲಗಿ ಹೋಗುವಿರೆಂದು ನಾನು ಬಲ್ಲೆನು. ನೀವು ಯೆಹೋವ ದೇವರ ಮುಂದೆ ಕೆಟ್ಟದ್ದನ್ನು ಮಾಡಿ, ನಿಮ್ಮ ಕ್ರಿಯೆಗಳಿಂದ ಅವರಿಗೆ ಕೋಪವನ್ನೆಬ್ಬಿಸುವದರಿಂದ ನಿಮಗೆ ಕೇಡು ಸಂಭವಿಸುವುದು,” ಎಂದು ಹೇಳಿದನು.


“ಮನುಷ್ಯಪುತ್ರನೇ, ಇಸ್ರಾಯೇಲಿನ ಮನೆತನದವರು, ‘ಇವನಿಗಾದ ದರ್ಶನವು ಬಹುದೂರ ಕಾಲಕ್ಕೆ ಸಂಬಂಧಿಸಿದ್ದು, ದೂರ ಕಾಲವನ್ನು ಕುರಿತು ಪ್ರವಾದಿಸುತ್ತಾನೆ,’ ಎಂದು ಹೇಳುತ್ತಾರೆ.”


ನಾನು ಊಲಾ ನದಿಯ ಮಧ್ಯದಲ್ಲಿದ್ದಾಗ, “ಗಬ್ರಿಯೇಲನೇ, ಈ ಮನುಷ್ಯನು ದರ್ಶನವನ್ನು ಅರ್ಥಮಾಡಿಕೊಳ್ಳುವಂತೆ ಮಾಡು,” ಎಂದು ಹೇಳುವ ಮನುಷ್ಯನ ಧ್ವನಿಯನ್ನು ಕೇಳಿದೆನು.


ಬಾ, ಈ ಜನರು ನಿನ್ನ ಜನರಿಗೆ ಕಡೇ ದಿವಸಗಳಲ್ಲಿ ಏನು ಮಾಡುವರೋ, ಅದನ್ನು ನಿನಗೆ ತಿಳಿಸುವೆನು,” ಎಂದನು.


ನೀನು ದೇಶವನ್ನು ಮುಚ್ಚುವ ಮೇಘದಂತೆ ನನ್ನ ಜನರಾಗಿರುವ ಇಸ್ರಾಯೇಲರಿಗೆ ವಿರೋಧವಾಗಿ ಅವರ ಮೇಲೆ ಬರುವೆ. ಇದು ನಡೆಯುವ ಕೊನೆಯ ದಿವಸಗಳಲ್ಲಿ ಓ ಗೋಗನೇ, ನಾನು ಅವರ ಕಣ್ಣುಗಳ ಮುಂದೆ ನಿನ್ನಲ್ಲಿ ಪರಿಶುದ್ಧನಾಗುವಾಗ, ಇತರ ಜನಾಂಗಗಳು ನನ್ನನ್ನು ತಿಳಿಯುವ ಹಾಗೆ ನಿನ್ನನ್ನು ನನ್ನ ದೇಶಕ್ಕೆ ವಿರೋಧವಾಗಿ ಬರಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು