Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 11:17 - ಕನ್ನಡ ಸಮಕಾಲಿಕ ಅನುವಾದ

17 ಅವನು ತನ್ನ ರಾಜ್ಯದ ಸಮಸ್ತ ಬಲ ಸಮೇತನಾಗಿ ಹೊರಟು, ದಕ್ಷಿಣದ ರಾಜನೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವನು. ಅವನ ರಾಜ್ಯವನ್ನು ಉರುಳಿಸಲು ಅವನಿಗೆ ಮಗಳನ್ನು ಕೊಡುವನು. ಆದರೆ ಅವನ ಯೋಜನೆಗಳು ಜಯಹೊಂದುವುದಿಲ್ಲ. ಇಲ್ಲವೆ ಅವನಿಗೆ ಸಹಾಯ ಮಾಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ದಕ್ಷಿಣ ದಿಕ್ಕಿನ ರಾಜನ ಮೇಲೆ ಬೀಳಬೇಕೆಂದು ನಿರ್ಧರಿಸಿ ತನ್ನ ರಾಜ್ಯದ ಸಮಸ್ತ ಬಲ ಸಮೇತನಾಗಿ ಹೊರಟು, ಅವನ ಸಂಗಡ ಒಪ್ಪಂದ ಮಾಡಿಕೊಳ್ಳುವನು. ಅವನ ರಾಜ್ಯದ ಹಾನಿಗಾಗಿ ಅವನಿಗೆ ಹೆಣ್ಣು ಮಗಳನ್ನು ಕೊಡುವನು. ಆದರೆ ಆ ಉಪಾಯವೂ ನಿಲ್ಲದು, ತನಗೆ ಅನುಕೂಲವಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 “ಉತ್ತರದ ರಾಜನು ದಕ್ಷಿಣರಾಜನ ಮೇಲೆ ಬೀಳಬೇಕೆಂದು ನಿರ್ಧರಿಸಿ ತನ್ನ ರಾಜ್ಯದ ಸಮಸ್ತ ಶಕ್ತಿಸಮೇತನಾಗಿ ಹೊರಟು ಅವನ ಸಂಗಡ ಒಪ್ಪಂದ ಮಾಡಿಕೊಳ್ಳುವನು. ಅವನ ರಾಜ್ಯದ ಹಾನಿಗಾಗಿಯೆ ಹೆಣ್ಣನ್ನು ಕೊಡುವನು. ಆದರೆ ಈ ಉಪಾಯ ಫಲಿಸದು. ಅದರಿಂದ ತನಗೂ ಅನುಕೂಲವಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ದಕ್ಷಿಣರಾಜನ ಮೇಲೆ ಬೀಳಬೇಕೆಂದು ನಿರ್ಧರಿಸಿ ತನ್ನ ರಾಜ್ಯದ ಸಮಸ್ತ ಬಲ ಸಮೇತನಾಗಿ ಹೊರಟು ಅವನ ಸಂಗಡ ಒಪ್ಪಂದಮಾಡಿಕೊಳ್ಳುವನು; ಅವನ ರಾಜ್ಯದ ಹಾನಿಗಾಗಿ ಅವನಿಗೆ ಹೆಣ್ಣುಮಗಳನ್ನು ಕೊಡುವನು; ಆದರೆ ಆ ಉಪಾಯವೂ ನಿಲ್ಲದು, ತನಗೆ ಅನುಕೂಲಿಸದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಉತ್ತರದ ರಾಜನು ತನ್ನ ಸರ್ವಶಕ್ತಿಯಿಂದ ದಕ್ಷಿಣದ ರಾಜನೊಂದಿಗೆ ಹೋರಾಡಲು ನಿರ್ಧರಿಸುವನು. ಅವನು ದಕ್ಷಿಣದ ರಾಜನೊಂದಿಗೆ ಒಂದು ಒಪ್ಪಂದವನ್ನು ಮಾಡಿಕೊಳ್ಳುವನು. ಉತ್ತರದ ರಾಜನು ತನ್ನ ಮಗಳನ್ನು ದಕ್ಷಿಣದ ರಾಜನಿಗೆ ಮದುವೆ ಮಾಡಿಕೊಡುವನು. ದಕ್ಷಿಣದ ರಾಜನನ್ನು ಸೋಲಿಸುವ ಉದ್ದೇಶದಿಂದ ಉತ್ತರದ ರಾಜನು ಹೀಗೆ ಮಾಡುವನು. ಆದರೆ ಅವನ ತಂತ್ರಗಳು ಯಶಸ್ವಿಯಾಗುವದಿಲ್ಲ. ಅವುಗಳಿಂದ ಅವನಿಗೆ ಸಹಾಯ ಸಿಕ್ಕುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 11:17
15 ತಿಳಿವುಗಳ ಹೋಲಿಕೆ  

ನೀನು ಯೆರೂಸಲೇಮಿನ ಮುತ್ತಿಗೆಯ ಕಡೆಗೆ ನಿನ್ನ ಮುಖವನ್ನು ಇಡಬೇಕು. ನಿನ್ನ ಭುಜವನ್ನು ನೀನು ಬರಿದುಮಾಡಿಕೊಂಡು, ಅದಕ್ಕೆ ವಿರೋಧವಾಗಿ ಪ್ರವಾದಿಸಬೇಕು.


ಆಮೇಲೆ ಕಬ್ಬಿಣದ ಹಂಚನ್ನು ತೆಗೆದುಕೊಂಡು, ಅದನ್ನು ನಿನಗೂ, ಆ ಪಟ್ಟಣಕ್ಕೂ ಮಧ್ಯೆ ಕಬ್ಬಿಣದ ಗೋಡೆಯನ್ನಾಗಿ ನಿಲ್ಲಿಸಿ, ಆ ಪಟ್ಟಣದ ಮೇಲೆ ದೃಷ್ಟಿಯಿಡು, ಅದು ಮುತ್ತಲಾಗುವುದು. ನೀನು ಅದನ್ನು ಮುತ್ತಿದಂತಾಗುವುದು. ಇದು ಇಸ್ರಾಯೇಲಿನ ಜನರಿಗೆ ಒಂದು ಸಂಕೇತ.


ಈ ಸಮಯದಲ್ಲಿ ಅರಾಮ್ಯರ ಅರಸನಾದ ಹಜಾಯೇಲನು ಹೋಗಿ ಗತ್ ಊರಿನ ಮೇಲೆ ಯುದ್ಧಮಾಡಿ, ಅದನ್ನು ವಶಪಡಿಸಿಕೊಂಡನು. ನಂತರ ಹಜಾಯೇಲನು ಯೆರೂಸಲೇಮಿನ ಮೇಲೆ ದಾಳಿಮಾಡಲು ಹೊರಟನು.


ಹಾಗಾದರೆ, ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಪರವಾಗಿ ಇದ್ದರೆ ನಮ್ಮನ್ನು ವಿರೋಧಿಸುವವರು ಯಾರು?


“ನನ್ನ ಪರವಾಗಿ ಇರದವನು ನನಗೆ ವಿರೋಧಿಯಾಗಿದ್ದಾನೆ, ನನ್ನೊಡನೆ ಶೇಖರಿಸದವನು ಚದರಿಸುತ್ತಾನೆ.


ಯೇಸು ತಾವು ಸ್ವರ್ಗಕ್ಕೆ ಏರಿಹೋಗುವ ಕಾಲ ಬಂದಾಗ, ಯೆರೂಸಲೇಮಿಗೆ ಹೋಗುವುದಕ್ಕಾಗಿ ತಮ್ಮ ಮನಸ್ಸನ್ನು ದೃಢಮಾಡಿಕೊಂಡು


“ನನ್ನ ಪರವಾಗಿ ಇರದವನು ನನಗೆ ವಿರೋಧಿಯಾಗಿದ್ದಾನೆ, ನನ್ನೊಡನೆ ಶೇಖರಿಸದವನು ಚದರಿಸುತ್ತಾನೆ.


ಆಗ ಅವನು ತನ್ನ ಸ್ವದೇಶದ ಕೋಟೆಗೆ ಮುಖವನ್ನು ತಿರುಗಿಸುವನು. ಆದರೆ ಅವನು ಎಡವಿಬಿದ್ದು, ಕಾಣದೆ ಹೋಗುವನು.


ಅರವತ್ತೆರಡು ವಾರಗಳಾದ ಮೇಲೆ ಆ ಅಭಿಷಿಕ್ತರನ್ನು ಕೊಂದುಹಾಕುವರು. ಅವರಿಗೆ ಏನೂ ಇರುವುದಿಲ್ಲ. ಆದರೆ ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ, ಪರಿಶುದ್ಧ ಸ್ಥಳವನ್ನೂ ನಾಶಮಾಡುವರು. ಪ್ರಳಯದಿಂದ ಅದು ಅಂತ್ಯವಾಗುವುದು. ಅಂತ್ಯದವರೆಗೂ ಯುದ್ಧವಾಗಿ ನಾಶ ಸಂಭವಿಸುವುದು.


“ಮನುಷ್ಯಪುತ್ರನೇ, ನೀನು ಅಮ್ಮೋನ್ಯರಿಗೆ ಅಭಿಮುಖನಾಗಿ ಅವರಿಗೆ ವಿರೋಧವಾಗಿ ಪ್ರವಾದಿಸು.


ಫರೋಹನೂ, ಅವನ ಮಹಾಸೈನ್ಯವೂ, ದೊಡ್ಡ ಪರಿವಾರವೂ ಬಂದು ಬಹಳ ಜನರನ್ನು ಕೊಲ್ಲುವುದಕ್ಕೆ ದಿಬ್ಬಗಳನ್ನೂ, ಕೋಟೆಗಳನ್ನೂ ಕಟ್ಟಿದರೂ ಯುದ್ಧದಲ್ಲಿ ಅವನಿಗೆ ಏನೂ ಪ್ರಯೋಜನವಾಗುವುದಿಲ್ಲ.


ಮನುಷ್ಯನ ಹೃದಯದಲ್ಲಿ ಅನೇಕ ಯೋಜನೆಗಳಿವೆ; ಆದರೂ ಯೆಹೋವ ದೇವರ ಸಂಕಲ್ಪವೇ ಈಡೇರುವುದು.


ನಾನು ನಿಮಗೆ ಮೊರೆಯಿಟ್ಟಾಗ, ನನ್ನ ಶತ್ರುಗಳು ಹಿಂದಿರುಗುವರು. ಇದರಿಂದ ದೇವರು ನನಗಿದ್ದಾರೆ ಎಂಬುದನ್ನು ತಿಳಿದುಕೊಳ್ಳುವೆನು.


ಇದನ್ನು ಕೇಳಿ ಯೆಹೋಷಾಫಾಟನು ಭಯಪಟ್ಟು ಯೆಹೋವ ದೇವರನ್ನು ಹುಡುಕಲು ನಿರ್ಣಯಿಸಿಕೊಂಡು ಸಮಸ್ತ ಯೆಹೂದದಲ್ಲಿ ಉಪವಾಸ ಮಾಡಬೇಕೆಂದು ಸಾರಿದನು.


ಅವರೆಲ್ಲರು ಹಿಂಸಿಸುವುದಕ್ಕೆ ಬರುವರು; ಅವರ ಸಮೂಹ, ಮರುಭೂಮಿಯ ಗಾಳಿಯಂತೆಯೇ ಮುಂದೆ ಬರುವುದು; ಸೆರೆಯವರನ್ನು ಮರಳಿನ ಹಾಗೆ ಕೂಡಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು