Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 11:26 - ಕನ್ನಡ ಸಮಕಾಲಿಕ ಅನುವಾದ

26 ಅವನ ರಾಜ ಭೋಜನದಲ್ಲಿ ಭಾಗವನ್ನು ತಿಂದವರೇ, ಅವನನ್ನು ನಾಶಮಾಡುವರು. ಅವನ ಸೈನ್ಯವು ತುಂಬಿ ತುಳುಕುವುದು ಮತ್ತು ಅನೇಕರು ಹತರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಅವನ ಮೃಷ್ಟಾನ್ನವನ್ನು ತಿನ್ನುವವರೇ ಅವನನ್ನು ಭಂಗಪಡಿಸುವರು; ಉತ್ತರ ದಿಕ್ಕಿನ ರಾಜನ ಸೈನ್ಯವು ತುಂಬಿ ತುಳುಕುವುದು. ಬಹಳ ಜನರು ಹತರಾಗಿ ಬೀಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಅವನ ಮೃಷ್ಟಾನ್ನ ತಿಂದವರೇ ಅವನಿಗೆ ಎರಡು ಬಗೆಯುವರು. ಅವನ ಸೈನ್ಯವು ಕೊಚ್ಚಿಕೊಂಡುಹೋಗುವುದು. ಬಹುಜನರು ಹತರಾಗಿ ಬೀಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಅವನ ಮೃಷ್ಟಾನ್ನವನ್ನು ತಿನ್ನುವವರೇ ಅವನನ್ನು ಭಂಗಪಡಿಸುವರು; ಉತ್ತರರಾಜನ ಸೈನ್ಯವು ತುಂಬಿತುಳುಕುವದು; ಬಹು ಜನರು ಹತರಾಗಿ ಬೀಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ದಕ್ಷಿಣದ ರಾಜನ ಒಳ್ಳೆಯ ಸ್ನೇಹಿತರೆಂದು ಭಾವಿಸಲಾದ ಜನರು ಅವನನ್ನು ನಾಶಮಾಡಲು ಪ್ರಯತ್ನ ಮಾಡುವರು. ಅವನ ಸೈನ್ಯಕ್ಕೆ ಸೋಲುಂಟಾಗುವದು. ಅವನ ಅನೇಕ ಸೈನಿಕರು ಯುದ್ಧದಲ್ಲಿ ಮಡಿಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 11:26
11 ತಿಳಿವುಗಳ ಹೋಲಿಕೆ  

ಅವನ ಮಕ್ಕಳು ಯುದ್ಧಕ್ಕೆ ಸಿದ್ಧರಾಗಿ ದೊಡ್ಡ ಸೈನ್ಯ ಕೂಡಿಸುವರು. ಆ ಸೈನ್ಯವು ನಿಬಂಧಿಸಲಾಗದ ಪ್ರವಾಹದಂತೆ ಹರಿದುಬಂದು, ಯುದ್ಧವನ್ನು ಅವನ ಕೋಟೆಯವರೆಗೆ ನಡೆಸುವರು.


“ನಾನು ನಿಮ್ಮೆಲ್ಲರನ್ನು ಕುರಿತು ಮಾತನಾಡುತ್ತಿಲ್ಲ. ನಾನು ಆರಿಸಿಕೊಂಡವರನ್ನು ನಾನು ಬಲ್ಲೆನು. ಆದರೆ ‘ನನ್ನ ಸಂಗಡ ರೊಟ್ಟಿಯನ್ನು ತಿಂದವನೇ, ನನಗೆ ದ್ರೋಹ ಬಗೆದನು,’ ಎಂಬ ಪವಿತ್ರ ವಾಕ್ಯವು ನೆರವೇರಬೇಕಾಗಿದೆ.


ಅದಕ್ಕೆ ಯೇಸು ಉತ್ತರವಾಗಿ ಅವರಿಗೆ, “ಅವನು ಹನ್ನೆರಡು ಮಂದಿಯಲ್ಲಿ ಒಬ್ಬನು. ಎಂದರೆ, ನನ್ನ ಸಂಗಡ ಪಾತ್ರೆಯಲ್ಲಿ ಕೈ ಅದ್ದುವವನೇ.


ಅದಕ್ಕೆ ಯೇಸು ಉತ್ತರವಾಗಿ, “ನನ್ನ ಸಂಗಡ ಪಾತ್ರೆಯಲ್ಲಿ ಕೈ ಅದ್ದಿದವನೇ ನನಗೆ ದ್ರೋಹ ಮಾಡುವನು.


ಅಂತ್ಯಕಾಲದಲ್ಲಿ ದಕ್ಷಿಣದ ಅರಸನು ಅವನ ಮೇಲೆ ಬೀಳುವನು; ಉತ್ತರದ ಅರಸನು ರಥಗಳೊಂದಿಗೂ, ಸವಾರರೊಂದಿಗೂ, ಅನೇಕ ಹಡಗುಗಳೊಂದಿಗೂ ಸುಳಿಗಾಳಿಯಂತೆ ಅವನಿಗೆ ವಿರೋಧವಾಗಿ ದೇಶಗಳನ್ನು ಪ್ರವೇಶಿಸಿ ಪ್ರಳಯದಂತೆ ಹಾದುಹೋಗುವನು.


ಪ್ರವಾಹದಂತಿರುವ ಆ ಸೈನ್ಯವೂ, ಒಡಂಬಡಿಕೆಯ ರಾಜಕುಮಾರನೂ ಅವನ ರಭಸಕ್ಕೆ ಸಿಕ್ಕಿ ಒಡೆದುಹೋಗಿ ನಾಶವಾಗುವರು.


ನನ್ನ ರೊಟ್ಟಿಯನ್ನು ತಿಂದವನೂ ನಾನು ನಂಬಿದ್ದವನೂ ಆಗಿರುವ ನನ್ನ ಆಪ್ತ ಸ್ನೇಹಿತನು ಸಹ ನನಗೆ ವಿರೋಧವಾಗಿ ತನ್ನ ಕಾಲನ್ನು ಎತ್ತಿದ್ದಾನೆ.


ಹಜಾಯೇಲನು ಎಲೀಷನನ್ನು ಬಿಟ್ಟು ಹೊರಟು ತನ್ನ ಯಜಮಾನನ ಬಳಿಗೆ ಬಂದನು. ಆಗ ಅವನು, “ಎಲೀಷನು ನಿನಗೆ ಏನು ಹೇಳಿದನು?” ಎಂದು ಕೇಳಿದ್ದಕ್ಕೆ ಹಜಾಯೇಲನು, “ನೀನು ನಿಜವಾಗಿ ಬದುಕುವೆ ಎಂದು ನನಗೆ ಹೇಳಿದನು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು