Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 12:10 - ಕನ್ನಡ ಸಮಕಾಲಿಕ ಅನುವಾದ

10 ಅನೇಕರು ತಮ್ಮನ್ನು ಶುದ್ಧೀಕರಿಸಿ, ಶುಭ್ರಮಾಡಿಕೊಂಡು ಶೋಧಿತರಾಗುವರು. ಆದರೆ ದುಷ್ಟರು ದುಷ್ಟರಾಗಿಯೇ ಮುಂದುವರಿಯುವರು. ಯಾವ ದುಷ್ಟನೂ ಅರ್ಥಮಾಡಿಕೊಳ್ಳುವುದಿಲ್ಲ. ಆದರೆ ಬುದ್ಧಿವಂತರಾದವರು ಅರಿತುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅನೇಕರು ತಮ್ಮನ್ನು ಶುದ್ಧೀಕರಿಸಿ, ಶುಭ್ರಮಾಡಿಕೊಂಡು ಶೋಧಿತರಾಗುವರು; ದುಷ್ಟರು ದುಷ್ಟರಾಗಿಯೇ ನಡೆಯುವರು, ಅವರಲ್ಲಿ ಯಾರಿಗೂ ವಿವೇಕವಿರದು; ಜ್ಞಾನಿಗಳಿಗೆ ವಿವೇಕವಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅನೇಕರು ತಮ್ಮನ್ನು ಶುದ್ಧೀಕರಿಸಿ, ಶುಭ್ರಮಾಡಿಕೊಂಡು ಶೋಧಿತರಾಗುವರು. ದುಷ್ಟರು ದುಷ್ಟರಾಗಿಯೇ ನಡೆಯುವರು. ಅವರಲ್ಲಿ ಯಾರಿಗೂ ವಿವೇಕವಿರದು. ಬುದ್ಧಿವಂತರಿಗೆ ವಿವೇಕವಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅನೇಕರು ತಮ್ಮನ್ನು ಶುದ್ಧೀಕರಿಸಿ ಶುಭ್ರಮಾಡಿಕೊಂಡು ಶೋಧಿತರಾಗುವರು; ದುಷ್ಟರು ದುಷ್ಟರಾಗಿಯೇ ನಡೆಯುವರು, ಅವರಲ್ಲಿ ಯಾರಿಗೂ ವಿವೇಕವಿರದು; ಜ್ಞಾನಿಗಳಿಗೆ ವಿವೇಕವಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಅನೇಕ ಜನರು ಶುದ್ಧೀಕರಿಸಲ್ಪಡುವರು; ಅವರು ತಮ್ಮನ್ನು ತಾವು ಶುಭ್ರಗೊಳಿಸಿಕೊಳ್ಳುವರು. ಆದರೆ ದುಷ್ಟರು ದುಷ್ಟರಾಗಿಯೇ ಉಳಿಯುವರು. ಆ ದುಷ್ಟರು ಈ ಸಂಗತಿಗಳನ್ನು ಅರಿತುಕೊಳ್ಳುವದಿಲ್ಲ. ಜ್ಞಾನಿಗಳು ಇವೆಲ್ಲವನ್ನು ಅರಿತುಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 12:10
37 ತಿಳಿವುಗಳ ಹೋಲಿಕೆ  

ಅನ್ಯಾಯ ಮಾಡುವವನು ಇನ್ನೂ ಅನ್ಯಾಯ ಮಾಡಲಿ, ಮೈಲಿಗೆಯಾದವನು ತನ್ನನ್ನು ಇನ್ನೂ ಮೈಲಿಗೆ ಮಾಡಿಕೊಳ್ಳಲಿ. ನೀತಿವಂತನು ಇನ್ನೂ ನೀತಿಯನ್ನು ಮಾಡಲಿ. ಪವಿತ್ರನು ತನ್ನನ್ನು ಇನ್ನೂ ಪವಿತ್ರ ಮಾಡಿಕೊಳ್ಳಲಿ!” ಎಂದನು.


ಇದಲ್ಲದೆ ಅಂತ್ಯಕಾಲದವರೆಗೆ ಜ್ಞಾನಿಗಳನ್ನು ಶೋಧಿಸುವುದಕ್ಕೂ ಅದರಲ್ಲಿ ಅನೇಕರು ಬೀಳುವರು; ಏಕೆಂದರೆ ಇದು ನೇಮಕವಾದ ಸಮಯದಲ್ಲಿ ಬರುವುದು.


ಯಾರು ಬುದ್ಧಿವಂತರು? ಅವರು ಈ ಸತ್ಯಗಳನ್ನು ಅರ್ಥಮಾಡಿಕೊಳ್ಳಲಿ. ಯಾರು ವಿವೇಚನೆಯುಳ್ಳವರು? ಅವರು ಇವುಗಳನ್ನು ತಿಳಿದುಕೊಳ್ಳಲಿ. ಏಕೆಂದರೆ, ಯೆಹೋವ ದೇವರ ಮಾರ್ಗಗಳು ನ್ಯಾಯವಾಗಿವೆ. ನೀತಿವಂತರು ಅದರಲ್ಲಿ ನಡೆಯುವರು. ಆದರೆ ಅಕ್ರಮಗಾರರು ಅವುಗಳಿಂದ ಎಡವಿಬೀಳುವರು.


ದೇವರಿಗೆ ಸೇರಿದವನು ದೇವರ ವಾಕ್ಯಕ್ಕೆ ಕಿವಿಗೊಡುತ್ತಾನೆ. ನೀವು ದೇವರಿಗೆ ಸೇರಿದವರಲ್ಲ. ಆದ್ದರಿಂದ ನೀವು ಕಿವಿಗೊಡುವುದಿಲ್ಲ,” ಎಂದು ಹೇಳಿದರು.


ದೇವರ ಪುತ್ರ ಆಗಿರುವ ಕ್ರಿಸ್ತ ಯೇಸುವು ಬಂದು, ಸತ್ಯವಾಗಿರುವ ದೇವರನ್ನು ನಾವು ಅರಿತುಕೊಳ್ಳುವ ಹಾಗೆ ಅವರು ನಮಗೆ ತಿಳುವಳಿಕೆಯನ್ನು ಕೊಟ್ಟಿದ್ದಾರೆಂದೂ ನಾವು ಸತ್ಯವಾಗಿರುವ ದೇವರಲ್ಲಿ ಅವರ ಪುತ್ರ ಆಗಿರುವ ಕ್ರಿಸ್ತ ಯೇಸುವಿನಲ್ಲಿ ಇರುವವರಾಗಿದ್ದೇವೆ ಎಂದೂ ನಮಗೆ ಗೊತ್ತಿದೆ. ಈ ಕ್ರಿಸ್ತ ಯೇಸುವೇ ಸತ್ಯ ದೇವರೂ ನಿತ್ಯಜೀವವೂ ಆಗಿದ್ದಾರೆ.


ಯಾರಾದರೂ ದೇವರ ಚಿತ್ತವನ್ನು ಮಾಡಬಯಸುವುದಾದರೆ ಈ ಬೋಧನೆಯು ದೇವರದೋ ಅಥವಾ ನನ್ನಷ್ಟಕ್ಕೆ ನಾನೇ ಮಾತನಾಡುತ್ತೇನೋ ಎಂಬುದು ಅವರಿಗೆ ತಿಳಿಯುವುದು.


ಆಗ ಯೇಸು ಅವರಿಗೆ, “ಎಂಥ ಬುದ್ಧಿಹೀನರು ನೀವು, ಪ್ರವಾದಿಗಳು ಹೇಳಿದ್ದೆಲ್ಲವನ್ನು ನಂಬುವುದರಲ್ಲಿ ಮಂದ ಹೃದಯದವರೇ!


ಈ ಮೂರನೆಯ ಪಾಲನ್ನು ನಾನು ಬೆಂಕಿಯಲ್ಲಿ ಹಾಕಿ, ಬೆಳ್ಳಿಯನ್ನು ಶುದ್ಧ ಮಾಡುವಂತೆ ಶುದ್ಧಮಾಡುವೆನು. ಬಂಗಾರವನ್ನು ಶೋಧಿಸುವ ಪ್ರಕಾರ ಅವರನ್ನು ಶೋಧಿಸುವೆನು. ಅವರು ನನ್ನ ಹೆಸರನ್ನು ಕರೆಯುವರು. ನಾನು ಅವರಿಗೆ ಉತ್ತರಕೊಡುವೆನು. ನಾನು, ‘ಇವರು ನನ್ನ ಜನರೆಂದು ಹೇಳುವೆನು,’ ‘ಯೆಹೋವ ದೇವರು ನಮ್ಮ ದೇವರು’ ಎಂದು ಅವರು ಹೇಳುವರು,” ಎಂದು ಹೇಳುತ್ತೇನೆ.


ನೀನು ಸಿರಿವಂತನಾಗುವಂತೆ ಬೆಂಕಿಯಲ್ಲಿ ಪುಟಕ್ಕೆ ಹಾಕಿದ ಚಿನ್ನವನ್ನೂ ಲಜ್ಜಾಸ್ಪದವಾದ ನಿನ್ನ ಬೆತ್ತಲೆತನ ಕಾಣಿಸದಂತೆ ಧರಿಸಿಕೊಳ್ಳುವುದಕ್ಕಾಗಿ ಬಿಳಿ ವಸ್ತ್ರಗಳನ್ನೂ ಕಣ್ಣು ಕಾಣುವಂತೆ ನಿನ್ನ ಕಣ್ಣುಗಳಿಗೆ ಹಚ್ಚುವುದಕ್ಕಾಗಿ ಮುಲಾಮನ್ನೂ ನನ್ನಿಂದ ಕೊಂಡುಕೊಳ್ಳಬೇಕೆಂದು ನಾನು ನಿನಗೆ ಬುದ್ಧಿ ಹೇಳುತ್ತೇನೆ.


ಜ್ಞಾನಿಯು ಜ್ಞಾನೋಕ್ತಿಗಳನ್ನು ಕೇಳಿ, ಜ್ಞಾನವನ್ನು ಹೆಚ್ಚಿಸಿಕೊಳ್ಳಲಿ; ವಿವೇಚಿಸುವವರು ಮಾರ್ಗದರ್ಶನವನ್ನು ಹೊಂದಿಕೊಳ್ಳಲಿ.


ಬಂಗಾರವು ನಾಶವಾಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಿಂದ ಶೋಧಿಸುವುದುಂಟಷ್ಟೆ. ಬಂಗಾರಕ್ಕಿಂತ ಬಹು ಅಮೂಲ್ಯವಾಗಿರುವ ನಿಮ್ಮ ನಿಷ್ಕಪಟ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಕ್ರಿಸ್ತ ಯೇಸು ಪ್ರತ್ಯಕ್ಷರಾಗುವಾಗ ನಿಮಗೆ ಕೀರ್ತಿ, ಮಾನ, ಮಹಿಮೆಗಳನ್ನು ಉಂಟುಮಾಡುವುದು.


ಜನರಲ್ಲಿ ಬುದ್ಧಿವಂತರಾದವರು ಅನೇಕರಿಗೆ ಬೋಧಿಸುವರು, ಆದರೂ ಖಡ್ಗದಿಂದಲೂ ಬೆಂಕಿಯಿಂದಲೂ ಸೆರೆಯಿಂದಲೂ ಕೊಳ್ಳೆಯಿಂದಲೂ ಕೆಲಕಾಲ ಸಿಕ್ಕಿ ಬೀಳುವರು.


ಆದರೆ ಅದರ ಕೆಸರಾದ ಸ್ಥಳಗಳು, ಕೊಳಚೆಗಳು, ಶುದ್ಧವಾಗುವುದಿಲ್ಲ. ಅವು ಉಪ್ಪಿನ ಗಣಿಯಾಗುವುವು.


ಪರಲೋಕದ ಸೈನ್ಯದವರು ಶುಭ್ರ ಹಾಗೂ ಬಿಳಿಯ ನಯವಾದ ನಾರುಮಡಿಯನ್ನು ಧರಿಸಿಕೊಂಡು ಬಿಳಿಯ ಕುದುರೆಗಳ ಮೇಲೆ ಆತನ ಹಿಂದೆ ಬರುತ್ತಿದ್ದರು.


ಪ್ರಕಾಶಮಾನವೂ ನಿರ್ಮಲವೂ ಆದ ನಯವಾದ ನಾರುಮಡಿಯನ್ನು ತೊಟ್ಟುಕೊಳ್ಳುವುದಕ್ಕೆ ಆಕೆಗೆ ಅನುಗ್ರಹಿಸಲಾಗಿತ್ತು. ಏಕೆಂದರೆ ಆ ನಾರುಮಡಿಯು ಪರಿಶುದ್ಧರ ನೀತಿಕೃತ್ಯಗಳೇ.


ತಮ್ಮ ನೋವುಗಳಿಗಾಗಿಯೂ ಹುಣ್ಣುಗಳಿಗಾಗಿಯೂ ಪರಲೋಕದ ದೇವರನ್ನು ದೂಷಿಸಿದರು. ಆದರೆ ಅವರು, ತಮ್ಮ ಕೃತ್ಯಗಳಿಗಾಗಿ ಪಶ್ಚಾತ್ತಾಪ ಪಡಲಿಲ್ಲ.


ನೀವು ಕ್ರಿಸ್ತ ಯೇಸುವಿನ ಮೂಲಕ ಸತ್ಯಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಮಾಡಿಕೊಂಡಿದ್ದರಿಂದ ನಿಷ್ಕಪಟವಾದ ಸಹೋದರ ಸ್ನೇಹವುಳ್ಳವರಾಗಿರತಕ್ಕದ್ದು. ಹೀಗಿರಲಾಗಿ ಒಬ್ಬರನ್ನೊಬ್ಬರು ಶುದ್ಧವಾದ ಹೃದಯದಿಂದಲೂ ಆಸಕ್ತಿಯಿಂದಲೂ ಪ್ರೀತಿಸಿರಿ.


ನಮ್ಮ ತಂದೆಯಾದವರು ತಮಗೆ ಒಳ್ಳೆಯದೆಂದು ತಿಳಿದಾಗ, ಸ್ವಲ್ಪಕಾಲ ನಮ್ಮನ್ನು ಶಿಕ್ಷಿಸಿದರು. ಆದರೆ ದೇವರು ತಮ್ಮ ಪವಿತ್ರತೆಯಲ್ಲಿ ನಾವು ಪಾಲುಗಾರರಾಗಬೇಕೆಂದು ನಮ್ಮ ಒಳ್ಳೆಯದಕ್ಕಾಗಿಯೇ ಶಿಕ್ಷಿಸುತ್ತಾರೆ.


ಕ್ರಿಸ್ತ ಯೇಸು ನಮ್ಮನ್ನು ಎಲ್ಲಾ ದುಷ್ಟತನದಿಂದ ವಿಮೋಚಿಸಿ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಂತ ಜನರನ್ನು ತಮಗಾಗಿ ಪರಿಶುದ್ಧ ಮಾಡುವಂತೆ ನಮಗೋಸ್ಕರ ತಮ್ಮನ್ನು ತಾವೇ ಒಪ್ಪಿಸಿಕೊಟ್ಟರು.


ಪ್ರಿಯರೇ, ಇಂಥಾ ವಾಗ್ದಾನಗಳು ನಮಗಿರುವುದರಿಂದ ನಮ್ಮ ದೇಹಾತ್ಮಗಳನ್ನು ಮಲಿನಗೊಳಿಸುವ ಎಲ್ಲಾ ವಿಷಯಗಳಿಂದ ನಮ್ಮನ್ನು ಶುದ್ಧಮಾಡಿ, ದೇವರ ಮೇಲಿನ ಭಯಭಕ್ತಿಯಿಂದ ನಮ್ಮ ಪವಿತ್ರತೆಯನ್ನು ಪರಿಪೂರ್ಣಗೊಳಿಸೋಣ.


ನಿಮ್ಮಲ್ಲಿ ಕೆಲವರು ಅಂಥವರಾಗಿದ್ದೀರಿ. ಆದರೂ ಕರ್ತ ಆಗಿರುವ ಯೇಸುಕ್ರಿಸ್ತರ ಹೆಸರಿನಲ್ಲಿಯೂ ನಮ್ಮ ದೇವರ ಆತ್ಮದಿಂದಲೂ ನೀವು ತೊಳೆದು, ಶುದ್ಧೀಕರಣ ಹೊಂದಿ, ನೀತಿವಂತರೆಂಬ ನಿರ್ಣಯವನ್ನು ಹೊಂದಿದ್ದೀರಿ.


ಪಿಲಾತನು ಯೇಸುವಿಗೆ, “ನೀನು ಅರಸನೋ?” ಎಂದು ಕೇಳಲು, ಯೇಸು, “ನಾನು ಅರಸನೆಂದು ನೀನೇ ಹೇಳುತ್ತೀ. ನಾನು ಸತ್ಯಕ್ಕೆ ಸಾಕ್ಷಿ ಕೊಡುವುದಕ್ಕಾಗಿ ಹುಟ್ಟಿ, ಇದಕ್ಕಾಗಿಯೇ ಲೋಕಕ್ಕೆ ಬಂದೆನು; ಸತ್ಯಕ್ಕೆ ಸೇರಿದ ಎಲ್ಲರೂ ನನ್ನ ಸ್ವರವನ್ನು ಕೇಳುತ್ತಾರೆ,” ಎಂದರು.


ಅದಕ್ಕೆ ಯೇಸು, “ದೇವರ ರಾಜ್ಯದ ರಹಸ್ಯವನ್ನು ತಿಳಿದುಕೊಳ್ಳುವ ಜ್ಞಾನ ನಿಮಗೆ ಕೊಡಲಾಗಿದೆ. ಆದರೆ ಹೊರಗಿನವರಿಗೆ ಎಲ್ಲವೂ ಸಾಮ್ಯದ ರೂಪದಲ್ಲಿ ಹೇಳಲಾಗಿದೆ.


ಜ್ಞಾನಿಗಳಾದವರು ಆಕಾಶದ ಕಾಂತಿಯ ಹಾಗೆಯೂ, ಅನೇಕರನ್ನು ನೀತಿಯ ಕಡೆಗೆ ತಿರುಗಿಸುವರು, ನಕ್ಷತ್ರಗಳ ಹಾಗೆ ಎಂದೆಂದಿಗೂ ಪ್ರಕಾಶಿಸುವರು, ನಿತ್ಯ ಅವಮಾನವನ್ನು ಅನುಭವಿಸುವರು.


ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಚಿಮುಕಿಸುತ್ತೇನೆ ಮತ್ತು ನೀವು ಶುದ್ಧರಾಗುವಿರಿ, ನಿಮ್ಮ ಎಲ್ಲಾ ಅಶುದ್ಧತ್ವಗಳಿಂದಲೂ ನಿಮ್ಮ ಎಲ್ಲಾ ವಿಗ್ರಹಗಳಿಂದಲೂ ನಿಮ್ಮನ್ನು ಶುದ್ಧೀಕರಿಸುವೆನು.


“ಈಗ ಬನ್ನಿರಿ, ನಾವು ಒಟ್ಟಾಗಿ ವಾದಿಸೋಣ,” ಎಂದು ಯೆಹೋವ ದೇವರು ಹೇಳುತ್ತಾರೆ. “ನಿಮ್ಮ ಪಾಪಗಳು ಕಡುಕೆಂಪಾಗಿದ್ದರೂ ಹಿಮದಂತೆ ಬೆಳ್ಳಗಾಗುವುವು. ರಕ್ತದಂತೆ ಕಡುಕೆಂಪಾಗಿದ್ದರೂ ಉಣ್ಣೆಯಂತೆ ಆಗುವುವು.


ಜ್ಞಾನಿಗಳು ಇವುಗಳನ್ನು ಗಮನಿಸಲಿ, ಯೆಹೋವ ದೇವರ ಪ್ರೀತಿಕೃತ್ಯಗಳನ್ನು ಗ್ರಹಿಸಿಕೊಳ್ಳಲಿ.


ಹಿಸ್ಸೋಪಿನಿಂದ ನನ್ನನ್ನು ಶುಚಿಮಾಡಿರಿ, ಆಗ ನಾನು ಶುದ್ಧನಾಗುವೆನು. ನನ್ನನ್ನು ತೊಳೆಯಿರಿ, ಆಗ ಹಿಮಕ್ಕಿಂತ ಬೆಳ್ಳಗಾಗುವೆನು.


ಪೂರ್ವಿಕರು ಹೇಳಿದ ಸಾಮತಿಯ ಪ್ರಕಾರ, ‘ದುಷ್ಟರಿಂದ ದುಷ್ಟತ್ವವು ಹುಟ್ಟುವುದು’ ಆದರೂ ನಾನು ನಿನಗೆ ವಿರೋಧವಾಗಿ ನನ್ನ ಕೈ ಮುಟ್ಟುವುದಿಲ್ಲ.


ದೇವರು ಬೆಳ್ಳಿಯನ್ನು ಪರಿಶೋಧಿಸಿ ಶುದ್ಧೀಕರಿಸುವ ಅಕ್ಕಸಾಲಿಗನಂತೆ ಕುಳಿತುಕೊಂಡು ಲೇವಿಯರನ್ನು ಶುದ್ಧಮಾಡುವರು. ಬಂಗಾರದ ಹಾಗೆಯೂ, ಬೆಳ್ಳಿಯ ಹಾಗೆಯೂ ಶುದ್ಧಮಾಡುವರು. ಆಗ ಅವರು ಯೆಹೋವ ದೇವರಿಗೆ ನೀತಿಯ ಕಾಣಿಕೆಯನ್ನು ಅರ್ಪಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು