ದಾನಿಯೇಲ 2:6 - ಕನ್ನಡ ಸಮಕಾಲಿಕ ಅನುವಾದ6 ಆದರೆ ನೀವು ಕನಸನ್ನೂ, ಅದರ ಅರ್ಥವನ್ನೂ ನನಗೆ ತಿಳಿಸಿದರೆ, ದಾನಬಹುಮಾನಗಳನ್ನೂ, ಬಹಳ ಘನತೆಯನ್ನೂ ನನ್ನಿಂದ ಪಡೆಯುವಿರಿ. ಹೀಗಿರಲಾಗಿ ಕನಸನ್ನೂ, ಅದರ ವ್ಯಾಖ್ಯಾನವನ್ನೂ ನನಗೆ ತಿಳಿಸಿರಿ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ನೀವು ಆ ಕನಸನ್ನೂ, ಅದರ ಅರ್ಥವನ್ನೂ ತಿಳಿಸಿದರೆ ನನ್ನಿಂದ ನಿಮಗೆ ದಾನ ಮತ್ತು ಬಹುಮಾನಗಳೂ, ವಿಶೇಷ ಸನ್ಮಾನಗಳೂ ಲಭಿಸುವವು. ಆದಕಾರಣ ಆ ಕನಸನ್ನೂ, ಅದರ ಅಭಿಪ್ರಾಯವನ್ನೂ ನನಗೆ ತಿಳಿಸಿರಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ನೀವು ಆ ಕನಸನ್ನೂ ಅದರ ಉದ್ದೇಶವನ್ನೂ ತಿಳಿಸಿದ್ದೇ ಆದರೆ ನನ್ನಿಂದ ನಿಮಗೆ ದಾನ ಬಹುಮಾನಗಳೂ ವಿಶೇಷ ಸನ್ಮಾನಗಳೂ ದೊರಕುವುವು. ಆದಕಾರಣ ಆ ಕನಸನ್ನೂ ಅದರ ಉದ್ದೇಶವನ್ನೂ ನನಗೆ ತಿಳಿಸಿ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ನೀವು ಆ ಕನಸನ್ನೂ ಅದರ ಅಭಿಪ್ರಾಯವನ್ನೂ ತಿಳಿಸಿದರೆ ನನ್ನಿಂದ ನಿಮಗೆ ದಾನಬಹುಮಾನಗಳೂ ವಿಶೇಷಸನ್ಮಾನಗಳೂ ಲಭಿಸುವವು; ಆದಕಾರಣ ಆ ಕನಸನ್ನೂ ಅದರ ಅಭಿಪ್ರಾಯವನ್ನೂ ನನಗೆ ತಿಳಿಸಿರಿ ಎಂದು ಹೇಳಲು ಪಂಡಿತರು - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಆದರೆ ನೀವು ನನಗೆ ನನ್ನ ಕನಸನ್ನೂ ಅದರ ಅರ್ಥವನ್ನೂ ಹೇಳಿದರೆ ಕಾಣಿಕೆಗಳನ್ನೂ ಬಹುಮಾನಗಳನ್ನೂ ಕೊಡುತ್ತೇನೆ ಮತ್ತು ಮಹಾಸನ್ಮಾನವನ್ನು ಮಾಡುತ್ತೇನೆ. ಆದ್ದರಿಂದ ನೀವು ನನಗೆ ಕನಸನ್ನೂ ಅದರ ಅರ್ಥವನ್ನೂ ಹೇಳಿರಿ” ಎಂದನು. ಅಧ್ಯಾಯವನ್ನು ನೋಡಿ |