ದಾನಿಯೇಲ 11:27 - ಕನ್ನಡ ಸಮಕಾಲಿಕ ಅನುವಾದ27 ಈ ಇಬ್ಬರ ಅರಸನ ಹೃದಯಗಳು ಕೇಡನ್ನು ಮಾಡುವಂತವುಗಳಾಗಿರುವುವು. ಒಂದೇ ಮೇಜಿನಲ್ಲಿ ಕುಳಿತು ಒಬ್ಬರಿಗೊಬ್ಬರು ಸುಳ್ಳು ಹೇಳುವರು. ಆದರೆ ಅದು ಅನುಕೂಲವಾಗದು. ಏಕೆಂದರೆ ಅದು ಹೇಗಾದರೂ ನಿಶ್ಚಿತ ಕಾಲದಲ್ಲಿಯೇ ಅಂತ್ಯವಾಗುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಆ ಇಬ್ಬರು ರಾಜರು ಒಬ್ಬರಿಗೊಬ್ಬರು ಕೇಡಿನ ಮನಸುಳ್ಳವರಾಗಿ ಸಹ ಪಂಕ್ತಿಯಲ್ಲಿ ಸುಳ್ಳುಸುಳ್ಳು ಮಾತನಾಡಿಕೊಳ್ಳುವರು. ಆದರೆ ಏನೂ ಸಾಗದು, ಪರಿಣಾಮವು ನಿಶ್ಚಿತ ಕಾಲದಲ್ಲೇ ತಲೆದೋರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಆ ಇಬ್ಬರು ರಾಜರು ಪರಸ್ಪರ ಕೇಡಿನ ಮನಸ್ಸು ಉಳ್ಳವರಾಗಿ ಸಹಪಂಕ್ತಿಯಲ್ಲಿ ಕುಳಿತಿದ್ದರೂ ಸುಳ್ಳುಪೊಳ್ಳು ಮಾತಾಡಿಕೊಳ್ಳುವರು. ಆದರೆ ನಿಶ್ಚಿತಕಾಲ ಬರುವ ತನಕ ಅವರಿಂದ ಏನೂ ಸಾಧಿಸಲಾಗದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಆ ಇಬ್ಬರು ರಾಜರು [ಒಬ್ಬರಿಗೊಬ್ಬರು] ಕೇಡಿನ ಮನಸ್ಸುಳ್ಳವರಾಗಿ ಸಹಪಂಕ್ತಿಯಲ್ಲಿ ಸುಳ್ಳುಸುಳ್ಳು ಮಾತಾಡಿಕೊಳ್ಳುವರು; ಆದರೆ ಏನೂ ಸಾಗದು; ಪರಿಣಾಮವು ಕ್ಲುಪ್ತಕಾಲದಲ್ಲೇ ತಲೆದೋರುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಆ ಇಬ್ಬರು ಅರಸರು ಒಬ್ಬರಿಗೊಬ್ಬರು ಕೇಡುಮಾಡಬೇಕೆಂದು ನಿಶ್ಚಯಿಸುವರು. ಅವರಿಬ್ಬರೂ ಒಂದೇ ಮೇಜಿನಲ್ಲಿ ಕುಳಿತುಕೊಳ್ಳುವರು ಮತ್ತು ಒಬ್ಬರಿಗೊಬ್ಬರು ಸುಳ್ಳು ಹೇಳುವರು. ಆದರೆ ಇದರಿಂದ ಅವರಿಬ್ಬರಲ್ಲಿ ಯಾರಿಗೂ ಒಳ್ಳೆಯದಾಗುವದಿಲ್ಲ. ಏಕೆಂದರೆ ದೇವರು ಅವರ ಅಂತ್ಯಕಾಲವನ್ನು ನಿರ್ಧರಿಸಿದ್ದಾನೆ. ಅಧ್ಯಾಯವನ್ನು ನೋಡಿ |