Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 2:29 - ಕನ್ನಡ ಸಮಕಾಲಿಕ ಅನುವಾದ

29 “ಅರಸನೇ, ನೀನು ಹಾಸಿಗೆಯ ಮೇಲೆ ಮಲಗಿರುವಾಗ, ಇನ್ನು ಮುಂದೆ ಏನು ಸಂಭವಿಸುವುದೋ, ಎಂಬ ಯೋಚನೆಯು ನಿನ್ನಲ್ಲಿ ಹುಟ್ಟಿತ್ತು. ಆ ರಹಸ್ಯಗಳನ್ನು ವ್ಯಕ್ತಪಡಿಸುವವರು, ಮುಂದೆ ಸಂಭವಿಸುವುದು ಏನೆಂಬುದನ್ನು ನಿನಗೆ ಗೋಚರಪಡಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 “ರಾಜನೇ, ನೀನು ಹಾಸಿಗೆಯ ಮೇಲೆ ಮಲಗಿರುವಾಗ ಮುಂದೆ ಏನಾಗುವುದೋ? ಎಂಬ ಯೋಚನೆಯು ನಿನ್ನಲ್ಲಿ ಹುಟ್ಟಿತಲ್ಲಾ; ರಹಸ್ಯಗಳನ್ನು ವ್ಯಕ್ತಗೊಳಿಸುವಾತನು ಮುಂದೆ ಸಂಭವಿಸುವುದನ್ನು ನಿನಗೆ ಗೋಚರಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 “ರಾಜರೇ, ನೀವು ಹಾಸಿಗೆಯ ಮೇಲೆ ಮಲಗಿರುವಾಗ ಮುಂದೆ ಏನು ಸಂಭವಿಸುವುದೋ ಎಂಬ ಯೋಚನೆ ನಿಮ್ಮಲ್ಲಿ ಹುಟ್ಟಿತ್ತು. ಗುಟ್ಟುಗಳನ್ನು ಬಟ್ಟಬಯಲಾಗಿಸುವಾತ ಮುಂದೆ ಸಂಭವಿಸುವುದನ್ನು ನಿಮಗೆ ಗೋಚರಪಡಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ರಾಜನೇ, ನೀನು ಹಾಸಿಗೆಯ ಮೇಲೆ ಮಲಗಿರುವಾಗ ಮುಂದೆ ಏನಾಗುವದೋ ಎಂಬ ಯೋಚನೆಯು ನಿನ್ನಲ್ಲಿ ಹುಟ್ಟಿತಲ್ಲಾ; ರಹಸ್ಯಗಳನ್ನು ವ್ಯಕ್ತಗೊಳಿಸುವಾತನು ಮುಂದಾಗುವದನ್ನು ನಿನಗೆ ಗೋಚರಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಅರಸನೇ, ನೀನು ನಿನ್ನ ಹಾಸಿಗೆಯ ಮೇಲೆ ಮಲಗಿಕೊಂಡಿದ್ದೆ. ಭವಿಷ್ಯದಲ್ಲಿ ಸಂಭವಿಸುವುದರ ಬಗ್ಗೆ ಆಲೋಚಿಸತೊಡಗಿದ್ದೆ. ದೇವರು ಜನರಿಗೆ ರಹಸ್ಯವನ್ನು ತಿಳಿಸಬಲ್ಲನು. ಭವಿಷ್ಯದಲ್ಲಿ ನಡೆಯಲಿರುವುದನ್ನು ಆತನೇ ನಿನಗೆ ತೋರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 2:29
8 ತಿಳಿವುಗಳ ಹೋಲಿಕೆ  

ಆದರೆ ಈ ರಹಸ್ಯಗಳನ್ನು ಪ್ರಕಟಪಡಿಸುವಂತಹ ದೇವರು ಪರಲೋಕದಲ್ಲಿ ಇದ್ದಾರೆ. ಅವರು ಮುಂಬರುವ ದಿವಸಗಳಲ್ಲಿ ಸಂಭವಿಸುವಂಥವುಗಳನ್ನು ಅರಸನಾದ ನೆಬೂಕದ್ನೆಚ್ಚರನಿಗೆ ತಿಳಿಯಪಡಿಸುತ್ತಾರೆ. ನಿನ್ನ ಕನಸಿನಲ್ಲಿ ನಿನ್ನ ಹಾಸಿಗೆಯಲ್ಲಿ ನೀನು ಮಲಗಿದಾಗ, ನಿನ್ನ ಮನಸ್ಸಿನಲ್ಲಿ ಹಾದುಹೋದ ದರ್ಶನಗಳು ಇವೇ ಆಗಿವೆ.


ಬೆಟ್ಟಗಳನ್ನು ರೂಪಿಸಿ, ಗಾಳಿಯನ್ನು ನಿರ್ಮಿಸಿ, ಮನುಷ್ಯನಿಗೆ ಅವನ ಯೋಚನೆ ಏನೆಂದು ತಿಳಿಸಿ, ಉದಯವನ್ನು ಅಂಧಕಾರವನ್ನಾಗಿ ಮಾಡಿ, ಭೂಮಿಯ ಉನ್ನತ ಸ್ಥಳಗಳನ್ನು ತುಳಿದುಬಿಡುವಾತನು, ಸರ್ವಶಕ್ತರಾದ ಯೆಹೋವ ದೇವರು ಇದೇ ಅವರ ಹೆಸರು.


ಅರಸನು ದಾನಿಯೇಲನಿಗೆ ಉತ್ತರವಾಗಿ, “ನೀನು ಈ ರಹಸ್ಯವನ್ನು ಪ್ರಕಟಮಾಡಲು ಸಮರ್ಥನಾದ್ದರಿಂದ ನಿಶ್ಚಯವಾಗಿ ನಿಮ್ಮ ದೇವರು ದೇವರುಗಳಿಗೆ ದೇವರಾಗಿಯೂ, ಅರಸುಗಳ ಒಡೆಯರಾಗಿಯೂ, ರಹಸ್ಯಗಳನ್ನು ಪ್ರಕಟ ಮಾಡುವವರಾಗಿಯೂ ಇದ್ದಾರೆ,” ಎಂದನು.


ಅಗಾಧವಾದವುಗಳನ್ನು, ರಹಸ್ಯವಾದವುಗಳನ್ನು ಪ್ರಕಟ ಮಾಡುತ್ತಾರೆ. ಕತ್ತಲೆಯಲ್ಲಿ ಇರುವಂಥವುಗಳನ್ನು ತಿಳಿದಿರುವಂತವರಾಗಿದ್ದಾರೆ. ಬೆಳಕು ಅವರೊಳಗೆ ವಾಸಿಸುತ್ತದೆ.


“ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಆ ದಿನದಲ್ಲಿ ನಿನ್ನ ಮನಸ್ಸಿಗೆ ಕೆಲವು ಆಲೋಚನೆಗಳು ಬರುವುವು ಮತ್ತು ನೀನು ಒಂದು ಕುತಂತ್ರವನ್ನು ಮಾಡುವೆ.


ಆಗ ಯೋಸೇಫನು ಫರೋಹನಿಗೆ, “ಫರೋಹನ ಎರಡು ಕನಸುಗಳ ವಿಷಯ ಒಂದೇ, ದೇವರು ಮಾಡಲಿರುವುದನ್ನು ಫರೋಹನಿಗೆ ತಿಳಿಸಿದ್ದಾರೆ.


ನನ್ನ ಪಿತೃಗಳ ದೇವರೇ, ನಾನು ನಿಮ್ಮನ್ನು ಕೊಂಡಾಡಿ, ನಿಮಗೆ ಕೃತಜ್ಞತೆ ಸಲ್ಲಿಸುತ್ತೇನೆ. ಏಕೆಂದರೆ ನೀವು ನನಗೆ ಜ್ಞಾನವನ್ನೂ, ಬಲವನ್ನೂ ಕೊಟ್ಟು; ನಾವು ನಿನ್ನಿಂದ ಅಪೇಕ್ಷಿಸಿಕೊಂಡದ್ದನ್ನು ನಮಗೆ ತಿಳಿಯಪಡಿಸಿದ್ದೀರಿ; ನೀವು ಈಗ ನಮಗೆ ಅರಸನ ಕನಸನ್ನು ತಿಳಿಯಪಡಿಸಿದ್ದೀರಿ.”


ಮಾನವ ಹಸ್ತಗಳಿಲ್ಲದೆ, ಆದರೆ ಬೆಟ್ಟದೊಳಗಿಂದ ಕಡಿದು ತೆಗೆದ ಗುಂಡು ಬಂಡೆಯು ಕಬ್ಬಿಣವನ್ನೂ, ಕಂಚನ್ನೂ, ಮಣ್ಣನ್ನೂ, ಬೆಳ್ಳಿಯನ್ನೂ ಹಾಗೂ ಬಂಗಾರವನ್ನೂ ತುಂಡುತುಂಡಾಗಿ ಮಾಡಿದ ಆ ಗುಂಡು ಕಲ್ಲಿನ ದರ್ಶನವು ಇದೆ. “ಇದರಿಂದ ಭವಿಷ್ಯದಲ್ಲಿ ಏನಾಗುತ್ತದೆ ಎಂಬುದನ್ನು ಮಹಾ ದೇವರು ಅರಸನಿಗೆ ತೋರಿಸಿದ್ದಾರೆ. ಕನಸು ನಿಜವಾದದ್ದು, ಅದರ ಅರ್ಥವು ನಂಬತಕ್ಕದ್ದು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು