ದಾನಿಯೇಲ 12:13 - ಕನ್ನಡ ಸಮಕಾಲಿಕ ಅನುವಾದ13 “ನೀನು ಅಂತ್ಯದವರೆಗೂ ನಿನ್ನ ಮಾರ್ಗದಲ್ಲಿ ಹೋಗು. ನೀನು ವಿಶ್ರಮಿಸಿಕೊಳ್ಳುವೆ ಮತ್ತು ದಿನಗಳ ಅಂತ್ಯದಲ್ಲಿ ನಿನಗೆ ಪಾಲಾಗಿ ಇಟ್ಟಿರುವ ಬಾಧ್ಯತೆಯನ್ನು ಸ್ವೀಕರಿಸಲು ಎದ್ದು ಬರುವೆ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ನೀನು ಹೋಗಿ ಅಂತ್ಯದ ವರೆಗೆ ವಿಶ್ವಾಸದಿಂದ ಇರು. ನೀನು ದೀರ್ಘನಿದ್ರೆಯನ್ನು ಹೊಂದಿ, ಯುಗದ ಸಮಾಪ್ತಿಯಲ್ಲಿ ಎದ್ದು, ನಿನಗಾಗುವ ಸ್ವತ್ತಿನೊಳಗೆ ನಿಲ್ಲುವಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ನೀನು ಹೋಗಿ ಅಂತ್ಯದವರೆಗೆ ವಿಶ್ವಾಸದಿಂದಿರು. ನೀನು ‘ದೀರ್ಘನಿದ್ರೆ’ಯನ್ನು ಹೊಂದಿ, ನಿನಗೆ ನಿರ್ಧರಿಸಲಾದ ಸ್ಥಾನವನ್ನು ಪಡೆಯಲು ಯುಗಸಮಾಪ್ತಿಯಲ್ಲಿ ಎದ್ದುಬರುವೆ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ನೀನು ಹೋಗಿ ಅಂತ್ಯದವರೆಗೆ ಇರು; ನೀನು ದೀರ್ಘ ನಿದ್ರೆಯನ್ನು ಹೊಂದಿ ಯುಗಸಮಾಪ್ತಿಯಲ್ಲಿ ಎದ್ದು ನಿನಗಾಗುವ ಸ್ವಾಸ್ತ್ಯದೊಳಗೆ ನಿಲ್ಲುವಿ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 “ದಾನಿಯೇಲನೇ, ನೀನು ಹೋಗಿ ಕೊನೆಯವರೆಗೆ ನಿನ್ನ ಜೀವನವನ್ನು ಸಾಗಿಸು. ನೀನು ದೀರ್ಘನಿದ್ರೆಯನ್ನು ಪಡೆಯುವೆ. ಅಂತ್ಯಕಾಲದಲ್ಲಿ, ನೀನು ದೀರ್ಘನಿದ್ರೆಯಿಂದ ಎಚ್ಚೆತ್ತು ನಿನ್ನ ಸ್ವಾಸ್ತ್ಯವನ್ನು ಪಡೆಯುವೆ” ಎಂದು ಉತ್ತರಿಸಿದನು. ಅಧ್ಯಾಯವನ್ನು ನೋಡಿ |