ದಾನಿಯೇಲ 12:1 - ಕನ್ನಡ ಸಮಕಾಲಿಕ ಅನುವಾದ1 “ಆ ಕಾಲದಲ್ಲಿ ನಿನ್ನ ಜನರನ್ನು ಕಾಪಾಡುವುದಕ್ಕಾಗಿ ಮಹಾರಾಜಕುಮಾರನಾದ ಮೀಕಾಯೇಲನು ಏಳುವನು. ಮೊಟ್ಟಮೊದಲು ಜನಾಂಗ ಉಂಟಾದಂದಿನಿಂದ ಇಂದಿನವರೆಗೂ ಸಂಭವಿಸದಂತಹ ಸಂಕಟವು ಸಂಭವಿಸುವುದು. ಆಗ ನಿನ್ನ ಜನರೊಳಗೆ ಎಂದರೆ ಜೀವ ಪುಸ್ತಕದಲ್ಲಿ ಯಾರ ಹೆಸರು ಬರೆಯಲಾಗಿದೆಯೋ, ಅವರೆಲ್ಲರೂ ಬಿಡುಗಡೆಯಾಗುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 “ನಿನ್ನ ಜನರ ಪಕ್ಷವನ್ನು ಹಿಡಿದಿರುವ ಮಹಾಪಾಲಕನಾದ ದೇವದೂತ ಮೀಕಾಯೇಲನು ಆ ಕಾಲದಲ್ಲಿ ಏಳುವನು. ಮೊಟ್ಟಮೊದಲು ಜನಾಂಗವು ಉಂಟಾದ ದಿನದಿಂದ ಇಂದಿನವರೆಗೂ ಸಂಭವಿಸದಂಥ ಸಂಕಟವು ಸಂಭವಿಸುವುದು. ಆಗ ನಿನ್ನ ಜನರೊಳಗೆ ಯಾರ ಹೆಸರುಗಳು ಜೀವಬಾಧ್ಯರ ಪಟ್ಟಿಯಲ್ಲಿ ಸಿಕ್ಕುವವೋ ಅವರೆಲ್ಲರೂ ರಕ್ಷಿಸಲ್ಪಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 “ಆ ಕಾಲದಲ್ಲಿ ನಿನ್ನ ಜನರ ಪಕ್ಷ ವಹಿಸುವ ಮಹಾದೂತನಾದ ಮಿಕಾಯೇಲನು ಕಾಣಿಸಿಕೊಳ್ಳುವನು. ಮೊತ್ತಮೊದಲು, ಮಾನವ ಜನಾಂಗ ಉಂಟಾದಂದಿನಿಂದ ಅಂದಿನವರೆಗೆ ಸಂಭವಿಸದ ಘೋರ ಸಂಕಟ ಉಂಟಾಗುವುದು. ಆಗ ನಿನ್ನ ಜನರಲ್ಲಿ ಯಾರ ಯಾರ ಹೆಸರುಗಳು ಜೀವಬಾಧ್ಯರ ಪಟ್ಟಿಯಲ್ಲಿ ಇರುವುದೋ ಅವರೆಲ್ಲರು ಜೀವೋದ್ಧಾರವನ್ನು ಪಡೆಯುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ನಿನ್ನ ಜನರ ಪಕ್ಷವನ್ನು ಹಿಡಿದಿರುವ ಮಹಾಪಾಲಕನಾದ ಮೀಕಾಯೇಲನು ಆ ಕಾಲದಲ್ಲಿ ಏಳುವನು; ಮೊಟ್ಟ ಮೊದಲು ಜನಾಂಗವು ಉಂಟಾದಂದಿನಿಂದ ಅಂದಿನವರೆಗೆ ಸಂಭವಿಸದಂಥ ಸಂಕಟವು ಸಂಭವಿಸುವದು; ಆಗ ನಿನ್ನ ಜನರೊಳಗೆ ಯಾರ ಹೆಸರುಗಳು [ಜೀವಬಾಧ್ಯರ] ಪಟ್ಟಿಯಲ್ಲಿ ಸಿಕ್ಕುವವೋ ಅವರೆಲ್ಲರೂ ರಕ್ಷಿಸಲ್ಪಡುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 “ದರ್ಶನದಲ್ಲಿ ಕಾಣಿಸಿಕೊಂಡ ಮನುಷ್ಯನು, ದಾನಿಯೇಲನೇ, ಆಗ ದೇವದೂತನಾದ ಮಿಕಾಯೇಲನು ಏಳುವನು. ಮಿಕಾಯೇಲನು ಯೆಹೂದ್ಯರಾದ ನಿಮ್ಮ ಹಿತಾಸಕ್ತಿಗಳನ್ನು ನೋಡಿಕೊಳ್ಳುವನು. ಮಹಾಸಂಕಟದ ಕಾಲ ಬರುವದು. ಭೂಮಿಯ ಮೇಲೆ ರಾಷ್ಟ್ರಗಳು ಹುಟ್ಟಿದಂದಿನಿಂದ ಸಂಭವಿಸದಂತಹ ಸಂಕಟಗಳು ಸಂಭವಿಸುವವು. ಆದರೆ ದಾನಿಯೇಲನೇ, ನಿಮ್ಮ ಜನಗಳಲ್ಲಿ ಯಾರ ಹೆಸರುಗಳು ‘ಜೀವಬಾಧ್ಯರ ಗ್ರಂಥದಲ್ಲಿ’ ಬರೆಯಲ್ಪಟ್ಟಿದೆಯೋ ಅವರೆಲ್ಲರನ್ನು ರಕ್ಷಿಸಲಾಗುವುದು. ಅಧ್ಯಾಯವನ್ನು ನೋಡಿ |