Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 11:22 - ಕನ್ನಡ ಸಮಕಾಲಿಕ ಅನುವಾದ

22 ಪ್ರವಾಹದಂತಿರುವ ಆ ಸೈನ್ಯವೂ, ಒಡಂಬಡಿಕೆಯ ರಾಜಕುಮಾರನೂ ಅವನ ರಭಸಕ್ಕೆ ಸಿಕ್ಕಿ ಒಡೆದುಹೋಗಿ ನಾಶವಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ತುಂಬಿ ತುಳುಕುವ ವ್ಯೂಹಗಳೂ, ದೇವರ ನಿಬಂಧನಾಧಿಪತಿಯೂ ಅವನ ರಭಸಕ್ಕೆ ಸಿಕ್ಕಿ ಹೊಡೆದುಕೊಂಡು ಹೋಗಿ ಭಂಗವಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಅವನನ್ನು ಎದುರಿಸುವ ದೊಡ್ಡ ದೊಡ್ಡ ಸೈನ್ಯಗಳು ಹಾಗು ದೇವರ ಪ್ರಧಾನ ಯಾಜಕನು ಅವನ ಸೈನ್ಯ ಪ್ರವಾಹಕ್ಕೆ ಸಿಕ್ಕಿ ಅದರಲ್ಲಿ ಮುಳುಗಿ ನಾಶವಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ತುಂಬಿತುಳುಕುವ ವ್ಯೂಹಗಳೂ ದೇವರ ನಿಬಂಧನಾಧಿಪತಿಯೂ ಅವನ ರಭಸಕ್ಕೆ ಸಿಕ್ಕಿ ಹೊಡೆದುಕೊಂಡು ಹೋಗಿ ಭಂಗವಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಅವನು ದೊಡ್ಡದಾದ ಮತ್ತು ಶಕ್ತಿಶಾಲಿಯಾದ ಸೈನ್ಯಗಳನ್ನು ಸೋಲಿಸುತ್ತಾನೆ. ಅವನು ಒಪ್ಪಂದ ಮಾಡಿಕೊಂಡ ನಾಯಕನಿಗೂ ಮೋಸಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 11:22
11 ತಿಳಿವುಗಳ ಹೋಲಿಕೆ  

ಅವನ ಮಕ್ಕಳು ಯುದ್ಧಕ್ಕೆ ಸಿದ್ಧರಾಗಿ ದೊಡ್ಡ ಸೈನ್ಯ ಕೂಡಿಸುವರು. ಆ ಸೈನ್ಯವು ನಿಬಂಧಿಸಲಾಗದ ಪ್ರವಾಹದಂತೆ ಹರಿದುಬಂದು, ಯುದ್ಧವನ್ನು ಅವನ ಕೋಟೆಯವರೆಗೆ ನಡೆಸುವರು.


ಅರವತ್ತೆರಡು ವಾರಗಳಾದ ಮೇಲೆ ಆ ಅಭಿಷಿಕ್ತರನ್ನು ಕೊಂದುಹಾಕುವರು. ಅವರಿಗೆ ಏನೂ ಇರುವುದಿಲ್ಲ. ಆದರೆ ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ, ಪರಿಶುದ್ಧ ಸ್ಥಳವನ್ನೂ ನಾಶಮಾಡುವರು. ಪ್ರಳಯದಿಂದ ಅದು ಅಂತ್ಯವಾಗುವುದು. ಅಂತ್ಯದವರೆಗೂ ಯುದ್ಧವಾಗಿ ನಾಶ ಸಂಭವಿಸುವುದು.


ಅವನು ತನ್ನ ಶಕ್ತಿಯಿಂದಲೇ ತನ್ನ ಕಪಟತನವನ್ನು ಸಿದ್ಧಿಗೆ ತರುವನು. ಅವನು ಹೃದಯದಲ್ಲಿ ತನ್ನನ್ನು ತಾನೇ ಹೆಚ್ಚಿಸಿಕೊಂಡು ಸುರಕ್ಷಿತರಾಗಿದ್ದೇವೆಂದು ಹೇಳುವಾಗಲೇ ಅನೇಕರನ್ನು ನಾಶಮಾಡುವನು. ಅಲ್ಲದೆ ಅವನು ರಾಜಕುಮಾರರ ರಾಜಕುಮಾರನಿಗೆ ವಿರುದ್ಧವಾಗಿ ನಿಲ್ಲುವನು. ಆದರೂ ಮಾನವ ಶಕ್ತಿಯ ಬಳಕೆ ಇಲ್ಲದೆಯೂ ನಾಶವಾಗುವನು.


ಆದರೆ ಮೇರೆ ಮೀರುವ ಪ್ರಳಯದಿಂದ ನಿನೆವೆಯನ್ನು ಮುಗಿಸಿಬಿಡುವರು. ಕತ್ತಲೆ ಅವರ ಶತ್ರಗಳನ್ನು ಹಿಂದಟ್ಟುವುದು.


ಸೇನಾಧೀಶ್ವರ ಯೆಹೋವ ದೇವರಾದ ಕರ್ತರೇ, ನೀವು ದೇಶವನ್ನು ಮುಟ್ಟಿದ ಮಾತ್ರಕ್ಕೆ ಅದು ಕರಗಿ ಹೋಗುವುದು. ಅದರಲ್ಲಿ ವಾಸವಾಗಿರುವವರೆಲ್ಲರೂ ಗೋಳಾಡುವರು. ಅವೆಲ್ಲಾ ನೈಲ್ ನದಿಯ ಹಾಗೆ ಪ್ರವಾಹದಂತೆ ಉಕ್ಕಿ, ಈಜಿಪ್ಟಿನ ಪ್ರವಾಹದಂತೆ ಉಕ್ಕಿ ಮುಳುಗಿ ಹೋಗುವುದು.


“ಇದಕ್ಕಾಗಿ ದೇಶವು ನಡುಗುವುದಿಲ್ಲವೇ? ಅದರಲ್ಲಿ ವಾಸಿಸುವವರೆಲ್ಲರೂ ಗೋಳಾಡುವುದಿಲ್ಲವೇ? ದೇಶವೆಲ್ಲಾ ನೈಲ್ ನದಿಯ ಪ್ರವಾಹದಂತೆ ಉಬ್ಬಿ ಅಲ್ಲೊಲಕಲ್ಲೋಲವಾಗುವುದು, ಈಜಿಪ್ಟಿನ ನದಿಯಂತೆ ಇಳಿದುಹೋಗುವದು.


“ಮರಣದ ಸಂಗಡ ಒಡಂಬಡಿಕೆಯನ್ನು ಮಾಡಿದ್ದೇವೆ. ಪಾತಾಳದ ಸಂಗಡ ಒಪ್ಪಂದ ಮಾಡಿಕೊಂಡಿದ್ದೇವೆ. ವಿಪರೀತವಾದ ಶಿಕ್ಷೆಯು ಹಾದುಹೋಗುವಾಗ, ಅದು ನಮ್ಮನ್ನು ಮುಟ್ಟದು; ನಮ್ಮ ಅಸತ್ಯವನ್ನು ಆಶ್ರಯವಾಗಿ ಮಾಡಿಕೊಂಡು, ಮೋಸದಲ್ಲಿ ಅಡಗಿಕೊಂಡಿದ್ದೇವೆ,” ಎನ್ನುತ್ತೀರಲ್ಲಾ?


ಅವನ ಸಂಗಡ ಒಪ್ಪಂದ ಮಾಡಿಕೊಂಡ ಮೇಲೆ ಕಪಟವಾಗಿ ನಡೆಯುವನು. ಕೆಲವು ಜನರ ಸಹಾಯದಿಂದ ಅಧಿಕಾರ ಪಡೆಯುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು