ದಾನಿಯೇಲ 11:7 - ಕನ್ನಡ ಸಮಕಾಲಿಕ ಅನುವಾದ7 ಅವಳ ವಂಶದಲ್ಲಿಯ ಒಬ್ಬನು ಎದ್ದು ಆ ಸ್ಥಾನದಲ್ಲಿ ನಿಂತು, ಸೈನ್ಯದೊಂದಿಗೆ ಬಂದು, ಉತ್ತರದ ಅರಸನ ಕೋಟೆಯೊಳಗೆ ನುಗ್ಗಿ, ಅವರ ವಿರುದ್ಧ ಹೋರಾಡಿ ಗೆಲ್ಲುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಅನಂತರ ಅವಳು ಹುಟ್ಟಿದ ವಂಶವೃಕ್ಷದಲ್ಲಿ ಹುಟ್ಟಿದವರು ಅದರ ಸ್ಥಾನದಲ್ಲಿ ನಿಂತು ಉತ್ತರ ದಿಕ್ಕಿನ ರಾಜನ ಸೈನ್ಯಕ್ಕೆ ವಿರುದ್ಧವಾಗಿ ಹೊರಟು ಅವನ ದುರ್ಗದೊಳಗೆ ನುಗ್ಗಿ, ಅವರೊಡನೆ ಯುದ್ಧಮಾಡಿ, ಅವರನ್ನು ಗೆಲ್ಲುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಅನಂತರ ಅವಳು ಹುಟ್ಟಿದ ಬುಡದಿಂದ ಒಡೆದ ಸಸಿಯೊಂದು ಅದರ ಸ್ಥಾನದಲ್ಲಿ ನಿಲ್ಲುವುದು. ಉತ್ತರರಾಜನ ಸೈನ್ಯಕ್ಕೆ ವಿರುದ್ಧವಾಗಿ ಹೊರಟು, ಅವನ ದುರ್ಗದೊಳಗೆ ನುಗ್ಗಿ, ಅಲ್ಲಿನವರಿಗೆ ಮಾಡುವಷ್ಟೂ ಮಾಡಿ ಗೆಲ್ಲುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಅನಂತರ ಅವಳು ಹುಟ್ಟಿದ ಬುಡದಿಂದ ಒಡೆದ ಸಸಿಯು ಅದರ ಸ್ಥಾನದಲ್ಲಿ ನಿಂತು ಉತ್ತರರಾಜನ ಸೈನ್ಯಕ್ಕೆ ವಿರುದ್ಧವಾಗಿ ಹೊರಟು ಅವನ ದುರ್ಗದೊಳಗೆ ನುಗ್ಗಿ ಅಲ್ಲಿನವರಿಗೆ ಮಾಡುವಷ್ಟು ಮಾಡಿ ಗೆದ್ದು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 “ಆದರೆ ಅವಳ ಕುಟುಂಬದ ಒಬ್ಬ ವ್ಯಕ್ತಿಯು ದಕ್ಷಿಣದ ರಾಜನ ಸ್ಥಳವನ್ನು ತೆಗೆದುಕೊಳ್ಳಲು ಬರುವನು. ಅವನು ಉತ್ತರದ ರಾಜನ ಸೈನ್ಯದ ಮೇಲೆ ಧಾಳಿ ಮಾಡುವನು. ಅವನು ಆ ಅರಸನ ಭದ್ರವಾದ ಕೋಟೆಗೆ ನುಗ್ಗುವನು. ಅವನು ಯುದ್ಧಮಾಡಿ ಗೆಲ್ಲುವನು. ಅಧ್ಯಾಯವನ್ನು ನೋಡಿ |