ದಾನಿಯೇಲ 2:4 - ಕನ್ನಡ ಸಮಕಾಲಿಕ ಅನುವಾದ4 ಆಗ ಪಂಡಿತರು ಅರಸನಿಗೆ ಅರಮಾಯ ಭಾಷೆಯಲ್ಲಿ, “ಅರಸನೇ, ನಿರಂತರವಾಗಿ ಬಾಳು! ಕನಸನ್ನು ನಿನ್ನ ಸೇವಕರಿಗೆ ಹೇಳು, ಆಗ ನಾವು ಅದರ ಅರ್ಥವನ್ನು ತಿಳಿಸುವೆವು,” ಎಂದು ಹೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಆಗ ಆ ಪಂಡಿತರು ಅರಮಾಯ ಭಾಷೆಯಲ್ಲಿ ರಾಜನಿಗೆ, “ಅರಸನೇ, ಚಿರಂಜೀವಿಯಾಗಿರು; ಆ ಕನಸನ್ನು ನಿನ್ನ ದಾಸರಿಗೆ ಹೇಳು; ಅದರ ತಾತ್ಪರ್ಯವನ್ನು ತಿಳಿಸುವೆವು” ಎಂದು ಅರಿಕೆಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಆ ಪಂಡಿತರು ಅರಮೀಯ ಭಾಷೆಯಲ್ಲಿ ರಾಜನಿಗೆ, “ಅರಸರೇ, ಚಿರಂಜೀವಿಯಾಗಿರಿ! ಆ ಕನಸನ್ನು ನಿಮ್ಮ ದಾಸರಾದ ನಮಗೆ ಹೇಳಿ. ಅದರ ತಾತ್ಪರ್ಯವನ್ನು ತಿಳಿಸುತ್ತೇವೆ,” ಎಂದು ಅರಿಕೆಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಆ ಪಂಡಿತರು ಅರಮಾಯ ಭಾಷೆಯಲ್ಲಿ ರಾಜನಿಗೆ - ಅರಸನೇ, ಚಿರಂಜೀವಿಯಾಗಿರು; ಆ ಕನಸನ್ನು ನಿನ್ನ ದಾಸರಿಗೆ ಹೇಳು; ಅದರ ತಾತ್ಪರ್ಯವನ್ನು ತಿಳಿಸುವೆವು ಎಂದು ಅರಿಕೆಮಾಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಆಗ ಆ ಕಸ್ದೀಯರು ಅರಮೇಯಿಕ್ ಭಾಷೆಯಲ್ಲಿ, “ಅರಸನೇ ಚಿರಂಜೀವಿಯಾಗಿರು. ನಾವು ನಿನ್ನ ಸೇವಕರು. ದಯವಿಟ್ಟು ನಮಗೆ ನಿನ್ನ ಕನಸನ್ನು ಹೇಳು. ನಾವು ಅದರ ಅರ್ಥವನ್ನು ತಿಳಿಸುತ್ತೇವೆ” ಎಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿ |
ಶಾರೀರಿಕ ನ್ಯೂನತೆ ಇಲ್ಲದವರಾಗಿಯೂ, ಸುಂದರವಾಗಿಯೂ, ಅವರು ಎಲ್ಲಾ ರೀತಿಯ ವಿಷಯಗಳನ್ನು ಕಲಿಯುವ ಸಾಮರ್ಥ್ಯವನ್ನು ಹೊಂದಿರಬೇಕು. ಅವರು ವಿವೇಕವುಳ್ಳವರಾಗಿಯೂ ಮತ್ತು ತ್ವರಿತವಾಗಿ ಅರ್ಥಮಾಡಿಕೊಳ್ಳುವವರಾಗಿಯೂ, ಅರಸನ ಅರಮನೆಯಲ್ಲಿ ಸೇವೆ ಮಾಡಲು ಸಾಮರ್ಥ್ಯವುಳ್ಳವರಾಗಿಯೂ ಇರುವ ಯೌವನಸ್ಥರನ್ನು ತಂದು ಬಾಬಿಲೋನಿಯರ ವಿದ್ಯೆಯನ್ನೂ, ಭಾಷೆಯನ್ನೂ ಅವರಿಗೆ ಬೋಧಿಸಬೇಕೆಂದು ಆಜ್ಞಾಪಿಸಿದನು.