ದಾನಿಯೇಲ 10:20 - ಕನ್ನಡ ಸಮಕಾಲಿಕ ಅನುವಾದ20 ಅವನು, “ನಾನು ನಿನ್ನ ಹತ್ತಿರ ಬಂದ ಕಾರಣವು ನಿನಗೆ ತಿಳಿಯಿತೇ. ಈಗ ನಾನು ಪಾರಸಿಯದ ರಾಜಪುತ್ರನ ಸಂಗಡ ಯುದ್ಧಮಾಡಲು ಹಿಂದಿರುಗಬೇಕು. ನಾನು ಹೋದ ಮೇಲೆ, ಗ್ರೀಕಿನ ರಾಜಕುಮಾರನು ಬರುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಎಂದು ಅರಿಕೆಮಾಡಲು ಅವನು ನನಗೆ ಹೀಗೆ ಹೇಳಿದನು, “ನಾನು ನಿನ್ನ ಬಳಿಗೆ ಏಕೆ ಬಂದೆನೆಂಬುದು ನಿನಗೆ ಗೊತ್ತಲ್ಲವೆ; ಈಗ ನಾನು ಪಾರಸಿಯ ರಾಜ್ಯದ ದಿವ್ಯ ಪಾಲಕನೊಂದಿಗೆ ಹೋರಾಡಲು ಹಿಂದಿರುಗಬೇಕು; ನಾನು ಆ ಹೋರಾಟವನ್ನು ತೀರಿಸಿದ ಕೂಡಲೆ ಆಹಾ, ಗ್ರೀಕ್ ರಾಜ್ಯದ ದಿವ್ಯಪಾಲಕನು ಎದುರು ಬೀಳುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಅವನು ನನಗೆ ಹೀಗೆಂದು ಹೇಳಿದ: “ನಾನು ನಿನ್ನ ಬಳಿಗೆ ಏಕೆ ಬಂದೆನೆಂಬುದು ನಿನಗೆ ಗೊತ್ತಲ್ಲವೇ? ಈಗ ನಾನು ಪರ್ಷಿಯ ರಾಜ್ಯದ ಕಾವಲುದೂತನೊಂದಿಗೆ ಹೋರಾಡಲು ಹಿಂದಿರುಗಬೇಕು. ನಾನು ಆ ಹೋರಾಟವನ್ನು ತೀರಿಸಿದ ಕೂಡಲೆ ಗ್ರೀಕ್ ರಾಜ್ಯದ ಕಾವಲುದೂತನು ಎದುರುಬೀಳುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಅವನು ನನಗೆ ಹೀಗೆ ಹೇಳಿದನು - ನಾನು ನಿನ್ನ ಬಳಿಗೆ ಏಕೆ ಬಂದೆನೆಂಬದು ನಿನಗೆ ಗೊತ್ತಲ್ಲವೆ; ಈಗ ನಾನು ಪಾರಸಿಯ ರಾಜ್ಯದ ದಿವ್ಯಪಾಲಕನೊಂದಿಗೆ ಹೋರಾಡಲು ಹಿಂದಿರುಗಬೇಕು; ನಾನು ಆ ಹೋರಾಟವನ್ನು ತೀರಿಸಿದ ಕೂಡಲೆ ಆಹಾ, ಗ್ರೀಕ್‍ರಾಜ್ಯದ ದಿವ್ಯಪಾಲಕನು ಎದುರುಬೀಳುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಆಗ ಅವನು, “ದಾನಿಯೇಲನೇ, ನಾನು ಏಕೆ ಬಂದಿದ್ದೇನೆಂಬುದು ನಿನಗೆ ಗೊತ್ತಿಲ್ಲವೇ? ತಕ್ಷಣ ನಾನು ಪಾರಸಿಯ ರಾಜ್ಯದ ದಿವ್ಯಪಾಲಕನೊಂದಿಗೆ ಹೋರಾಡಲು ಹಿಂದಿರುಗಬೇಕು. ನಾನು ಹೋದಮೇಲೆ ಗ್ರೀಕ್ ರಾಜ್ಯದ ದಿವ್ಯಪಾಲಕನು ಬರುವನು. ಅಧ್ಯಾಯವನ್ನು ನೋಡಿ |