ದಾನಿಯೇಲ 12:2 - ಕನ್ನಡ ಸಮಕಾಲಿಕ ಅನುವಾದ2 ಭೂಮಿಯ ಧೂಳಿನೊಳಗೆ ನಿದ್ರೆ ಮಾಡುವವರಲ್ಲಿ ಅನೇಕರು ಎಚ್ಚತ್ತು, ಕೆಲವರು ನಿತ್ಯಜೀವವನ್ನೂ ಮತ್ತು ಕೆಲವರು ತಿರಸ್ಕೃತರಾಗಿ ನಿತ್ಯ ನಿಂದನೆಗೆ ಗುರಿಯಾಗುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಸತ್ತು ಧೂಳಿನ ನೆಲದೊಳಗೆ ದೀರ್ಘ ನಿದ್ರೆಮಾಡುವವರಲ್ಲಿ ಅನೇಕರು ಎಚ್ಚೆತ್ತು ಕೆಲವರು ನಿತ್ಯಜೀವವನ್ನು, ಕೆಲವರು ನಿಂದನೆ ಮತ್ತು ನಿತ್ಯತಿರಸ್ಕಾರಗಳನ್ನು ಅನುಭವಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಸತ್ತು ಧೂಳಿ ಮಣ್ಣಿನಲ್ಲಿ ‘ದೀರ್ಘನಿದ್ರೆ’ಮಾಡುತ್ತಿರುವ ಅನೇಕರು ಏಳುವರು. ಎಚ್ಚೆತ್ತವರಲ್ಲಿ ಕೆಲವರು ನಿತ್ಯಜೀವವನ್ನು ಅನುಭವಿಸುವರು; ಕೆಲವರು ತಿರಸ್ಕೃತರಾಗಿ ನಿತ್ಯ ನಿಂದನೆಗೆ ಗುರಿಯಾಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಧೂಳಿನ ನೆಲದೊಳಗೆ ದೀರ್ಘನಿದ್ರೆಮಾಡುವವರಲ್ಲಿ ಅನೇಕರು ಎಚ್ಚತ್ತು ಕೆಲವರು ನಿತ್ಯಜೀವವನ್ನು, ಕೆಲವರು ನಿಂದನ ನಿತ್ಯತಿರಸ್ಕಾರಗಳನ್ನು ಅನುಭವಿಸುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಮರಣಹೊಂದಿದ, ಸಮಾಧಿಗಳಲ್ಲಿ ದೀರ್ಘನಿದ್ರೆ ಮಾಡುತ್ತಿದ್ದವರಲ್ಲಿ ಅನೇಕರು ಎಚ್ಚೆತ್ತುಕೊಳ್ಳುವರು. ಕೆಲವರು ಎಚ್ಚೆತ್ತು ನಿತ್ಯಜೀವವನ್ನು ಅನುಭವಿಸುವರು. ಕೆಲವರು ಎಚ್ಚೆತ್ತು ನಿತ್ಯನಿಂದನೆಗಳನ್ನೂ ತಿರಸ್ಕಾರಗಳನ್ನೂ ಅನುಭವಿಸುವರು. ಅಧ್ಯಾಯವನ್ನು ನೋಡಿ |