ದಾನಿಯೇಲ 12:4 - ಕನ್ನಡ ಸಮಕಾಲಿಕ ಅನುವಾದ4 ಆದರೆ ದಾನಿಯೇಲನೇ ನೀನು, ಅಂತ್ಯಕಾಲದವರೆಗೂ ಈ ಮಾತುಗಳನ್ನು ಮುಚ್ಚಿಡು; ಅವುಗಳನ್ನು ಬರೆದಿರುವ ಆ ಗ್ರಂಥಕ್ಕೆ ಮುದ್ರೆ ಹಾಕು. ಅನೇಕರು ಅತ್ತಿತ್ತ ಓಡಾಡುವರು, ಜ್ಞಾನವು ಹೆಚ್ಚಾಗುವುದು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ದಾನಿಯೇಲನೇ, ನೀನು ಈ ಮಾತುಗಳನ್ನು ಮುಚ್ಚಿಡು, ಅವುಗಳನ್ನು ಬರೆಯುವ ಗ್ರಂಥಕ್ಕೆ ಮುದ್ರೆ ಹಾಕು. ಅಂತ್ಯಕಾಲದ ವರೆಗೆ ಮರೆಯಾಗಿರಲಿ. ಬಹಳ ಜನರು ಅತ್ತಿತ್ತ ತಿರುಗುವರು, ತಿಳಿವಳಿಕೆಯು ಹೆಚ್ಚುವುದು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 “ದಾನಿಯೇಲನೇ, ನೀನು ಈ ಮಾತುಗಳನ್ನು ಮುಚ್ಚಿಡು; ಇವುಗಳನ್ನು ಬರೆಯುವ ಗ್ರಂಥಕ್ಕೆ ಮುದ್ರೆಹಾಕು; ಅಂತ್ಯಕಾಲದವರೆಗೆ ಮರೆಯಾಗಿರಲಿ. ಬಹುಜನರು ಅತ್ತಿತ್ತ ಅಲೆದಾಡುವರು (ಸತ್ಯಕ್ಕಾಗಿ). ಅಧರ್ಮ ಹೆಚ್ಚುತ್ತಿರುವುದು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ದಾನಿಯೇಲನೇ, ನೀನು ಈ ಮಾತುಗಳನ್ನು ಮುಚ್ಚಿಡು, ಅವುಗಳನ್ನು ಬರೆಯುವ ಗ್ರಂಥಕ್ಕೆ ಮುದ್ರೆಹಾಕು, ಅಂತ್ಯಕಾಲದವರೆಗೆ ಮರೆಯಾಗಿರಲಿ; ಬಹು ಜನರು ಅತ್ತಿತ್ತ ತಿರುಗುವರು, ತಿಳುವಳಿಕೆಯು ಹೆಚ್ಚುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 “ದಾನಿಯೇಲನೇ, ನೀನು ಈ ಸಂದೇಶವನ್ನು ರಹಸ್ಯವಾಗಿಡು. ಇದನ್ನು ಬರೆದ ಪುಸ್ತಕಕ್ಕೆ ಮುದ್ರೆಹಾಕು. ಅಂತ್ಯಕಾಲದವರೆಗೆ ನೀನು ಇದನ್ನು ರಹಸ್ಯವಾಗಿ ಇಡಬೇಕು. ನಿಜವಾದ ಜ್ಞಾನಕ್ಕಾಗಿ ಬಹುಜನರು ಅತ್ತಿತ್ತ ಸಂಚರಿಸುವರು. ನಿಜವಾದ ಜ್ಞಾನ ಬೆಳೆಯುವದು.” ಅಧ್ಯಾಯವನ್ನು ನೋಡಿ |