Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 12:5 - ಕನ್ನಡ ಸಮಕಾಲಿಕ ಅನುವಾದ

5 ಆಗ ದಾನಿಯೇಲನೆಂಬ ನಾನು ನೋಡಿದೆನು. ಅವರಿಬ್ಬರಲ್ಲಿ ಒಬ್ಬನು ನದಿಯ ತೀರದ ಈ ಕೊನೆಗೂ, ಇನ್ನೊಬ್ಬನು ನದಿಯ ತೀರದ ಆ ಕೊನೆಗೂ ನಿಂತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಕೂಡಲೆ ದಾನಿಯೇಲನಾದ ನಾನು ಮತ್ತಿಬ್ಬರನ್ನು ಕಂಡೆನು. ಅವರೊಳಗೆ ಒಬ್ಬನು ನದಿಯ ಈ ದಡದಲ್ಲಿ, ಇನ್ನೊಬ್ಬನು ಆ ದಡದಲ್ಲಿ ನಿಂತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಕೂಡಲೆ ದಾನಿಯೇಲನಾದ ನಾನು ಮತ್ತೆ ಇಬ್ಬರು ವ್ಯಕ್ತಿಗಳನ್ನು ಕಂಡೆ. ಅವರಲ್ಲಿ ಒಬ್ಬನು ನದಿಯ ಈ ದಡದಲ್ಲಿ, ಇನ್ನೊಬ್ಬನು ಆ ದಡದಲ್ಲಿ ನಿಂತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಕೂಡಲೆ ದಾನಿಯೇಲನಾದ ನಾನು ಮತ್ತಿಬ್ಬರನ್ನು ಕಂಡೆನು; ಅವರೊಳಗೆ ಒಬ್ಬನು ನದಿಯ ಈ ದಡದಲ್ಲಿ, ಇನ್ನೊಬ್ಬನು ಆ ದಡದಲ್ಲಿ ನಿಂತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆಗ, ದಾನಿಯೇಲನೆಂಬ ನಾನು, ಮತ್ತಿಬ್ಬರನ್ನು ಕಂಡೆನು. ಅವರೊಳಗೆ ಒಬ್ಬನು ನದಿಯ ಈಚೆ ದಡದಲ್ಲಿಯೂ ಇನ್ನೊಬ್ಬನು ಆಚೆದಡದಲ್ಲಿಯೂ ನಿಂತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 12:5
5 ತಿಳಿವುಗಳ ಹೋಲಿಕೆ  

ಆಗ ಮಾನವನಂತೆ ಇರುವ ಒಬ್ಬನು ನನ್ನ ತುಟಿಗಳನ್ನು ಮುಟ್ಟಿದನು. ನಾನು ಬಾಯಿತೆರೆದು ಮಾತನಾಡಿ, ನನ್ನ ಮುಂದೆ ನಿಂತಿದ್ದವನಿಗೆ, “ನನ್ನ ಒಡೆಯನೇ, ಆ ದರ್ಶನದ ನಿಮಿತ್ತ, ನನ್ನ ಸಂಕಟಗಳು ನನ್ನ ಮೇಲೆ ತಿರುಗಿಕೊಂಡಿವೆ, ನಾನು ನಿತ್ರಾಣನಾಗಿದ್ದೇನೆ.


ಒಂದು ಕೈ ನನ್ನನ್ನು ಮುಟ್ಟಿ, ನನ್ನ ಮೊಣಕಾಲುಗಳೂ, ನನ್ನ ಅಂಗೈಗಳೂ ನಡುಗುವಂತೆ ಮಾಡಿತು.


ಆದರೆ ದಾನಿಯೇಲನೇ ನೀನು, ಅಂತ್ಯಕಾಲದವರೆಗೂ ಈ ಮಾತುಗಳನ್ನು ಮುಚ್ಚಿಡು; ಅವುಗಳನ್ನು ಬರೆದಿರುವ ಆ ಗ್ರಂಥಕ್ಕೆ ಮುದ್ರೆ ಹಾಕು. ಅನೇಕರು ಅತ್ತಿತ್ತ ಓಡಾಡುವರು, ಜ್ಞಾನವು ಹೆಚ್ಚಾಗುವುದು,” ಎಂದು ಹೇಳಿದನು.


ಅವರು ನದಿಯ ನೀರಿನ ಮೇಲೆ ನಿಂತು, ನಾರುಬಟ್ಟೆಯನ್ನು ಧರಿಸಿದ್ದ ಒಬ್ಬನಿಗೆ ಇನ್ನೊಬ್ಬನು, “ಈ ಆಶ್ಚರ್ಯದ ಅಂತ್ಯವು ಎಷ್ಟರವರೆಗೆ ಇರುವುದು?” ಎಂದು ಕೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು