ದಾನಿಯೇಲ 10:6 - ಕನ್ನಡ ಸಮಕಾಲಿಕ ಅನುವಾದ6 ಆತನ ದೇಹವು ಪೀತರತ್ನದ ಹಾಗೆಯೂ, ಆತನ ಮುಖವು ಮಿಂಚಿನಂತೆಯೂ ಹೊಳೆಯುತ್ತಿತ್ತು. ಅವನ ಕಣ್ಣುಗಳು ಉರಿಯುವ ಬೆಂಕಿಯ ದೀಪದಂತೆ ಇದ್ದವು. ಅವನ ತೋಳುಗಳೂ, ಕಾಲುಗಳೂ ಬೆಳಗಿನ ಕಂಚಿನ ಕಾಂತಿಯಾಗಿಯೂ; ಆತನ ಮಾತುಗಳ ಶಬ್ದವು, ಜನಸಮೂಹದ ಸಪ್ಪಳದ ಹಾಗೆಯೂ ಇದ್ದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಅವನ ಶರೀರವು ಪೀತರತ್ನದ ಹಾಗೆ ಕಂಗೊಳಿಸಿತು, ಅವನ ಮುಖವು ಮಿಂಚಿನಂತೆ ಹೊಳೆಯಿತು, ಅವನ ಕಣ್ಣುಗಳು ಉರಿಯುವ ಪಂಜುಗಳೋಪಾದಿಯಲ್ಲಿ ನಿಗಿನಿಗಿಸಿದವು, ಅವನ ಕೈಕಾಲುಗಳು ಬೆಳಗಿದ ತಾಮ್ರದ ಹಾಗೆ ಥಳಥಳಿಸಿದವು, ಅವನ ಮಾತಿನ ಶಬ್ದವು ಜನಸಂದಣಿಯ ಕೋಲಾಹಲದಂತೆ ಕೇಳಿಸಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಅವನ ಶರೀರ ಸುವರ್ಣರತ್ನದ ಹಾಗೆ ಕಂಗೊಳಿಸಿತು. ಅವನ ಮುಖ ಮಿಂಚಿನಂತೆ ಹೊಳೆಯಿತು. ಅವನ ಕಣ್ಣುಗಳು ಉರಿಯುವ ಪಂಜುಗಳೋಪಾದಿಯಲ್ಲಿ ಫಳಫಳಿಸಿದವು. ಅವನ ಕೈಕಾಲುಗಳು ಬೆಳಗಿದ ಕಂಚಿನ ಹಾಗೆ ಥಳಥಳಿಸಿದವು. ಅವನ ಮಾತಿನ ಶಬ್ದ ಜನಸಂದಣಿಯ ಕೋಲಾಹಲದಂತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಅವನ ಶರೀರವು ಪೀತರತ್ನದ ಹಾಗೆ ಕಂಗೊಳಿಸಿತು, ಅವನ ಮುಖವು ವಿುಂಚಿನಂತೆ ಹೊಳೆಯಿತು, ಅವನ ಕಣ್ಣುಗಳು ಉರಿಯುವ ಪಂಜುಗಳೋಪಾದಿಯಲ್ಲಿ ನಿಗಿನಿಗಿಸಿದವು, ಅವನ ಕೈಕಾಲುಗಳು ಬೆಳಗಿದ ತಾಮ್ರದ ಹಾಗೆ ಥಳಥಳಿಸಿದವು, ಅವನ ಮಾತಿನ ಶಬ್ದವು ಸಂದಣಿಯ ಕೋಲಾಹಲದಂತೆ ಕೇಳಿಸಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಅವನ ಶರೀರವು ಪ್ರಕಾಶಮಾನವಾದ ವಜ್ರದಂತೆ ಇತ್ತು. ಅವನ ಮುಖವು ಕೋಲ್ಮಿಂಚಿನಂತೆ ಹೊಳೆಯುತ್ತಿತ್ತು. ಅವನ ಕಣ್ಣುಗಳು ಬೆಂಕಿಯ ಪಂಜುಗಳಂತಿದ್ದವು. ಅವನ ಕೈಕಾಲುಗಳು ಉಜ್ಜಿದ ಹಿತ್ತಾಳೆಯಂತೆ ಝಗಝಗಿಸುತ್ತಿದ್ದವು. ಅವನ ಧ್ವನಿಯು ಜನಜಂಗುಳಿಯ ಧ್ವನಿಯಂತೆ ದೊಡ್ಡದಾಗಿತ್ತು. ಅಧ್ಯಾಯವನ್ನು ನೋಡಿ |