Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 12:9 - ಕನ್ನಡ ಸಮಕಾಲಿಕ ಅನುವಾದ

9 ಆಗ ಅವನು, “ದಾನಿಯೇಲನೇ, ನಿನ್ನ ದಾರಿಯಲ್ಲಿ ಹೋಗು, ಏಕೆಂದರೆ ಈ ಮಾತುಗಳು ಅಂತ್ಯಕಾಲದವರೆಗೂ ಮುಚ್ಚಿ, ಮುದ್ರಿತವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅವನು, “ದಾನಿಯೇಲನೇ, ಈ ಮಾತುಗಳು ಅಂತ್ಯಕಾಲದ ವರೆಗೆ ಮುಚ್ಚಲ್ಪಟ್ಟು ಮುದ್ರಿತವಾಗಿವೆ, ಹೋಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅವನು, “ದಾನಿಯೇಲನೇ ಹೋಗು; ಈ ಮಾತುಗಳು ಅಂತ್ಯಕಾಲದವರೆಗೂ ಮುಚ್ಚಲ್ಪಟ್ಟು ಮುದ್ರಿತವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ದಾನಿಯೇಲನೇ, ಈ ಮಾತುಗಳು ಅಂತ್ಯಕಾಲದವರೆಗೆ ಮುಚ್ಚಲ್ಪಟ್ಟು ಮುದ್ರಿತವಾಗಿವೆ, ಹೋಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಅದಕ್ಕೆ ಆತನು, “ದಾನಿಯೇಲನೇ, ನಿನ್ನ ಜೀವನ ಸಾಗಲಿ. ಈ ಸಂದೇಶವು ರಹಸ್ಯವಾದದ್ದು. ಅಂತ್ಯಕಾಲ ಬರುವವರೆಗೆ ಇದು ರಹಸ್ಯವಾಗಿ ಉಳಿಯುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 12:9
8 ತಿಳಿವುಗಳ ಹೋಲಿಕೆ  

ಆದರೆ ದಾನಿಯೇಲನೇ ನೀನು, ಅಂತ್ಯಕಾಲದವರೆಗೂ ಈ ಮಾತುಗಳನ್ನು ಮುಚ್ಚಿಡು; ಅವುಗಳನ್ನು ಬರೆದಿರುವ ಆ ಗ್ರಂಥಕ್ಕೆ ಮುದ್ರೆ ಹಾಕು. ಅನೇಕರು ಅತ್ತಿತ್ತ ಓಡಾಡುವರು, ಜ್ಞಾನವು ಹೆಚ್ಚಾಗುವುದು,” ಎಂದು ಹೇಳಿದನು.


“ನಿಮಗೆ ನೀಡಲಾದ ಸಂಜೆ ಮತ್ತು ಮುಂಜಾನೆಗಳ ದರ್ಶನವು ಸತ್ಯವಾದದ್ದು. ಆದರೆ ಆ ದರ್ಶನವು ಗುಟ್ಟಾಗಿರಲಿ. ಏಕೆಂದರೆ ಅದು ಬಹು ದೂರದ ಭವಿಷ್ಯಕ್ಕೆ ಸಂಬಂಧಿಸಿದ್ದು.”


ಏಳು ಗುಡುಗುಗಳು ಮಾತನಾಡಿದಾಗ, ನಾನು ಬರೆಯಬೇಕೆಂದಿದ್ದೆನು. ಆದರೆ ಪರಲೋಕದಿಂದ ಬಂದ ಶಬ್ದವು, “ನೀನು ಆ ಏಳು ಗುಡುಗುಗಳು ಹೇಳಿರುವುದನ್ನು ಮುದ್ರೆಹಾಕಿ ಮುಚ್ಚಿಡು. ಅದನ್ನು ಬರೆಯಬೇಡ,” ಎಂದು ಹೇಳುವುದನ್ನು ಕೇಳಿದೆನು.


ದರ್ಶನವೆಲ್ಲಾ ನಿಮಗೆ ಮುದ್ರೆ ಹಾಕಿದ ಗ್ರಂಥದ ವಾಕ್ಯಗಳ ಹಾಗಾಯಿತು. ಅದನ್ನು ಅಕ್ಷರ ಬಲ್ಲವನಿಗೆ ಕೊಟ್ಟು, “ಇದನ್ನು ಓದು,” ಎಂದು ವಿನಂತಿಸಿದರೆ ಅವನು, “ಮುದ್ರೆ ಹಾಕಿದೆಯೆಲ್ಲಾ, ಆಗುವುದಿಲ್ಲ,” ಅನ್ನುವನು.


ಸಾಕ್ಷಿಯನ್ನು ಕಟ್ಟಿಡು, ನನ್ನ ಶಿಷ್ಯರೊಳಗೆ ದೇವರ ಶಿಕ್ಷಣವನ್ನು ಮುದ್ರಿಸು.


ನಿನ್ನ ಜನರಿಗೆ ಮುಂದಿನ ದಿನಗಳಲ್ಲಿ ಏನು ಸಂಭವಿಸುವುದು ಎಂಬುದನ್ನು ತಿಳಿಸುವುದಕ್ಕೋಸ್ಕರ ನಾನೀಗ ಬಂದಿದ್ದೇನೆ. ಏಕೆಂದರೆ ದರ್ಶನವು ಮುಂದೆ ಬರಲಿಕ್ಕಿರುವ ಸಮಯವನ್ನು ಕುರಿತಾಗಿರುತ್ತದೆ,” ಎಂದನು.


ಅಂತ್ಯಕಾಲದಲ್ಲಿ ದಕ್ಷಿಣದ ಅರಸನು ಅವನ ಮೇಲೆ ಬೀಳುವನು; ಉತ್ತರದ ಅರಸನು ರಥಗಳೊಂದಿಗೂ, ಸವಾರರೊಂದಿಗೂ, ಅನೇಕ ಹಡಗುಗಳೊಂದಿಗೂ ಸುಳಿಗಾಳಿಯಂತೆ ಅವನಿಗೆ ವಿರೋಧವಾಗಿ ದೇಶಗಳನ್ನು ಪ್ರವೇಶಿಸಿ ಪ್ರಳಯದಂತೆ ಹಾದುಹೋಗುವನು.


ನಾನು ಅದನ್ನು ಕೇಳಿದೆನು, ಆದರೆ ಗ್ರಹಿಸಲಿಲ್ಲ. ಆಗ ನಾನು, “ನನ್ನ ಒಡೆಯನೇ, ಈ ಸಂಗತಿಗಳ ಅಂತ್ಯವೇನು?” ಎಂದು ಕೇಳಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು