ದಾನಿಯೇಲ 11:25 - ಕನ್ನಡ ಸಮಕಾಲಿಕ ಅನುವಾದ25 ಅವನು ದಕ್ಷಿಣದ ಅರಸನಿಗೆ ವಿರೋಧವಾಗಿ ತನ್ನ ಶಕ್ತಿಯಿಂದಲೂ ಧೈರ್ಯದಿಂದಲೂ ದೊಡ್ಡ ಸೈನ್ಯದ ಸಂಗಡ ಯುದ್ಧಕ್ಕೆ ಸನ್ನದ್ಧನಾಗುವನು, ಆದರೆ ನಿಲ್ಲಲಾರದೆ ಹೋಗುವನು. ಏಕೆಂದರೆ ಅವನಿಗೆ ವಿರೋಧವಾಗಿ ಕುಯುಕ್ತಿಗಳನ್ನು ಕಲ್ಪಿಸುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಅವನು ದೊಡ್ಡ ದಂಡೆತ್ತಿ ದಕ್ಷಿಣ ದಿಕ್ಕಿನ ರಾಜನ ವಿರುದ್ಧವಾಗಿ ತನ್ನ ರಾಜ್ಯದ ಬಲವನ್ನೆಲ್ಲ ಕೂಡಿಸಿ ಧೈರ್ಯದಿಂದ ಹೊರಡುವನು. ದಕ್ಷಿಣ ದಿಕ್ಕಿನ ರಾಜನು ಅತ್ಯಧಿಕ ಬಲವುಳ್ಳ ಮಹಾ ಸೈನ್ಯಸಮೇತನಾಗಿ ಯುದ್ಧಕ್ಕೆ ಹೊರಡುವನು. ಆದರೆ ನಿಲ್ಲಲಾರನು, ಅವನು ಸೋಲುವ ಹಾಗೆ ಕುಯುಕ್ತಿಗಳನ್ನು ಕಲ್ಪಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 “ಅವನು ಧೈರ್ಯತಂದುಕೊಂಡು, ದೊಡ್ಡ ದಂಡೆತ್ತಿ, ದಕ್ಷಿಣರಾಜನಿಗೆ ವಿರುದ್ಧ ತನ್ನ ರಾಜ್ಯದ ಶಕ್ತಿಯನ್ನೆಲ್ಲ ಕೂಡಿಸುವನು. ದಕ್ಷಿಣರಾಜನಾದರೋ ಅತ್ಯಧಿಕ ಬಲವುಳ್ಳ ಮಹಾಸೈನ್ಯ ಸಮೇತನಾಗಿ ಯುದ್ಧಕ್ಕೆ ಹೊರಡುವನು. ಆದರೆ ಜಯಗಳಿಸನು. ಕುಯುಕ್ತಿಗಳಿಗೆ ಗುರಿಯಾಗಿ ಸೋಲನ್ನು ಅಪ್ಪಬೇಕಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಅವನು ದೊಡ್ಡ ದಂಡೆತ್ತಿ ದಕ್ಷಿಣರಾಜನಿಗೆ ವಿರುದ್ಧವಾಗಿ ತನ್ನ ರಾಜ್ಯದ ಬಲವನ್ನೆಲ್ಲ ಕೂಡಿಸಿ ಧೈರ್ಯತಂದುಕೊಳ್ಳಲು ದಕ್ಷಿಣರಾಜನು ಅತ್ಯಧಿಕ ಬಲವುಳ್ಳ ಮಹಾ ಸೈನ್ಯಸಮೇತನಾಗಿ ಯುದ್ಧಕ್ಕೆ ಹೊರಡುವನು; ಆದರೆ ನಿಲ್ಲಲಾರನು; ಅವನು ಸೋಲುವ ಹಾಗೆ ಕುಯುಕ್ತಿಗಳನ್ನು ಕಲ್ಪಿಸುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 “ಕ್ರೂರನಾದ ಮತ್ತು ವಂಚಕನಾದ ಆ ರಾಜನ ಹತ್ತಿರ ಅತಿ ದೊಡ್ಡ ಸೈನ್ಯವಿರುವದು. ಅವನು ಆ ಸೈನ್ಯದಿಂದ ತನ್ನ ಶಕ್ತಿಯನ್ನು ಪ್ರದರ್ಶಿಸಲು ಧೈರ್ಯ ತಂದುಕೊಂಡು ದಕ್ಷಿಣದ ರಾಜನ ಮೇಲೆ ದಾಳಿ ಮಾಡುವನು. ದಕ್ಷಿಣದ ರಾಜನು ಅತಿದೊಡ್ಡದಾದ ಮತ್ತು ಶಕ್ತಿಶಾಲಿಯಾದ ಸೈನ್ಯವನ್ನು ಕೂಡಿಸಿಕೊಂಡು ಯುದ್ಧಕ್ಕೆ ಹೋಗುವನು. ಆದರೆ ಅವನ ವೈರಿಗಳು ರಹಸ್ಯವಾಗಿ ಒಂದು ಕುಯುಕ್ತಿಯನ್ನು ಮಾಡುವರು. ದಕ್ಷಿಣದ ರಾಜನು ಸೋಲುವನು. ಅಧ್ಯಾಯವನ್ನು ನೋಡಿ |