Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 11:45 - ಕನ್ನಡ ಸಮಕಾಲಿಕ ಅನುವಾದ

45 ಅವನು ತನ್ನ ರಾಜ ಗುಡಾರಗಳನ್ನು ಸಮುದ್ರದ ನಡುವೆ ರಮ್ಯವಾದ ಪರಿಶುದ್ಧ ಪರ್ವತದಲ್ಲಿ ಹಾಕುವನು. ಆದರೂ ಅವನು ಕೊನೆಗಾಣುವನು. ಯಾರೂ ಅವನಿಗೆ ಸಹಾಯ ಮಾಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

45 ಸಮುದ್ರಕ್ಕೂ, ಅಂದ ಚಂದದ ಪರಿಶುದ್ಧ ಪರ್ವತಕ್ಕೂ ನಡುವೆ ಅರಮನೆಯಂಥ ತನ್ನ ಗುಡಾರಗಳನ್ನು ಹಾಕಿಸುವನು. ಆಹಾ, ಅವನು ಕೊನೆಗಾಣುವನು, ಯಾರೂ ಅವನಿಗೆ ಸಹಾಯ ಮಾಡರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

45 ಕಡಲಿಗೂ ಚೆಲುವಿನ ಪರಿಶುದ್ಧ ಪರ್ವತಕ್ಕೂ ನಡುವೆ ಅರಮನೆಯಂಥ ಗುಡಾರವನ್ನು ಹಾಕಿಸುವನು. ಆದರೂ ಸಹಾಯಕ್ಕೆ ಯಾರೂ ಇಲ್ಲದವನಾಗಿ ಸಾಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

45 ಸಮುದ್ರಕ್ಕೂ ಅಂದಚಂದದ ಪರಿಶುದ್ಧಪರ್ವತಕ್ಕೂ ನಡುವೆ ಅರಮನೆಯಂಥ ತನ್ನ ಗುಡಾರಗಳನ್ನು ಹಾಕಿಸುವನು; ಆಹಾ, ಅವನು ಕೊನೆಗಾಣುವನು, ಯಾರೂ ಅವನಿಗೆ ಸಹಾಯಮಾಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

45 ಸಮುದ್ರಕ್ಕೂ ಸುಂದರವಾದ ಪರಿಶುದ್ಧ ಪರ್ವತಕ್ಕೂ ನಡುವೆ, ಅರಮನೆಯಂತಹ ತನ್ನ ಗುಡಾರಗಳನ್ನು ಹಾಕಿಸುವನು. ಕೊನೆಗೆ ಆ ಕೆಟ್ಟ ಅರಸನು ಸತ್ತುಹೋಗುವನು. ಅವನ ಅಂತ್ಯಕಾಲದ ಹೊತ್ತಿಗೆ ಅವನಿಗೆ ಸಹಾಯ ಮಾಡಲು ಯಾರೂ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 11:45
29 ತಿಳಿವುಗಳ ಹೋಲಿಕೆ  

ದೇವರೆಣಿಸಿಕೊಳ್ಳುವ ಎಲ್ಲವನ್ನೂ ಆರಾಧಿಸಲಾಗುವ ಪ್ರತಿಯೊಂದನ್ನೂ ಅವನು ವಿರೋಧಿಸಿ ನಿಲ್ಲುವನು. ದೇವರಿಗೆ ಸಂಬಂಧಿಸಿದ ಇವೆಲ್ಲವುಗಳ ಮೇಲೆ ತನ್ನನ್ನು ಹೆಚ್ಚಿಸಿಕೊಳ್ಳುವನು. ತಾನೇ ದೇವರೆಂದು ಘೋಷಿಸಿ ದೇವರ ಆಲಯದಲ್ಲಿ ಕೂತುಕೊಳ್ಳುವನು.


ಅವನು ತನ್ನ ಶಕ್ತಿಯಿಂದಲೇ ತನ್ನ ಕಪಟತನವನ್ನು ಸಿದ್ಧಿಗೆ ತರುವನು. ಅವನು ಹೃದಯದಲ್ಲಿ ತನ್ನನ್ನು ತಾನೇ ಹೆಚ್ಚಿಸಿಕೊಂಡು ಸುರಕ್ಷಿತರಾಗಿದ್ದೇವೆಂದು ಹೇಳುವಾಗಲೇ ಅನೇಕರನ್ನು ನಾಶಮಾಡುವನು. ಅಲ್ಲದೆ ಅವನು ರಾಜಕುಮಾರರ ರಾಜಕುಮಾರನಿಗೆ ವಿರುದ್ಧವಾಗಿ ನಿಲ್ಲುವನು. ಆದರೂ ಮಾನವ ಶಕ್ತಿಯ ಬಳಕೆ ಇಲ್ಲದೆಯೂ ನಾಶವಾಗುವನು.


ಅವರು ದೇಶದಲ್ಲೆಲ್ಲಾ ಹರಡಿಕೊಂಡು ಪರಿಶುದ್ಧರ ದಂಡಿಗೂ ಆ ಪ್ರಿಯಪಟ್ಟಣಕ್ಕೂ ಮುತ್ತಿಗೆ ಹಾಕಿದರು. ಆಗ ಪರಲೋಕದಿಂದ ಬೆಂಕಿ ಬಿದ್ದು ಅವರನ್ನು ದಹಿಸಿಬಿಟ್ಟಿತು.


ಅವನು ಪಿಶಾಚನೂ ಸೈತಾನನೂ ಆಗಿರುವ ಪುರಾತನ ಸರ್ಪನೆಂಬ ಘಟಸರ್ಪನನ್ನು ಹಿಡಿದು ಸಾವಿರ ವರ್ಷ ಬಂಧನದಲ್ಲಿಟ್ಟನು.


“ಸೆರೆಹಿಡಿಯುವವನು ತಾನೇ ಸೆರೆಯಾಗಿ ಹೋಗುವನು. ಕತ್ತಿಯಿಂದ ಕೊಲ್ಲುವವನು ಕತ್ತಿಯಿಂದಲೇ ಕೊಲೆಯಾಗುವನು.” ಇದರಲ್ಲಿ ದೇವಜನರ ಸೈರಣೆಯೂ ನಂಬಿಕೆಯೂ ಇವೆ.


ಆಗ ಆ ನಿಯಮ ಮೀರುವವನು ಪ್ರತ್ಯಕ್ಷನಾಗುವನು. ಅವನನ್ನು ಕರ್ತ ಯೇಸು ತಮ್ಮ ಬಾಯಿಯ ಶ್ವಾಸದಿಂದ ಕೆಡವಿ, ತಮ್ಮ ಪ್ರತ್ಯಕ್ಷತೆಯ ಮಹಿಮೆಯಿಂದ ನಾಶಮಾಡಿಬಿಡುವರು.


ಆ ದಿವಸದಲ್ಲಿ ಆಗುವುದೇನೆಂದರೆ: ಯೆರೂಸಲೇಮಿನೊಳಗಿಂದ ಜೀವವುಳ್ಳ ಪ್ರವಾಹವು ಹೊರಡುವುದು. ಅದರಲ್ಲಿ ಅರ್ಧಭಾಗವು ಪೂರ್ವದ ಉಪ್ಪು ಸಮುದ್ರಕ್ಕೆ ಮತ್ತು ಅರ್ಧಭಾಗವು ಪಶ್ಚಿಮದ ಮೆಡಿಟರೇನಿಯನ್ ಸಮುದ್ರಕ್ಕೆ ಹರಿಯುತ್ತದೆ. ಅದು ಬೇಸಿಗೆ ಕಾಲದಲ್ಲಿಯೂ, ಚಳಿಗಾಲದಲ್ಲಿಯೂ ಇರುವುದು.


ಅನೇಕ ಜನಾಂಗಗಳು ಬಂದು ಹೀಗೆಂದು ಹೇಳುವರು, “ಬನ್ನಿರಿ, ಯೆಹೋವ ದೇವರ ಪರ್ವತಕ್ಕೂ ಯಾಕೋಬನ ದೇವರ ಆಲಯಕ್ಕೂ ಏರಿಹೋಗೋಣ. ಅವರು ತಮ್ಮ ಮಾರ್ಗಗಳನ್ನು ನಮಗೆ ಬೋಧಿಸುವರು. ನಾವು ಅವರ ದಾರಿಗಳಲ್ಲಿ ನಡೆಯುವೆವು. ಚೀಯೋನಿನಿಂದ ದೇವರ ನಿಯಮವೂ ಯೆರೂಸಲೇಮಿನಿಂದ ದೇವರ ವಾಕ್ಯವೂ ಹೊರಡುವುವು.”


“ಉತ್ತರ ದಿಕ್ಕಿನ ಸೈನ್ಯವನ್ನು ನಿಮ್ಮಿಂದ ದೂರಮಾಡಿ, ಅದನ್ನು ಹಾಳುಬಿದ್ದ ಬಂಜರು ಭೂಮಿಗೂ, ಅದರ ಮುಂಭಾಗವನ್ನು ಪೂರ್ವದ ಉಪ್ಪು ಸಮುದ್ರಕ್ಕೂ ಅದರ ಹಿಂಭಾಗವನ್ನು ಪಶ್ಚಿಮದ ಮೆಡಿಟರೇನಿಯನ್ ಸಮುದ್ರಕ್ಕೂ ಓಡಿಸಿಬಿಡುವೆನು. ಅದರ ದುರ್ವಾಸನೆಯು ಏರುವುದು. ಅದು ಗಬ್ಬು ನಾರುವುದು.” ಏಕೆಂದರೆ, ಆತನು ಮಹಾಕಾರ್ಯಗಳನ್ನು ಮಾಡಿದ್ದಾರೆ.


ಅವನು ರಮ್ಯವಾದ ದೇಶದೊಳಕ್ಕೂ ನುಗ್ಗುವನು; ಅನೇಕ ದೇಶಗಳನ್ನು ನಾಶಮಾಡುವನು; ಆದರೆ ಎದೋಮು, ಮೋವಾಬು ಮತ್ತು ಅಮ್ಮೋನಿಯರಲ್ಲಿ ಮುಖ್ಯಸ್ಥರು ಅವನ ಕೈಯಿಂದ ತಪ್ಪಿಸಿಕೊಳ್ಳುವರು.


ಆದರೆ ಅವನಿಗೆ ಎದುರಾಗಿ ಬರುವವನು ತನ್ನ ಇಷ್ಟದ ಪ್ರಕಾರ ಮಾಡುವನು. ಯಾರೂ ಅವನ ಮುಂದೆ ನಿಲ್ಲಲಾರರು. ಅವನು ರಮ್ಯವಾದ ದೇಶದಲ್ಲಿ ನಿಲ್ಲುವನು. ಅದನ್ನು ನಾಶಮಾಡುವ ಅಧಿಕಾರ ಹೊಂದಿರುವನು.


“ ‘ಆದರೆ ನ್ಯಾಯ ಸಭೆಯು ಕುಳಿತು ಅವನ ಅಧಿಕಾರವನ್ನು ತೆಗೆದುಹಾಕಿ, ಕೊನೆಯವರೆಗೂ ಅದನ್ನು ಸಂಹರಿಸಿ ನಾಶಪಡಿಸುವುದು.


ಆಗ ಕಬ್ಬಿಣವೂ, ಮಣ್ಣೂ, ಕಂಚು, ಬೆಳ್ಳಿಯೂ, ಬಂಗಾರವೂ ಕೂಡ ಒಡೆದು, ಚೂರುಚೂರಾಗಿ, ಬೇಸಿಗೆ ಕಾಲದ ಧಾನ್ಯದ ಹೊಟ್ಟಿನ ಹಾಗಾದವು. ಅವುಗಳಿಗೆ ನೆಲೆ ಸಿಗದೆ, ಗಾಳಿಯು ಅವುಗಳನ್ನು ಹೊಡೆದುಕೊಂಡು ಹೋಯಿತು. ಪ್ರತಿಮೆಯನ್ನು ಬಡಿದ ಕಲ್ಲು, ದೊಡ್ಡ ಬೆಟ್ಟವಾಗಿ ಸಮಸ್ತ ಭೂಮಿಯನ್ನು ತುಂಬಿಸಿತು.


ನಾನು ನಿನಗೆ ವಿರುದ್ಧವಾಗಿ ನಿನ್ನನ್ನು ತಿರುಗಿಸಿ ಮುಂದರಿಸಿ ಉತ್ತರ ದಿಕ್ಕಿನ ಕಟ್ಟಕಡೆಯಿಂದ ಬರಮಾಡಿ ಇಸ್ರಾಯೇಲಿನ ಪರ್ವತಗಳ ಮೇಲೆ ನುಗ್ಗಿಸಿ,


ನೀನು ನಿನ್ನ ಹೃದಯದಲ್ಲಿ ಹೀಗೆ ಎಂದುಕೊಂಡಿಯಲ್ಲಾ, “ನಾನು ಆಕಾಶಕ್ಕೆ ಏರಿ, ದೇವರ ನಕ್ಷತ್ರಗಳ ಮೇಲೆ ನನ್ನ ಸಿಂಹಾಸನವನ್ನು ಘನತೆಗೇರಿಸುವೆನು. ಉತ್ತರ ದಿಕ್ಕಿನ ಕಡೆಗಿರುವ ಜಫೋನ್ ಪರ್ವತದ ಮೇಲೆಯೂ ನಾನು ಆಸೀನನಾಗುವೆನು.


ಆ ಅಂತ್ಯಕಾಲದಲ್ಲಿ, ಯೆಹೋವ ದೇವರ ಮಂದಿರದ ಪರ್ವತವು ಎಲ್ಲಾ ಗುಡ್ಡಬೆಟ್ಟಗಳಿಗಿಂತ ಉನ್ನತೋನ್ನತವಾಗಿ ಬೆಳೆದು ನೆಲೆಗೊಳ್ಳುವುದು. ಆಗ ಎಲ್ಲಾ ಜನಾಂಗಗಳು ಅದರ ಬಳಿಗೆ ಪ್ರವಾಹದಂತೆ ಬರುವವು.


ಉತ್ತರ ದಿಕ್ಕಿನಲ್ಲಿರುವ ಮಹಾರಾಜರ ಪಟ್ಟಣವಾದ ಚೀಯೋನ್ ಪರ್ವತವು ಸುಂದರವಾಗಿ ಚಾಪೋನಿನ ಶಿಖರದಂತೆ ಇಡೀ ಭೂಮಿಗೆ ಸಂತೋಷಕರವಾದದ್ದಾಗಿದೆ.


ನನ್ನ ಪರಿಶುದ್ಧ ಪರ್ವತದಲ್ಲಿ ಯಾರೂ ಕೇಡುಮಾಡುವುದಿಲ್ಲ, ಯಾರೂ ಹಾಳುಮಾಡುವುದಿಲ್ಲ. ಏಕೆಂದರೆ ಸಮುದ್ರವು ನೀರಿನಿಂದ ತುಂಬಿಕೊಂಡಿರುವಂತೆ, ಯೆಹೋವ ದೇವರ ತಿಳುವಳಿಕೆಯು ಭೂಮಿಯಲ್ಲಿ ತುಂಬಿಕೊಂಡಿರುವುದು.


ಆ ದಿನದಲ್ಲಿ ದೊಡ್ಡ ತುತೂರಿಯು ಊದಲಾಗುವುದು. ಆಗ ಅಸ್ಸೀರಿಯ ದೇಶದಲ್ಲಿ ಚದರಿಹೋದವರೂ, ಈಜಿಪ್ಟ್ ದೇಶದಲ್ಲಿ ಗಡೀಪಾರಾದವರೂ, ಯೆರೂಸಲೇಮಿನ ಪರಿಶುದ್ಧ ಪರ್ವತದ ಬಳಿಗೆ ಬಂದು ಯೆಹೋವ ದೇವರನ್ನು ಆರಾಧಿಸುವರು.


ತೋಳವೂ ಕುರಿಮರಿಯೂ ಒಂದಾಗಿ ಮೇಯುವುವು; ಸಿಂಹವು ಎತ್ತಿನ ಹಾಗೆ ಹುಲ್ಲು ತಿನ್ನುವುದು; ಹಾವಿಗೆ ಮಣ್ಣೇ ಆಹಾರವಾಗುವುದು; ಅವು ನನ್ನ ಪರಿಶುದ್ಧ ಪರ್ವತದಲ್ಲೆಲ್ಲಾ ಯಾವ ಕೇಡೂ ಮಾಡುವುದಿಲ್ಲ, ನಾಶವೂ ಮಾಡುವುದಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ.


ಅವರು ನಿಮ್ಮ ಸಹೋದರರನ್ನು ಕುದುರೆಗಳ ಮೇಲೆಯೂ ರಥಗಳಲ್ಲಿಯೂ ಪಲ್ಲಕ್ಕಿಗಳಲ್ಲಿಯೂ ಹೇಸರಗತ್ತೆಗಳ ಮೇಲೆಯೂ ಒಂಟೆಗಳ ಮೇಲೆಯೂ ಸಮಸ್ತ ಜನಾಂಗಗಳೊಳಗಿಂದ ಯೆಹೋವ ದೇವರಿಗೆ ಕಾಣಿಕೆಯಾಗಿ ಇಸ್ರಾಯೇಲರು ಕಾಣಿಕೆಯನ್ನು ಶುದ್ಧಪಾತ್ರೆಯಲ್ಲಿ ಯೆಹೋವ ದೇವರು ಮನೆಗೆ ತರುವ ಪ್ರಕಾರ ನನ್ನ ಪರಿಶುದ್ಧ ಪರ್ವತವಾದ ಯೆರೂಸಲೇಮಿಗೆ ತರುವರೆಂದು ಯೆಹೋವ ದೇವರು ಹೇಳುತ್ತಾರೆ.


ಕರ್ತದೇವರೇ, ನಿಮ್ಮ ಎಲ್ಲಾ ನೀತಿಗಳ ಪ್ರಕಾರ ನಿಮ್ಮ ಕೋಪವನ್ನು, ನಿಮ್ಮ ಉಗ್ರತ್ವವನ್ನು ನಿಮ್ಮ ಪಟ್ಟಣವಾದ ಯೆರೂಸಲೇಮಿನಿಂದಲೂ ನಿಮ್ಮ ಪರಿಶುದ್ಧ ಪರ್ವತದಿಂದಲೂ ತಿರುಗಿಸಿಬಿಡಿರಿ. ನಮ್ಮ ಪಾಪಗಳ ನಿಮಿತ್ತದಿಂದಲೂ, ನಮ್ಮ ಪಿತೃಗಳ ಅಕ್ರಮಗಳ ನಿಮಿತ್ತದಿಂದಲೂ ಯೆರೂಸಲೇಮ್ ಮತ್ತು ನಿಮ್ಮ ಜನರು ನೆರೆಹೊರೆಯವರೆಲ್ಲರ ನಿಂದೆಗೆ ಗುರಿಯಾಗಿವೆ.


ನಾನು ಮಾತಾಡುತ್ತಾ, ಪ್ರಾರ್ಥನೆ ಮಾಡುತ್ತಾ ನನ್ನ ಪಾಪವನ್ನೂ, ನನ್ನ ಜನರಾದ ಇಸ್ರಾಯೇಲರ ಪಾಪವನ್ನೂ ಅರಿಕೆಮಾಡುತ್ತಾ, ನನ್ನ ದೇವರಾದ ಯೆಹೋವ ದೇವರ ಮುಂದೆ ಅವರ ಪರಿಶುದ್ಧ ಪರ್ವತಕ್ಕೋಸ್ಕರವಾಗಿ, ವಿಜ್ಞಾಪಿಸುತ್ತಿರಲಾಗಿ,


ಆದರೆ ಪೂರ್ವದಿಂದಲೂ, ಉತ್ತರದಿಂದಲೂ ಬರುವ ಸುದ್ದಿಗಳು ಅವನನ್ನು ಹೆದರಿಸುವುವು. ಆದ್ದರಿಂದ ಅವನು ಮಹಾ ಉಗ್ರವಾಗಿ ಅನೇಕರನ್ನು ಸಂಹರಿಸುವುದಕ್ಕೂ, ನಿರ್ಮೂಲ ಮಾಡುವುದಕ್ಕೂ ಹೊರಡುವನು.


ಅಚ್ಮೋನಿನಿಂದ ಈಜಿಪ್ಟಿನ ಹಳ್ಳಕ್ಕೆ ತಿರುಗಿ ಸಮುದ್ರ ತೀರದಲ್ಲಿ ಮುಗಿಯಬೇಕು.


ಆದರೆ ಕರ್ತದೇವರು ಚೀಯೋನ್ ಪರ್ವತದ ಮೇಲೆಯೂ ಯೆರೂಸಲೇಮಿನ ಮೇಲೆಯೂ ತಮ್ಮ ಕಾರ್ಯಗಳನ್ನು ನೆರವೇರಿಸಿದ ಮೇಲೆ, “ಅಸ್ಸೀರಿಯದ ಅರಸನ ಹೃದಯದ ದೊಡ್ಡಸ್ತಿಕೆಯ ಫಲವನ್ನು, ಅವನ ಉನ್ನತವಾದ ದೃಷ್ಟಿಯ ಘನತೆಯನ್ನು ನಾನು ದಂಡಿಸುವೆನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು