Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 2:21 - ಕನ್ನಡ ಸಮಕಾಲಿಕ ಅನುವಾದ

21 ಅವರು ಕಾಲವನ್ನೂ, ಸಮಯವನ್ನೂ ಬದಲಾಯಿಸುತ್ತಾ ಅವರು ಅರಸರನ್ನು ಕಡೆಗಣಿಸುತ್ತಾರೆ ಮತ್ತು ಇತರರನ್ನು ಮೇಲಕ್ಕೆತ್ತುತ್ತಾರೆ. ಜ್ಞಾನಿಗಳಿಗೆ ಜ್ಞಾನವನ್ನೂ, ಬುದ್ಧಿವಂತರಿಗೆ ತಿಳುವಳಿಕೆಯನ್ನೂ ಕೊಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಕಾಲ ಸಮಯಗಳನ್ನು ಮಾರ್ಪಡಿಸುತ್ತಾನೆ, ರಾಜರನ್ನು ಕಡೆಗಣಿಸುತ್ತಾನೆ, ನೆಲೆಸುವಂತೆ ಮಾಡುತ್ತಾನೆ; ಜ್ಞಾನಿಗಳ ಜ್ಞಾನವು, ವಿವೇಕಿಗಳ ವಿವೇಕವು ಆತನ ವರವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಕಾಲಗಳು ಋತುಗಳು ಆತನ ಕೈಯಲ್ಲಿವೆ ರಾಜರನ್ನು ಕೆಳಕ್ಕಿಳಿಸುವವನು, ಮೇಲೆ ನಿಲ್ಲಿಸುವವನು ಆತನೆ. ಜ್ಞಾನಿಗಳ ಜ್ಞಾನ, ವಿವೇಕಿಗಳ ವಿವೇಕ ಆತನ ಕೊಡುಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಕಾಲಸಮಯಗಳನ್ನು ಮಾರ್ಪಡಿಸುತ್ತಾನೆ, ರಾಜರನ್ನು ತಳ್ಳುತ್ತಾನೆ, ನಿಲ್ಲಿಸುತ್ತಾನೆ; ಜ್ಞಾನಿಗಳ ಜ್ಞಾನವು, ವಿವೇಕಿಗಳ ವಿವೇಕವು ಆತನ ವರವೇ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಆತನು ಕಾಲಸಮಯಗಳನ್ನು ಮಾರ್ಪಡಿಸುತ್ತಾನೆ. ಆತನು ಅರಸರನ್ನು ಬದಲಾಯಿಸುತ್ತಾನೆ. ಆತನು ಅರಸರಿಗೆ ಪ್ರಭುತ್ವವನ್ನು ಕೊಡುವನು. ಆತನು ಅವರ ಪ್ರಭುತ್ವವನ್ನು ಕಿತ್ತುಕೊಳ್ಳುವನು! ಜನರಿಗೆ ಜ್ಞಾನವನ್ನು ಕೊಟ್ಟು ಜ್ಞಾನಿಗಳನ್ನಾಗಿ ಮಾಡುವವನು ಆತನೇ. ಜನರಿಗೆ ವಿವೇಕವನ್ನು ಕೊಟ್ಟು ವಿವೇಕಿಗಳನ್ನಾಗಿ ಮಾಡುವವನು ಆತನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 2:21
40 ತಿಳಿವುಗಳ ಹೋಲಿಕೆ  

“ ‘ಈ ತೀರ್ಮಾನವು ದೂತರಿಂದ ಪ್ರಕಟವಾಯಿತು, ಪರಿಶುದ್ಧರು ಅಂತಿಮ ನಿರ್ಣಯವನ್ನು ಘೋಷಿಸುವರು, ಮಹೋನ್ನತರು ಜನರ ರಾಜ್ಯಗಳ ಮೇಲೆ ಸರ್ವಾಧಿಕಾರಿಯಾಗಿರುವರೆಂದೂ, ರಾಜ್ಯಗಳನ್ನು ತಮ್ಮ ಮನಸ್ಸಿಗೆ ಬಂದವರಿಗೆ ಕೊಡುವರೆಂದೂ, ಅವುಗಳ ಮೇಲೆ ಕೀಳಾದವರನ್ನು ನೇಮಿಸುವರೆಂದೂ ಇದರಿಂದ ಜೀವಿತರು ತಿಳಿದುಕೊಳ್ಳುವರು.’


ಅವನು ಮಹೋನ್ನತ ದೇವರಿಗೆ ವಿರೋಧವಾಗಿ ಕೊಚ್ಚಿಕೊಂಡು ಮಾತುಗಳನ್ನಾಡಿ, ಪರಿಶುದ್ಧರನ್ನು ಬಾಧಿಸಿ, ಕಾಲ ನಿಯಮಗಳನ್ನು ಬದಲಾಯಿಸುವುದಕ್ಕೆ ಪ್ರಯತ್ನಿಸುವನು. ಪರಿಶುದ್ಧರು ಒಂದುಕಾಲ, ಎರಡುಕಾಲ, ಅರ್ಧಕಾಲದ ತನಕ ಅವರು ಅವನ ಕೈವಶವಾಗಿರುವರು.


ನೀನು ಮಾನವ ಸಮಾಜದಿಂದ ಬಹುಷ್ಕೃತನಾಗುವೆ. ಕಾಡುಮೃಗಗಳ ನಡುವೆ ವಾಸಿಸುವೆ. ನೀನು ದನಗಳ ಹಾಗೆ ಹುಲ್ಲನ್ನು ಮೇಯುವೆ. ಮಹೋನ್ನತರು ಮನುಷ್ಯರ ರಾಜ್ಯವನ್ನಾಳುವರೆಂದು ತಮ್ಮ ಮನಸ್ಸಿಗೆ ಸರಿ ಬಂದವರಿಗೆ ಅದನ್ನು ಕೊಡುವೆರೆಂದು ನೀನು ತಿಳಿಯುವಷ್ಟರಲ್ಲಿ ಏಳು ಕಾಲಗಳು ನಿನ್ನನ್ನು ದಾಟಿ ಹೋಗುವುವು,” ಎಂಬುದೇ.


ದೇವರು ಅರಸರಿಂದ ಹಾಕಲಾದ ಬಂಧನಗಳನ್ನು ಬಿಚ್ಚಿ, ಅವರ ನಡುಗಳಿಗೆ ವಸ್ತ್ರವನ್ನು ಕಟ್ಟುತ್ತಾರೆ.


ದೇವರು ಸೊಲೊಮೋನನಿಗೆ ಅತ್ಯಧಿಕವಾಗಿ ಜ್ಞಾನವನ್ನೂ, ಗ್ರಹಿಕೆಯನ್ನೂ, ಸಮುದ್ರ ತೀರದಲ್ಲಿಯ ಮರಳಿನ ಹಾಗೆಯೇ ವಿವೇಕವನ್ನೂ ಕೊಟ್ಟರು.


ನಿಮ್ಮಲ್ಲಿ ಯಾರಿಗಾದರೂ ಜ್ಞಾನ ಕಡಿಮೆಯಾಗಿದ್ದರೆ, ಅವರು ದೇವರನ್ನು ಕೇಳಿಕೊಳ್ಳಲಿ, ಅದು ಅವರಿಗೆ ದೊರಕುವುದು. ದೇವರು ತಪ್ಪು ಕಂಡುಹಿಡಿಯದೆ ಎಲ್ಲರಿಗೂ ಉದಾರಮನಸ್ಸಿನಿಂದ ಕೊಡುವರು.


ಏಕೆಂದರೆ ನಿಮ್ಮ ವಿರೋಧಿಗಳು ಸಹ ಪ್ರತಿವಾದಿಸಲಾಗದ ಇಲ್ಲವೆ ವಿರೋಧಿಸಲಾಗದ ಮಾತನ್ನೂ ಜ್ಞಾನವನ್ನೂ ನಾನು ನಿಮಗೆ ಕೊಡುವೆನು.


ಎಲ್ಲಾ ಉತ್ತಮ ಮತ್ತು ಪೂರ್ಣವಾದ ವರಗಳೂ ಮೇಲಿನಿಂದ ಬಂದವುಗಳೇ, ಅವು ಪರಲೋಕದ ಬೆಳಕಿನ ತಂದೆಯಿಂದ ಇಳಿದು ಬರುತ್ತವೆ. ಆ ತಂದೆಯು ಬದಲಾಗುವ ನೆರಳಿನಂತೆ ಬದಲಾಗುವವರಲ್ಲ.


ಅರಸನು ತೀರಿಸಿದ ನ್ಯಾಯವನ್ನು ಕುರಿತು ಸಮಸ್ತ ಇಸ್ರಾಯೇಲರು ಕೇಳಿ, ಅರಸನಿಗೆ ಭಯಪಟ್ಟರು. ಏಕೆಂದರೆ ನ್ಯಾಯತೀರಿಸಲು ಅವನಲ್ಲಿ ದೇವರ ಜ್ಞಾನವಿದೆ ಎಂದು ಕಂಡರು.


ನಾನು ಅವನನ್ನು ದೇವರ ಆತ್ಮನಿಂದಲೂ ಜ್ಞಾನದಿಂದಲೂ ತಿಳುವಳಿಕೆಯಿಂದಲೂ ವಿವೇಕದಿಂದಲೂ ಎಲ್ಲಾ ವಿಧವಾದ ಕೌಶಲ್ಯದಿಂದಲೂ ತುಂಬಿಸಿದ್ದೇನೆ.


ನೀವು ದೇವರಿಂದಲೇ ಕ್ರಿಸ್ತ ಯೇಸುವಿನಲ್ಲಿದ್ದೀರಿ. ಕ್ರಿಸ್ತ ಯೇಸು ನಮಗೆ ದೇವರ ಕಡೆಯಿಂದ ಜ್ಞಾನವೂ ನೀತಿಯೂ ಶುದ್ಧೀಕರಣವೂ ವಿಮೋಚನೆಯೂ ಆಗಿದ್ದಾರೆ.


ನೀವು ಕನಸನ್ನು ನನಗೆ ಹೇಳದಿದ್ದರೆ, ನಿಮಗೆ ಒಂದೇ ಒಂದು ಶಿಕ್ಷೆಯಿದೆ. ತಪ್ಪು ಮಾರ್ಗಕ್ಕೆ ನಡೆಸುವ ಹಾಗೂ ಕೆಟ್ಟ ಸಂಗತಿಗಳನ್ನು ನನಗೆ ಹೇಳಿ, ಪರಿಸ್ಥಿತಿಯನ್ನು ನೀವು ನನಗೆ ವಿರೋಧವಾಗಿ ಒಪ್ಪಂದ ಮಾಡಿಕೊಂಡಿದ್ದೀರಿ, ಬದಲಾವಣೆಯನ್ನು ನಿರೀಕ್ಷಿಸುವಂತೆ. ಆದ್ದರಿಂದ ಕನಸನ್ನು ನನಗೆ ಹೇಳಲೇಬೇಕು. ಆಗ ಅದನ್ನು ವ್ಯಾಖ್ಯಾನ ಮಾಡಿ, ವಿವರಿಸುವಿರೆಂದು ನಾನು ತಿಳಿಯುವೆನು,” ಎಂದನು.


ನೀನು ನಿನ್ನ ದೇವರಾದ ಯೆಹೋವ ದೇವರ ನಿಯಮವನ್ನು ಕೈಗೊಳ್ಳುವಂತೆ ದೇವರು ನಿನಗೆ ಬುದ್ಧಿಯನ್ನೂ, ಗ್ರಹಿಕೆಯನ್ನೂ ಕೊಟ್ಟು ಇಸ್ರಾಯೇಲನ್ನು ಕುರಿತು ನಿನಗೆ ಆಜ್ಞಾಪಿಸಲಿ.


ದೇವರು ಸೊಲೊಮೋನನ ಹೃದಯದಲ್ಲಿ ಕೊಟ್ಟಿದ್ದ ಜ್ಞಾನವನ್ನು ಕೇಳುವುದಕ್ಕಾಗಿ ಭೂಲೋಕದಲ್ಲಿರುವ ಸಮಸ್ತರೂ ಅವನ ದರ್ಶನವನ್ನು ಬಯಸಿದರು.


ಆತನ ತೊಡೆಯ ಮೇಲಣ ವಸ್ತ್ರದಲ್ಲಿ: ರಾಜಾಧಿರಾಜನೂ ಕರ್ತರ ಕರ್ತನೂ. ಎಂಬ ಹೆಸರು ಬರೆದಿದೆ.


ಕೆಲವು ವರ್ಷಗಳ ನಂತರ ಅವರಿಬ್ಬರು ಒಪ್ಪಂದ ಮಾಡಿಕೊಳ್ಳುವರು. ದಕ್ಷಿಣದ ಅರಸನ ಮಗಳು ಒಪ್ಪಂದ ಮಾಡಿಕೊಳ್ಳಲು ಉತ್ತರದ ಅರಸನ ಬಳಿಗೆ ಬರುವಳು. ಆದರೆ ಅವಳು ತನ್ನ ಅಧಿಕಾರವನ್ನು ಉಳಿಸಿಕೊಳ್ಳುವುದಿಲ್ಲ. ಅವನೂ, ಅವನ ಅಧಿಕಾರವೂ ನಿಲ್ಲುವುದಿಲ್ಲ. ಆ ದಿನಗಳಲ್ಲಿ ಅವಳೂ ಅವಳನ್ನು ಕರೆತಂದವರೂ ಮತ್ತು ಅವಳ ತಂದೆಯೂ ಅವಳಿಗೆ ಸಹಾಯ ಮಾಡಿದವರು ಯಾರೂ ಉಳಿಯುವುದಿಲ್ಲ.


ದರ್ಶಿಯಾದ ಸಮುಯೇಲನ ಪುಸ್ತಕದಲ್ಲಿ, ಪ್ರವಾದಿಯಾದ ನಾತಾನನ ಪುಸ್ತಕದಲ್ಲಿ ಮತ್ತು ದರ್ಶಿಯಾದ ಗಾದನ ಪುಸ್ತಕದಲ್ಲಿಯೂ ಲಿಖಿತವಾಗಿವೆ.


ಇಗೋ, ನಾನೇ ಅವನೊಂದಿಗೆ ದಾನನ ಕುಲದವನಾದ ಅಹೀಸಾಮಾಕನ ಮಗನಾದ ಒಹೋಲಿಯಾಬನನ್ನು ನೇಮಿಸಿದ್ದೇನೆ. “ನಾನು ನಿನಗೆ ಆಜ್ಞಾಪಿಸಿದ್ದೆಲ್ಲವನ್ನು ಮಾಡುವುದಕ್ಕೆ ಜಾಣರಾದವರೆಲ್ಲರ ಹೃದಯಗಳಲ್ಲಿ ಯಾವ ಕೆಲಸವನ್ನಾದರೂ ಕಲ್ಪಿಸಿ ಮಾಡುವದಕ್ಕೆ ಜ್ಞಾನವನ್ನು ಅನುಗ್ರಹಿಸಿದ್ದೇನೆ.


ಆಗ ನೀತಿ ನ್ಯಾಯಗಳನ್ನು ತಿಳಿದ ಪಂಡಿತರೆಲ್ಲರೊಂದಿಗೆ ಅರಮನೆಯ ಸಂಗತಿಗಳನ್ನು ಆಲೋಚಿಸುವುದು ಅರಸನ ಪದ್ಧತಿಯಾಗಿತ್ತು. ಆದುದರಿಂದ ಅರಸನು ಕಾಲಜ್ಞಾನಿಗಳ ಸಂಗಡ ಈ ವಿಷಯವಾಗಿ ವಿಚಾರಿಸಿದನು.


ಪ್ರತಿಯೊಬ್ಬನೂ ಮೇಲಧಿಕಾರಿಗಳಿಗೆ ಅಧೀನನಾಗಿರಬೇಕು, ಏಕೆಂದರೆ ದೇವರು ನೇಮಿಸಿದ ಅಧಿಕಾರದ ಹೊರತು ಬೇರೆ ಯಾವದೂ ಇರುವುದಿಲ್ಲ. ಇರುವ ಅಧಿಕಾರಗಳು ದೇವರಿಂದಲೇ ನೇಮಕಗೊಂಡಿವೆ.


ಈ ನಾಲ್ಕು ಯೌವನಸ್ಥರಿಗೆ ದೇವರು ಎಲ್ಲಾ ವಿದ್ಯೆಯಲ್ಲಿಯೂ, ಜ್ಞಾನದಲ್ಲಿಯೂ, ತಿಳುವಳಿಕೆಯನ್ನೂ, ವಿವೇಕವನ್ನೂ ಕೊಟ್ಟರು. ದಾನಿಯೇಲನು ಸಕಲ ದರ್ಶನಗಳಲ್ಲಿಯೂ, ಕನಸುಗಳಲ್ಲಿಯೂ ತಿಳುವಳಿಕೆಯುಳ್ಳವನಾಗಿದ್ದನು.


ಹೀಗೆಂದು ಹೇಳಿದನು: “ಯುಗಯುಗಾಂತರಕ್ಕೂ ದೇವರ ನಾಮಕ್ಕೆ ಸ್ತುತಿಸ್ತೋತ್ರವಾಗಲಿ! ಏಕೆಂದರೆ ಜ್ಞಾನವೂ, ಬಲವೂ ಅವರದಾಗಿದೆ.


ನನ್ನ ಪಿತೃಗಳ ದೇವರೇ, ನಾನು ನಿಮ್ಮನ್ನು ಕೊಂಡಾಡಿ, ನಿಮಗೆ ಕೃತಜ್ಞತೆ ಸಲ್ಲಿಸುತ್ತೇನೆ. ಏಕೆಂದರೆ ನೀವು ನನಗೆ ಜ್ಞಾನವನ್ನೂ, ಬಲವನ್ನೂ ಕೊಟ್ಟು; ನಾವು ನಿನ್ನಿಂದ ಅಪೇಕ್ಷಿಸಿಕೊಂಡದ್ದನ್ನು ನಮಗೆ ತಿಳಿಯಪಡಿಸಿದ್ದೀರಿ; ನೀವು ಈಗ ನಮಗೆ ಅರಸನ ಕನಸನ್ನು ತಿಳಿಯಪಡಿಸಿದ್ದೀರಿ.”


ಪಾರಸಿಯ ಅರಸ ಕೋರೆಷನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಬೇಲ್ತೆಶಚ್ಚರನೆಂಬ ದಾನಿಯೇಲನಿಗೆ ಒಂದು ಪ್ರಕಟಣೆಯಾಯಿತು. ಅದರ ಸಂದೇಶವು ಸತ್ಯವಾದದ್ದು. ಅದು ಮಹಾ ಯುದ್ಧ ವಿಷಯವಾಗಿದೆ. ಸಂದೇಶದ ಅರ್ಥವು ಅವನಿಗೆ ಒಂದು ದರ್ಶನದಲ್ಲಿ ಬಂದಿತು.


ಅವನು ಗಟ್ಟಿಯಾಗಿ ಕೂಗಿ: ‘ಮರವನ್ನು ಕಡಿಯಿರಿ. ಅದರ ಕೊಂಬೆಗಳನ್ನು ಕತ್ತರಿಸಿ, ಅದರ ಎಲೆಗಳನ್ನು ಉದುರಿಸಿ, ಅದರ ಫಲವನ್ನು ಚದುರಿಸಿಬಿಡಿರಿ. ಮೃಗಗಳು ಅದರ ಕೆಳಗಿನಿಂದಲೂ, ಪಕ್ಷಿಗಳು ಅದರ ಕೊಂಬೆಗಳಿಂದಲೂ ಹೋಗಿಬಿಡಲಿ.


ಅರಸನೇ, ಆ ಮರವು ನೀನೇ ಆಗಿರುವೆ. ನೀನು ಬೆಳೆದು ಬಲವಾಗಿರುವೆ. ಹೌದು, ನಿನ್ನ ಮಹತ್ತು ಬೆಳೆದು ಆಕಾಶಕ್ಕೂ, ನಿನ್ನ ಅಧಿಕಾರವು ಭೂಮಿಯ ಅಂತ್ಯದವರೆಗೂ ಮುಟ್ಟುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು