Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 11:29 - ಕನ್ನಡ ಸಮಕಾಲಿಕ ಅನುವಾದ

29 ನೇಮಕವಾದ ಕಾಲದಲ್ಲಿಯೇ ಅವನು ಹಿಂದಿರುಗಿ ದಕ್ಷಿಣಕ್ಕೆ ಬರುವನು, ಆದರೆ ಮೊದಲು ಆದಂತೆ ಎರಡನೆಯ ಸಾರಿ ಆಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ನಿಶ್ಚಿತ ಕಾಲದಲ್ಲಿ ಪುನಃ ದಕ್ಷಿಣ ದಿಕ್ಕಿನ ದೇಶದ ಮೇಲೆ ನುಗ್ಗುವನು. ಆದರೆ ಮೊದಲು ಆದಂತೆಯೇ ಎರಡನೆಯ ಸಲ ಆಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 “ನಿಶ್ಚಿತ ಕಾಲದಲ್ಲಿ ಪುನಃ ದಕ್ಷಿಣದೇಶದ ಮೇಲೆ ದಾಳಿಮಾಡುವನು. ಆದರೆ ಮೊದಲು ಆದಂತೆಯೇ ಎರಡನೇಯ ಸಲ ಆಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಕ್ಲುಪ್ತಕಾಲದಲ್ಲಿ ಪುನಃ ದಕ್ಷಿಣದೇಶದ ಮೇಲೆ ನುಗ್ಗುವನು; ಆದರೆ ಮೊದಲು ಆದಂತೆ ಎರಡನೆಯ ಸಲ ಆಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 “ಸರಿಯಾದ ಸಮಯ ನೋಡಿ ಉತ್ತರದ ರಾಜನು ದಕ್ಷಿಣದ ರಾಜನ ಮೇಲೆ ದಾಳಿ ಮಾಡುವನು. ಆದರೆ ಈ ಸಲ ಅವನು ಹಿಂದಿನಂತೆ ಜಯಶೀಲನಾಗುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 11:29
9 ತಿಳಿವುಗಳ ಹೋಲಿಕೆ  

ದೇವರು ಒಬ್ಬ ಮನುಷ್ಯನಿಂದ ಎಲ್ಲಾ ದೇಶಗಳನ್ನು ಸೃಷ್ಟಿಸಿ, ಜನರು ಇಡೀ ಭೂಲೋಕವನ್ನು ತುಂಬಿಕೊಳ್ಳುವಂತೆ ಮಾಡಿದರು; ಅವರವರು ಇರತಕ್ಕ ಕಾಲಾವಧಿಯನ್ನೂ ವಾಸಿಸಲು ನಿರ್ದಿಷ್ಟ ಸ್ಥಳಗಳನ್ನೂ ನೇಮಿಸಿದ್ದಾರೆ.


ಅವನು ದಕ್ಷಿಣದ ಅರಸನಿಗೆ ವಿರೋಧವಾಗಿ ತನ್ನ ಶಕ್ತಿಯಿಂದಲೂ ಧೈರ್ಯದಿಂದಲೂ ದೊಡ್ಡ ಸೈನ್ಯದ ಸಂಗಡ ಯುದ್ಧಕ್ಕೆ ಸನ್ನದ್ಧನಾಗುವನು, ಆದರೆ ನಿಲ್ಲಲಾರದೆ ಹೋಗುವನು. ಏಕೆಂದರೆ ಅವನಿಗೆ ವಿರೋಧವಾಗಿ ಕುಯುಕ್ತಿಗಳನ್ನು ಕಲ್ಪಿಸುವರು.


ಅವನ ಸಂಗಡ ಒಪ್ಪಂದ ಮಾಡಿಕೊಂಡ ಮೇಲೆ ಕಪಟವಾಗಿ ನಡೆಯುವನು. ಕೆಲವು ಜನರ ಸಹಾಯದಿಂದ ಅಧಿಕಾರ ಪಡೆಯುವನು.


ಪಾರಸಿಯ ಅರಸ ಕೋರೆಷನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಬೇಲ್ತೆಶಚ್ಚರನೆಂಬ ದಾನಿಯೇಲನಿಗೆ ಒಂದು ಪ್ರಕಟಣೆಯಾಯಿತು. ಅದರ ಸಂದೇಶವು ಸತ್ಯವಾದದ್ದು. ಅದು ಮಹಾ ಯುದ್ಧ ವಿಷಯವಾಗಿದೆ. ಸಂದೇಶದ ಅರ್ಥವು ಅವನಿಗೆ ಒಂದು ದರ್ಶನದಲ್ಲಿ ಬಂದಿತು.


ಅವನು, “ದೇವರು ತನ್ನ ಕೋಪವನ್ನು ತೀರಿಸುವ ಮುಂದಿನ ಕಾಲದಲ್ಲಿ ನಡೆಯತಕ್ಕದ್ದನ್ನು ನಿನಗೆ ತಿಳಿಸುತ್ತೇನೆ ಕೇಳು, ಆ ದರ್ಶನವು ನಿಯಮಿತ ಅಂತ್ಯಕಾಲಕ್ಕೆ ಸಂಬಂಧಪಟ್ಟದ್ದು.


ದ್ವಾರವೇ, ಗೋಳಾಡು! ಪಟ್ಟಣವೇ, ಕೂಗು! ಫಿಲಿಷ್ಟಿಯರೇ ಕರಗಿ ಹೋಗಿರಿ. ಹೊಗೆಯು ಉತ್ತರದಿಂದ ಬರುತ್ತದೆ. ಅದರಲ್ಲಿ ಅತ್ತಿತ್ತ ನಡೆಯುವವರು ಯಾರೂ ಇಲ್ಲ.


ಆದರೆ ಅವನ ತಂದೆಯು ಮುಂಚಿತವಾಗಿ ನೇಮಿಸಿದ ದಿನದವರೆಗೂ ಅವನು ಪೋಷಕರ ಹಾಗೂ ಆಡಳಿತಗಾರರ ಕೈಕೆಳಗಿರುವನು.


ಆಗ ಉತ್ತರದ ಅರಸನು ಮಹಾ ಐಶ್ವರ್ಯದೊಂದಿಗೆ ಸ್ವದೇಶಕ್ಕೆ ಹಿಂದಿರುಗುವನು, ಆದರೆ ಅವನ ಹೃದಯವು ಪರಿಶುದ್ಧ ಒಡಂಬಡಿಕೆಗೆ ವಿರೋಧವಾಗಿರುವುದು; ಅವನು ಇದಕ್ಕೆ ವಿರುದ್ಧವಾಗಿ ಕಾರ್ಯಸಾಧಿಸಿ, ಸ್ವಂತ ದೇಶಕ್ಕೆ ಹಿಂದಿರುಗುವನು.


ಏಕೆಂದರೆ ಕಿತ್ತೀಮಿನ ಹಡಗುಗಳು ಅವನಿಗೆ ವಿರೋಧವಾಗಿ ಬರುವುವು. ಆದ್ದರಿಂದ ಅವನು ಎದೆಗುಂದಿ, ಪರಿಶುದ್ಧ ಒಡಂಬಡಿಕೆಗೆ ವಿರೋಧವಾಗಿ ಕೋಪಿಸಿಕೊಳ್ಳುವನು. ಹಿಂದಿರುಗಿ ಬಂದು ಪರಿಶುದ್ಧ ಒಡಂಬಡಿಕೆಯನ್ನು ತೊರೆದವರಿಗೆ ದಯೆ ತೋರಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು