Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 2:23 - ಕನ್ನಡ ಸಮಕಾಲಿಕ ಅನುವಾದ

23 ನನ್ನ ಪಿತೃಗಳ ದೇವರೇ, ನಾನು ನಿಮ್ಮನ್ನು ಕೊಂಡಾಡಿ, ನಿಮಗೆ ಕೃತಜ್ಞತೆ ಸಲ್ಲಿಸುತ್ತೇನೆ. ಏಕೆಂದರೆ ನೀವು ನನಗೆ ಜ್ಞಾನವನ್ನೂ, ಬಲವನ್ನೂ ಕೊಟ್ಟು; ನಾವು ನಿನ್ನಿಂದ ಅಪೇಕ್ಷಿಸಿಕೊಂಡದ್ದನ್ನು ನಮಗೆ ತಿಳಿಯಪಡಿಸಿದ್ದೀರಿ; ನೀವು ಈಗ ನಮಗೆ ಅರಸನ ಕನಸನ್ನು ತಿಳಿಯಪಡಿಸಿದ್ದೀರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ನನ್ನ ಪೂರ್ವಿಕರ ದೇವರೇ, ನಿನ್ನನ್ನು ಸ್ತುತಿಸುತ್ತೇನೆ, ಕೊಂಡಾಡುತ್ತೇನೆ, ನೀನು ನನಗೆ ಜ್ಞಾನತ್ರಾಣಗಳನ್ನು ದಯಪಾಲಿಸಿ ನಾವು ಬೇಡಿದ್ದನ್ನು ನನಗೆ ತೋರ್ಪಡಿಸಿದ್ದಿಯಲ್ಲಾ; ಹೌದು, ರಾಜನ ರಹಸ್ಯವನ್ನು ನಮಗೆ ಪ್ರಕಟಪಡಿಸಿರುವೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ನನ್ನ ಪಿತೃಗಳ ದೇವಾ, ಮಾಡುವೆ ನಿನ್ನ ಗುಣಗಾನ, ನಿನಗೆ ನನ್ನ ಧನ್ಯವಾದ. ಏಕೆಂದರೆ ನೀನೇ ನನಗೆ ಜ್ಞಾನಶಕ್ತಿಗಳನ್ನು ದಯಪಾಲಿಸಿದಾತ. ನಾವು ಬೇಡಿದ್ದನ್ನು ನನಗೆ ತೋರ್ಪಡಿಸಿದಾತ ನೀನೇ ಹೌದು, ರಾಜ ಬಯಸಿದ ಗುಟ್ಟನ್ನು ನಮಗೆ ವ್ಯಕ್ತಪಡಿಸಿದಾತ ನೀನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ನನ್ನ ಪಿತೃಗಳ ದೇವರೇ, ನಿನ್ನನ್ನು ಸ್ತುತಿಸುತ್ತೇನೆ, ಕೊಂಡಾಡುತ್ತೇನೆ, ನೀನು ನನಗೆ ಜ್ಞಾನತ್ರಾಣಗಳನ್ನು ದಯಪಾಲಿಸಿ ನಾವು ಬೇಡಿದ್ದನ್ನು ನನಗೆ ತೋರ್ಪಡಿಸಿದಿಯಲ್ಲಾ; ಹೌದು, ರಾಜನ ರಹಸ್ಯವನ್ನು ನಮಗೆ ವ್ಯಕ್ತಗೊಳಿಸಿದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ನನ್ನ ಪೂರ್ವಿಕರ ದೇವರೇ, ನಿನ್ನನ್ನು ಕೊಂಡಾಡಿ ಸ್ತುತಿಸುತ್ತೇನೆ. ನೀನು ನನಗೆ ಜ್ಞಾನವನ್ನೂ ಸಾಮರ್ಥ್ಯವನ್ನೂ ದಯಪಾಲಿಸಿದೆ. ನಾನು ಕೇಳಿದ್ದನ್ನು ಅನುಗ್ರಹಿಸಿದೆ. ಅರಸನ ಕನಸಿನ ಬಗ್ಗೆ ತಿಳಿಸಿದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 2:23
33 ತಿಳಿವುಗಳ ಹೋಲಿಕೆ  

ದಾನಿಯೇಲನು ಅವನ ಜೊತೆಗಾರರೊಂದಿಗೆ ಉಳಿದ ಬಾಬಿಲೋನಿನ ಜ್ಞಾನಿಗಳ ಸಂಗಡ ಕೊಲೆಯಾಗದಂತೆ ಅವನು ತನ್ನ ಜೊತೆಗಾರರಿಗೆ ಅವರು ಈ ರಹಸ್ಯದ ಸಂಗತಿಯನ್ನು ಕುರಿತು ಪರಲೋಕದ ದೇವರಿಂದ ಕರುಣೆಯನ್ನು ಬೇಡಿಕೊಳ್ಳಬೇಕೆಂದು ಹೇಳಿದನು.


ಮತ್ತೆ ದೇವರು ಮೋಶೆಗೆ, “ ‘ನಿಮ್ಮ ಪಿತೃಗಳ ದೇವರೂ ಅಬ್ರಹಾಮನ ದೇವರೂ ಇಸಾಕನ ದೇವರೂ ಯಾಕೋಬನ ದೇವರೂ ಆಗಿರುವ ಯೆಹೋವ ದೇವರು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೆ,’ ಎಂದು ಇಸ್ರಾಯೇಲರಿಗೆ ಹೇಳಬೇಕು, “ಇದೇ ಯುಗಯುಗಕ್ಕೆ ನನ್ನ ಹೆಸರೂ, ತಲತಲಾಂತರಕ್ಕೂ ನನ್ನನ್ನು ಸ್ಮರಿಸಬೇಕಾದ ಹೆಸರು.


ಆ ಸಮಯದಲ್ಲಿ ಯೇಸು, ಪವಿತ್ರಾತ್ಮರ ಮುಖಾಂತರ ಆನಂದಗೊಂಡು, “ತಂದೆಯೇ, ಪರಲೋಕ, ಭೂಲೋಕಗಳ ಒಡೆಯರೇ, ನೀವು ಈ ವಿಷಯಗಳನ್ನು ಜ್ಞಾನಿಗಳಿಂದಲೂ ಬುದ್ಧಿವಂತರಿಂದಲೂ ಮರೆಮಾಡಿ, ಶಿಶುಗಳಿಗೆ ಪ್ರಕಟ ಮಾಡಿರುವುದರಿಂದ ನಾನು ನಿಮ್ಮನ್ನು ಕೊಂಡಾಡುತ್ತೇನೆ. ಹೌದು ತಂದೆಯೇ, ಹೀಗೆ ಮಾಡುವುದು ನಿಮ್ಮ ದೃಷ್ಟಿಗೆ ಒಳ್ಳೆಯದಾಗಿ ತೋಚಿತು.


ಆ ಸಮಯದಲ್ಲಿ ಯೇಸು, “ತಂದೆಯೇ, ಪರಲೋಕ ಭೂಲೋಕಗಳ ಒಡೆಯನೇ, ನೀವು ಈ ವಿಷಯಗಳನ್ನು ಜ್ಞಾನಿಗಳಿಂದಲೂ ಬುದ್ಧಿವಂತರಿಂದಲೂ ಮರೆಮಾಡಿ, ಶಿಶುಗಳಿಗೆ ಪ್ರಕಟ ಮಾಡಿರುವುದರಿಂದ ನಾನು ನಿಮ್ಮನ್ನು ಕೊಂಡಾಡುತ್ತೇನೆ.


ನಿಶ್ಚಯವಾಗಿ ತನ್ನ ಸೇವಕರಾದ ಪ್ರವಾದಿಗಳಿಗೆ ತನ್ನ ಯೋಜನೆಗಳನ್ನು ತಿಳಿಸದೆ, ಸಾರ್ವಭೌಮ ಯೆಹೋವ ದೇವರು ಏನನ್ನೂ ಮಾಡುವುದಿಲ್ಲ.


ಈ ನಾಲ್ಕು ಯೌವನಸ್ಥರಿಗೆ ದೇವರು ಎಲ್ಲಾ ವಿದ್ಯೆಯಲ್ಲಿಯೂ, ಜ್ಞಾನದಲ್ಲಿಯೂ, ತಿಳುವಳಿಕೆಯನ್ನೂ, ವಿವೇಕವನ್ನೂ ಕೊಟ್ಟರು. ದಾನಿಯೇಲನು ಸಕಲ ದರ್ಶನಗಳಲ್ಲಿಯೂ, ಕನಸುಗಳಲ್ಲಿಯೂ ತಿಳುವಳಿಕೆಯುಳ್ಳವನಾಗಿದ್ದನು.


ಆ ದಿನದಲ್ಲಿ ನೀನು ಹೇಳುವುದೇನೆಂದರೆ: “ಯೆಹೋವ ದೇವರೇ, ನಾನು ನಿಮಗೆ ಕೃತಜ್ಞತೆಯನ್ನು ಸಲ್ಲಿಸುವೆನು; ನೀವು ನನ್ನ ಮೇಲೆ ಕೋಪಗೊಂಡಿದ್ದರೂ, ಆ ನಿಮ್ಮ ಕೋಪವು ಪರಿಹಾರವಾಗಿ ನನ್ನನ್ನು ಸಂತೈಸುತ್ತೀರಲ್ಲವೆ?


“ದೇವರಾಗಿರುವ ನನಗೆ ಸ್ತೋತ್ರವನ್ನು ಬಲಿಯಾಗಿ ಅರ್ಪಿಸಿರಿ. ಮಹೋನ್ನತನಾಗಿರುವ ನನಗೆ ಹರಕೆಗಳನ್ನು ಸಲ್ಲಿಸಿರಿ.


ಯೆಹೋವ ದೇವರ ರಹಸ್ಯವು ಅವರಿಗೆ ಭಯಪಡುವವರೊಂದಿಗೆ ಇರುವುದು; ತಮ್ಮ ಒಡಂಬಡಿಕೆಯನ್ನು ಅವರು ಅಂಥವರಿಗೇ ತಿಳಿಸುವರು.


ಹಿರಿಯರಲ್ಲಿ ಒಬ್ಬನು ನನಗೆ, “ಅಳಬೇಡ! ನೋಡು, ಯೂದ ಕುಲದಲ್ಲಿ ಜನಿಸಿದ ಸಿಂಹವೂ ದಾವೀದನ ವಂಶಜರೂ ಆಗಿರುವವರು ಆ ಸುರುಳಿಯನ್ನು ಅದರ ಏಳು ಮುದ್ರೆಗಳನ್ನು ಬಿಚ್ಚುವುದಕ್ಕೆ ಜಯವೀರರಾಗಿದ್ದಾರೆ,” ಎಂದು ಹೇಳಿದನು.


ಇದು ಕ್ರಿಸ್ತ ಯೇಸುವಿನ ಪ್ರಕಟನೆ. ಶೀಘ್ರವೇ ಸಂಭವಿಸಲಿಕ್ಕಿರುವ ಸಂಗತಿಗಳನ್ನು ತಮ್ಮ ದಾಸರಿಗೆ ತೋರಿಸುವುದಕ್ಕಾಗಿ ದೇವರಿಂದ ಈ ಪ್ರಕಟನೆಯನ್ನು ಹೊಂದಿದರು. ಇದಲ್ಲದೆ ದೇವರು ತಮ್ಮ ದೇವದೂತನನ್ನು ಕಳುಹಿಸಿ, ಅವನ ಮುಖಾಂತರ ಆ ಸಂಗತಿಗಳನ್ನು ತಮ್ಮ ದಾಸನಾದ ಯೋಹಾನನಿಗೆ ತಿಳಿಸಿದರು.


ಆಗ ಕೆಲವರು ಕಲ್ಲನ್ನು ತೆಗೆದುಹಾಕಿದರು. ಯೇಸು ಕಣ್ಣೆತ್ತಿ ಮೇಲೆ ನೋಡಿ, “ತಂದೆಯೇ, ನೀವು ನನಗೆ ಕಿವಿಗೊಟ್ಟಿದ್ದಕ್ಕಾಗಿ ನಿಮಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.


ಯುದ್ಧದ ಆಯುಧಗಳಿಗಿಂತಲೂ ಜ್ಞಾನವು ಲೇಸು. ಆದರೆ ಒಬ್ಬ ಪಾಪಿಯು ಬಹು ಶುಭವನ್ನು ಹಾಳುಮಾಡುವನು.


ಪಟ್ಟಣದ ಹತ್ತು ಮಂದಿ ಅಧಿಕಾರಿಗಳ ಸ್ಥಿರತೆಗಿಂತ, ಜ್ಞಾನವು ಜ್ಞಾನಿಯನ್ನು ಹೆಚ್ಚಾಗಿ ಸ್ಥಿರಪಡಿಸುತ್ತದೆ.


ಬಲವುಳ್ಳವನಿಗಿಂತ ಜ್ಞಾನಿಯು ಶಕ್ತಿಶಾಲಿ; ತಿಳುವಳಿಕೆಯುಳ್ಳವನು ಬಲವನ್ನು ಹೆಚ್ಚಿಸಿಕೊಳ್ಳುತ್ತಾನೆ.


ಜ್ಞಾನಿಯು ಬಲಿಷ್ಠರ ಪಟ್ಟಣವನ್ನು ಹತ್ತಿ, ಅವರು ಭರವಸವಿಟ್ಟ ಬಲವಾದ ಕೋಟೆಯನ್ನು ಕೆಡವಿ ಹಾಕುತ್ತಾನೆ.


ಸಮಾಲೋಚನೆಯೂ ಒಳ್ಳೆಯ ನ್ಯಾಯವೂ ನನ್ನಲ್ಲಿದೆ. ನನ್ನಲ್ಲಿ ಒಳನೋಟವೂ ಶಕ್ತಿಯೂ ಇವೆ.


“ನಮ್ಮ ಪಿತೃಗಳ ದೇವರಾದ ಯೆಹೋವ ದೇವರೇ, ಪರಲೋಕದಲ್ಲಿರುವ ದೇವರು ನೀವಲ್ಲವೋ? ನೀವು ಜನಾಂಗಗಳ ಸಕಲ ರಾಜ್ಯಗಳ ಮೇಲೆ ಆಳುತ್ತೀರಲ್ಲವೋ? ಯಾವನೂ ನಿಮ್ಮನ್ನು ಎದುರಿಸಲಾಗದ ಹಾಗೆ ನಿಮ್ಮ ಕೈಯಲ್ಲಿ ಶಕ್ತಿಯೂ, ಪರಾಕ್ರಮವೂ ಇಲ್ಲವೋ?


ಆದ್ದರಿಂದ ನಮ್ಮ ದೇವರೇ, ನಾವು ನಿಮ್ಮನ್ನು ಸ್ತುತಿಸಿ, ನಿಮ್ಮ ಮಹಿಮೆಯುಳ್ಳ ನಾಮವನ್ನು ಕೊಂಡಾಡುತ್ತೇವೆ.


ದಾವೀದನು ಸಮಸ್ತ ಕೂಟದ ಮುಂದೆ ಯೆಹೋವ ದೇವರನ್ನು ಕೊಂಡಾಡಿ ಹೇಳಿದ್ದೇನೆಂದರೆ, “ನಮ್ಮ ತಂದೆಯಾದ ಇಸ್ರಾಯೇಲಿನ ದೇವರಾದ ಯೆಹೋವ ದೇವರೇ, ನೀವು ಯುಗಯುಗಾಂತರಗಳಿಂದ ಯುಗಯುಗಾಂತರಗಳಿಗೂ ಸ್ತುತಿಗೆ ಪಾತ್ರರಾಗಿದ್ದೀರಿ.


ಸಾಯಂಕಾಲದ ಬಲಿಯನ್ನು ಅರ್ಪಿಸುವ ವೇಳೆಯಲ್ಲಿ ಪ್ರವಾದಿಯಾದ ಎಲೀಯನು ಬಲಿಪೀಠದ ಸಮೀಪಕ್ಕೆ ಬಂದು, “ಅಬ್ರಹಾಮನಿಗೂ, ಇಸಾಕನಿಗೂ, ಇಸ್ರಾಯೇಲಿಗೂ ದೇವರಾದ ಯೆಹೋವ ದೇವರೇ, ಇಸ್ರಾಯೇಲಿನಲ್ಲಿ ನೀವೇ ದೇವರೆಂದೂ, ನಾನು ನಿಮ್ಮ ಸೇವಕನೆಂದೂ, ನಾನು ಈ ಕಾರ್ಯಗಳನ್ನೆಲ್ಲಾ ನಿಮ್ಮ ಮಾತಿನ ಹಾಗೆಯೇ ಮಾಡಿದ್ದೇನೆಂದೂ ಇಂದು ತೋರಿಸಿಕೊಡಿರಿ.


ನಮ್ಮ ದೇವರಾದ ಯೆಹೋವ ದೇವರು ನಮ್ಮನ್ನು ಕೈಬಿಡದೆ, ನಮ್ಮನ್ನು ತ್ಯಜಿಸದೆ, ನಮ್ಮ ಪಿತೃಗಳ ಸಂಗಡ ಹೇಗೆ ಇದ್ದರೋ ಹಾಗೆಯೇ ನಮ್ಮ ಸಂಗಡ ಇರಲಿ.


ಆಗ ಯೆಹೋವ ದೇವರು, “ನಾನು ಮಾಡುವುದನ್ನು ಅಬ್ರಹಾಮನಿಗೆ ಮರೆಮಾಡಲೋ?


ಇನ್ನು ಮೇಲೆ ನಾನು ನಿಮ್ಮನ್ನು ಆಳುಗಳೆಂದು ಕರೆಯುವುದಿಲ್ಲ. ಏಕೆಂದರೆ ತನ್ನ ಧಣಿಯು ಮಾಡುವಂಥದ್ದು ಆಳಿಗೆ ತಿಳಿಯುವುದಿಲ್ಲ. ಆದರೆ ನಾನು ನಿಮ್ಮನ್ನು ಸ್ನೇಹಿತರೆಂದು ಕರೆದಿದ್ದೇನೆ. ಏಕೆಂದರೆ ನನ್ನ ತಂದೆಯಿಂದ ಕೇಳಿದ್ದನ್ನೆಲ್ಲಾ ನಾನು ನಿಮಗೆ ತಿಳಿಯಪಡಿಸಿದ್ದೇನೆ.


ಇದನ್ನು ನೋಡಿ ನಾನು, “ಬಲಕ್ಕಿಂತ ಜ್ಞಾನವು ಉತ್ತಮ; ಆದರೆ ಜನರು ಬಡವನ ಜ್ಞಾನವನ್ನು ತಿರಸ್ಕಾರ ಮಾಡುತ್ತಾರೆ, ಅವನ ಮಾತುಗಳನ್ನು ಯಾರೂ ಲಕ್ಷಿಸುವುದಿಲ್ಲ,” ಎಂದುಕೊಂಡೆನು.


ನನ್ನ ತಂದೆ ದೇವರೂ, ಅಬ್ರಹಾಮನ ದೇವರೂ, ಇಸಾಕನ ಭಯವೂ ನನ್ನೊಂದಿಗೆ ಇಲ್ಲದೆ ಹೋಗಿದ್ದರೆ, ನಿಶ್ಚಯವಾಗಿ ನೀನು ನನ್ನನ್ನು ಬರಿಗೈಯಿಂದ ಕಳುಹಿಸುತ್ತಿದ್ದೆ. ನನ್ನ ಬಾಧೆಯನ್ನೂ, ನನ್ನ ಕಷ್ಟವನ್ನೂ ದೇವರು ಕಂಡು, ನಿನ್ನೆ ರಾತ್ರಿ ನಿನ್ನನ್ನು ಗದರಿಸಿದ್ದಾರೆ,” ಎಂದನು.


ಅರಸನ ಹೃದಯದ ಆಶೆಯನ್ನು ನೀವು ಈಡೇರಿಸಿದ್ದೀರಿ; ಆತನ ತುಟಿಗಳ ಬಿನ್ನಹವನ್ನು ಹಿಂದಿಟ್ಟುಕೊಳ್ಳಲಿಲ್ಲ.


ಜೀವವನ್ನು ಅರಸನು ನಿಮ್ಮಿಂದ ಬೇಡಲು, ನೀವು ಆತನಿಗೆ ಯುಗಯುಗಾಂತರಗಳಿಗೂ ದೀರ್ಘಾಯುಷ್ಯವನ್ನು ಕೊಟ್ಟಿದ್ದೀರಿ.


‘ನನ್ನನ್ನು ಕರೆ, ಆಗ ನಿನಗೆ ಉತ್ತರಕೊಡುವೆನು. ನಿನಗೆ ತಿಳಿಯದ ಮತ್ತು ಪರಿಶೋಧನೆಗೆ ಮೀರಿದ ಮಹಾಕಾರ್ಯಗಳನ್ನೂ ನಿನಗೆ ಹೇಳಿಕೊಡುವೆನು.’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು