Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 2:27 - ಕನ್ನಡ ಸಮಕಾಲಿಕ ಅನುವಾದ

27 ದಾನಿಯೇಲನು ಅರಸನ ಸನ್ನಿಧಿಯಲ್ಲಿ ಉತ್ತರವಾಗಿ, “ಅರಸನು ಕೇಳುವ ರಹಸ್ಯವನ್ನು ಜ್ಞಾನಿಗಳೂ, ಜ್ಯೋತಿಷ್ಯರೂ, ಮಂತ್ರಗಾರರೂ, ಶಕುನ ಹೇಳುವವರೂ ಅರಸನಿಗೆ ತಿಳಿಸಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಅದಕ್ಕೆ ದಾನಿಯೇಲನು ರಾಜನನ್ನು ಕುರಿತು, “ರಾಜನು ಕೇಳುವ ರಹಸ್ಯವನ್ನು ವಿದ್ವಾಂಸರಾಗಲಿ, ಮಾಟಗಾರರಾಗಲಿ, ಜೋಯಿಸರಾಗಲಿ, ಶಕುನದವರಾಗಲಿ ಯಾರೂ ರಾಜನಿಗೆ ತಿಳಿಸಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಅದಕ್ಕೆ ದಾನಿಯೇಲನು ಸನ್ನಿಧಿಯಲ್ಲಿ, “ರಾಜರು ಕೇಳುವ ರಹಸ್ಯವನ್ನು ವಿದ್ವಾಂಸರಾಗಲಿ, ಮಾಟಗಾರರಾಗಲಿ, ಜೋಯಿಸರಾಗಲಿ, ಶಕುನದವರಾಗಲಿ ಯಾರೂ ತಿಳಿಸಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಅದಕ್ಕೆ ದಾನಿಯೇಲನು ಸನ್ನಿಧಿಯಲ್ಲಿ - ರಾಜನು ಕೇಳುವ ರಹಸ್ಯವನ್ನು ವಿದ್ವಾಂಸರಾಗಲಿ ಮಾಟಗಾರರಾಗಲಿ ಜೋಯಿಸರಾಗಲಿ ಶಕುನದವರಾಗಲಿ ಯಾರೂ ರಾಜನಿಗೆ ತಿಳಿಸಲಾರರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ದಾನಿಯೇಲನು, “ಅರಸನಾದ ನೆಬೂಕದ್ನೆಚ್ಚರನೇ, ಯಾವ ವಿದ್ವಾಂಸರಾಗಲಿ ಮಾಟಗಾರರಾಗಲಿ ಜೋಯಿಸರಾಗಲಿ ಶಕುನದವರಾಗಲಿ ಅರಸನಾದ ನಿನಗೆ ರಹಸ್ಯವನ್ನು ಹೇಳಲಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 2:27
12 ತಿಳಿವುಗಳ ಹೋಲಿಕೆ  

ಆದ್ದರಿಂದ, ಅರಸನು ತನ್ನ ಕನಸನ್ನು ತಿಳಿಸಲು ಮಂತ್ರಗಾರರನ್ನೂ, ಜೋತಿಷ್ಯರನ್ನೂ, ಮಾಟಗಾರರನ್ನೂ, ಪಂಡಿತರನ್ನೂ ಕರೆಯಲು ಆಜ್ಞಾಪಿಸಿದನು. ಇವರೆಲ್ಲರೂ ಬಂದು ಅರಸನ ಮುಂದೆ ನಿಂತರು.


ಸುಳ್ಳುಗಾರರ ಗುರುತುಗಳನ್ನು ನಿರರ್ಥಕ ಮಾಡುವವನೂ ಮತ್ತು ಕಣಿ ಹೇಳುವವರನ್ನು ಹುಚ್ಚರನ್ನಾಗಿ ಮಾಡುವವನೂ ಜ್ಞಾನಿಗಳನ್ನು ಹಿಂದಕ್ಕೆ ತಳ್ಳಿ, ಅವರ ತಿಳುವಳಿಕೆಯನ್ನು ಬುದ್ಧಿಹೀನವಾಗ ಮಾಡುವವನೂ


ಈಜಿಪ್ಟಿನವರ ಮನಸ್ಸು ಭಯಗೊಳ್ಳುವುದು ಅವರ ಆಲೋಚನೆಯನ್ನು ಭಂಗಪಡಿಸುವೆನು. ಅಲ್ಲಿಯವರು ವಿಗ್ರಹಗಳನ್ನೂ, ಮಾಟಗಾರರನ್ನೂ, ಯಕ್ಷಣಿಗಾರರನ್ನೂ, ಮಂತ್ರವಾದಿಗಳನ್ನೂ ಆಶ್ರಯಿಸುವರು.


ಅವರು ಯೋಸೇಫನಿಗೆ, “ನಾವು ಕನಸನ್ನು ಕಂಡಿದ್ದೇವೆ, ಆದರೆ ಅದರ ಅರ್ಥವನ್ನು ನಮಗೆ ಹೇಳುವವರಿಲ್ಲ,” ಎಂದರು. ಯೋಸೇಫನು ಅವರಿಗೆ, “ಅರ್ಥ ಹೇಳುವುದು ದೇವರದಲ್ಲವೋ? ಎಂದು ಹೇಳಿ, ಅವುಗಳನ್ನು ನನಗೆ ಹೇಳಿರಿ,” ಎಂದನು.


ಬೆಳಿಗ್ಗೆ ಅವನ ಮನಸ್ಸು ಕಳವಳಗೊಂಡಿತು. ಆದ್ದರಿಂದ ಅವನು ಈಜಿಪ್ಟಿನ ಎಲ್ಲಾ ಮಂತ್ರವಾದಿಗಳನ್ನೂ ಎಲ್ಲಾ ಜ್ಞಾನಿಗಳನ್ನೂ ಕರೆಕಳುಹಿಸಿದನು. ಫರೋಹನು ಅವರಿಗೆ ತನ್ನ ಕನಸನ್ನು ತಿಳಿಸಿದಾಗ, ಅವುಗಳ ಅರ್ಥವನ್ನು ಹೇಳುವವರು ಯಾರೂ ಇರಲಿಲ್ಲ.


ಓ ಜನಾಂಗಗಳ ಅರಸರಾದವರೇ, ನಿಮಗೆ ಭಯಪಡದವನ್ಯಾರು? ಏಕೆಂದರೆ, ನಿಮಗೆ ಅದು ಸಲ್ಲತಕ್ಕದ್ದು. ಏಕೆಂದರೆ, ಜನಾಂಗಗಳ ಎಲ್ಲಾ ಜ್ಞಾನಿಗಳಲ್ಲಿಯೂ, ಅವುಗಳ ಎಲ್ಲಾ ರಾಜ್ಯಗಳಲ್ಲಿಯೂ ನಿಮ್ಮ ಹಾಗೆ ಯಾರೂ ಇಲ್ಲ.


ಅರಸನು ಅವರ ಹತ್ತಿರ ವಿಚಾರಿಸಿದಾಗ ಸಮಸ್ತ ಜ್ಞಾನ ವಿವೇಕಗಳ ವಿಷಯದಲ್ಲಿ ತನ್ನ ರಾಜ್ಯದಲ್ಲಿರುವ ಎಲ್ಲಾ ಮಂತ್ರಗಾರರಿಗಿಂತಲೂ, ಜೋತಿಷ್ಯರಿಗಿಂತಲೂ ಇವರೇ ಹತ್ತರಷ್ಟು ಉತ್ತಮರೆಂದು ಕಂಡನು.


ಆಗ ಮಂತ್ರಗಾರರು, ಜೋತಿಷ್ಯರು, ಪಂಡಿತರು, ಶಕುನಗಾರರು ಒಳಗೆ ಬಂದರು. ನಾನು ಕನಸನ್ನು ಅವರಿಗೆ ತಿಳಿಸಿದೆನು. ಆದರೆ ಅವರು ಅದರ ಅರ್ಥವನ್ನು ನನಗೆ ತಿಳಿಸಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು