Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 11:35 - ಕನ್ನಡ ಸಮಕಾಲಿಕ ಅನುವಾದ

35 ಇದಲ್ಲದೆ ಅಂತ್ಯಕಾಲದವರೆಗೆ ಜ್ಞಾನಿಗಳನ್ನು ಶೋಧಿಸುವುದಕ್ಕೂ ಅದರಲ್ಲಿ ಅನೇಕರು ಬೀಳುವರು; ಏಕೆಂದರೆ ಇದು ನೇಮಕವಾದ ಸಮಯದಲ್ಲಿ ಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಜ್ಞಾನಿಗಳಲ್ಲಿಯೂ ಕೆಲವರು ಅಂತ್ಯಕಾಲದವರೆಗೆ ಬೀಳುತ್ತಿರುವರು. ಆದುದರಿಂದ ಜನರು ಶೋಧಿಸಲ್ಪಟ್ಟು, ಶುದ್ಧಿಹೊಂದಿ ಶುಭ್ರರಾಗುವರು. ಅಂತ್ಯವು ನಿಶ್ಚಿತಕಾಲದಲ್ಲೇ ಆಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ಅಂತ್ಯಕಾಲದವರೆಗೆ ಬುದ್ಧಿವಂತ ನಾಯಕರಲ್ಲಿ ಕೆಲವರು ಸಾವಿಗೆ ತುತ್ತಾಗುವರು. ಇದರಿಂದ ಜನರು ಶೋಧಿಸಲ್ಪಟ್ಟು, ಶುದ್ಧಿಹೊಂದಿ ಶುಭ್ರರಾಗುವರು. ಅಂತ್ಯವು ಕ್ಲುಪ್ತಕಾಲದಲ್ಲೇ ಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಜ್ಞಾನಿಗಳಲ್ಲಿಯೂ ಕೆಲವರು ಅಂತ್ಯಕಾಲದವರೆಗೆ ಬೀಳುತ್ತಿರುವರು; ಅದರಿಂದ ಜನರು ಶೋಧಿಸಲ್ಪಟ್ಟು ಶುದ್ಧಹೊಂದಿ ಶುಭ್ರರಾಗುವರು; ಅಂತ್ಯವು ಕ್ಲುಪ್ತಕಾಲದಲ್ಲೇ ಆಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಜ್ಞಾನಿಗಳಾದ ಕೆಲವು ಯೆಹೂದ್ಯರು ತಪ್ಪುಗಳನ್ನು ಮಾಡಿ ಬಿದ್ದುಹೋಗುವರು. ಆದರೆ ಹಿಂಸೆ ನಡೆಯಬೇಕು. ಏಕೆಂದರೆ ಅಂತ್ಯಕಾಲ ಬರುವವರೆಗೆ ಅವರು ದೃಢಚಿತ್ತರೂ ಶುದ್ಧರೂ ನಿಷ್ಕಳಂಕರೂ ಆಗಬೇಕು. ಸರಿಯಾದ ಸಮಯಕ್ಕೆ ಅಂತ್ಯಕಾಲ ಬರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 11:35
34 ತಿಳಿವುಗಳ ಹೋಲಿಕೆ  

ಈ ಮೂರನೆಯ ಪಾಲನ್ನು ನಾನು ಬೆಂಕಿಯಲ್ಲಿ ಹಾಕಿ, ಬೆಳ್ಳಿಯನ್ನು ಶುದ್ಧ ಮಾಡುವಂತೆ ಶುದ್ಧಮಾಡುವೆನು. ಬಂಗಾರವನ್ನು ಶೋಧಿಸುವ ಪ್ರಕಾರ ಅವರನ್ನು ಶೋಧಿಸುವೆನು. ಅವರು ನನ್ನ ಹೆಸರನ್ನು ಕರೆಯುವರು. ನಾನು ಅವರಿಗೆ ಉತ್ತರಕೊಡುವೆನು. ನಾನು, ‘ಇವರು ನನ್ನ ಜನರೆಂದು ಹೇಳುವೆನು,’ ‘ಯೆಹೋವ ದೇವರು ನಮ್ಮ ದೇವರು’ ಎಂದು ಅವರು ಹೇಳುವರು,” ಎಂದು ಹೇಳುತ್ತೇನೆ.


ಅದಕ್ಕೆ ನಾನು, “ನನ್ನ ಒಡೆಯನೆ ನೀನೇ ಬಲ್ಲೆ!” ಎಂದು ಉತ್ತರಿಸಿದೆನು. ಅವನು ನನಗೆ, “ಇವರು ಆ ಮಹಾಸಂಕಟದಿಂದ ಹೊರಬಂದವರು. ಇವರು ತಮ್ಮ ನಿಲುವಂಗಿಗಳನ್ನು ಕುರಿಮರಿ ಆಗಿರುವವರ ರಕ್ತದಲ್ಲಿ ಅವುಗಳನ್ನು ಬೆಳ್ಳಗೆ ಮಾಡಿಕೊಂಡಿದ್ದಾರೆ!”


ನಿನಗೆ ಸಂಭವಿಸುವುದಕ್ಕಿರುವ ಬಾಧೆಗಳಿಗೆ ಭಯಪಡಬೇಡ. ಇಗೋ, ನಿಮ್ಮನ್ನು ಪರೀಕ್ಷಿಸಲು, ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವುದಕ್ಕೆ ಇದ್ದಾನೆ. ಹತ್ತು ದಿವಸಗಳ ತನಕ ನಿಮಗೆ ಸಂಕಟವಿರುವುದು. ನೀನು ಸಾಯುವವರೆಗೆ ನಂಬಿಗಸ್ತನಾಗಿರು. ನಾನು ನಿನಗೆ ಜೀವದ ಕಿರೀಟವನ್ನು ಕೊಡುವೆನು.


ಸೋಸುವುದಕ್ಕೆ ಬೆಳ್ಳಿಗೆ ಕುಲುಮೆ ಪುಟ, ಬಂಗಾರಕ್ಕೆ ಆವಿಗೆ; ಆದರೆ ಯೆಹೋವ ದೇವರು ಹೃದಯಗಳನ್ನು ಪರಿಶೋಧಿಸುತ್ತಾರೆ.


ನನ್ನ ಪ್ರಿಯರೇ, ನಿಮ್ಮ ನಂಬಿಕೆಯು ವಿವಿಧ ಕಷ್ಟಗಳಿಗೆ ಗುರಿಯಾಗುವಾಗ ಅವುಗಳನ್ನು ಸಂತೋಷದಿಂದ ಎಣಿಸಿಕೊಳ್ಳಿರಿ.


ಅಂತ್ಯಕಾಲದಲ್ಲಿ ದಕ್ಷಿಣದ ಅರಸನು ಅವನ ಮೇಲೆ ಬೀಳುವನು; ಉತ್ತರದ ಅರಸನು ರಥಗಳೊಂದಿಗೂ, ಸವಾರರೊಂದಿಗೂ, ಅನೇಕ ಹಡಗುಗಳೊಂದಿಗೂ ಸುಳಿಗಾಳಿಯಂತೆ ಅವನಿಗೆ ವಿರೋಧವಾಗಿ ದೇಶಗಳನ್ನು ಪ್ರವೇಶಿಸಿ ಪ್ರಳಯದಂತೆ ಹಾದುಹೋಗುವನು.


ಅದು ಆಕಾಶದ ಸೈನ್ಯದ ಎತ್ತರಕ್ಕೂ ಬೆಳೆದು, ಆ ಸೈನ್ಯದಲ್ಲಿಯೂ, ನಕ್ಷತ್ರಗಳಲ್ಲಿಯೂ ಕೆಲವನ್ನು ನೆಲಕ್ಕೆ ತಳ್ಳಿ, ಅವುಗಳನ್ನು ತುಳಿದು ಹಾಕಿತು.


ನಿಮ್ಮನ್ನು ದೀನತ್ವಕೆ ಒಳಪಡಿಸಿ, ಪರೀಕ್ಷಿಸಿದ ನಂತರ, ಕಡೆಯಲ್ಲಿ ನಿಮಗೆ ಒಳ್ಳೆಯದನ್ನು ಮಾಡುವಂತೆ ನಿಮ್ಮ ಪಿತೃಗಳು ಅರಿಯದ ಮನ್ನವನ್ನು ಮರುಭೂಮಿಯಲ್ಲಿ ನಿಮಗೆ ಪೋಷಿಸಿದರು.


ಏಕೆಂದರೆ, ದೇವರು ತಮ್ಮ ಮನಸ್ಸಿನಲ್ಲಿರುವುದನ್ನು ನಡೆಸುವಂತೆಯೂ ಅವುಗಳ ರಾಜ್ಯವನ್ನು ಮೃಗಕ್ಕೆ ಕೊಡಲು ಒಮ್ಮನಸ್ಸಾಗಿರುವಂತೆಯೂ ಮಾಡಿ, ದೇವರು ತಮ್ಮ ವಾಕ್ಯವನ್ನು ನೆರವೇರಿಸುವುದಕ್ಕಾಗಿ ಇದನ್ನು ಅವುಗಳ ಹೃದಯದಲ್ಲಿಟ್ಟಿದ್ದಾರೆ.


ಆಗ ಮತ್ತೊಬ್ಬ ದೂತನು ದೇವಾಲಯದೊಳಗಿಂದ ಬಂದು ಮೇಘದ ಮೇಲೆ ಕುಳಿತಿದ್ದವರಿಗೆ, “ಭೂಮಿಯ ಪೈರು ಮಾಗಿದೆ. ಕೊಯ್ಯುವ ಕಾಲ ಬಂದಿರುವುದರಿಂದ, ನಿನ್ನ ಕುಡುಗೋಲನ್ನು ಹಾಕಿ ಕೊಯ್ಯಿ!” ಎಂದು ಮಹಾಧ್ವನಿಯಿಂದ ಕೂಗಿದನು.


ಉಳಿದ ಶಿಷ್ಯರು ಅವನಿಗೆ, “ನಾವು ಕರ್ತನನ್ನು ಕಂಡಿದ್ದೇವೆ,” ಎಂದು ಹೇಳಿದರು. ಆದರೆ ಅವನು ಅವರಿಗೆ, “ನಾನು ಅವರ ಕೈಗಳಲ್ಲಿ ಮೊಳೆಗಳ ಗುರುತನ್ನು ಕಂಡು, ಅದರಲ್ಲಿ ನನ್ನ ಬೆರಳನ್ನು ಇಟ್ಟು ಅವರ ಪಕ್ಕೆಯಲ್ಲಿ ನನ್ನ ಕೈಯನ್ನು ಹಾಕಿದ ಹೊರತು ನಂಬುವುದೇ ಇಲ್ಲ,” ಎಂದು ಹೇಳಿದನು.


ನನ್ನಲ್ಲಿದ್ದು ಫಲವನ್ನು ಕೊಡದ ಪ್ರತಿಯೊಂದು ಕವಲುಬಳ್ಳಿಯನ್ನು ತಂದೆ ಮೇಲಕ್ಕೆ ಎತ್ತಿಡುವರು. ಆದರೆ ಫಲಕೊಡುವ ಪ್ರತಿಯೊಂದು ಕವಲುಬಳ್ಳಿಯು ಹೆಚ್ಚು ಫಲಕೊಡುವಂತೆ ಅದನ್ನು ಕತ್ತರಿಸಿ ಶುದ್ಧ ಮಾಡುತ್ತಾರೆ.


ಆದರೆ ಪವಿತ್ರ ವೇದದ ಪ್ರವಾದನೆಗಳು ನೆರವೇರುವಂತೆ ಇದೆಲ್ಲಾ ಆಯಿತು,” ಎಂದು ಹೇಳಿದರು. ಆಗ ಶಿಷ್ಯರೆಲ್ಲರೂ ಯೇಸುವನ್ನು ಬಿಟ್ಟು ಓಡಿಹೋದರು.


ಯೇಸು ಅವನಿಗೆ, “ಯೋನನ ಮಗ ಸೀಮೋನನೇ, ನೀನು ಧನ್ಯನು. ಏಕೆಂದರೆ ಇದನ್ನು ಪ್ರಕಟಿಸಿದ್ದು ಮಾನವರಲ್ಲ. ಪರಲೋಕದಲ್ಲಿರುವ ನನ್ನ ತಂದೆಯೇ ಇದನ್ನು ನಿನಗೆ ಪ್ರಕಟಿಸಿದರು.


ಆದರೆ ದಾನಿಯೇಲನೇ ನೀನು, ಅಂತ್ಯಕಾಲದವರೆಗೂ ಈ ಮಾತುಗಳನ್ನು ಮುಚ್ಚಿಡು; ಅವುಗಳನ್ನು ಬರೆದಿರುವ ಆ ಗ್ರಂಥಕ್ಕೆ ಮುದ್ರೆ ಹಾಕು. ಅನೇಕರು ಅತ್ತಿತ್ತ ಓಡಾಡುವರು, ಜ್ಞಾನವು ಹೆಚ್ಚಾಗುವುದು,” ಎಂದು ಹೇಳಿದನು.


ಜನರಲ್ಲಿ ಬುದ್ಧಿವಂತರಾದವರು ಅನೇಕರಿಗೆ ಬೋಧಿಸುವರು, ಆದರೂ ಖಡ್ಗದಿಂದಲೂ ಬೆಂಕಿಯಿಂದಲೂ ಸೆರೆಯಿಂದಲೂ ಕೊಳ್ಳೆಯಿಂದಲೂ ಕೆಲಕಾಲ ಸಿಕ್ಕಿ ಬೀಳುವರು.


ನೇಮಕವಾದ ಕಾಲದಲ್ಲಿಯೇ ಅವನು ಹಿಂದಿರುಗಿ ದಕ್ಷಿಣಕ್ಕೆ ಬರುವನು, ಆದರೆ ಮೊದಲು ಆದಂತೆ ಎರಡನೆಯ ಸಾರಿ ಆಗುವುದಿಲ್ಲ.


ಈ ಇಬ್ಬರ ಅರಸನ ಹೃದಯಗಳು ಕೇಡನ್ನು ಮಾಡುವಂತವುಗಳಾಗಿರುವುವು. ಒಂದೇ ಮೇಜಿನಲ್ಲಿ ಕುಳಿತು ಒಬ್ಬರಿಗೊಬ್ಬರು ಸುಳ್ಳು ಹೇಳುವರು. ಆದರೆ ಅದು ಅನುಕೂಲವಾಗದು. ಏಕೆಂದರೆ ಅದು ಹೇಗಾದರೂ ನಿಶ್ಚಿತ ಕಾಲದಲ್ಲಿಯೇ ಅಂತ್ಯವಾಗುವುದು.


ಅವನು ಒಂದು ವಾರಕ್ಕಾಗಿ ಬಹಳ ಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು. ವಾರದ ಅರ್ಧದಲ್ಲಿ ಯಜ್ಞವನ್ನೂ, ಅರ್ಪಣೆಯನ್ನೂ ನಿಲ್ಲಿಸುವನು. ದೇವಾಲಯದಲ್ಲಿ ಹಾಳುಮಾಡುವ ಅಸಹ್ಯ ವಸ್ತುವನ್ನು ಅವನು ಸ್ಥಾಪಿಸುವನು. ಇದು ಅವನ ಮೇಲೆ ನಿರ್ಣಯವಾದದ್ದು, ಸುರಿಯುವ ತನಕ ಇರುವುದು,” ಎಂದು ಹೇಳಿದನು.


ಅವನು, “ದೇವರು ತನ್ನ ಕೋಪವನ್ನು ತೀರಿಸುವ ಮುಂದಿನ ಕಾಲದಲ್ಲಿ ನಡೆಯತಕ್ಕದ್ದನ್ನು ನಿನಗೆ ತಿಳಿಸುತ್ತೇನೆ ಕೇಳು, ಆ ದರ್ಶನವು ನಿಯಮಿತ ಅಂತ್ಯಕಾಲಕ್ಕೆ ಸಂಬಂಧಪಟ್ಟದ್ದು.


ಅದರಂತೆ ಅವನು ನನ್ನ ಬಳಿಗೆ ಬಂದನು. ಅವನು ಬಂದಾಗ ನಾನು ಭಯಪಟ್ಟು ಮುಖ ಕೆಳಗಾಗಿ ಬಿದ್ದೆನು. ಆದರೆ ಅವನು ನನಗೆ, “ಮನುಷ್ಯಪುತ್ರನೇ, ಅಂತ್ಯಕಾಲದಲ್ಲಿ ನೆರವೇರುವ ದರ್ಶನವು ಎಂಬುದು ನಿನಗೆ ಮನದಟ್ಟಾಗಿರಲಿ,” ಎಂದನು.


ಆದರೆ ದೇಶದಲ್ಲಿ ಅದ್ಭುತಕ್ಕೋಸ್ಕರ ವಿಚಾರಣೆ ಮಾಡಲು ಬಾಬಿಲೋನಿನ ಅಧಿಪತಿಗಳಿಂದ ತನ್ನ ಬಳಿಗೆ ಕಳುಹಿಸಲಾದ ರಾಯಭಾರಿಗಳ ಕಾರ್ಯದಲ್ಲಿ ಅವನು ತನ್ನ ಹೃದಯದಲ್ಲಿ ಇರುವ ಪ್ರತಿಯೊಂದನ್ನೂ ತಿಳಿದುಕೊಳ್ಳುವದಕ್ಕಾಗಿಯೂ ಪರಿಶೋಧಿಸುವುದಕ್ಕಾಗಿಯೂ ದೇವರು ಅವನನ್ನು ಕೈಬಿಟ್ಟರು.


ಪಾಫೋಸಿನಿಂದ, ಪೌಲ ಮತ್ತು ಅವನ ಸಂಗಡಿಗರು ಪಂಫುಲ್ಯಕ್ಕೆ ಸೇರಿದ ಪೆರ್ಗೆ ಎಂಬಲ್ಲಿಗೆ ನೌಕೆಯಲ್ಲಿ ಪ್ರಯಾಣಮಾಡಿದರು, ಅಲ್ಲಿ ಯೋಹಾನನು ಅವರನ್ನು ಬಿಟ್ಟು ಯೆರೂಸಲೇಮಿಗೆ ಹಿಂತಿರುಗಿ ಹೋದನು.


ಏಕೆಂದರೆ ಪ್ರಕಟನೆಯು ಇನ್ನೂ ನೇಮಕವಾದ ಕಾಲಕ್ಕಾಗಿ ಎದುರು ನೋಡುವುದು. ಅದು ಅಂತ್ಯದ ಬಗ್ಗೆ ಮಾತಾಡುವುದು. ಅದು ಸುಳ್ಳಾಗದು. ಅದು ತಡವಾದರೂ, ಅದಕ್ಕೆ ಕಾದುಕೊಂಡಿರು. ಏಕೆಂದರೆ ಅದು ತಡಮಾಡದೆ ನಿಶ್ಚಯವಾಗಿ ಬರುವುದು.


ಹೀಗಿರುವದರಿಂದ ಯಾಕೋಬನು ಬಲಿಪೀಠಗಳ ಕಲ್ಲುಗಳನ್ನೆಲ್ಲಾ ಸುಣ್ಣದಂತೆ ಪುಡಿಪುಡಿಮಾಡಿ, ಅಶೇರ ಸ್ತಂಭಗಳನ್ನೂ ಧೂಪವೇದಿಗಳನ್ನೂ ಇನ್ನು ಪ್ರತಿಷ್ಠಾಪಿಸದೆ ಹೋದರೆ ಅದೇ ಯಾಕೋಬನ ಅಪರಾಧಕ್ಕೆ ಪ್ರಾಯಶ್ಚಿತ್ತವಾಗುವುದು ಮತ್ತು ಅವನ ಪಾಪಪರಿಹಾರವನ್ನು ಸೂಚಿಸುವ ಪೂರ್ಣಫಲವು ಇದೇ ಆಗಿದೆ.


ಜ್ಞಾನಿಗಳಾದವರು ಆಕಾಶದ ಕಾಂತಿಯ ಹಾಗೆಯೂ, ಅನೇಕರನ್ನು ನೀತಿಯ ಕಡೆಗೆ ತಿರುಗಿಸುವರು, ನಕ್ಷತ್ರಗಳ ಹಾಗೆ ಎಂದೆಂದಿಗೂ ಪ್ರಕಾಶಿಸುವರು, ನಿತ್ಯ ಅವಮಾನವನ್ನು ಅನುಭವಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು