Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 11:20 - ಕನ್ನಡ ಸಮಕಾಲಿಕ ಅನುವಾದ

20 ಅವನ ಉತ್ತರಾಧಿಕಾರಿಯು ಅರಸೊತ್ತಿಗೆಯ ಸೊಗಸನ್ನು ಕಾದುಕೊಳ್ಳುವುದಕ್ಕಾಗಿ ಸುಂಕ ವಸೂಲಿ ಮಾಡುವವನನ್ನು ಕಳುಹಿಸುವನು. ಆದರೂ ಕೆಲವೇ ವರ್ಷಗಳಲ್ಲಿ ಅವನು ನಾಶ ಹೊಂದುವನು. ಇದು ಕೋಪದಿಂದಾಗಲಿ ಇಲ್ಲವೆ ಯುದ್ಧದಿಂದಾಗಲಿ ಆಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅವನ ಸ್ಥಾನದಲ್ಲಿ ಮತ್ತೊಬ್ಬನು ಎದ್ದು, ರಾಜ್ಯದಲ್ಲಿ ಶಿರೋಮಣಿಯಾದ ದೇಶವನ್ನೆಲ್ಲ ದೋಚಿಕೊಳ್ಳತಕ್ಕವನನ್ನು ನೇಮಿಸುವನು. ಅವನು ಕೆಲವು ದಿನಗಳೊಳಗೆ ನಾಶವಾಗುವನು. ಅವನ ನಾಶ ಕೋಪದ ಪೆಟ್ಟಿನಿಂದಲ್ಲ, ಯುದ್ಧದಿಂದಲೂ ಅಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 “ಅವನ ಸ್ಥಾನದಲ್ಲಿ ಮತ್ತೊಬ್ಬನು ರಾಜ್ಯವಾಳುವನು. ಇವನು ರಾಜ್ಯದಲ್ಲಿನ ಶಿರೋಮಣಿಯಂಥ ನಾಡನ್ನೆಲ್ಲ ದೋಚಿಕೊಳ್ಳಬಲ್ಲ ಉದ್ಯೋಗಿಯನ್ನು ನೇಮಿಸುವನು. ಆದರೆ ಕೆಲವೇ ದಿನಗಳಲ್ಲಿ ಅವನು ಕದನದಿಂದ ಅಲ್ಲ, ಕೋಪದಿಂದ ಅಲ್ಲ, ಹಾಗೆಯೇ ಮಡಿದುಹೋಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಅವನ ಸ್ಥಾನದಲ್ಲಿ ಮತ್ತೊಬ್ಬನು ಎದ್ದು ರಾಜ್ಯದಲ್ಲಿ ಶಿರೋಮಣಿಯಾದ ದೇಶವನ್ನೆಲ್ಲ ದೋಚಿಕೊಳ್ಳತಕ್ಕವನನ್ನು ನೇವಿುಸುವನು; ಆಹಾ, ಕೆಲವು ದಿನಗಳೊಳಗೆ ನಾಶವಾಗುವನು; ಆದರೆ ಕೋಪದ ಪೆಟ್ಟಿನಿಂದಲ್ಲ, ಯುದ್ಧದಿಂದಲೂ ಅಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 “ಉತ್ತರದ ರಾಜನ ತರುವಾಯ ಒಬ್ಬ ಹೊಸ ರಾಜನು ಬರುವನು. ಅವನು ಬಹು ವೈಭವಯುಕ್ತವಾದ ಜೀವನವನ್ನು ನಡೆಸಲಿಚ್ಛಿಸಿ ಅದಕ್ಕೆ ಬೇಕಾಗುವ ಹಣವನ್ನು ಸಂಗ್ರಹಿಸಲು ಒಬ್ಬ ತೆರಿಗೆ ಅಧಿಕಾರಿಯನ್ನು ಕಳುಹಿಸುವನು. ಆದರೆ ಕೆಲವು ವರ್ಷಗಳಲ್ಲಿ ಆ ರಾಜನು ನಾಶವಾಗುವನು. ಆದರೆ ಅವನು ಯುದ್ಧದಲ್ಲಿ ಮಡಿಯುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 11:20
7 ತಿಳಿವುಗಳ ಹೋಲಿಕೆ  

ಕಂಚಿನ ಬದಲಾಗಿ ನಿನಗೆ ಬಂಗಾರವನ್ನು ತರುವೆನು. ಕಬ್ಬಿಣಕ್ಕೆ ಬದಲಾಗಿ ಬೆಳ್ಳಿಯನ್ನೂ, ಮರಕ್ಕೆ ಬದಲಾಗಿ ಕಂಚನ್ನೂ, ಕಲ್ಲುಗಳಿಗೆ ಬದಲಾಗಿ ಕಬ್ಬಿಣವನ್ನೂ ತರುವೆನು. ಸಮಾಧಾನವನ್ನು ನಿನಗೆ ಅಧಿಪತಿಯನ್ನಾಗಿ, ನೀತಿಯನ್ನು ನಿನಗೆ ಅಧಿಕಾರಿಯನ್ನಾಗಿ ಮಾಡುವೆನು.


ಅವನ ಸ್ಥಾನದಲ್ಲಿ ಒಬ್ಬ ನೀಚನು ನಿಲ್ಲುವನು. ಅವನಿಗೆ ರಾಜಮರ್ಯಾದೆಯನ್ನು ಕೊಡುವುದಿಲ್ಲ. ಆದರೆ ಅವನು ಸಮಾಧಾನವಾಗಿ ನಯನುಡಿಗಳಿಂದ ರಾಜ್ಯವನ್ನು ಪಡೆದುಕೊಳ್ಳುವನು.


ಅವಳ ವಂಶದಲ್ಲಿಯ ಒಬ್ಬನು ಎದ್ದು ಆ ಸ್ಥಾನದಲ್ಲಿ ನಿಂತು, ಸೈನ್ಯದೊಂದಿಗೆ ಬಂದು, ಉತ್ತರದ ಅರಸನ ಕೋಟೆಯೊಳಗೆ ನುಗ್ಗಿ, ಅವರ ವಿರುದ್ಧ ಹೋರಾಡಿ ಗೆಲ್ಲುವನು.


ಹಾಲನ್ನು ಕಡೆಯುವುದರಿಂದ ಬೆಣ್ಣೆ, ಮೂಗನ್ನು ಹಿಂಡುವುದರಿಂದ ರಕ್ತ, ಹಾಗೆಯೇ ಕೋಪವನ್ನೆಬ್ಬಿಸುವುದರಿಂದ ಜಗಳ.”


ಯೆಹೋಯಾಕೀಮನು ಬೆಳ್ಳಿಯನ್ನೂ, ಬಂಗಾರವನ್ನೂ ಫರೋಹನಿಗೆ ಕೊಟ್ಟನು. ಅವನು ಬೆಳ್ಳಿಯನ್ನೂ, ಬಂಗಾರವನ್ನೂ ನೆಕೋ ಫರೋಹನಿಗೆ ಕೊಡಲು ದೇಶದ ಜನರಿಂದ ಪ್ರತಿಯೊಬ್ಬರ ತೆರಿಗೆಯನ್ನು ಬಲವಂತವಾಗಿ ತೆಗೆದುಕೊಂಡನು.


ಪ್ರವಾದಿಯಾದ ಹಬಕ್ಕೂಕನು ಹೊಂದಿದ ಪ್ರವಾದನೆಯು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು