Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 10:18 - ಕನ್ನಡ ಸಮಕಾಲಿಕ ಅನುವಾದ

18 ಆಮೇಲೆ ಪುನಃ ಮನುಷ್ಯನಂತಿದ್ದ ಒಬ್ಬ ನನ್ನನ್ನು ಬಲಪಡಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಮನುಷ್ಯ ಸದೃಶನು ಪುನಃ ನನ್ನನ್ನು ಮುಟ್ಟಿ ಬಲಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಮನುಷ್ಯರೂಪ ಹೊಂದಿದ್ದ ಆ ವ್ಯಕ್ತಿ ಪುನಃ ನನ್ನನ್ನು ಮುಟ್ಟಿ ಬಲಪಡಿಸಿದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಮನುಷ್ಯಸದೃಶ್ಯನು ಪುನಃ ನನ್ನನ್ನು ಮುಟ್ಟಿ ಬಲಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆ ಮನುಷ್ಯಕುಮಾರನಂತಿರುವವನು ಪುನಃ ನನ್ನನ್ನು ಸ್ಪರ್ಶಿಸಿದನು. ಆತನು ನನ್ನನ್ನು ಸ್ಪರ್ಶಿಸಿದಾಗ ನನಗೆ ಉಪಶಮನವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 10:18
16 ತಿಳಿವುಗಳ ಹೋಲಿಕೆ  

ಆಗ ಮಾನವನಂತೆ ಇರುವ ಒಬ್ಬನು ನನ್ನ ತುಟಿಗಳನ್ನು ಮುಟ್ಟಿದನು. ನಾನು ಬಾಯಿತೆರೆದು ಮಾತನಾಡಿ, ನನ್ನ ಮುಂದೆ ನಿಂತಿದ್ದವನಿಗೆ, “ನನ್ನ ಒಡೆಯನೇ, ಆ ದರ್ಶನದ ನಿಮಿತ್ತ, ನನ್ನ ಸಂಕಟಗಳು ನನ್ನ ಮೇಲೆ ತಿರುಗಿಕೊಂಡಿವೆ, ನಾನು ನಿತ್ರಾಣನಾಗಿದ್ದೇನೆ.


ಆಗ ಪರಲೋಕದಿಂದ ಒಬ್ಬ ದೇವದೂತನು ಯೇಸುವಿಗೆ ಕಾಣಿಸಿಕೊಂಡು, ಅವರನ್ನು ಬಲಪಡಿಸುತ್ತಾ ಇದ್ದನು.


ಈಗ ಅವನು ನನ್ನ ಸಂಗಡ ಮಾತನಾಡುತ್ತಿರುವಾಗ, ನಾನು ಮುಖ ಕೆಳಗಾಗಿ ನೆಲದ ಮೇಲೆ ಗಾಢನಿದ್ರೆಯಲ್ಲಿ ಬಿದ್ದಿದ್ದೆನು. ಆದರೆ ಅವನು ನನ್ನನ್ನು ಮುಟ್ಟಿ, ಎದ್ದು ನಿಲ್ಲುವಂತೆ ಮಾಡಿದನು.


ದೇವರ ಮಹಿಮೆಯ ಪರಾಕ್ರಮದಿಂದ ಬರುವ ಸರ್ವಶಕ್ತಿಯನ್ನು ಹೊಂದಿ ಬಲಗೊಳ್ಳಲಿ ಎಂದು ಬೇಡಿಕೊಳ್ಳುತ್ತೇವೆ. ಆಗ ನೀವು ಸರ್ವತಾಳ್ಮೆಯನ್ನೂ ದೀರ್ಘಶಾಂತಿಯನ್ನೂ ಹೊಂದಿದವರಾಗಿ,


ನನಗೆ ಶಕ್ತಿನೀಡುವ ಕ್ರಿಸ್ತ ಯೇಸುವಿನ ಮೂಲಕ ನಾನು ಎಲ್ಲವನ್ನೂ ಮಾಡಲು ಶಕ್ತನಾಗಿದ್ದೇನೆ.


ದೇವರು ತಮ್ಮ ಮಹಿಮೆಯ ಐಶ್ವರ್ಯಕ್ಕನುಸಾರವಾಗಿ ತಮ್ಮ ಆತ್ಮನ ಮೂಲಕ ನಿಮ್ಮನ್ನು ಆಂತರ್ಯದಲ್ಲಿ ಶಕ್ತಿಯಿಂದ ಬಲಪಡಿಸಲಿ ಎಂದು ಪ್ರಾರ್ಥಿಸುತ್ತೇನೆ.


ಅಲ್ಲಿ ಸ್ವಲ್ಪ ಸಮಯ ಕಳೆದನಂತರ ಅವನು ಅಲ್ಲಿಂದ ಹೊರಟು ಕ್ರಮವಾಗಿ ಗಲಾತ್ಯ ಮತ್ತು ಫ್ರುಗ್ಯ ಪ್ರದೇಶದಲ್ಲೆಲ್ಲಾ ಸಂಚರಿಸುತ್ತಾ ಶಿಷ್ಯರಲ್ಲಿ ವಿಶ್ವಾಸವನ್ನು ಬಲಪಡಿಸಿದನು.


ಆದರೆ ನಿನ್ನ ನಂಬಿಕೆಯು ಕುಂದದಂತೆ ನಾನು ನಿನಗೋಸ್ಕರ ಬೇಡಿಕೊಂಡಿದ್ದೇನೆ. ನೀನು ತಿರುಗಿಕೊಂಡ ಮೇಲೆ ನಿನ್ನ ಸಹೋದರರನ್ನು ಬಲಪಡಿಸು,” ಎಂದು ಹೇಳಿದರು.


ಒಂದು ಕೈ ನನ್ನನ್ನು ಮುಟ್ಟಿ, ನನ್ನ ಮೊಣಕಾಲುಗಳೂ, ನನ್ನ ಅಂಗೈಗಳೂ ನಡುಗುವಂತೆ ಮಾಡಿತು.


ದೇವರು ನನ್ನನ್ನು ಕಠಿಣವಾಗಿ ವಿರೋಧಿಸುತ್ತಾರೋ? ಇಲ್ಲ, ಖಂಡಿತವಾಗಿ ಅವರು ನನ್ನ ವಿರುದ್ಧ ಆರೋಪಗಳನ್ನು ಹೊರಿಸುವುದಿಲ್ಲ.


ಆದರೆ, ನಾನು ನನ್ನ ಬಾಯಿಮಾತಿನಿಂದ ನಿಮ್ಮನ್ನು ಪ್ರೋತ್ಸಾಹಿಸುವೆನು; ನನ್ನ ಆದರಣೆಯ ಮಾತುಗಳು ನಿಮಗೆ ಉಪಶಮನ ಮಾಡುವುದು.


ತನ್ನ ಪ್ರಾಣವನ್ನು ತೆಗೆಯುವುದಕ್ಕೆ ಸೌಲನು ಹೊರಟಿದ್ದಾನೆಂದು ದಾವೀದನು ತಿಳಿದಾಗ, ಅವನು ಜೀಫ್ ಅರಣ್ಯದ ಹೋರೆಷದಲ್ಲಿ ಅಡಗಿಕೊಂಡಿದ್ದನು.


ದಾನಿಯೇಲನೆಂಬ ನಾನು ಆ ದರ್ಶನವನ್ನು ನೋಡಿ, ಅದರ ಅರ್ಥವನ್ನು ಗ್ರಹಿಸಲು ಪ್ರಯತ್ನಿಸುತ್ತಿರುವಾಗ, ಮನುಷ್ಯನ ರೂಪದಂತಿರುವ ಒಬ್ಬನು ನನ್ನ ಮುಂದೆ ನಿಂತಿದ್ದನು.


ನಾನು ಕರೆದಾಗ ನೀವು ನನಗೆ ಉತ್ತರಕೊಟ್ಟಿರುವಿರಿ. ನನ್ನ ಪ್ರಾಣಕ್ಕೆ ಬಲವನ್ನು ಕೊಟ್ಟು, ನನ್ನನ್ನು ಬಲಪಡಿಸಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು