Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 2:45 - ಕನ್ನಡ ಸಮಕಾಲಿಕ ಅನುವಾದ

45 ಮಾನವ ಹಸ್ತಗಳಿಲ್ಲದೆ, ಆದರೆ ಬೆಟ್ಟದೊಳಗಿಂದ ಕಡಿದು ತೆಗೆದ ಗುಂಡು ಬಂಡೆಯು ಕಬ್ಬಿಣವನ್ನೂ, ಕಂಚನ್ನೂ, ಮಣ್ಣನ್ನೂ, ಬೆಳ್ಳಿಯನ್ನೂ ಹಾಗೂ ಬಂಗಾರವನ್ನೂ ತುಂಡುತುಂಡಾಗಿ ಮಾಡಿದ ಆ ಗುಂಡು ಕಲ್ಲಿನ ದರ್ಶನವು ಇದೆ. “ಇದರಿಂದ ಭವಿಷ್ಯದಲ್ಲಿ ಏನಾಗುತ್ತದೆ ಎಂಬುದನ್ನು ಮಹಾ ದೇವರು ಅರಸನಿಗೆ ತೋರಿಸಿದ್ದಾರೆ. ಕನಸು ನಿಜವಾದದ್ದು, ಅದರ ಅರ್ಥವು ನಂಬತಕ್ಕದ್ದು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

45 ಬೆಟ್ಟದೊಳಗಿಂದ ಒಂದು ಗುಂಡು ಬಂಡೆಯು ಕೈಯಿಲ್ಲದೆ ಒಡೆಯಲ್ಪಟ್ಟು ಕಬ್ಬಿಣ, ತಾಮ್ರ, ಮಣ್ಣು, ಬೆಳ್ಳಿಬಂಗಾರಗಳನ್ನು ಚೂರುಚೂರು ಮಾಡಿದ್ದು ನಿನ್ನ ಕಣ್ಣಿಗೆ ಬಿತ್ತಲ್ಲಾ. ಇದರಿಂದ ಪರಲೋಕದೇವರು ಮುಂದೆ ನಡೆಯುವ ವಿಷಯಗಳನ್ನು ರಾಜನಿಗೆ ತಿಳಿಯಪಡಿಸಿದ್ದಾನೆ. ಕನಸು ನಿಜ, ಅದರ ಅರ್ಥವು ನಂಬತಕ್ಕದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

45 ಬೆಟ್ಟದಿಂದ ಒಂದು ಗುಂಡುಬಂಡೆ, ಯಾವ ಕೈಯೂ ಮುಟ್ಟದೆಯೇ, ಸಿಡಿದುಬಂದು ಕಬ್ಬಿಣ-ಕಂಚು-ಮಣ್ಣು-ಬೆಳ್ಳಿ-ಬಂಗಾರ ಇವುಗಳನ್ನು ಚೂರುಚೂರು ಮಾಡಿದ್ದನ್ನು ನೀವು ನೋಡಿದಿರಿ. ಇದರಿಂದ ಪರಲೋಕ ದೇವರು ಮುಂದೆ ನಡೆಯಲಿರುವ ವಿಷಯಗಳನ್ನು ರಾಜರಾದ ತಮಗೆ ತಿಳಿಯಪಡಿಸಿದ್ದಾರೆ. ಆ ಕನಸು ನಿಜವಾದುದು. ಅದರ ಅರ್ಥವೂ ನಂಬತಕ್ಕದ್ದು,” ಎಂದು ವಿವರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

45 [ಬೆಟ್ಟದೊಳಗಿಂದ] ಒಂದು ಗುಂಡು ಬಂಡೆಯು ಕೈಯಿಲ್ಲದೆ ಒಡೆಯಲ್ಪಟ್ಟು ಕಬ್ಬಿಣ ತಾಮ್ರ ಮಣ್ಣು ಬೆಳ್ಳಿ ಬಂಗಾರಗಳನ್ನು ಚೂರುಚೂರುಮಾಡಿದ್ದು ನಿನ್ನ ಕಣ್ಣಿಗೆ ಬಿತ್ತಲ್ಲಾ; ಇದರಿಂದ ಪರಲೋಕದೇವರು ಮುಂದೆ ನಡೆಯುವ ವಿಷಯಗಳನ್ನು ರಾಜನಿಗೆ ತಿಳಿಯಪಡಿಸಿದ್ದಾನೆ; ಕನಸು ನಿಜ, ಅದರ ಅರ್ಥವು ನಂಬತಕ್ಕದು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

45 “ಅರಸನಾದ ನೆಬೂಕದ್ನೆಚ್ಚರನೇ, ಬೆಟ್ಟದಿಂದ ಒಂದು ದೊಡ್ಡ ಬಂಡೆ ಒಡೆದು ಬಂದದ್ದನ್ನು ನೀನು ನೋಡಿದೆ. ಯಾರೂ ಅದನ್ನು ಒಡೆಯಲಿಲ್ಲ! ಆ ಬಂಡೆಯು ಕಬ್ಬಿಣವನ್ನು, ಕಂಚನ್ನು, ಜೇಡಿಮಣ್ಣನ್ನು, ಬೆಳ್ಳಿಯನ್ನು, ಚಿನ್ನವನ್ನು ಚೂರುಚೂರು ಮಾಡಿತು. ಭವಿಷ್ಯದಲ್ಲಿ ಏನಾಗುವದೆಂಬುದನ್ನು ದೇವರು ನಿನಗೆ ಈ ರೀತಿಯಲ್ಲಿ ತೋರಿಸಿದ್ದಾನೆ. ನಿನ್ನ ಕನಸು ನಿಜ. ಅದರ ಅರ್ಥವು ನಂಬಿಕೆಗೆ ಯೋಗ್ಯವಾಗಿದೆ” ಎಂದು ವಿವರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 2:45
32 ತಿಳಿವುಗಳ ಹೋಲಿಕೆ  

ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ಪರೀಕ್ಷಿತವಾಗಿಯೂ, ಅಮೂಲ್ಯವಾಗಿಯೂ ಇರುವ ಮೂಲೆಗಲ್ಲನ್ನು ಚೀಯೋನಿನಲ್ಲಿ ಸ್ಥಿರವಾದ ಅಸ್ತಿವಾರವನ್ನಾಗಿ ಇಡುತ್ತೇನೆ. ಭರವಸೆ ಇಡುವವನು ಆತುರಪಡನು.


ಇದಲ್ಲದೆ ಆ ಕನಸು ಫರೋಹನಿಗೆ ಎರಡು ಸಾರಿ ಬಿದ್ದುದರಿಂದ, ಆ ಕಾರ್ಯವು ದೇವರಿಂದ ಸ್ಥಿರಪಡಿಸಲಾಗಿದೆ. ಆದ್ದರಿಂದ ದೇವರು ಅದನ್ನು ಬೇಗನೆ ನೆರವೇರಿಸುವರು.


ಸೂರ್ಯೋದಯವು ಮೊದಲುಗೊಂಡು ಅಸ್ತಮಾನದವರೆಗೂ, ನನ್ನ ಹೆಸರು ಎಲ್ಲಾ ಜನಾಂಗಗಳಲ್ಲಿ ಘನವಾಗಿರುವುದು. ಪ್ರತಿಯೊಂದು ಸ್ಥಳದಲ್ಲಿಯೂ ನನ್ನ ಹೆಸರಿಗೆ ಧೂಪವೂ, ಶುದ್ಧ ಕಾಣಿಕೆಯೂ ಅರ್ಪಿಸಲಾಗುವುದು. ಏಕೆಂದರೆ ನನ್ನ ಹೆಸರು ಇತರ ಜನಾಂಗಗಳಲ್ಲಿ ಘನವಾಗಿರುವುದು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ಯೆಹೋವ ದೇವರು ಮಹೋನ್ನತರೂ ನಮ್ಮ ದೇವರು ತಮ್ಮ ಪರಿಶುದ್ಧ ಪರ್ವತ ಪಟ್ಟಣದಲ್ಲಿ ಬಹಳವಾಗಿ ಸ್ತುತಿಗೆ ಪಾತ್ರರಾಗಿದ್ದಾರೆ.


“ಸಾರ್ವಭೌಮ ಯೆಹೋವ ದೇವರೇ, ನೀವು ಮಹೋನ್ನತರಾಗಿದ್ದೀರಿ. ನಮ್ಮ ಕಿವಿಗಳಿಂದ ನಾವು ಕೇಳಿದವುಗಳನ್ನೆಲ್ಲಾ ಆಲೋಚಿಸಿ ನೋಡಿದರೆ ನಿಮ್ಮ ಹಾಗೆ ಯಾರೂ ಇಲ್ಲ; ನಿಮ್ಮ ಹೊರತು ದೇವರು ಯಾರೂ ಇಲ್ಲ.


ಏಕೆಂದರೆ ನಿಮ್ಮ ದೇವರಾಗಿರುವ ಯೆಹೋವ ದೇವರು ದೇವರುಗಳ ದೇವರು, ಕರ್ತರ ಕರ್ತರು, ದೇವಾಧಿದೇವರು, ಪರಾಕ್ರಮಿಯೂ, ಭಯಭಕ್ತಿಗೆ ಪಾತ್ರರೂ ಆಗಿದ್ದಾರೆ. ಅವರು ಮುಖದಾಕ್ಷಿಣ್ಯ ನೋಡುವುದಿಲ್ಲ. ಲಂಚ ತೆಗೆದುಕೊಳ್ಳುವುದಿಲ್ಲ.


“ನಾನು ಫರೋಹನಿಗೆ ಹೇಳಿದ ಮಾತಿನಂತೆ ದೇವರು ಮಾಡಲಿರುವುದನ್ನು ಫರೋಹನಿಗೆ ತೋರಿಸಿದ್ದಾರೆ.


ಆಮೇಲೆ ಒಬ್ಬ ದೂತನು ಸೂರ್ಯನಲ್ಲಿ ನಿಂತಿರುವುದನ್ನು ಕಂಡೆನು. ಅವನು ಮಹಾಧ್ವನಿಯಿಂದ ಕೂಗುತ್ತಾ ಆಕಾಶದಲ್ಲಿ ಹಾರಾಡುವ ಎಲ್ಲಾ ಪಕ್ಷಿಗಳಿಗೆ, “ಬನ್ನಿರಿ, ದೇವರು ಏರ್ಪಡಿಸುವ ಮಹಾಭೋಜನಕ್ಕೆ ಕೂಡಿಬನ್ನಿರಿ.


ಇವುಗಳಾದ ಮೇಲೆ ನಾನು ನೋಡಿದಾಗ, ಪರಲೋಕದಲ್ಲಿ ತೆರೆದಿದ್ದ ಒಂದು ದ್ವಾರವು ಕಾಣಿಸಿತು. ನನ್ನೊಂದಿಗೆ ತುತೂರಿಯ ಧ್ವನಿಯಂತೆ ಮಾತನಾಡಿದ, ನಾನು ಮೊದಲು ಕೇಳಿದ ಧ್ವನಿಯಿಂದ, “ಬಾ, ಮುಂದೆ ಸಂಭವಿಸಲಿಕ್ಕೆ ಇರುವವುಗಳನ್ನು ನಿನಗೆ ತೋರಿಸುವೆನು,” ಎಂದು ಹೇಳಿತು.


“ಆದ್ದರಿಂದ ನೀನು ಕಂಡದ್ದವುಗಳನ್ನೂ ಈಗ ನಡೆಯುತ್ತಿರುವವುಗಳನ್ನೂ ಮುಂದೆ ಸಂಭವಿಸುವವುಗಳನ್ನೂ ಬರೆ.


ಒಂದು ದಿನ, ದೇವರ ರಾಜ್ಯವು ಯಾವಾಗ ಬರುವುದೆಂದು ಫರಿಸಾಯರು ಯೇಸುವನ್ನು ಕೇಳಲು, ಅವರಿಗೆ ಉತ್ತರವಾಗಿ ಯೇಸು, “ದೇವರ ರಾಜ್ಯವು ಪ್ರತ್ಯಕ್ಷವಾಗಿ ಬರುವುದಿಲ್ಲ,


ಭೂಮ್ಯಾಕಾಶಗಳು ಅಳಿದುಹೋಗುವುವು, ಆದರೆ ನನ್ನ ಮಾತುಗಳು ಅಳಿದುಹೋಗುವುದೇ ಇಲ್ಲ.


ಅದಕ್ಕೆ ಯೇಸು, “ನಾನು ಸಹ ನಿಮಗೆ ಒಂದು ಪ್ರಶ್ನೆಯನ್ನು ಕೇಳುತ್ತೇನೆ; ಅದಕ್ಕೆ ನೀವು ನನಗೆ ಉತ್ತರ ಹೇಳಿದರೆ ನಾನು ಯಾವ ಅಧಿಕಾರದಿಂದ ಇವುಗಳನ್ನು ಮಾಡುತ್ತೇನೆಂದು ನಿಮಗೆ ಹೇಳುತ್ತೇನೆ. ಎಂದು ಹೇಳಿ,


ಆ ದಿವಸದಲ್ಲಿ, ಅವಳ ವಿರೋಧವಾಗಿ ಭೂಮಿಯ ಜನಾಂಗಗಳೆಲ್ಲಾ ಒಟ್ಟುಗೂಡಿಕೊಳ್ಳುವಾಗ, ನಾನು ಯೆರೂಸಲೇಮನ್ನು ಎಲ್ಲಾ ಜನರಿಗೆ ಚಲಿಸಲಾಗದ ಕಲ್ಲಾಗಿ ಮಾಡುತ್ತೇನೆ. ಅದನ್ನು ತೆಗೆದುಹಾಕಲು ಪ್ರಯತ್ನಿಸುವವರೆಲ್ಲರು ತಮ್ಮನ್ನು ತಾವೇ ಗಾಯಗೊಳಿಸಿಕೊಳ್ಳುತ್ತಾರೆ.


“ಆ ಅರಸರ ದಿವಸಗಳಲ್ಲಿ ಪರಲೋಕದ ದೇವರು ಎಂದಿಗೂ ನಾಶವಾಗದ ರಾಜ್ಯವನ್ನು ಸ್ಥಾಪಿಸುವರು. ಅದು ಬೇರೆ ಜನರಿಗೆ ಸೇರಿ ಹೋಗುವುದಿಲ್ಲ. ಅದು ಆ ರಾಜ್ಯಗಳನ್ನೆಲ್ಲಾ ಧ್ವಂಸಮಾಡಿ, ಮುಗಿಸಿ, ತಾನು ಎಂದೆಂದಿಗೂ ನಿಲ್ಲುವುದು.


ದಾನಿಯೇಲನು ಬಾಬಿಲೋನಿನ ಜ್ಞಾನಿಗಳನ್ನು ನಾಶಮಾಡಲು ಅರಸನ ಆಜ್ಞೆಯನ್ನು ಹೊಂದಿದ ಅರ್ಯೋಕನ ಹತ್ತಿರ ಹೋಗಿ ಅವನಿಗೆ, “ನೀನು ಬಾಬಿಲೋನಿನ ಜ್ಞಾನಿಗಳನ್ನು ಕೊಲ್ಲಬೇಡ. ನನ್ನನ್ನು ಅರಸನ ಮುಂದೆ ಕರೆದುಕೊಂಡು ಹೋಗು. ಆಗ ನಾನು ಅರಸನಿಗೆ ಅವನ ಕನಸಿನ ಅರ್ಥವನ್ನು ತಿಳಿಸುತ್ತೇನೆ,” ಎಂದನು.


ಯೆಹೋವ ದೇವರು ಮಹೋನ್ನತರೂ, ಬಹುಸ್ತುತಿಪಾತ್ರರೂ ಆಗಿದ್ದಾರೆ. ಅವರ ಮಹತ್ವವು ಅಗಮ್ಯವಾದದ್ದು.


ಯೆಹೋವ ದೇವರು ದೊಡ್ಡವರು; ನಮ್ಮ ಯೆಹೋವ ದೇವರು ಎಲ್ಲಾ ದೇವರುಗಳಿಗಿಂತ ದೊಡ್ಡವರೆಂದು ನಾನು ತಿಳಿದಿದ್ದೇನೆ.


ಯೆಹೋವ ದೇವರು ಮಹೋನ್ನತರಾಗಿದ್ದಾರೆ, ಬಹು ಸ್ತುತಿಗೆ ಪಾತ್ರರೂ ಆಗಿದ್ದಾರೆ; ಅವರು ಎಲ್ಲಾ ದೇವರುಗಳಿಗಿಂತ ಬಹುಭಯಭಕ್ತಿಗೆ ಪಾತ್ರರಾಗಿದ್ದಾರೆ.


ದೇವರು ಮಹೋನ್ನತರು; ದೇವರು ನಮ್ಮ ಅರಿವಿಗೆ ನಿಲುಕರು. ದೇವರ ವರ್ಷಗಳು ಅಸಂಖ್ಯಾತವಾಗಿವೆ.


“ಆದಕಾರಣ ನಮ್ಮ ದೇವರೇ, ಪ್ರೀತಿಯ ಒಡಂಬಡಿಕೆಯನ್ನು ಕೈಗೊಳ್ಳುವಂಥ ಮಹಾ ಪರಾಕ್ರಮವುಳ್ಳ ಭಯಭಕ್ತಿಗೆ ಕಾರಣರಾದ ದೇವರೇ, ಅಸ್ಸೀರಿಯದ ಅರಸರ ಕಾಲ ಮೊದಲ್ಗೊಂಡು ಇಂದಿನವರೆಗೆ ನಮ್ಮ ಮೇಲೆಯೂ, ನಮ್ಮ ಅರಸರ ಮೇಲೆಯೂ, ನಮ್ಮ ಪ್ರಧಾನರ ಮೇಲೆಯೂ, ನಮ್ಮ ಯಾಜಕರ ಮೇಲೆಯೂ, ನಮ್ಮ ಪ್ರವಾದಿಗಳ ಮೇಲೆಯೂ, ನಮ್ಮ ಪಿತೃಗಳ ಮೇಲೆಯೂ, ನಿಮ್ಮ ಸಮಸ್ತ ಜನರ ಮೇಲೆಯೂ ಬಂದ ಇವೆಲ್ಲಾ ಕಷ್ಟಸಂಕಟಗಳು ನಿಮಗೆ ಅಲ್ಪವಾಗಿ ಕಾಣದಿರಲಿ.


ನಾನು ಅವರನ್ನು ಸಂದರ್ಶಿಸಿ, ಅವರ ಮುಂದೆ ನಿಂತು ಶ್ರೇಷ್ಠರಿಗೂ, ಅಧಿಕಾರಸ್ಥರಿಗೂ, ಇತರ ಜನರಿಗೂ ಸಂಬೋಧಿಸಿ, “ನೀವು ಅವರಿಗೋಸ್ಕರ ಭಯಪಡಬೇಡಿರಿ. ದೊಡ್ಡವನಾಗಿಯೂ, ಭಯಂಕರನಾಗಿಯೂ ಇರುವ ಯೆಹೋವ ದೇವರನ್ನು ಜ್ಞಾಪಕಮಾಡಿಕೊಂಡು, ನಿಮ್ಮ ಪುತ್ರರಿಗೋಸ್ಕರ, ಪುತ್ರಿಯರಿಗೋಸ್ಕರ, ನಿಮ್ಮ ಹೆಂಡತಿಯರಿಗೋಸ್ಕರ, ನಿಮ್ಮ ಮನೆಗಳಿಗೋಸ್ಕರ ಯುದ್ಧಮಾಡಿರಿ,” ಎಂದೆನು.


ಯೆಹೋವ ದೇವರು ಮಹೋನ್ನತರಾಗಿದ್ದಾರೆ, ಬಹು ಸ್ತುತಿಗೆ ಪಾತ್ರರೂ ಆಗಿದ್ದಾರೆ; ಅವರು ಎಲ್ಲಾ ದೇವರುಗಳಿಗಿಂತ ಬಹುಭಯಭಕ್ತಿಗೆ ಪಾತ್ರರಾಗಿದ್ದಾರೆ.


ಆದರೆ ಈ ರಹಸ್ಯಗಳನ್ನು ಪ್ರಕಟಪಡಿಸುವಂತಹ ದೇವರು ಪರಲೋಕದಲ್ಲಿ ಇದ್ದಾರೆ. ಅವರು ಮುಂಬರುವ ದಿವಸಗಳಲ್ಲಿ ಸಂಭವಿಸುವಂಥವುಗಳನ್ನು ಅರಸನಾದ ನೆಬೂಕದ್ನೆಚ್ಚರನಿಗೆ ತಿಳಿಯಪಡಿಸುತ್ತಾರೆ. ನಿನ್ನ ಕನಸಿನಲ್ಲಿ ನಿನ್ನ ಹಾಸಿಗೆಯಲ್ಲಿ ನೀನು ಮಲಗಿದಾಗ, ನಿನ್ನ ಮನಸ್ಸಿನಲ್ಲಿ ಹಾದುಹೋದ ದರ್ಶನಗಳು ಇವೇ ಆಗಿವೆ.


“ಅರಸನೇ, ನೀನು ಹಾಸಿಗೆಯ ಮೇಲೆ ಮಲಗಿರುವಾಗ, ಇನ್ನು ಮುಂದೆ ಏನು ಸಂಭವಿಸುವುದೋ, ಎಂಬ ಯೋಚನೆಯು ನಿನ್ನಲ್ಲಿ ಹುಟ್ಟಿತ್ತು. ಆ ರಹಸ್ಯಗಳನ್ನು ವ್ಯಕ್ತಪಡಿಸುವವರು, ಮುಂದೆ ಸಂಭವಿಸುವುದು ಏನೆಂಬುದನ್ನು ನಿನಗೆ ಗೋಚರಪಡಿಸುತ್ತಾರೆ.


ಅವನು ತನ್ನ ಶಕ್ತಿಯಿಂದಲೇ ತನ್ನ ಕಪಟತನವನ್ನು ಸಿದ್ಧಿಗೆ ತರುವನು. ಅವನು ಹೃದಯದಲ್ಲಿ ತನ್ನನ್ನು ತಾನೇ ಹೆಚ್ಚಿಸಿಕೊಂಡು ಸುರಕ್ಷಿತರಾಗಿದ್ದೇವೆಂದು ಹೇಳುವಾಗಲೇ ಅನೇಕರನ್ನು ನಾಶಮಾಡುವನು. ಅಲ್ಲದೆ ಅವನು ರಾಜಕುಮಾರರ ರಾಜಕುಮಾರನಿಗೆ ವಿರುದ್ಧವಾಗಿ ನಿಲ್ಲುವನು. ಆದರೂ ಮಾನವ ಶಕ್ತಿಯ ಬಳಕೆ ಇಲ್ಲದೆಯೂ ನಾಶವಾಗುವನು.


ಆ ಏಳು ಒಳ್ಳೆಯ ಹಸುಗಳು ಏಳು ವರ್ಷಗಳು; ಏಳು ಒಳ್ಳೆಯ ತೆನೆಗಳೂ, ಏಳು ವರ್ಷಗಳೇ. ಇವೆರಡು ಕನಸುಗಳ ಅರ್ಥ ಒಂದೇ.


ಕಬ್ಬಿಣದ ಗದೆಯಿಂದ ನೀನು ಅವರನ್ನು ದಂಡಿಸಿ, ಮಣ್ಣಿನ ಮಡಕೆಯಂತೆ ಚೂರುಚೂರಾಗಿ ಅವರನ್ನು ಒಡೆದುಹಾಕುವೆ.”


ರಾಜ್ಯಗಳ ಸಿಂಹಾಸನವನ್ನು ಕೆಡವಿಹಾಕುವೆನು. ನಾನು ಇತರ ಜನಾಂಗಗಳ, ರಾಜ್ಯಗಳ ಬಲವನ್ನು ನಾಶಮಾಡುವೆನು. ರಥಗಳನ್ನೂ, ಅವುಗಳಲ್ಲಿ ಸವಾರಿ ಮಾಡುವವರನ್ನೂ ಕೆಡವಿಹಾಕುವೆನು. ಕುದುರೆಗಳೂ ಅದರ ಸವಾರರೂ ಪ್ರತಿಯೊಬ್ಬನೂ ತನ್ನ ಸಹೋದರನ ಖಡ್ಗದಿಂದ ಬೀಳುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು