Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 11:44 - ಕನ್ನಡ ಸಮಕಾಲಿಕ ಅನುವಾದ

44 ಆದರೆ ಪೂರ್ವದಿಂದಲೂ, ಉತ್ತರದಿಂದಲೂ ಬರುವ ಸುದ್ದಿಗಳು ಅವನನ್ನು ಹೆದರಿಸುವುವು. ಆದ್ದರಿಂದ ಅವನು ಮಹಾ ಉಗ್ರವಾಗಿ ಅನೇಕರನ್ನು ಸಂಹರಿಸುವುದಕ್ಕೂ, ನಿರ್ಮೂಲ ಮಾಡುವುದಕ್ಕೂ ಹೊರಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

44 ಹೀಗಿರಲು ಪೂರ್ವದಿಂದಲೂ, ಉತ್ತರದಿಂದಲೂ ಬರುವ ಸುದ್ದಿಯು ಅವನನ್ನು ಬಾಧಿಸುವುದು ಅವನು ಅತಿ ರೋಷಗೊಂಡು ಬಹಳ ಜನರನ್ನು ಧ್ವಂಸ ಮಾಡಿ, ನಿರ್ನಾಮ ಮಾಡುವುದಕ್ಕೆ ಹೊರಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

44 ಹೀಗಿರಲು ಪೂರ್ವದಿಂದ ಮತ್ತು ಉತ್ತರದಿಂದ ಬರುವ ಸುದ್ದಿ ಅವನನ್ನು ಬಾಧಿಸುವುದು. ಅವನು ಅತಿರೋಷಗೊಂಡು ಬಹುಜನರನ್ನು ಧ್ವಂಸಿಸಿ ನಿರ್ನಾಮಮಾಡಲು ಹೊರಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

44 ಹೀಗಿರಲು ಮೂಡಲಿಂದಲೂ ಬಡಗಲಿಂದಲೂ ಬರುವ ಸುದ್ದಿಯು ಅವನನ್ನು ಬಾಧಿಸುವದು; ಅವನು ಅತಿರೋಷಗೊಂಡು ಬಹು ಜನರನ್ನು ಧ್ವಂಸಿಸಿ ನಿರ್ನಾಮ ಮಾಡುವದಕ್ಕೆ ಹೊರಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

44 ಹೀಗಿರಲು ಉತ್ತರದ ರಾಜನು ಪೂರ್ವದಿಕ್ಕಿನಿಂದ ಮತ್ತು ಉತ್ತರದಿಕ್ಕಿನಿಂದ ಬರುವ ಸಮಾಚಾರಗಳನ್ನು ಕೇಳಿ ಭಯಪಡುವನು ಮತ್ತು ರೊಚ್ಚಿಗೇಳುವನು. ಹಲವಾರು ದೇಶಗಳನ್ನು ಸಂಪೂರ್ಣವಾಗಿ ನಾಶಮಾಡಲು ಅವನು ಹೋಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 11:44
8 ತಿಳಿವುಗಳ ಹೋಲಿಕೆ  

ಅವರು ಏಕ ಮನಸ್ಸುಳ್ಳವರಾಗಿ, ಮೃಗಕ್ಕೆ ತಮ್ಮ ಬಲ ಮತ್ತು ಅಧಿಕಾರವನ್ನು ಕೊಡುವರು.


ಆರನೆಯ ದೂತನು ತನ್ನ ಬೋಗುಣಿಯೊಳಗಿರುವುದನ್ನು ಯೂಫ್ರೇಟೀಸ್ ಮಹಾನದಿಯ ಮೇಲೆ ಸುರಿಯಲು, ಪೂರ್ವದಿಕ್ಕಿನಿಂದ ಬರುವ ರಾಜರಿಗೆ ಮಾರ್ಗ ಸಿದ್ಧವಾಗುವಂತೆ ಅದರ ನೀರು ಬತ್ತಿಹೋಯಿತು.


ಏಕೆಂದರೆ ಕಿತ್ತೀಮಿನ ಹಡಗುಗಳು ಅವನಿಗೆ ವಿರೋಧವಾಗಿ ಬರುವುವು. ಆದ್ದರಿಂದ ಅವನು ಎದೆಗುಂದಿ, ಪರಿಶುದ್ಧ ಒಡಂಬಡಿಕೆಗೆ ವಿರೋಧವಾಗಿ ಕೋಪಿಸಿಕೊಳ್ಳುವನು. ಹಿಂದಿರುಗಿ ಬಂದು ಪರಿಶುದ್ಧ ಒಡಂಬಡಿಕೆಯನ್ನು ತೊರೆದವರಿಗೆ ದಯೆ ತೋರಿಸುವನು.


ಆಗ ದಕ್ಷಿಣದ ಅರಸನು ಕೋಪಿಸಿಕೊಂಡು ಹೊರಟು ಮಹಾ ಸೈನ್ಯವನ್ನು ಕೂಡಿಸಿದನು. ಉತ್ತರದ ಅರಸನ ಸಂಗಡ ಯುದ್ಧಮಾಡುವನು. ಆದರೆ ಆ ಮಹಾ ಸೈನ್ಯವು ದಕ್ಷಿಣ ಅರಸನ ಕೈವಶವಾಗುವುದು.


ಬಂಗಾರ ಬೆಳ್ಳಿ ಬೊಕ್ಕಸಗಳ ಮೇಲೆಯೂ, ಈಜಿಪ್ಟಿನ ಎಲ್ಲಾ ಅಮೂಲ್ಯ ವಸ್ತುಗಳ ಮೇಲೆಯೂ ಅವನಿಗೆ ಅಧಿಕಾರವಿರುವುದು. ಲಿಬಿಯದವರೂ ಕೂಷ್ಯರೂ ಅವನಿಗೆ ಅಧೀನರಾಗುವರು.


ಅವನು ತನ್ನ ರಾಜ ಗುಡಾರಗಳನ್ನು ಸಮುದ್ರದ ನಡುವೆ ರಮ್ಯವಾದ ಪರಿಶುದ್ಧ ಪರ್ವತದಲ್ಲಿ ಹಾಕುವನು. ಆದರೂ ಅವನು ಕೊನೆಗಾಣುವನು. ಯಾರೂ ಅವನಿಗೆ ಸಹಾಯ ಮಾಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು