Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 11:9 - ಕನ್ನಡ ಸಮಕಾಲಿಕ ಅನುವಾದ

9 ಆಮೇಲೆ ಉತ್ತರದ ಅರಸನು, ದಕ್ಷಿಣದ ಅರಸನ ಮೇಲೆ ಯುದ್ಧಕ್ಕೆ ಬರುವನು. ಆದರೆ ತನ್ನ ಸ್ವದೇಶಕ್ಕೆ ಹಿಂದಿರುಗಿ ಹೋಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಬಳಿಕ ಉತ್ತರ ದಿಕ್ಕಿನ ರಾಜನು ದಕ್ಷಿಣ ದಿಕ್ಕಿನ ರಾಜನ ಮೇಲೆ ಯುದ್ಧಕ್ಕೆ ಬರುವನು. ಆದರೆ ತನ್ನ ಸ್ವದೇಶಕ್ಕೆ ಹಿಂದಿರುಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಬಳಿಕ ಉತ್ತರರಾಜನು ದಕ್ಷಿಣರಾಜನ ರಾಜ್ಯದ ಮೇಲೆ ದಾಳಿಮಾಡುವನು. ಆದರೆ ಅವನು ಸ್ವದೇಶಕ್ಕೆ ಹಿಂದಿರುಗಬೇಕಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಬಳಿಕ ಉತ್ತರರಾಜನು ದಕ್ಷಿಣರಾಜನ ರಾಜ್ಯದೊಳಗೆ ನುಗ್ಗಿ ಸ್ವದೇಶಕ್ಕೆ ಹಿಂದಿರುಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಉತ್ತರದ ರಾಜನು ದಕ್ಷಿಣದ ರಾಜ್ಯದ ಮೇಲೆ ಧಾಳಿ ಮಾಡುವನು. ಆದರೆ ಅವನು ಸೋತು ತನ್ನ ದೇಶಕ್ಕೆ ಹಿಂತಿರುಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 11:9
6 ತಿಳಿವುಗಳ ಹೋಲಿಕೆ  

ದಕ್ಷಿಣದ ಅರಸನು ಬಲಿಷ್ಠನಾಗುವನು. ಆದರೆ ಅವನ ಸೇನಾಪತಿಗಳಲ್ಲಿ ಒಬ್ಬನು ಅವನಿಗಿಂತ ಬಲಿಷ್ಠನಾಗುವನು ಮತ್ತು ಅವನ ಆಳ್ವಿಕೆಯು ಮಹಾ ಆಳ್ವಿಕೆಯಾಗುವುದು.


ಅವರ ದೇವರುಗಳನ್ನೂ, ಅವರ ವಿಗ್ರಹಗಳನ್ನೂ ಅವರ ಬೆಳ್ಳಿ ಬಂಗಾರಗಳ ಪಾತ್ರೆಗಳನ್ನೂ ಅವನು ಸೂರೆಮಾಡಿ, ಈಜಿಪ್ಟ್ ದೇಶಕ್ಕೆ ತೆಗೆದುಕೊಂಡು ಹೋಗುವನು. ಕೆಲವು ವರ್ಷಗಳವರೆಗೆ ಅವನು ಉತ್ತರದ ಅರಸನ ಮೇಲೆ ಬಿಟ್ಟುಬಿಡುವನು.


ಅವನ ಮಕ್ಕಳು ಯುದ್ಧಕ್ಕೆ ಸಿದ್ಧರಾಗಿ ದೊಡ್ಡ ಸೈನ್ಯ ಕೂಡಿಸುವರು. ಆ ಸೈನ್ಯವು ನಿಬಂಧಿಸಲಾಗದ ಪ್ರವಾಹದಂತೆ ಹರಿದುಬಂದು, ಯುದ್ಧವನ್ನು ಅವನ ಕೋಟೆಯವರೆಗೆ ನಡೆಸುವರು.


ಆಗ ದಕ್ಷಿಣದ ಅರಸನು ಕೋಪಿಸಿಕೊಂಡು ಹೊರಟು ಮಹಾ ಸೈನ್ಯವನ್ನು ಕೂಡಿಸಿದನು. ಉತ್ತರದ ಅರಸನ ಸಂಗಡ ಯುದ್ಧಮಾಡುವನು. ಆದರೆ ಆ ಮಹಾ ಸೈನ್ಯವು ದಕ್ಷಿಣ ಅರಸನ ಕೈವಶವಾಗುವುದು.


ಕಪ್ಪು ಕುದುರೆಗಳ ರಥ, ಉತ್ತರ ದೇಶಕ್ಕೆ ಹೊರಟಿತು. ಬಿಳಿ ಕುದುರೆಗಳು ಪಶ್ಚಿಮಕ್ಕೆ ಹಿಂದೆ ಹೋಯಿತು. ಮಚ್ಚೆ ಮಚ್ಚೆಯ ಕುದುರೆಯ ರಥ ದಕ್ಷಿಣಕ್ಕೆ ಹೊರಟಿತು.”


ಅವರು ಕುರಿಮರಿಯಾದವರ ಮೇಲೆ ಯುದ್ಧಮಾಡುವರು. ಆದರೆ ಕುರಿಮರಿಯಾದವರು ಕರ್ತರ ಕರ್ತರೂ ರಾಜಾಧಿರಾಜರೂ ಆಗಿರುವುದರಿಂದ ಅವರನ್ನು ಜಯಿಸುವರು. ಅವರೊಂದಿಗಿದ್ದವರು ದೇವರಿಂದ ಕರೆಹೊಂದಿದವರೂ ಆಯ್ದುಕೊಂಡವರೂ ನಂಬಿಗಸ್ತರೂ ಆಗಿರುವರು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು