Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 10:8 - ಕನ್ನಡ ಸಮಕಾಲಿಕ ಅನುವಾದ

8 ನಾನು ಒಬ್ಬನೇ ಉಳಿದು, ಈ ಅದ್ಭುತ ದರ್ಶನವನ್ನು ನೋಡಿದೆನು. ನನ್ನಲ್ಲಿ ತ್ರಾಣವು ಇರಲಿಲ್ಲ. ನನ್ನ ಮುಖವು ನನ್ನಲ್ಲಿ ಕುಂದಿಹೋಯಿತು. ನನಗೆ ತ್ರಾಣವು ಇಲ್ಲದೆ ಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನಾನು ಏಕಾಂಗಿಯಾಗಿ ಉಳಿದು ಆ ಅದ್ಭುತ ದರ್ಶನವನ್ನು ಕಂಡು ಶಕ್ತಿಯನ್ನೆಲ್ಲಾ ಕಳೆದುಕೊಂಡೆನು, ನನ್ನ ಗಾಂಭೀರ್ಯವು ಹಾಳಾಯಿತು, ನಾನು ನಿತ್ರಾಣನಾದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ನಾನು ಒಂಟಿಯಾಗಿ ಉಳಿದು ಆ ಅದ್ಭುತವನ್ನು ಕಂಡೆ. ನನ್ನ ಶಕ್ತಿಯೆಲ್ಲಾ ಕರಗಿಹೋಯಿತು. ನನ್ನ ಗಾಂಭೀರ್ಯ ಅಳಿಯಿತು. ನಾನು ನಿತ್ರಾಣನಾದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನಾನು ಏಕಾಕಿಯಾಗಿ ಉಳಿದು ಆ ಅದ್ಭುತದರ್ಶನವನ್ನು ಕಂಡು ಶಕ್ತಿಯನ್ನೆಲ್ಲಾ ಕಳಕೊಂಡೆನು, ನನ್ನ ಗಾಂಭೀರ್ಯವು ಹಾಳಾಯಿತು, ನಿತ್ರಾಣನಾದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನಾನೊಬ್ಬನೇ ಅಲ್ಲಿದ್ದೆ. ನಾನು ಆ ದರ್ಶನವನ್ನು ನೋಡುತ್ತಲೇ ಇದ್ದೆ. ಅದರಿಂದ ನನಗೆ ಭಯವಾಯಿತು. ನಾನು ದುರ್ಬಲನಾದೆ. ನನ್ನ ಮುಖವು ಸತ್ತವರ ಮುಖದಂತೆ ಬಿಳುಪೇರಿತು; ನಾನು ನಿಸ್ಸಹಾಯಕನಾದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 10:8
15 ತಿಳಿವುಗಳ ಹೋಲಿಕೆ  

“ಇಷ್ಟರಲ್ಲಿ ಇದರ ಪ್ರಸ್ತಾಪವು ಮುಗಿಯಿತು. ದಾನಿಯೇಲನೆಂಬ ನನಗೆ ನನ್ನ ಆಲೋಚನೆಗಳು ಬಹಳವಾಗಿ ಕಳವಳಪಡಿಸಿದವು. ನನ್ನ ಮುಖವು ಕಳೆಗುಂದಿತು. ಆದರೂ ಈ ಸಂಗತಿಯನ್ನು ನನ್ನ ಹೃದಯದಲ್ಲಿ ಇಟ್ಟುಕೊಂಡೆನು.”


ನಾನು ಕೇಳಿದಾಗ ನನ್ನ ಹೃದಯ ಬಡಿದುಕೊಂಡಿತು; ಆ ಶಬ್ದಕ್ಕೆ ನನ್ನ ತುಟಿಗಳು ಕದಲಿದವು; ನನ್ನ ಎಲುಬುಗಳು ಕ್ಷಯಗೊಂಡವು; ನನ್ನ ಕಾಲುಗಳು ನಡುಗಿದವು; ಆದರೂ ನಮ್ಮ ಮೇಲೆ ದಾಳಿಮಾಡುವ ಜನರ ಮೇಲೆ ನಾಶನ ಬರುವುದನ್ನು ನೋಡಲು ತಾಳ್ಮೆಯಿಂದ ಕಾದಿರುವೆನು.


ದಾನಿಯೇಲನಾದ ನಾನು ಬಳಲಿ ಕೆಲವು ದಿನಗಳವರೆಗೂ ಅಸ್ವಸ್ಥನಾದೆನು. ಅನಂತರ ನಾನು ಎದ್ದು, ಅರಸನ ಕೆಲಸ ಕಾರ್ಯಗಳನ್ನು ಮಾಡಿದೆನು. ನಾನು ಆ ದರ್ಶನದ ಬಗ್ಗೆ ಬೆಚ್ಚಿಬೆರಗಾದೆನು. ಅದರ ಅರ್ಥವನ್ನೇ ಗ್ರಹಿಸಿಕೊಳ್ಳಲಾಗಲಿಲ್ಲ.


ನಾನು ಅವರನ್ನು ಕಂಡಾಗ ಸತ್ತವನ ಹಾಗೆ ಅವರ ಪಾದಗಳ ಮೇಲೆ ಬಿದ್ದೆನು. ಅವರು ತಮ್ಮ ಬಲಗೈಯನ್ನು ನನ್ನ ಮೇಲಿಟ್ಟು, “ಭಯಪಡಬೇಡ, ನಾನು ಮೊದಲನೆಯವನೂ ಕಡೆಯವನೂ


ತಾನು ಏನು ಮಾತನಾಡಬೇಕೋ ಅವನಿಗೆ ತಿಳಿದಿರಲಿಲ್ಲ. ಏಕೆಂದರೆ ಅವರು ಬಹಳವಾಗಿ ಹೆದರಿದ್ದರು.


ಶಿಷ್ಯರು ಇದನ್ನು ಕೇಳಿ ಬಹಳವಾಗಿ ಹೆದರಿ ಬೋರಲು ಬಿದ್ದರು.


ಬಹು ವಿಶೇಷವಾದ ಪ್ರಕಟನೆಗಳ ಬಗ್ಗೆ ನಾನು ಗರ್ವಪಡದಂತೆ, ನನ್ನ ಶರೀರದಲ್ಲಿ ಒಂದು ಮುಳ್ಳನ್ನು ಕೊಡಲಾಗಿತ್ತು. ಅದು ನನ್ನನ್ನು ಕಾಡಿಸಲು ಕಳುಹಿಸಲಾದ ಸೈತಾನನ ದೂತನೇ ಆಗಿತ್ತು.


ಅದು ಟಗರಿನ ಹತ್ತಿರ ಬರುವುದನ್ನು ನಾನು ನೋಡಿದೆನು. ಅದರ ಮೇಲಿನ ಕ್ರೋಧದಿಂದ ಅದನ್ನು ಹಾದು, ಅದರ ಎರಡು ಕೊಂಬುಗಳನ್ನು ಮುರಿದು ಬಿಟ್ಟಿತು. ಅದರ ಮುಂದೆ ನಿಲ್ಲುವುದಕ್ಕೆ ಟಗರಿಗೆ ಏನೂ ಶಕ್ತಿಯಿರಲಿಲ್ಲ. ಆದರೆ ಹೋತವು ಟಗರನ್ನು ನೆಲಕ್ಕೆ ಉರುಳಿಸಿ ತುಳಿಯಿತು. ಟಗರನ್ನು ಹೋತದ ಹಿಡಿತದಿಂದ ಬಿಡಿಸುವವರು ಯಾರೂ ಇರಲಿಲ್ಲ.


ಯಾಕೋಬನು ಪೆನೀಯೇಲನ್ನು ದಾಟಿಹೋದಾಗ, ಸೂರ್ಯೋದಯವಾಯಿತು. ಆದರೆ ಅವನು ತೊಡೆಯ ನೋವಿನ ನಿಮಿತ್ತ ಕುಂಟುತ್ತಾ ನಡೆದನು.


ಇಗೋ, ನಿಮ್ಮಲ್ಲಿ ಪ್ರತಿಯೊಬ್ಬನು ನಿಮ್ಮ ನಿಮ್ಮ ಮನೆಗೆ ಚದುರಿಹೋಗಿ ನನ್ನನ್ನು ಒಬ್ಬಂಟಿಗನನ್ನಾಗಿ ಬಿಡುವ ಗಳಿಗೆ ಬರುತ್ತದೆ. ಹೌದು, ಈಗಲೇ ಬಂದಿದೆ. ಆದರೂ ನಾನು ಒಬ್ಬಂಟಿಗನಲ್ಲ. ಏಕೆಂದರೆ ತಂದೆ ನನ್ನ ಸಂಗಡ ಇದ್ದಾರೆ.


ಆಗ ಮೋಶೆಯು, “ನಾನು ಹೋಗಿ ಆ ವಿಚಿತ್ರ ನೋಟವನ್ನೂ ಪೊದೆಯು ಏಕೆ ಸುಟ್ಟುಹೋಗಲಿಲ್ಲವೆಂಬುದನ್ನೂ ನೋಡುವೆನು,” ಎಂದುಕೊಂಡನು.


ಆಗ ಮಾನವನಂತೆ ಇರುವ ಒಬ್ಬನು ನನ್ನ ತುಟಿಗಳನ್ನು ಮುಟ್ಟಿದನು. ನಾನು ಬಾಯಿತೆರೆದು ಮಾತನಾಡಿ, ನನ್ನ ಮುಂದೆ ನಿಂತಿದ್ದವನಿಗೆ, “ನನ್ನ ಒಡೆಯನೇ, ಆ ದರ್ಶನದ ನಿಮಿತ್ತ, ನನ್ನ ಸಂಕಟಗಳು ನನ್ನ ಮೇಲೆ ತಿರುಗಿಕೊಂಡಿವೆ, ನಾನು ನಿತ್ರಾಣನಾಗಿದ್ದೇನೆ.


ನನ್ನ ಒಡೆಯನ ದಾಸನಾದ ನನ್ನಂಥವನು ನನ್ನ ಒಡೆಯನಾದ ತಮ್ಮಂಥವರ ಸಂಗಡ ಹೇಗೆ ಮಾತಾಡಬಹುದು? ನನ್ನ ತ್ರಾಣವು ನನ್ನಲ್ಲಿ ಉಳಿಯಲಿಲ್ಲ, ಉಸಿರಾಡಿಸಲೂ ಆಗದು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು