ದಾನಿಯೇಲ 11:30 - ಕನ್ನಡ ಸಮಕಾಲಿಕ ಅನುವಾದ30 ಏಕೆಂದರೆ ಕಿತ್ತೀಮಿನ ಹಡಗುಗಳು ಅವನಿಗೆ ವಿರೋಧವಾಗಿ ಬರುವುವು. ಆದ್ದರಿಂದ ಅವನು ಎದೆಗುಂದಿ, ಪರಿಶುದ್ಧ ಒಡಂಬಡಿಕೆಗೆ ವಿರೋಧವಾಗಿ ಕೋಪಿಸಿಕೊಳ್ಳುವನು. ಹಿಂದಿರುಗಿ ಬಂದು ಪರಿಶುದ್ಧ ಒಡಂಬಡಿಕೆಯನ್ನು ತೊರೆದವರಿಗೆ ದಯೆ ತೋರಿಸುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಅವನ ವಿರುದ್ಧವಾಗಿ ಕಿತ್ತೀಮಿನ ಹಡಗುಗಳು ಬರಲು, ಅವನು ಎದೆಗುಂದಿ ಹಿಂದಿರುಗಿ ಪರಿಶುದ್ಧ ನಿಬಂಧನೆಯ ಮೇಲೆ ಮತ್ಸರಗೊಂಡು ತನಗೆ ಇಷ್ಟ ಬಂದಂತೆ ಮಾಡುವನು. ಅವನು ಸ್ವದೇಶಕ್ಕೆ ಸೇರಿ ಪರಿಶುದ್ಧ ನಿಬಂಧನೆಯನ್ನು ತೊರೆದವರನ್ನು ಕಟಾಕ್ಷಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಅವನಿಗೆ ವಿರುದ್ಧವಾಗಿ ರೋಮಿನ ಹಡಗುಗಳು ಬರಲು ಅವನು ಎದೆಗುಂದಿ ಹಿಂದಿರುಗುವನು. ಪವಿತ್ರ ಒಡಂಬಡಿಕೆಯ ವಿರುದ್ಧ ಮತ್ಸರಗೊಂಡು ಸಾಧ್ಯವಾದಷ್ಟೂ ಹಾನಿಮಾಡುವನು. ಸ್ವದೇಶಕ್ಕೆ ಹಿಂದಿರುಗಿ ಪವಿತ್ರ ಒಡಂಬಡಿಕೆಯನ್ನು ತೊರೆದವರಿಗೆ ಆದರ ತೋರುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಅವನಿಗೆ ವಿರುದ್ಧವಾಗಿ ಕಿತ್ತೀವಿುನ ಹಡಗುಗಳು ಬರಲು ಅವನು ಎದೆಗುಂದಿ ಹಿಂದಿರುಗಿ ಪರಿಶುದ್ಧ ನಿಬಂಧನೆಯ ಮೇಲೆ ಮತ್ಸರಗೊಂಡು ಮಾಡುವಷ್ಟು ಮಾಡುವನು; ಅವನು ಸ್ವದೇಶಕ್ಕೆ ಸೇರಿ ಪರಿಶುದ್ಧ ನಿಬಂಧನೆ ತೊರೆದವರನ್ನು ಕಟಾಕ್ಷಿಸುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಕಿತ್ತೀಮಿನ ಹಡಗುಗಳು ಬಂದು ಉತ್ತರದ ರಾಜನೊಂದಿಗೆ ಯುದ್ಧ ಮಾಡುವವು. ಆ ಹಡಗುಗಳು ಬರುವದನ್ನು ಅವನು ನೋಡಿ ಹೆದರಿಕೊಳ್ಳುವನು. ಅವನು ಪರಿಶುದ್ಧ ನಿಬಂಧನೆಯ ಮೇಲೆ ಕೋಪಿಸಿಕೊಂಡು ಹಿಂತಿರುಗುವನು. ಅವನು ಹಿಂತಿರುಗಿದ ಮೇಲೆ ಪರಿಶುದ್ಧ ನಿಬಂಧನೆಯನ್ನು ತೊರೆದವರಿಗೆ ಸಹಾಯ ಮಾಡುವನು. ಅಧ್ಯಾಯವನ್ನು ನೋಡಿ |