Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 11:19 - ಕನ್ನಡ ಸಮಕಾಲಿಕ ಅನುವಾದ

19 ಆಗ ಅವನು ತನ್ನ ಸ್ವದೇಶದ ಕೋಟೆಗೆ ಮುಖವನ್ನು ತಿರುಗಿಸುವನು. ಆದರೆ ಅವನು ಎಡವಿಬಿದ್ದು, ಕಾಣದೆ ಹೋಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆ ಮೇಲೆ ಸ್ವದೇಶದ ದುರ್ಗಗಳ ಕಡೆಗೆ ಹಿಂದಿರುಗಿ ಎಡವಿ ಬಿದ್ದು ಇಲ್ಲವಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಬಳಿಕ ರಾಜನು ಸ್ವದೇಶದ ದುರ್ಗಗಳ ಕಡೆಗೆ ಹಿಂದಿರುಗುವನು. ಆದರೆ ಎಡವಿಬಿದ್ದು ಅಳಿದುಹೋಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಆಮೇಲೆ ಸ್ವದೇಶದ ದುರ್ಗಗಳ ಕಡೆಗೆ ಹಿಂದಿರುಗಿ ಎಡವಿಬಿದ್ದು ಇಲ್ಲವಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 “ಅದಾದ ಮೇಲೆ ಉತ್ತರದ ರಾಜನು ತನ್ನ ದೇಶದ ಭದ್ರವಾದ ಕೋಟೆಗಳಿಗೆ ಹಿಂದಿರುಗುವನು. ಆದರೆ ಅವನು ದುರ್ಬಲನಾಗಿ ಬಿದ್ದುಹೋಗುವನು; ಕೊನೆಗೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 11:19
9 ತಿಳಿವುಗಳ ಹೋಲಿಕೆ  

ನಾನೂ ನಿನ್ನನ್ನು ಭಯಂಕರವಾದ ಅಂತ್ಯಕ್ಕೆ ತರುವೆನು. ಇನ್ನು ಮೇಲೆ ನೀನು ಇರುವುದಿಲ್ಲ; ಆಮೇಲೆ ನಿನ್ನನ್ನು ಎಷ್ಟು ಹುಡುಕಿದರೂ ನೀನು ಸಿಗುವುದಿಲ್ಲ ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.”


ಆದರೆ ಅವರು ಅಳಿದೇ ಹೋದರು; ಅವರನ್ನು ಹುಡುಕಿದೆನು; ಆದರೆ ಅವರು ಸಿಕ್ಕಲಿಲ್ಲ.


“ವೇಗಶಾಲಿಗಳು ಓಡಿ ಹೋಗದಿರಲಿ; ಪರಾಕ್ರಮಶಾಲಿಯು ತಪ್ಪಿಸಿಕೊಳ್ಳದಿರಲಿ; ಉತ್ತರದಲ್ಲಿ ಯೂಫ್ರೇಟೀಸ್ ನದಿಯ ತೀರದಲ್ಲಿ ಅವರು ಎಡವಿಬೀಳುವರು.


ದುಷ್ಟರು ನನ್ನನ್ನು ಬೀಳಿಸಬೇಕೆಂದು ನನಗೆ ವಿರೋಧವಾಗಿ ಸಮೀಪಿಸುವಾಗ, ನನ್ನ ವೈರಿಗಳು ತಾವೇ ಎಡವಿಬಿದ್ದರು.


ಭಕ್ತಿಹೀನನು ಕನಸಿನ ಹಾಗೆ ಹಾರಿಹೋಗುವನು, ಇನ್ನೆಂದಿಗೂ ಸಿಗಲಾರನು; ಅವನು ಕತ್ತಲೆಯ ಹಾಗೆ ಕಾಣದೆ ಹೋಗುವನು.


ಭೂಮಿಯು ಕುಡುಕನ ಹಾಗೆ ಓಲಾಡುತ್ತದೆ, ಗಾಳಿಗೆ ಸಿಕ್ಕಿದ ಗುಡಿಸಲಿನ ಹಾಗೆ ತೂಗಾಡುತ್ತದೆ, ಅದರ ಅಪರಾಧವು ಅದರ ಮೇಲೆ ಭಾರವಾಗಿರುತ್ತದೆ, ಅದು ಬಿದ್ದು ಹೋಗುತ್ತದೆ, ತಿರುಗಿ ಏಳುವುದೇ ಇಲ್ಲ.


ಅವಳ ವಂಶದಲ್ಲಿಯ ಒಬ್ಬನು ಎದ್ದು ಆ ಸ್ಥಾನದಲ್ಲಿ ನಿಂತು, ಸೈನ್ಯದೊಂದಿಗೆ ಬಂದು, ಉತ್ತರದ ಅರಸನ ಕೋಟೆಯೊಳಗೆ ನುಗ್ಗಿ, ಅವರ ವಿರುದ್ಧ ಹೋರಾಡಿ ಗೆಲ್ಲುವನು.


ಯಾವ ವಿಚಾರಣೆ ಇಲ್ಲದೆಯೇ ದೇವರು ಪರಾಕ್ರಮಿಗಳನ್ನು ದಂಡಿಸಬಹುದು. ದೇವರು ಮತ್ತೊಬ್ಬರನ್ನು ಅವರ ಸ್ಥಾನದಲ್ಲಿ ನಿಲ್ಲಿಸಲು ಸಾಧ್ಯ.


ದುಷ್ಟರು ದೊಡ್ಡ ಅಧಿಕಾರದಲ್ಲಿರುವುದನ್ನು ನಾನು ಕಂಡೆನು; ಅವರು ಹಸಿರಾಗಿ ವಿಸ್ತರಿಸಿಕೊಂಡ ಮರದ ಹಾಗೆ ಇದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು