Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 2:24 - ಕನ್ನಡ ಸಮಕಾಲಿಕ ಅನುವಾದ

24 ದಾನಿಯೇಲನು ಬಾಬಿಲೋನಿನ ಜ್ಞಾನಿಗಳನ್ನು ನಾಶಮಾಡಲು ಅರಸನ ಆಜ್ಞೆಯನ್ನು ಹೊಂದಿದ ಅರ್ಯೋಕನ ಹತ್ತಿರ ಹೋಗಿ ಅವನಿಗೆ, “ನೀನು ಬಾಬಿಲೋನಿನ ಜ್ಞಾನಿಗಳನ್ನು ಕೊಲ್ಲಬೇಡ. ನನ್ನನ್ನು ಅರಸನ ಮುಂದೆ ಕರೆದುಕೊಂಡು ಹೋಗು. ಆಗ ನಾನು ಅರಸನಿಗೆ ಅವನ ಕನಸಿನ ಅರ್ಥವನ್ನು ತಿಳಿಸುತ್ತೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ನಂತರ ದಾನಿಯೇಲನು ಬಾಬೆಲಿನ ವಿದ್ವಾಂಸರನ್ನು ಕೊಲ್ಲುವುದಕ್ಕೆ ರಾಜನು ನೇಮಿಸಿದ ಅರ್ಯೋಕನ ಬಳಿಗೆ ಹೋಗಿ ಅವನಿಗೆ, “ಬಾಬೆಲಿನ ವಿದ್ವಾಂಸರನ್ನು ಕೊಲ್ಲಬೇಡ; ನನ್ನನ್ನು ರಾಜನ ಸನ್ನಿಧಿಗೆ ಬಿಡು; ನಾನು ಕನಸಿನ ಅಭಿಪ್ರಾಯವನ್ನು ರಾಜನಿಗೆ ತಿಳಿಸುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ತರುವಾಯ ದಾನಿಯೇಲನು ಬಾಬಿಲೋನಿನ ವಿದ್ವಾಂಸರನ್ನು ಕೊಲ್ಲುವುದಕ್ಕೆ ರಾಜನು ನೇಮಿಸಿದ್ದ ಅರ್ಯೋಕನ ಬಳಿಗೆ ಹೋದನು. ಅವನಿಗೆ, “ಬಾಬಿಲೋನಿನ ವಿದ್ವಾಂಸರನ್ನು ಕೊಲ್ಲಬೇಡ. ನನ್ನನ್ನು ರಾಜನ ಸನ್ನಿಧಿಗೆ ಸೇರಿಸಿಬಿಡು, ನಾನು ಆ ಕನಸಿನ ಉದ್ದೇಶವನ್ನು ರಾಜನಿಗೆ ತಿಳಿಸುವೆನು,” ಎಂದು ಕೇಳಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಆಗ ದಾನಿಯೇಲನು ಬಾಬೆಲಿನ ವಿದ್ವಾಂಸರನ್ನು ಕೊಲ್ಲುವದಕ್ಕೆ ರಾಜನು ನೇವಿುಸಿದ ಅರ್ಯೋಕನ ಬಳಿಗೆ ಹೋಗಿ ಅವನಿಗೆ - ಬಾಬೆಲಿನ ವಿದ್ವಾಂಸರನ್ನು ಕೊಲ್ಲಬೇಡ; ನನ್ನನ್ನು ರಾಜನ ಸನ್ನಿಧಿಗೆ ಬಿಡು; ನಾನು ಕನಸಿನ ಅಭಿಪ್ರಾಯವನ್ನು ರಾಜನಿಗೆ ತಿಳಿಸುವೆನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಆಮೇಲೆ ದಾನಿಯೇಲನು ಅರ್ಯೋಕನ ಬಳಿಗೆ ಹೋದನು. ಅರಸನಾದ ನೆಬೂಕದ್ನೆಚ್ಚರನು ಬಾಬಿಲೋನಿನ ವಿದ್ವಾಂಸರನ್ನು ಕೊಲ್ಲುವದಕ್ಕೆ ಅರ್ಯೋಕನನ್ನು ಆರಿಸಿದ್ದನು. ದಾನಿಯೇಲನು ಅರ್ಯೋಕನಿಗೆ, “ಬಾಬಿಲೋನಿನ ವಿದ್ವಾಂಸರನ್ನು ಕೊಲ್ಲಬೇಡ. ನನ್ನನ್ನು ಅರಸನ ಹತ್ತಿರ ಕರೆದುಕೊಂಡು ಹೋಗು. ನಾನು ಅವನಿಗೆ ಅವನ ಕನಸನ್ನು ಮತ್ತು ಅದರ ಅರ್ಥವನ್ನು ತಿಳಿಸುತ್ತೇನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 2:24
3 ತಿಳಿವುಗಳ ಹೋಲಿಕೆ  

‘ಪೌಲನೇ, ಭಯಪಡಬೇಡ. ನೀನು ಕೈಸರನ ಮುಂದೆ ನಿಲ್ಲಬೇಕು. ಇಗೋ, ದೇವರು ನಿನ್ನೊಂದಿಗೆ ಪ್ರಯಾಣ ಮಾಡುತ್ತಿರುವವರ ಪ್ರಾಣಗಳನ್ನು ನಿನಗೆ ಉಳಿಸಿಕೊಟ್ಟಿದ್ದಾರೆ,’ ಎಂದನು.


“ಇದೇ ಕನಸು. ಇದರ ಅರ್ಥವನ್ನು ನಾವು ಅರಸನ ಮುಂದೆ ಹೇಳುತ್ತೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು