Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 11:2 - ಕನ್ನಡ ಸಮಕಾಲಿಕ ಅನುವಾದ

2 ನಾನು ಈಗ ಸತ್ಯವನ್ನು ತಿಳಿಸುತ್ತೇನೆ. ಪಾರಸಿಯ ದೇಶದಲ್ಲಿ ಇನ್ನೂ ಮೂರು ಅರಸರು ಏಳುವರು. ನಾಲ್ಕನೆಯವನು ಅವರೆಲ್ಲರಿಗಿಂತಲೂ ಬಹಳ ಐಶ್ವರ್ಯವಂತನಾಗಿರುವನು. ಅವನು ತನ್ನ ಐಶ್ವರ್ಯದಿಂದಾಗುವ ಸಾಮರ್ಥ್ಯದಿಂದ ಗ್ರೀಕ್ ರಾಜ್ಯಕ್ಕೆ ವಿರೋಧವಾಗಿ ಎಲ್ಲರನ್ನೂ ಹುರಿದುಂಬಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಾನು ಈಗ ಸತ್ಯಾಂಶವನ್ನು ನಿನಗೆ ತಿಳಿಸುವೆನು, “ಇಗೋ, ಪಾರಸಿಯ ದೇಶದಲ್ಲಿ ಇನ್ನು ಮೂವರು ರಾಜರು ಏಳುವರು; ನಾಲ್ಕನೆಯ ರಾಜನು ಎಲ್ಲರಿಗಿಂತಲೂ ಅಧಿಕ ಧನವಂತನಾಗಿರುವನು; ಅವನು ತನ್ನ ಧನದಿಂದ ಪ್ರಬಲನಾಗಿ ಗ್ರೀಕ್ ರಾಜ್ಯಕ್ಕೆ ವಿರುದ್ಧವಾಗಿ ತನ್ನ ಬಲವನ್ನೆಲ್ಲಾ ಎಬ್ಬಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ಈಗ ಸತ್ಯಾಂಶವನ್ನು ತಿಳಿಸುತ್ತೇನೆ, ಕೇಳು: ಪರ್ಷಿಯ ದೇಶದಲ್ಲಿ ಇನ್ನೂ ಮೂವರು ರಾಜರು ಏಳುವರು. ನಾಲ್ಕನೆಯ ರಾಜನು ಎಲ್ಲರಿಗಿಂತಲೂ ಅಧಿಕ ಧನವಂತನಾಗಿರುವನು. ಅವನು ತನ್ನ ಧನದಿಂದ ಪ್ರಬಲನಾಗಿ ಗ್ರೀಕ್ ರಾಜ್ಯಕ್ಕೆ ವಿರುದ್ಧ ತನ್ನ ಬಲವನ್ನೆಲ್ಲ ಪ್ರಯೋಗಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಈಗ ಸತ್ಯಾಂಶವನ್ನು ನಿನಗೆ ತಿಳಿಸುವೆನು. ಇಗೋ, ಪಾರಸಿಯ ದೇಶದಲ್ಲಿ ಇನ್ನು ಮೂವರು ರಾಜರು ಏಳುವರು; ನಾಲ್ಕನೆಯ ರಾಜನು ಎಲ್ಲರಿಗಿಂತಲೂ ಅಧಿಕ ಧನವಂತನಾಗಿರುವನು; ಅವನು ತನ್ನ ಧನದಿಂದ ಪ್ರಬಲನಾಗಿ ಗ್ರೀಕ್ ರಾಜ್ಯಕ್ಕೆ ವಿರುದ್ಧವಾಗಿ ತನ್ನ ಬಲವನ್ನೆಲ್ಲಾ ಎಬ್ಬಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ದಾನಿಯೇಲನೇ, ಈಗ ನಾನು ನಿನಗೆ ಸತ್ಯಾಂಶವನ್ನು ಹೇಳುತ್ತೇನೆ ಕೇಳು. ಪಾರಸಿಯ ದೇಶದಲ್ಲಿ ಇನ್ನೂ ಮೂರು ಜನ ರಾಜರು ಆಳುವರು. ಆಮೇಲೆ ನಾಲ್ಕನೆಯ ರಾಜನು ಬರುವನು. ನಾಲ್ಕನೆಯ ರಾಜನು ತನಗಿಂತ ಮುಂಚೆ ಆಗಿ ಹೋದ ಪಾರಸಿಯ ದೇಶದ ಎಲ್ಲ ರಾಜರಿಗಿಂತ ಅಧಿಕ ಧನವಂತನಾಗಿರುವನು. ಆ ನಾಲ್ಕನೆಯ ರಾಜನು ತನ್ನ ಪ್ರಾಬಲ್ಯವನ್ನು ಬೆಳೆಸಿಕೊಳ್ಳುವದಕ್ಕೆ ಧನವನ್ನು ಬಳಸಿಕೊಳ್ಳುವನು. ಎಲ್ಲರೂ ಗ್ರೀಸ್ ರಾಜ್ಯದ ವಿರುದ್ಧವಾಗುವಂತೆ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 11:2
17 ತಿಳಿವುಗಳ ಹೋಲಿಕೆ  

ಆಗ ಸಿಂಹಾಸನದ ಮೇಲೆ ಕುಳಿತಿದ್ದವರು, “ಇಗೋ, ನಾನು ಎಲ್ಲವನ್ನೂ ನೂತನಗೊಳಿಸುತ್ತೇನೆ!” ಎಂದರು ಮತ್ತು ನನಗೆ, “ನೀನು ಇದನ್ನು ಬರೆ. ಏಕೆಂದರೆ ಈ ಮಾತುಗಳು ನಂಬತಕ್ಕವೂ ಸತ್ಯವಾದವೂ ಆಗಿವೆ!” ಎಂದು ಹೇಳಿದನು.


“ನಿಮಗೆ ನೀಡಲಾದ ಸಂಜೆ ಮತ್ತು ಮುಂಜಾನೆಗಳ ದರ್ಶನವು ಸತ್ಯವಾದದ್ದು. ಆದರೆ ಆ ದರ್ಶನವು ಗುಟ್ಟಾಗಿರಲಿ. ಏಕೆಂದರೆ ಅದು ಬಹು ದೂರದ ಭವಿಷ್ಯಕ್ಕೆ ಸಂಬಂಧಿಸಿದ್ದು.”


ದೇವರ ವಾಕ್ಯವನ್ನು ಪಡೆದವರು ದೇವರುಗಳೇ ಎಂದು ಆತನು ಕರೆದಿರುವುದಾದರೆ, ಪವಿತ್ರ ವೇದವು ಸುಳ್ಳಾಗಲಾರದು.


ನಿಶ್ಚಯವಾಗಿ ತನ್ನ ಸೇವಕರಾದ ಪ್ರವಾದಿಗಳಿಗೆ ತನ್ನ ಯೋಜನೆಗಳನ್ನು ತಿಳಿಸದೆ, ಸಾರ್ವಭೌಮ ಯೆಹೋವ ದೇವರು ಏನನ್ನೂ ಮಾಡುವುದಿಲ್ಲ.


ಅವನು ದಕ್ಷಿಣದ ಅರಸನಿಗೆ ವಿರೋಧವಾಗಿ ತನ್ನ ಶಕ್ತಿಯಿಂದಲೂ ಧೈರ್ಯದಿಂದಲೂ ದೊಡ್ಡ ಸೈನ್ಯದ ಸಂಗಡ ಯುದ್ಧಕ್ಕೆ ಸನ್ನದ್ಧನಾಗುವನು, ಆದರೆ ನಿಲ್ಲಲಾರದೆ ಹೋಗುವನು. ಏಕೆಂದರೆ ಅವನಿಗೆ ವಿರೋಧವಾಗಿ ಕುಯುಕ್ತಿಗಳನ್ನು ಕಲ್ಪಿಸುವರು.


ಆ ಟಗರು ಪಶ್ಚಿಮಕ್ಕೂ, ಉತ್ತರಕ್ಕೂ, ದಕ್ಷಿಣಕ್ಕೂ ಕಾದಾಡುತ್ತಿರುವುದನ್ನು ನಾನು ನೋಡಿದೆನು. ಮೃಗಗಳಲ್ಲಿ ಯಾವುದೂ ಅದರೆದುರಿಗೆ ನಿಲ್ಲಲಾರದೇ ಹೋಯಿತು. ಅದರ ಕೈಯಿಂದ ತಪ್ಪಿಸಿಕೊಳ್ಳಲು ಯಾವುದಕ್ಕೂ ಸಾಧ್ಯವಾಗುವಂತಿರಲಿಲ್ಲ. ಆದರೆ ಅದು ತನ್ನ ಮನಸ್ಸಿಗೆ ಬಂದಂತೆ ಮಾಡಿ, ತನ್ನನ್ನು ಹೆಚ್ಚಿಸಿಕೊಂಡಿತು.


“ಇದಲ್ಲದೆ, ಎರಡನೆಯ ಮೃಗವು ಕರಡಿಯ ಹಾಗಿರುವಂಥದ್ದನ್ನು ಕಂಡೆನು. ಒಂದು ಹೆಗಲನ್ನು ಮೇಲಕ್ಕೆ ಎತ್ತಿಕೊಂಡಿತ್ತು. ಇದರ ಬಾಯಿಯ ಹಲ್ಲುಗಳ ಮಧ್ಯದಲ್ಲಿ ಮೂರು ಪಕ್ಕೆಲುಬುಗಳನ್ನು ಕಚ್ಚಿಕೊಂಡಿದ್ದವು. ಅದಕ್ಕೆ, ‘ಎದ್ದೇಳು, ಹೆಚ್ಚು ಮಾಂಸವನ್ನು ತಿನ್ನು,’ ಎಂದು ಹೇಳಿದರು.


ಪ್ರಾಮಾಣಿಕವಾಗಿರಲು ಮತ್ತು ಸತ್ಯವನ್ನು ಮಾತನಾಡಲು ನಿಮಗೆ ಕಲಿಸುವುದು, ಆದ್ದರಿಂದ ನೀವು ಸೇವೆ ಸಲ್ಲಿಸುವವರಿಗೆ ಸತ್ಯವಾದ ವರದಿಗಳನ್ನು ಹಿಂತಿರುಗಿಸುವಂತೆ ನಾನು ನಿಮಗೆ ಬರೆದಿದ್ದೇನೆ.


ಪಾರಸಿಯ ಅರಸ ಕೋರೆಷನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಬೇಲ್ತೆಶಚ್ಚರನೆಂಬ ದಾನಿಯೇಲನಿಗೆ ಒಂದು ಪ್ರಕಟಣೆಯಾಯಿತು. ಅದರ ಸಂದೇಶವು ಸತ್ಯವಾದದ್ದು. ಅದು ಮಹಾ ಯುದ್ಧ ವಿಷಯವಾಗಿದೆ. ಸಂದೇಶದ ಅರ್ಥವು ಅವನಿಗೆ ಒಂದು ದರ್ಶನದಲ್ಲಿ ಬಂದಿತು.


ಆ ಒರಟು ಹೋತವು ಗ್ರೀಕಿನ ಅರಸನು ಮತ್ತು ಕಣ್ಣುಗಳ ಮಧ್ಯೆ ಇದ್ದ ಆ ದೊಡ್ಡ ಕೊಂಬು ಮೊದಲನೆಯ ಅರಸನು.


ಅರ್ತಷಸ್ತನ ದಿವಸಗಳಲ್ಲಿ ಬಿಷ್ಲಾಮನೂ, ಮಿತ್ರದಾತನೂ, ಟಾಬೆಯೇಲನೂ, ಮಿಕ್ಕಾದ ಅವರ ಜೊತೆಗಾರರೂ ಪಾರಸಿಯ ಅರಸನಾದ ಅರ್ತಷಸ್ತನಿಗೆ ಒಂದು ಪತ್ರ ಬರೆದರು. ಬರೆದ ಆ ಪತ್ರವು ಅರಾಮ್ಯ ಭಾಷೆಯಲ್ಲಿಯೂ, ಅರಾಮ್ಯ ಲಿಪಿಯಲ್ಲಿಯೂ ಇತ್ತು.


ಅಂದಿನಿಂದ ಪರ್ಷಿಯ ದೇಶದ ರಾಜ ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರ್ಷದವರೆಗೂ ಯೆರೂಸಲೇಮಿನ ದೇವಾಲಯವನ್ನು ಕಟ್ಟುವ ಕೆಲಸವು ನಿಂತುಹೋಯಿತು.


ಭಾರತ ದೇಶ ಮೊದಲುಗೊಂಡು ಇಥಿಯೋಪಿಯ ದೇಶದವರೆಗಿನ ನೂರ ಇಪ್ಪತ್ತೇಳು ಸಂಸ್ಥಾನಗಳನ್ನು ಅಹಷ್ವೇರೋಷನು ಆಳುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು