ದಾನಿಯೇಲ 2:26 - ಕನ್ನಡ ಸಮಕಾಲಿಕ ಅನುವಾದ26 ಅರಸನು ಬೇಲ್ತೆಶಚ್ಚರನೆಂಬ ದಾನಿಯೇಲನನ್ನು ಕುರಿತು, “ನಾನು ಕಂಡ ಕನಸನ್ನೂ, ಅದರ ಅರ್ಥವನ್ನೂ ನನಗೆ ತಿಳಿಸುವ ಸಾಮರ್ಥ್ಯವು ನಿನಗಿದೆಯೋ?” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ರಾಜನು ಬೇಲ್ತೆಶಚ್ಚರನೆಂಬ ಅಡ್ಡಹೆಸರಿನ ದಾನಿಯೇಲನನ್ನು, “ನಾನು ಕಂಡ ಕನಸನ್ನೂ, ಅದರ ಅರ್ಥವನ್ನೂ ನನಗೆ ತಿಳಿಸಬಲ್ಲೆಯಾ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ರಾಜನು ಬೇಲ್ತೆಶಚ್ಚರನೆಂದು ಹೆಸರು ಪಡೆದಿದ್ದ ದಾನಿಯೇಲನನ್ನು ನೋಡಿ, “ನಾನು ಕಂಡ ಕನಸನ್ನೂ ಅದರ ಅರ್ಥವನ್ನೂ ತಿಳಿಸಬಲ್ಲೆಯಾ?” ಎಂದು ವಿಚಾರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ರಾಜನು ಬೇಲ್ತೆಶಚ್ಚರನೆಂಬ ಅಡ್ಡ ಹೆಸರಿನ ದಾನಿಯೇಲನನ್ನು - ನಾನು ಕಂಡ ಕನಸನ್ನೂ ಅದರ ಅರ್ಥವನ್ನೂ ನನಗೆ ತಿಳಿಸಬಲ್ಲೆಯಾ ಎಂದು ಕೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಅರಸನು ದಾನಿಯೇಲನಿಗೆ (ಬೇಲ್ತೆಶಚ್ಚರನಿಗೆ), “ನೀನು ನನ್ನ ಕನಸನ್ನೂ ಅದರ ಅರ್ಥವನ್ನೂ ಹೇಳಬಲ್ಲೆಯಾ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿ |
ಈಗ ನೀನು ಅರ್ಥಗಳನ್ನು ವಿವರಿಸಿ, ಕಷ್ಟಕರವಾದ ಸಮಸ್ಯೆಗಳನ್ನು ಬಗೆಹರಿಸಲು ಸಮರ್ಥನೆಂದು ನಾನು ನಿನ್ನ ವಿಷಯವಾಗಿ ಕೇಳಿದ್ದೇನೆ. ಹೀಗಾದರೆ ಈ ಬರಹವನ್ನು ಓದುವುದಕ್ಕೂ, ಅದರ ಅರ್ಥವನ್ನು ತಿಳಿಸುವುದಕ್ಕೂ ನಿನ್ನಿಂದ ಸಾಧ್ಯವಾದರೆ, ನಿನಗೆ ಧೂಮ್ರವಸ್ತ್ರವನ್ನು ಹೊದಿಸಿ, ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ, ರಾಜ್ಯದ ಮೂರನೆಯ ಅಧಿಕಾರಿಯನ್ನಾಗಿ ನೇಮಿಸುವೆನು,” ಎಂದು ಹೇಳಿದನು.
ಏಕೆಂದರೆ ಬೇಲ್ತೆಶಚ್ಚರನೆಂಬ ಹೆಸರನ್ನು ಅರಸನಿಂದ ಪಡೆದ ಆ ದಾನಿಯೇಲನಲ್ಲಿ ಕನಸುಗಳ ಅರ್ಥವನ್ನು ಹೇಳುವುದಕ್ಕೂ, ಕಠಿಣವಾದ ಸಂಗತಿಗಳನ್ನು ತಿಳಿಸುವುದಕ್ಕೂ, ಒಗಟುಗಳನ್ನು ವಿವರಿಸುವುದಕ್ಕೂ ಕಷ್ಟಕರವಾದ ಸಮಸ್ಯೆಗಳನ್ನು ಪರಿಹರಿಸುವುದಕ್ಕೂ ಉತ್ತಮ ಆತ್ಮವೂ, ಜ್ಞಾನವೂ, ವಿವೇಕವೂ ಸಿಕ್ಕಿದವು. ಈಗ ಆ ದಾನಿಯೇಲನನ್ನು ಕರೆಯಿಸಿದರೆ, ಅವನು ಈ ಬರಹದ ಅರ್ಥವನ್ನು ವಿವರಿಸುವನು,” ಎಂದಳು.